ಶಿರಸಿ: 36 ವರ್ಷಗಳ ಬಳಿಕ 400 ಕೋಟಿ ರೂ. ಮೌಲ್ಯದ 379 ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯಲು ಇಲಾಖೆ ಸಜ್ಜು – Kannada News | Sirsi Forest Land Recovery: Karnataka Forest Department to Reclaim Rs 400 Crore Worth 379 Acre Land After 36 Year Delay
ಅರಣ್ಯ ಭೂಮಿ (ಸಾಂದರ್ಭಿಕ ಚಿತ್ರ)Image Credit source: Getty Images ಬೆಂಗಳೂರು, ಜೂನ್ 15: ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ದೀರ್ಘಕಾಲದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅರಣ್ಯ ಭೂಮಿ ವಿವಾದ ಕೊನೆಗೂ ತೆರೆಬೀಳುವ ಹಂತಕ್ಕೆ ಬಂದಿದೆ. ಸುಮಾರು 36 ವರ್ಷಗಳ ಸುದೀರ್ಘ ವಿಳಂಬದ ನಂತರ, ಶಿರಸಿ ಮತ್ತು ಬನವಾಸಿ ಹೆದ್ದಾರಿ ಪಕ್ಕದಲ್ಲಿರುವ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 379 ಎಕರೆ ಅತ್ಯಂತ ಸೂಕ್ಷ್ಮ ಹಾಗೂ ಪವಿತ್ರ ಅರಣ್ಯ…