Headlines

ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ!

ಚಿಕ್ಕಮಗಳೂರು, ಏಪ್ರಿಲ್ 12: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಕೇರಳ ಮೂಲದ ಬಾಲಕಿ ಪ್ರಪಾತಕ್ಕೆ ಬಿದ್ದು ಮೃತಪಟ್ಟ ಘಟನೆ ಬಳಿಕವೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಸೋಲಾರಣ್ಯ ಪ್ರದೇಶ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸುತ್ತಮುತ್ತ ಪ್ರವಾಸಿಗರು ಅಪಾಯಕಾರಿ ಗುಡ್ಡಗಾಡು ಪ್ರದೇಶಗಳಲ್ಲಿ ನಿರ್ಬಂಧವಿಲ್ಲದೆ ಸಂಚರಿಸುತ್ತಿದ್ದಾರೆ. ಪ್ರಪಾತಗಳ ಅಂಚಿನಲ್ಲಿ ಸೆಲ್ಫಿ, ಫೋಟೋಶೂಟ್ ಹುಚ್ಚಿನಿಂದ ಅಪಾಯವನ್ನು ಲೆಕ್ಕಿಸದೆ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದ ಹೊರಗಿನಿಂದ ಸಹ ಸಾವಿರಾರು ಮಂದಿ ಪ್ರತಿದಿನ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ,…

Read More

Gold Rates: ಆಭರಣ ಚಿನ್ನದ ಬೆಲೆ 14,010 ರೂ; ಬೆಳ್ಳಿ ಬೆಲೆ 260 ರೂ

ಬೆಂಗಳೂರು, ಏಪ್ರಿಲ್ 12: ಚಿನ್ನದ ಬೆಲೆ ಅಕ್ಷರಶಃ ಡೋಲಾಯಮಾನ ಸ್ಥಿತಿಯಲ್ಲಿದ್ದು ಅತ್ತಿಂದಿತ್ತ ಓಲಾಡುತ್ತಿದೆ. ಕಳೆದ ಎರಡು ವಾರದಿಂದಲೂ ಇದರ ಬೆಲೆಯಲ್ಲಿ ಏರಿಳಿತ ನಿರಂತರವಾಗಿ ಆಗುತ್ತಿದೆ. ಈ ಮಧ್ಯೆ ಕಳೆದ 10 ದಿನದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 355 ರೂಗಳಷ್ಟು ಏರಿಕೆ ಹೊಂದಿದೆ. ವಿದೇಶಗಳಲ್ಲೂ ಕಳೆದ ಕೆಲ ವಾರಗಳಿಂದ ಅಲ್ಪ ಏರಿಳಿತಗಳೇ ಹೆಚ್ಚಿವೆ. ಬೆಳ್ಳಿ ಬೆಲೆಯೂ ಬಹುತೇಕ ಇದೇ ವರ್ತನೆ ತೋರುತ್ತಿದೆ. ಕಳೆದ 10 ದಿನದಲ್ಲಿ ಇದರ ಬೆಲೆಯಲ್ಲಿ 10 ರೂ ಏರಿಕೆ ಆಗಿದೆ. ಭಾರತದಲ್ಲಿ…

Read More

ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ; ವಿಡಿಯೋ ವೈರಲ್

ಕಗ್ಗದಾಸಪುರದಲ್ಲಿ ಅಮಾನವೀಯವಾಗಿ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸಿದ ಆರೋಪ ಕೇಳಿಬಂದಿದೆ. ಡಿಆರ್‌ಡಿಒ ಸಂಕೀರ್ಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಅದರ ಬೆನ್ನಲ್ಲೇ, ಬೀದಿ ನಾಯಿಗಳ (Stray Dogs) ಮೇಲಿನ ಕ್ರೌರ್ಯ ಖಂಡಿಸಿ ಪ್ರತಿಭಟನೆ ಮಾಡಲಾಗಿದೆ. ಇದರಲ್ಲಿ ನಟಿ ರಮ್ಯಾ ಕೂಡ ಭಾಗಿ ಆಗಿದ್ದಾರೆ. ಏಪ್ರಿಲ್ 11ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ಹೊರಹಾಕಿದರು. ಈ ಹೋರಾಟಕ್ಕೆ ಧ್ವನಿಯಾದ ರಮ್ಯಾ (Ramya Divya Spandana) ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು…

Read More

ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ; ಹೊಸಬರಿಗೆ ಅವಕಾಶಕ್ಕೆ ಆಗ್ರಹ

ಮಂಡ್ಯ, ಏಪ್ರಿಲ್​​ 12: ಸಚಿವ ಸಂಪುಟ ಪುನರ್‌ರಚನೆ ಕುರಿತು ಶಾಸಕ ರವಿಕುಮಾರ್ ಗಣಿಗ ಮಂಡ್ಯದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರೆಲ್ಲರಿಗೂ ಸಚಿವ ಸ್ಥಾನ ಸಿಕ್ಕು ರಾಜ್ಯಕ್ಕೆ ಸೇವೆ ಸಲ್ಲಿಸಲಿ. ಈ ಸಂಬಂಧ ತಾವು ಸೇರಿದಂತೆ 38 ಶಾಸಕರು ಪತ್ರ ಬರೆದಿದ್ದು, ಐದು ಮಂದಿ ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ಕೋರಿದ್ದೇವೆ. ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ…

Read More

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿ ಸೌಮ್ಯ ಅರೆಸ್ಟ್!

ಉಡುಪಿ, ಏಪ್ರಿಲ್ 12: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ (Sudeep Rai Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಹತ್ತು ಹಲವು ಆರೋಪಗಳು ಕೇಳಿ ಬಂದಿದ್ದವು. ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದ ಆಕೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ತನ್ನ ಮೇಲಿನ ಆರೋಪಗಳನ್ನು ಸೌಮ್ಯ ಅಲ್ಲಗಳೆದರೂ ಇದೀಗ ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಸೌಮ್ಯಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ…

Read More

Hindu Traditions: ದೇಹದ ಸೂರ್ಯ-ಚಂದ್ರ ಭಾಗಗಳು; ಬಲಗಾಲಿಟ್ಟು ಮನೆಗೆ ಬಾ ಎನ್ನುವುದೇಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಯಾವುದೇ ಸ್ಥಳಕ್ಕೆ ಪ್ರವೇಶಿಸುವಾಗ ಬಲಗಾಲು ಅಥವಾ ಎಡಗಾಲು ಇಡುವಿಕೆಗೆ ವಿಶೇಷ ಮಹತ್ವವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ನಾವು ಯಾವುದೇ ಕೆಲಸಕ್ಕೆ ಹೊರಟಾಗ ಅಥವಾ ಹೊಸ ಸ್ಥಳಕ್ಕೆ ಪ್ರವೇಶಿಸುವಾಗ ಯಾವ ಕಾಲು ಇಡಬೇಕು ಎಂಬುದು ಭಾರತೀಯ ಸಂಸ್ಕೃತಿಯಲ್ಲಿ ಮಹತ್ವ ಪಡೆದಿದೆ. ಉದಾಹರಣೆಗೆ, ಮದುವೆಯಾದ ಕನ್ಯೆ ಅತ್ತೆಯ ಮನೆಗೆ ಪ್ರವೇಶಿಸುವಾಗ ಬಲಗಾಲಿಟ್ಟು ಬಾರಮ್ಮ ಎಂದು ಹೇಳುವುದು ರೂಢಿ. ಈ…

Read More

ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಸಾವು: ದಾರುಣವಾಗಿ ಮೃತಪಟ್ಟ ಹಾಸನದ ರೈತ

ಹಾಸನ, ಏಪ್ರಿಲ್​​ 12: ಕರ್ನಾಟಕದಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಹುಲಿ ಮತ್ತು ಆನೆಗಳ ದಾಳಿಗೆ ಮೃತ ಪಡುವ ಅಮಾಯಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಕಾಡಾನೆ ದಾಳಿಗೆ ಮತ್ತೊಂದು ಸಾವು ರಾಜ್ಯದಲ್ಲಿ ನಡೆದಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ…

Read More

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟ ಕಟ್ಟಿದ ಪತ್ನಿ; ಕೊಲೆ ಬಳಿಕ ಅಮಾಯಕಳಂತೆ ನಾಟಕ

ಬೆಳಗಾವಿ, ಏಪ್ರಿಲ್​​ 12: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣ ಲವ್ವರ್​​ ಜೊತೆ ಸೇರಿಕೊಂಡು ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನೇ ಪತ್ನಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ…

Read More

ಇರಾನ್ ಜತೆ ಚೀನಾ ಕೈಜೋಡಿಸಿದರೆ ಕಾದಿದೆ ಆಪತ್ತು, ಡೊನಾಲ್ಡ್​ ಟ್ರಂಪ್ ಅಂತಿಮ ಎಚ್ಚರಿಕೆ

ವಾಷಿಂಗ್ಟನ್, ಏಪ್ರಿಲ್ 12: ಜಾಗತಿಕ ರಾಜಕೀಯದ ರಣರಂಗದಲ್ಲಿ ಈಗ ಅಮೆರಿಕ, ಇರಾನ್(Iran) ಮತ್ತು ಚೀನಾ ನಡುವಿನ ಸಂಘರ್ಷ ತಾರಕಕ್ಕೇರಿದೆ. ಇರಾನ್ ಬೆನ್ನಿಗೆ ನಿಂತಿರುವ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಎಚ್ಚರಿಕೆ ಈಗ ಮೂರನೇ ಮಹಾಯುದ್ಧದ ಭೀತಿಯನ್ನು ಹುಟ್ಟುಹಾಕಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಬಿಕ್ಕಟ್ಟು ಈಗ ಅಮೆರಿಕ ಮತ್ತು ಡ್ರ್ಯಾಗನ್ ದೇಶ ಚೀನಾವನ್ನು ಮುಖಾಮುಖಿಯಾಗಿಸಿದೆ. ಇರಾನ್​ಗೆ ಆಧುನಿಕ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿರುವ ಚೀನಾಗೆ ಡೊನಾಲ್ಡ್​ ಟ್ರಂಪ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ಷಿ ಜಿನ್​ಪಿಂಗ್ ಅವರೇ, ಇರಾನ್​ಗೆ ಶಸ್ತ್ರಾಸ್ತ್ರ…

Read More

ಇರಾನ್-ಅಮೆರಿಕ ಸಂಧಾನಕ್ಕೆ ‘ಪರಮಾಣು’ ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?

ಇಸ್ಲಾಮಾಬಾದ್, ಏಪ್ರಿಲ್ 12: ಜಾಗತಿಕ ಶಾಂತಿ ಮತ್ತು ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರಬಹುದಾಗಿದ್ದ ಅಮೆರಿಕ-ಇರಾನ್(Iran) ನಡುವಿನ ಹೈ-ವೋಲ್ಟೇಜ್ ಸಂಧಾನ ಸದ್ಯಕ್ಕೆ ಹಳಿತಪ್ಪಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದು, ಈ ವೈಫಲ್ಯದ ಹಿಂದಿನ ಆಘಾತಕಾರಿ ಕಾರಣಗಳು ಇಲ್ಲಿವೆ. ಅಮೆರಿಕ ಮತ್ತು ಇರಾನ್ ನಡುವೆ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯ ಹಾಡಲು ಪಾಕಿಸ್ತಾನ ಹಮ್ಮಿಕೊಂಡಿದ್ದ ಸಂಧಾನ ಸಭೆಯು ಅನಿಶ್ಚಿತವಾಗಿ ಕೊನೆಗೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್…

Read More