ನಿವೃತ್ತ ಶಿಕ್ಷಕನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada
ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್ ಅರೆಸ್ಟ್ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್ ನಂಬರ್ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಾತಾಡ್ತಾರೆಂದು ಓರ್ವ…