Headlines

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

IPL 2026: ಐಪಿಎಲ್ 2026ರ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದಲ್ಲಿ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 181 ರನ್​ ಗಳಿಸಿದ್ದರು. ಅದರಂತೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು….

Read More

ಬ್ಯಾಡ್ ನ್ಯೂಸ್: ಪಾಕಿಸ್ತಾನ ಸಂಧಾನ ವಿಫಲ, ಇರಾನ್ ಜೊತೆ ಒಪ್ಪಂದವಿಲ್ಲದೆ ಅಮೆರಿಕ ನಿಯೋಗ ವಾಪಸ್

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕ ಮತ್ತು ಇರಾನ್(Iran) ನಡುವಿನ ದೀರ್ಘಕಾಲದ ವೈಮನಸ್ಸು ಶಮನಗೊಳಿಸಲು ಪಾಕಿಸ್ತಾನದ ಮಣ್ಣಿನಲ್ಲಿ ನಡೆದ ಐತಿಹಾಸಿಕ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಸತತ 21 ಗಂಟೆಗಳ ಕಾಲ ಎರಡೂ ದೇಶಗಳ ಪ್ರತಿನಿಧಿಗಳು ಮುಖಾಮುಖಿಯಾಗಿ ಚರ್ಚಿಸಿದರೂ, ಅಂತಿಮವಾಗಿ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲು ಸಾಧ್ಯವಾಗಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಘೋಷಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಸುದೀರ್ಘ 21 ಗಂಟೆಗಳ ಹೈ-ವೋಲ್ಟೇಜ್ ರಾಜತಾಂತ್ರಿಕ ಸಂಘರ್ಷ ಅಂತಿಮವಾಗಿ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದ್ದ ಅಮೆರಿಕ-ಇರಾನ್ ನೇರ…

Read More

ಕೊನೆಗೂ ಈಡೇರಿತು 40 ವರ್ಷಗಳ ಕೊರಗು: ಮಗನ ಜೊತೆ ತಂದೆಯೂ ದ್ವಿತೀಯ ಪಿಯುಸಿ ಉತ್ತೀರ್ಣ

ಮಂಗಳೂರು, ಏಪ್ರಿಲ್​​ 12: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಒಟ್ಟಿಗೆ ಪರೀಕ್ಚೆ ಬರೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದ ತಾಯಿ-ಮಗಳು ಉತ್ತೀರ್ಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವ ನಡುವೆಯೇ ಮಂಗಳೂರು ಕೊಳ್ಯ ನಿವಾಸಿಯಾದ 57 ವರ್ಷದ ಮೋಹನ್ ರಾಜ್ ಅವರು ತಮ್ಮ ಮಗ ಕ್ಷಿತಿಜ್ ರಾಜ್ ಜೊತೆಗೂಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರುವ ವಿಚಾರ ಗೊತ್ತಾಗಿದೆ. ಶೇ.52 ಅಂಕಗಳೊಂದಿಗೆ ಅವರು ತೇರ್ಗಡೆ ಹೊಂದಿದ್ದಾರೆ. ಚಿಟ್ ಫಂಡ್​​ ವ್ಯವಹಾರದಲ್ಲಿ ತೊಡಗಿರುವ ಮೋಹನ್ ರಾಜ್…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ ಭಾಗಗಳಲ್ಲಿ ಉಷ್ಣ ಅಲೆ; ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 12: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ (Weather Forecast) ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ? ಕರಾವಳಿಯಲ್ಲಿಂದು ಬಿಸಿ ವಾತಾವರಣದ ಜೊತೆ ಒಣ ಹವೆಯೂ…

Read More

IPL 2026: ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದ ಮೇಲೆ ಅಲ್ಲಿ ದಾಖಲೆಗಳಿಗೆ ಕೊರತೆಯಿಲ್ಲ. ದಾಖಲೆಗಳ ನಡುವೆ ಸಂಜು ಸ್ಯಾಮ್ಸನ್ (Sanju Samson) ಅಪರೂಪದ ರೆಕಾರ್ಡ್​ವೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಾಲ್ಕು ವಿಭಿನ್ನ ಸೀಸನ್‌ಗಳಲ್ಲಿ 'ಸೀಸನ್‌ನ ಮೊದಲ ಶತಕ' ಸಿಡಿಸುವ ಮೂಲಕ ಎಂಬುದು ವಿಶೇಷ. ಸಾಮಾನ್ಯವಾಗಿ ಒಂದು ಸೀಸನ್‌ನಲ್ಲಿ ಶತಕ ಸಿಡಿಸುವುದೇ ದೊಡ್ಡ ಸಾಧನೆ. ಆದರೆ ಸಂಜು ಸ್ಯಾಮ್ಸನ್ ಅವರು ಲೀಗ್ ಆರಂಭದ ಹಂತದಲ್ಲೇ ಅಬ್ಬರಿಸಿ, ಆ ಸೀಸನ್‌ನ ಚೊಚ್ಚಲ ಶತಕವನ್ನು ತಮ್ಮದಾಗಿಸಿಕೊಳ್ಳುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಈ ಹವ್ಯಾಸದೊಂದಿಗೆ ಇದೀಗ…

Read More

ಪುರಷ ಪ್ರಯಾಣಿಕರಿಗೆ ಶಕ್ತಿ ಯೋಜನೆ ಟಿಕೆಟ್​​, ಯುಪಿಐ ಸ್ಕ್ಯಾಮ್​​: BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​

ಬೆಂಗಳೂರು, ಏಪ್ರಿಲ್​​ 12: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಾಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ರೆ, ಇತ್ತ ಬಿಎಂಟಿಸಿಯ ಕೆಲ ಕಿಲಾಡಿ ನೌಕರು ಮಾತ್ರ ಅನ್ನ ತಿಂದ ಮನೆಗೆ ಕನ್ನ ಹಾಕೋ ಕೆಲಸ ಮಾಡುತ್ತಿದ್ದಾರೆ. ಕನ್ನಡ ಬಾರದ ಪುರುಷ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಟಿಕೆಟ್​​ ನೀಡಿ ದುಡ್ಡು ಮಾಡ್ತಿದ್ದಾರೆ. ಮತ್ತೊಂದೆಡೆ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ಯುಪಿಐ ಕ್ಯೂಆರ್​ ಕೋಡ್​​ಗಳನ್ನು ಅಳವಡಿಸಿದೆ. ಇದನ್ನು ಸ್ಕ್ಯಾನ್​​ ಮಾಡಿ ಟಿಕೆಟ್​​ ಹಣ ಪಾವತಿಸುವಂತೆ ಪ್ರಯಾಣಿಕರಿಗೆ…

Read More

‘ಜನ ನಾಯಗನ್’ ಪೈರಸಿ ಕಾಪಿ ಡೌನ್​ಲೋಡ್ ಮಾಡಿದವರಿಗೂ ಎದುರಾಗಲಿದೆ ಸಂಕಷ್ಟ

ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಹಾಗೂ ಅವರ ವೃತ್ತಿಜೀವನದ ಕೊನೆಯ ಚಿತ್ರ ಎನ್ನಲಾದ ‘ಜನ ನಾಯಗನ್’ (Jana Nayagan) ಬಿಡುಗಡೆಗೂ ಮುನ್ನವೇ ಪೈರಸಿ ಕಾಟಕ್ಕೆ ಸಿಲುಕಿದೆ. ಸೆನ್ಸಾರ್ ಮಂಡಳಿಯೊಂದಿಗೆ ಚಿತ್ರತಂಡ ಸುದೀರ್ಘ ಹೋರಾಟ ನಡೆಸುತ್ತಿರುವ ನಡುವೆಯೇ, ಚಿತ್ರದ ಸಂಪೂರ್ಣ ತುಣುಕುಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವುದು ಇಡೀ ಭಾರತೀಯ ಚಿತ್ರರಂಗಕ್ಕೆ ಶಾಕ್ ನೀಡಿದೆ. ಈ ದುರದೃಷ್ಟಕರ ಘಟನೆಯ ಬೆನ್ನಲ್ಲೇ ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ (KVN Productions) ಅಧಿಕೃತ ಪ್ರಕಟಣೆ ಹೊರಡಿಸಿದೆ. ‘ಜನ ನಾಯಗನ್’ ಸಿನಿಮಾದ ಪೈರಸಿ (Piracy)…

Read More

Horoscope Today: ಇಂದು ಈ ರಾಶಿಯವರಿಗೆ ಆಪ್ತರೇ ಅಪವಾದ ಹೊರಿಸಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 12, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.   Source link

Read More

Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮರಣ ಹೊಂದಿದವರ ಹೆಸರಿನಲ್ಲಿ ದೇವಾಲಯಗಳಲ್ಲಿ ಅರ್ಚನೆ ಮಾಡಿಸಬಹುದೇ ಎಂಬ ಪ್ರಶ್ನೆ ಕಾಡುತ್ತದೆ. ಸಾಮಾನ್ಯವಾಗಿ, ಬದುಕಿರುವವರ ಹೆಸರು, ಗೋತ್ರ, ನಕ್ಷತ್ರ ಹೇಳಿ ಅರ್ಚನೆ ಮಾಡಿಸುವ ಪದ್ಧತಿ ಇದೆ, ಅವರಿಗೆ ಆಯುರಾರೋಗ್ಯ ಪ್ರಾಪ್ತಿಗಾಗಿ ಪ್ರಾರ್ಥಿಸಲಾಗುತ್ತದೆ. ಆದರೆ, ಮರಣ ಹೊಂದಿದವರ ಹೆಸರಿನಲ್ಲಿ ಅರ್ಚನೆ ಮಾಡಿಸುವುದು ಅಷ್ಟು ಶುಭವಲ್ಲ ಎಂದು ಹಲವು ಧಾರ್ಮಿಕ ಕೇಂದ್ರಗಳು ಹೇಳುತ್ತವೆ. ಕೆಲವು ದೇವಾಲಯಗಳಲ್ಲಿ ಇದನ್ನು ಒಪ್ಪಿಕೊಂಡರೂ,…

Read More

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್​​ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್​​ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾಗಿದೆ. ಐಸ್ ಕ್ರೀಮ್‌ನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದ್ದರೆ ಅಪಾಯವಾಗುವ ಸಾಧ್ಯತೆ ಇತ್ತು ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ…

Read More