Category Archives: Blog

Your blog category

ವರ್ಷಕ್ಕೆ 90 ದಿನ ಕೆಲಸ ಮಾಡಿದರೂ ಸಾಕು, ಅರೆಕಾಲಿಕ ಕಾರ್ಮಿಕರಿಗೆ ಅನುಕೂಲವಾಗಲಿರುವ ಸರ್ಕಾರದ ಹೊಸ ರೂಲ್ಸ್ – Kannada News | Min 90 days of working, centre drafts social security rules for gig workers

ನವದೆಹಲಿ, ಜನವರಿ 2: ಓಲಾ, ಊಬರ್, ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಟ್ ಇತ್ಯಾದಿ ಪ್ಲಾಟ್​ಫಾರ್ಮ್​ಗಳಲ್ಲಿ ಕೆಲಸ ಮಾಡುವ ಡ್ರೈವರ್​ಗಳು ಹಾಗೂ ಅರೆಕಾಲಿಕ ಕಾರ್ಮಿಕರಿಗೆ (Gig Workers) ಸಾಮಾಜಿಕ ಭದ್ರತಾ ಸಂಹಿತೆಯ ಸೌಲಭ್ಯ ಸಿಗುವ ಸಂಬಂಧ ಸರ್ಕಾರ ಹೊಸ ನಿಯಮಗಳನ್ನು ಪ್ರಸ್ತಾಪಿಸಿದೆ. ಸರ್ಕಾರ ರೂಪಿಸಿರುವ ಕರಡು ನಿಯಮಗಳ ಪ್ರಕಾರ, ಗಿಗ್ ಕಾರ್ಮಿಕರು ಒಂದು ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸ ಮಾಡಿದರೂ, ಅವರು ಸೋಷಿಯಲ್ ಸೆಕ್ಯೂರಿಟಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಪ್ಲಾಟ್​ಫಾರ್ಮ್​​ಗಳಿಗೆ ಕೆಲಸ ಮಾಡುತ್ತಿದ್ದರೆ..?

ಈಗ ಒಬ್ಬ ಆಟೊಚಾಲಕ ಅಥವಾ ಕ್ಯಾಬ್ ಚಾಲಕರಾಗಿದ್ದರೆ ನಮ್ಮ ಯಾತ್ರಿ, ಓಲಾ, ಊಬರ್ ಪ್ಲಾಟ್​ಫಾರ್ಮ್​ಗಳಿಗೆ ಸಬ್​ಸ್ಕ್ರೈಬ್ ಆಗಿರುವುದುಂಟು. ಎಲ್ಲವನ್ನೂ ಆನ್​ನಲ್ಲಿಟ್ಟುಕೊಂಡು ಗ್ರಾಹಕರಿಗಾಗಿ ಕಾಯುವುದುಂಟು. ಹಾಗೆಯೇ, ಸ್ವಿಗ್ಗಿ, ಜೊಮಾಟೊ ಎರಡಕ್ಕೂ ಕೆಲಸ ಮಾಡುವ ಡೆಲಿವರಿ ಪಾರ್ಟ್ನರ್ಸ್ ಕಾರ್ಮಿಕರಿರುತ್ತಾರೆ. ಹೀಗೆ, ಒಂದಕ್ಕಿಂತ ಹೆಚ್ಚು ಪ್ಲಾಟ್​ಫಾರ್ಮ್​ಗಳಲ್ಲಿ ಸಕ್ರಿಯವಾಗಿರುವ ಕಾರ್ಮಿಕರು ಸೋಷಿಯಲ್ ಸೆಕ್ಯೂರಿಟಿ ಸೌಲಭ್ಯ ಪಡೆಯಲು 120 ದಿನಗಳ ಕೆಲಸದ ಮಾನದಂಡ ಮುಟ್ಟಬೇಕು.

ಇದನ್ನೂ ಓದಿ: 21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್

ಆದರೆ, ಇಲ್ಲೊಂದು ಅನುಕೂಲ ಇರುತ್ತದೆ. ಒಬ್ಬ ಕಾರ್ಮಿಕ ಒಂದು ದಿನದಲ್ಲಿ ಮೂರು ಪ್ಲಾಟ್​ಫಾರ್ಮ್​ಗಳಲ್ಲಿ ಲೈವ್ ಆಗಿದ್ದಾಗ, ಆತನ ಕೆಲಸದ ದಿನವನ್ನು ಒಂದು ಎಂದು ಪರಿಗಣಿಸದೆ ಮೂರು ಎಂದು ಪರಿಗಣಿಸಲಾಗುತ್ತದೆ. ಹೀಗೆ, ದಿನಕ್ಕೆ ಮೂರು ಪ್ಲಾಟ್​ಫಾರ್ಮ್​ಗಳಿಗೆ 40 ದಿನ ಕೆಲಸ ಮಾಡಿದರೂ ಸಾಕು, ಆತ ಸಾಮಾಜಿಕ ಭದ್ರತಾ ಸೌಲಭ್ಯ ಪಡೆಯಲು ಅರ್ಹನಾಗಿರುತ್ತಾನೆ. ಇಂಥದ್ದೊಂದು ಅವಕಾಶ ನೀಡುವ ಪ್ರಸ್ತಾವವನ್ನು ಸರ್ಕಾರ ಮಾಡಿದೆ.

ನೇರ ನೇಮಕಾತಿಯೇ ಆಗಬೇಕೆಂದಿಲ್ಲ…

ಅರೆಕಾಲಿಕ ಕಾರ್ಮಿಕ ಅಥವಾ ಗಿಗ್ ವರ್ಕರ್ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಯಾಗಲು ಕಂಪನಿಗೆ ನೇರವಾಗಿ ನೇಮಕಾತಿ ಆಗಿರಬೇಕೆಂದೇನಿಲ್ಲ. ಥರ್ಡ್ ಪಾರ್ಟಿ ಮೂಲಕ ಗುತ್ತಿಗೆ ಆಧಾರವಾಗಿ ಕೆಲಸ ಮಾಡುತ್ತಿದ್ದರೂ ಅವರಿಗೆ ಕವರೇಜ್ ಸಿಗಬೇಕು ಎಂದು ಕರಡು ನಿಯಮದಲ್ಲಿ ತಿಳಿಸಲಾಗಿದೆ.

ಸಾಮಾಜಿಕ ಭದ್ರತೆ ಸ್ಕೀಮ್ ಹೇಗಿರುತ್ತದೆ?

ಸರ್ಕಾರದ ಹೊಸ ಕಾರ್ಮಿಕ ಸಂಹಿತೆ ಪ್ರಕಾರ, ಅರೆಕಾಲಿಕ ಕಾರ್ಮಿಕರಿಗೆ ಹೆಲ್ತ್ ಇನ್ಷೂರೆನ್ಸ್, ಲೈಫ್ ಇನ್ಷೂರೆನ್ಸ್ ಮತ್ತು ಆಕ್ಸಿಡೆಂಟ್ ಇನ್ಷೂರೆನ್ಸ್ ಸೌಲಭ್ಯ ಕೊಡಬೇಕು. ಆಯುಷ್ಮಾನ್ ಭಾರತ್ ಸ್ಕೀಮ್ ಅಡಿಯಲ್ಲಿ ಅವರನ್ನು ಸೇರಿಸಬೇಕು ಎಂದಿದೆ.

ಇದನ್ನೂ ಓದಿ: ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಅಂಟಿಸಿಕೊಂಡು ಆಡಿದ ಕಾಶ್ಮೀರೀ ಕ್ರಿಕೆಟಿಗ; ಪೊಲೀಸರಿಂದ ವಿಚಾರಣೆ

ಒಂದು ಅಂದಾಜು ಪ್ರಕಾರ, ಭಾರತದ ವಿವಿಧೆಡೆ ಒಟ್ಟು 1.27 ಕೋಟಿಗೂ ಅಧಿಕ ಸಂಖ್ಯೆಯಲ್ಲಿ ಇಂಥ ಗಿಗ್ ವರ್ಕರ್ಸ್ ಇದ್ದಾರೆ ಎಂದು ಅಂದಾಜಿಸಲಾಗಿದೆ. ಮುಂದಿನ ಕೆಲ ವರ್ಷಗಳಲ್ಲಿ (2029-30) ಇಂಥ ಕಾರ್ಮಿಕರ ಸಂಖ್ಯೆ 2.35 ಕೋಟಿ ದಾಟುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಅದೇ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ರೈತ – Kannada News | Gadag: Miscreants Set Fire to Maize Worth 60 Lakh; Distressed Farmer Attempts Suicide by Jumping into Flames

ಗದಗ, ಜನವರಿ 02: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿ ಆಗಿದೆ. ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ನಾಲ್ಕು ಜನರಿಂದ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಮಕ್ಕಳ‌ ಸಮೇತ ರೈತ ಕುಟುಂಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ. ಸ್ಥಳದಲ್ಲಿದ್ದ ಗ್ರಾಮಸ್ಥರು ರೈತ ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಕಣ್ಮುಂದೆ ಸುಟ್ಟು ಕರಕಲಾದ ಮೆಕ್ಕೆಜೋಳವನ್ನು ನೋಡಿ ರೈತ ಕಣ್ಣೀರು ಹಾಕಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ – Kannada News | India vs Bangladesh Cricket Tour Schedule Released: ODI and T20 Series Dates

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ.

ವಾಸ್ತವವಾಗಿ ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಹಿಂಸಾಚಾರದಿಂದಾಗಿ ಬಿಸಿಸಿಐ, ಈ ಪ್ರವಾಸವನ್ನು ಮುಂದೂಡಿತ್ತು. ಇದೀಗ ಈ ಪ್ರವಾಸದ ಬಗ್ಗೆ ಖಚಿತ ಮಾಹಿತಿ ನೀಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಒಟ್ಟು 6 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಭಾರತದ ಬಾಂಗ್ಲಾದೇಶ ಪ್ರವಾಸ ಏಕದಿನ ಸರಣಿಯೊಂದಿಗೆ ಆರಂಭವಾಗಲಿದೆ. ಹಾಗೆಯೇ ಟಿ20 ಸರಣಿಯೊಂದಿಗೆ ಅಂತ್ಯವಾಗಲಿದೆ.

ಪ್ರವಾಸದ ವಿವರ ಹೀಗಿದೆ

ಆದಾಗ್ಯೂ ಟೀಂ ಇಂಡಿಯಾದ ಈ ಪ್ರವಾಸಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಉಭಯ ತಂಡಗಳು ಸೆಪ್ಟೆಂಬರ್ ತಿಂಗಳಲ್ಲಿ ಮುಖಾಮುಖಿಯಾಗಲಿವೆ. ವೇಳಾಪಟ್ಟಿಯ ಪ್ರಕಾರ ಎರಡು ತಂಡಗಳ ನಡುವೆ ಮೊದಲು ಏಕದಿನ ಸರಣಿ ನಡೆಯಲಿದ್ದು, ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 1 ರಂದು ನಡೆಯಲಿದೆ. ಆ ಬಳಿಕ ಎರಡನೇ ಪಂದ್ಯ ಸೆಪ್ಟೆಂಬರ್ 3 ಹಾಗೂ ಮೂರನೇ ಪಂದ್ಯ ಸೆಪ್ಟೆಂಬರ್ 6 ರಂದು ನಡೆಯಲಿದೆ. ಏಕದಿನ ಸರಣಿಯ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಪಂದ್ಯಗಳು ಸೆಪ್ಟೆಂಬರ್ 9, 12 ಮತ್ತು 13 ರಂದು ನಡೆಯಲಿವೆ.

ಸರಣಿ ಸೋತಿದ್ದ ಟೀಂ ಇಂಡಿಯಾ

ಭಾರತ ತಂಡವು ಕೊನೆಯ ಬಾರಿಗೆ 2022-23 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿತ್ತು, ಅಲ್ಲಿ ಏಕದಿನ ಸರಣಿಯನ್ನು ಸೋತಿತ್ತು. ಬಾಂಗ್ಲಾದೇಶ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು. ಆದಾಗ್ಯೂ, ಬಾಂಗ್ಲಾದೇಶ ನೆಲದಲ್ಲಿ ಭಾರತ ಉತ್ತಮ ದಾಖಲೆಯನ್ನು ಹೊಂದಿದೆ. ಬಾಂಗ್ಲಾದೇಶದಲ್ಲಿ ಭಾರತ ಆಡಿರುವ 25 ಪಂದ್ಯಗಳಲ್ಲಿ 18 ರಲ್ಲಿ ಗೆದ್ದಿದ್ದು, 6 ರಲ್ಲಿ ಸೋತಿದೆ ಮತ್ತು ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:03 pm, Fri, 2 January 26

Source link

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ – Kannada News | Bellary violence: Satish Reddy Gunman Firing at janardhan reddy House, here Is EXCLUSIVE video

ಬಳ್ಳಾರಿ, ಜನವರಿ 02): ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್​​ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್​ಮ್ಯಾನ್​ ಒಂದು ಸುತ್ತು ಫೈರಿಂಗ್ ಮಾಡಿದ್ದು, ಇದರಿಂದ ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಪೀಸ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್ – Kannada News | Muthalik Vows PIL Against Zameer Ahmeds Housing Promise to Bangladeshi Muslims.

ಬೆಂಗಳೂರು, ಜ.2: ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್‌ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾ ವಾಸಸ್ಥಾನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹಮದ್ ಅವರು ಈ ಸಮುದಾಯಗಳಿಗೆ ಮನೆಗಳನ್ನು ನೀಡುವ ಪ್ರಸ್ತಾಪವನ್ನು ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ. “ಕೋಗಿಲು ನಗರದಲ್ಲಿ ಶುದ್ಧ ಬಾಂಗ್ಲಾದೇಶಿ ಮುಸ್ಲಿಂರ ವಾಸಸ್ಥಾನವಿದೆ. ಅಲ್ಲಿ ರೋಹಿಂಗ್ಯಾಗಳಿದ್ದಾರೆ. ಕಾಂಗ್ರೆಸ್ ನಾಯಕರು ಅವರಿಗೆ ತಕ್ಷಣವೇ ಹೇಗೆ ಸ್ಪಂದಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ಜಮೀರ್ ಅಹಮದ್ ಅವರನ್ನು ಎರಡನೆಯ ಟಿಪ್ಪು ಸುಲ್ತಾನ್ ಎಂದು ಮುತಾಲಿಕ್, ಅವರು ಬಾಂಗ್ಲಾದೇಶಿ ಮುಸ್ಲಿಮರಿಗೆ ಮನೆ ಕೊಡುವುದಾಗಿ ಹೇಳಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಸ್ಥಳೀಯರು ಮನೆಗಳಿಲ್ಲದೆ ಏಳರಿಂದ ಎಂಟು ವರ್ಷಗಳಿಂದ ಚಪ್ಪರದಲ್ಲಿ ಟೆಂಟ್ ಹಾಕಿಕೊಂಡು, ಬಿಸಿಲು ಮಳೆ ಉಪವಾಸದಲ್ಲಿ ಕಳೆಯುತ್ತಿದ್ದಾರೆ. ಅವರಿಗೆ ಯಾವುದೇ ನೆರವು ಸಿಗುತ್ತಿಲ್ಲ ಎಂದು ಮುತಾಲಿಕ್ ಹೇಳಿದ್ದಾರೆ. ಬಾಂಗ್ಲಾದೇಶಿ ಮುಸ್ಲಿಮರಿಗೆ ಮನೆಗಳನ್ನು ನೀಡುವುದು ತಪ್ಪು ಎಂದು ಅವರು ಬಣ್ಣಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲು ತಮ್ಮ ಸಂಘಟನೆ ನಿರ್ಧರಿಸಿದೆ ಎಂದು ಮುತಾಲಿಕ್ ಘೋಷಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕೆಟ್ಟ ನೆರೆಹೊರೆಯವರಿಂದ ಭಾರತಕ್ಕೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕಿದೆ; ಭಯೋತ್ಪಾದನೆ ವಿರುದ್ಧ ಜೈಶಂಕರ್ ಎಚ್ಚರಿಕೆ – Kannada News | India Has Right To Defend Itself From Bad Neighbours s Jaishankars Warning Over Terrorism

ಚೆನ್ನೈ, ಜನವರಿ 2: ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಇಂದು (ಶುಕ್ರವಾರ) ಪಾಕಿಸ್ತಾನದ ಮೇಲೆ ತೀಕ್ಷ್ಣವಾದ ದಾಳಿ ನಡೆಸಿದರು. ಭಯೋತ್ಪಾದನೆಯನ್ನು ಬೆಂಬಲಿಸುವುದನ್ನು ಮುಂದುವರಿಸುವ “ಕೆಟ್ಟ ನೆರೆಹೊರೆಯವರು” ಎಂದು ಪಾಕಿಸ್ತಾನವನ್ನು ಟೀಕಿಸಿದ್ದಾರೆ. ಅಂತಹ ಬೆದರಿಕೆಗಳ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲಾ ಹಕ್ಕನ್ನು ಭಾರತ ಹೊಂದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಐಐಟಿ ಮದ್ರಾಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಎಸ್. ಜೈಶಂಕರ್, ಭಾರತವು ತನ್ನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಭಯೋತ್ಪಾದನೆಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಕುರಿತು ಹೊರಗಿನ ದೇಶದ ಸಲಹೆಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆ; ಕುಟುಂಬಕ್ಕೆ ಪ್ರಧಾನಿ ಮೋದಿಯ ಪತ್ರ ನೀಡಿದ ಸಚಿವ ಜೈಶಂಕರ್

“ಭಯೋತ್ಪಾದನೆಯನ್ನು ಮುಂದುವರಿಸುವ ಕೆಟ್ಟ ನೆರೆಹೊರೆಯವರ ವಿಷಯಕ್ಕೆ ಬಂದಾಗ ಭಾರತವು ತನ್ನ ಜನರನ್ನು ರಕ್ಷಿಸುವ ಎಲ್ಲಾ ಹಕ್ಕನ್ನು ಹೊಂದಿದೆ ಮತ್ತು ಅಗತ್ಯವಿರುವ ಎಲ್ಲವನ್ನೂ ಮಾಡುತ್ತದೆ. ನಮ್ಮ ನೀರನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಮತ್ತು ನಮ್ಮ ದೇಶದಲ್ಲಿ ಭಯೋತ್ಪಾದನೆಯನ್ನು ಹರಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಅಗತ್ಯದ ಸಮಯದಲ್ಲಿ ಭಾರತವು ತನ್ನ ನೆರೆಹೊರೆಯವರನ್ನು ನಿರಂತರವಾಗಿ ಬೆಂಬಲಿಸಿದೆ. ಆದರೆ, ನೆರೆಹೊರೆಯ ಬಗ್ಗೆ ನಮ್ಮ ವಿಧಾನವು ಸಾಮಾನ್ಯ ಜ್ಞಾನದಿಂದ ಮಾರ್ಗದರ್ಶಿಸಲ್ಪಡುತ್ತದೆ. ಉತ್ತಮ ನೆರೆಹೊರೆಯವರೊಂದಿಗೆ ಭಾರತವು COVID ಸಮಯದಲ್ಲಿ ಲಸಿಕೆಗಳು, ಉಕ್ರೇನ್ ಸಂಘರ್ಷದ ಸಮಯದಲ್ಲಿ ಇಂಧನ ಮತ್ತು ಆಹಾರ ಬೆಂಬಲ ಅಥವಾ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ 4 ಬಿಲಿಯನ್ ಡಾಲರ್ ಸಹಾಯವನ್ನು ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ಬಗ್ಗೆ ಸಮರ್ಥನೆಗೆ ಅವಕಾಶವೇ ಇಲ್ಲ; SCO ಶೃಂಗಸಭೆಯಲ್ಲಿ ಸಚಿವ ಜೈಶಂಕರ್ ಸಂದೇಶ

ಏಪ್ರಿಲ್ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಹಲವಾರು ಪ್ರವಾಸಿಗರನ್ನು ಕೊಂದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಮತ್ತಷ್ಟು ಹದಗೆಟ್ಟವು. ದಾಳಿಯ ನಂತರ ಭಾರತ ಪಾಕಿಸ್ತಾನದ ವಿರುದ್ಧ ಶಿಕ್ಷಾರ್ಹ ಕ್ರಮಗಳನ್ನು ಘೋಷಿಸಿತು, ಇದರ ಬಳಿಕ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಬ್ಯಾನ್​​ ಆದರೂ ರಾಜ್ಯದಲ್ಲಿ ನಿಂತಿಲ್ಲ ಲಾಟರಿ ಹಾವಳಿ: ಗಡಿ ಜಿಲ್ಲೆಗಳಲ್ಲಿ ಕೇರಳದ ಟಿಕೆಟ್​​ ಬಿಕರಿ – Kannada News | Illegal Kerala Lotteries Thrive in Chamarajanagar Despite Ban in Karnataka

ಕೇರಳದ ಲಾಟರಿ ಟಿಕೆಟ್​​.

ಚಾಮರಾಜನಗರ, ಜನವರಿ 02: ರಾತ್ರಿ ಬೆಳಗಾಗುವುದರ ಒಳಗೆ ಶ್ರೀಮಂತರಾಗೋ ಹುಚ್ಚು ಕನಸು ಇಟ್ಟುಕೊಂಡು ಲಾಟರಿ ಖರೀದಿಸಿ ಬೀದಿಗೆ ಬಂದ ಅದೆಷ್ಟೋ ಕುಟುಂಬಳಿವೆ. ದಿನಗೂಲಿ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಇದರಿಂದ ಸಂಕಷ್ಟಕ್ಕೆ ಸಿಲುಕುತ್ತಿರೊದನ್ನು ಮನಗಂಡು ಕರ್ನಾಟಕದಲ್ಲಿ ಲಾಟರಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ರಾಜ್ಯದಲ್ಲಿ ಅವುಗಳ ಹಾವಳಿ ಮಾತ್ರ ನಿಂತಿಲ್ಲ. ಕದ್ದು ಮುಚ್ಚಿ ನಡೆಯುವ ವ್ಯವಹಾರಗಳು ಒಂದೆಡೆಯಾದರೆ ನೆರೆ ರಾಜ್ಯದ ಲಾಟರಿಗಳು ಕೂಡ ಗಡಿ ಜಿಲ್ಲೆಗಳಲ್ಲಿ ಜೋರಾಗಿಯೇ ವ್ಯವಹಾರ ನಡೆಸುತ್ತಿವೆ.

ಹೌದು, ಚಾಮರಾಜನಗರದ ಹಲವು ಪ್ರದೇಶಗಳಲ್ಲಿ ನೆರೆ ರಾಜ್ಯ ಕೇರಳದಿಂದ ತರಲಾಗುವ ಅಕ್ರಮ ಲಾಟರಿ ಟಿಕೆಟ್‌ಗಳ ಮಾರಾಟವು ಎಗ್ಗಿಲ್ಲದೆ ನಡೆಯುತ್ತಿದೆ. ಗುಂಡ್ಲುಪೇಟೆ, ಚಾಮರಾಜನಗರ ಮತ್ತು ಕೊಳ್ಳೇಗಾಲ ಸಮೀಪದ ಗ್ರಾಮಗಳಲ್ಲಿ ಇವುಗಳ ಬಹಿರಂಗ ಮಾರಾಟ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ. ಆರ್ಥಿಕ ಶೋಷಣೆಯಿಂದ ದುರ್ಬಲ ವರ್ಗಗಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಲಾಟರಿಯನ್ನು ನಿಷೇಧಿಸಿದ್ದರೂ ಕಠಿಣ ಕಾನೂನು ಜಾರಿಯಲ್ಲಿನ ಕೊರತೆಯಿಂದ ಈ ವ್ಯಾಪಾರ ಗುಪ್ತವಾಗಿ ಮುಂದುವರಿದಿದೆ. ಏಜೆಂಟ್‌ಗಳು ಹಾಗೂ ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡುತ್ತಿದೆ.

ಇದನ್ನೂ ಓದಿ: ಒಂದು ಕೋಟಿ ಲಾಟರಿ ಗೆದ್ದವನನ್ನ ಡೋಲು ಬಾರಿಸಿ ಹುಡುಕುತ್ತಿದ್ದಾರೆ ಇಲ್ಲಿ

ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಗುಂಡ್ಲುಪೇಟೆ ತಾಲ್ಲೂಕಿನ ತೆರಕನಂಬಿ ಗ್ರಾಮದಲ್ಲಿ 48 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ತೆರಕನಂಬಿ ಗ್ರಾಮದ ನಿವಾಸಿಗಳ ಪ್ರಕಾರ, ಲಾಟರಿ ನಿಷೇಧದ ನಡುವೆಯೂ ಬೇಡಿಕೆ ಇರುವ ಕಾರಣ ವ್ಯವಹಾರ ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಸಾಮಾನ್ಯವಾಗಿ ರೂ.50 ರಿಂದ ರೂ.250 ರವರೆಗೆ ಲಾಟರಿ ಟಿಕೆಟ್​​ ಮಾರಾಟ ಮಾಡಲಾಗುತ್ತಿದ್ದು, ಬಹುಮಾನ ಮೊತ್ತವು ರೂ.50 ಲಕ್ಷದವರೆಗೆ ಇರುತ್ತದೆ. ದಿನಗೂಲಿ ಕಾರ್ಮಿಕರು, ವಿಶೇಷವಾಗಿ ತೆಂಗಿನಕಾಯಿ ವ್ಯಾಪಾರ ಮತ್ತು ಇತರ ಅನೌಪಚಾರಿಕ ಉದ್ಯೋಗಗಳಲ್ಲಿ ತೊಡಗಿರುವವರೇ ಇವುಗಳ ಮೇಲೆ ಹಣ ಸುರಿಯುತ್ತಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಪೊಲೀಸರ ಅಂಕಿಅಂಶಗಳ ಪ್ರಕಾರ, 2023ರಲ್ಲಿ ಕರ್ನಾಟಕ ಲಾಟರಿ ನಿಷೇಧ ಕಾಯ್ದೆಯಡಿ 78 ಪ್ರಕರಣಗಳು ದಾಖಲಾಗಿದ್ದು, 2024ರಲ್ಲಿ ಅದು 54ಕ್ಕೆ ಇಳಿಕೆಯಾಗಿತ್ತು. ಆದರೆ ಕಳೆದ ವರ್ಷ 2025ರ ನವೆಂಬರ್ ವರೆಗೆ ರಾಜ್ಯದಲ್ಲಿ 64 ಪ್ರಕರಣಗಳು ದಾಖಲಾಗಿವೆ. ಬಂಧಿತರ ವಿರುದ್ಧ ಕರ್ನಾಟಕ ಲಾಟರಿ ಮತ್ತು ಬಹುಮಾನ ಸ್ಪರ್ಧೆಗಳ ನಿಯಂತ್ರಣ ಹಾಗೂ ತೆರಿಗೆ ಕಾಯ್ದೆಯ ಸೆಕ್ಷನ್‌ಗಳು 4(1), 5 ಮತ್ತು 7ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

10 ವರ್ಷ ನಂತರ ದಂಪತಿಗೆ ಮಗು: ಹಾಲಿಗೆ ಹಾಕಿದ ಒಂದು ತೊಟ್ಟು ನೀರಿನಿಂದ ಹೋಯ್ತು ಕಂದಮ್ಮನ ಜೀವ – Kannada News | Contaminated Water Tragedy: Indore Baby Dies After 10 Year Wait For Parents

ಇಂದೋರ್, ಜ.2: ಹಲವು ವರ್ಷಗಳಿಂದ ಮಕ್ಕಳಿಲ್ಲ ಎಂದು ಕೊರಗಿನಲ್ಲಿದ್ದ ದಂಪತಿಗೆ 10 ವರ್ಷಗಳ ನಂತರ ಮಗುವವೊಂದು ಜನಿಸಿತ್ತು. ಇದೀಗ ಆ ಮಗುವನ್ನು ಕೂಡ ದೇವರು ಕಿತ್ತುಕೊಂಡಿದ್ದಾನೆ. ಹೌದು ಮಧ್ಯಪ್ರದೇಶದ ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ (Indore baby death) ದಂಪತಿಗಳು ಮಕ್ಕಳಿಲ್ಲ ಎಂದು ಸಿಕ್ಕ ಸಿಕ್ಕ ದೇವರಿಗೆ ಹರಕೆ ಕಟ್ಟಿ 10 ವರ್ಷಗಳ ನಂತರ ಒಂದು ಮಗುವನ್ನು ಪಡೆದುಕೊಂಡಿದ್ದಾರೆ. ಇದೀಗ ಈ 6 ತಿಂಗಳು ಮಗು ಸ್ಮಶಾನ ಸೇರಿದೆ. ಮಗುವಿಗೆ ಕುಡಿಸುವ ಹಾಲಿಗೆ ಬೆರೆಸಿದ್ದ ನಲ್ಲಿ ನೀರು ಮಗುವಿನ ಜೀವವನ್ನೇ ತೆಗೆದಿದೆ. 6 ತಿಂಗಳ ಅಯಾನ್ ಎಂಬ ಮಗು ಕಲುಷಿತ ನೀರನ್ನು ಸೇವಿಸಿ ಸಾವನ್ನಪ್ಪಿದೆ. ಅಯಾನ್ ಅಜ್ಜಿ ಮೊಮ್ಮಗನನ್ನು ಕಳೆದುಕೊಂಡು ಗೋಳಾಡಿದ್ದಾರೆ. ಹತ್ತು ವರ್ಷಗಳ ಹಿಂದೆ ತನ್ನ ಕುಟುಂಬದಲ್ಲಿ ಒಂದಾದರೂ ಮಗು ಹುಟ್ಟಲಿ ಎಂದು ಎಲ್ಲ ದೇವಸ್ಥಾನ ಸುತ್ತಿ ಪ್ರಾರ್ಥನೆ ಮಾಡಿದ್ದೇನೆ. ಆದರೆ ಇದೀಗ ಆ ದೇವರು ಮಗುವನ್ನು ತನ್ನ ಬಳಿಗೆ ಕರೆಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಖಾಸಗಿ ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಅಯಾನ್ ತಂದೆ ಸುನಿಲ್ ಸಾಹು ಅವರು ಹತ್ತು ವರ್ಷಗಳ ನಂತರ ಮಗು ಪಡೆದ ಖುಷಿಯಲ್ಲಿದ್ದರು. ಅಯಾನ್ ಜನಿಸಿದ್ದು ಜುಲೈನಲ್ಲಿ, 10 ವರ್ಷಗಳ ನಂತರ ನಮ್ಮ ಮನೆಯಲ್ಲಿ ಮಗುವಿನ ಕೂಗು ಕೇಳುವ ಭಾಗ್ಯ ಅ ದೇವರು ಕೊಟ್ಟ, ಆದರೆ ಇದೀಗ ಅವನೇ ಅದನ್ನು ಕಿತ್ತುಕೊಂಡ ಎಂದು ಅಯಾನ್ ಅಜ್ಜಿ ಮನೆ ಮೂಲೆಯಲ್ಲಿ ಕುಳಿತು ಗೋಳಾಡಿದ್ದಾರೆ. ಮಗನಿಗೆ ಮದುವೆಯಾಗಿ 10 ವರ್ಷಗಳ ಕಾಲ ಮಕ್ಕಳಿರಲಿಲ್ಲ. ನನ್ನ ಸೊಸೆಯನ್ನು ಇಡೀ ಊರು ಬಂಜೆ ಎಂದರು. ಇದೀಗ ನನ್ನ ಸೊಸೆಗೆ ಮಗು ಜನಿಸಿದೆ ಎಂಬ ಖುಷಿಯಲ್ಲಿದ್ದೆ, ಇತ್ತೀಚೆಗೆ ಸೊಸೆಗೆ ಎದೆಯಲ್ಲಿ ಹಾಲು ಬರುತ್ತಿರಲಿಲ್ಲ. ಅದಕ್ಕೆ ಪ್ಯಾಕೇಟ್ ಹಾಲನ್ನು ಕೊಡಲು ವೈದ್ಯರು ಸಲಹೆ ನೀಡಿದ್ದರು. ಹಾಗಾಗಿ ಗಟ್ಟಿ ಹಾಲಿಗೆ ಸ್ವಲ್ಪ ನೀರು ಹಾಕಿದ್ದೇವೆ. ಆದರೆ ಆ ನೀರು ಕಲುಷಿತಗೊಂಡಿತು. ಇದೀಗ ಆ ನೀರೇ ನಮ್ಮ ಮನೆಯ ಬೆಳಕನ್ನು ಹಾರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಸ್ತಿಗಾಗಿ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಕೊಂದ ಪುತ್ರರು

ಈ ನೀರು ಕುಡಿದ ನಂತರ ಮಗು ಆರೋಗ್ಯವಾಗಿತ್ತು. ಆದರೆ ಎರಡು ದಿನಗಳ ನಂತರ ಮಗುವಿಗೆ ಜ್ವರ, ಭೇದಿ ಕಾಣಿಸಿಕೊಂಡಿತು. ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವೈದ್ಯರು ಚಿಕಿತ್ಸೆ ನೀಡಿದ್ರೂ ಯಾವುದೇ ಪ್ರಯೋಜ ಆಗಿಲ್ಲ. ಭಾನುವಾರ ರಾತ್ರಿ ಮಗುವಿನ ಸ್ಥಿತಿ ಗಂಭೀರವಾಯಿತು. ಸೋಮವಾರ ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಮಗು ಬದುಕಲಿಲ್ಲ. ಮಗು ಕಲುಷಿತ ನೀರಿನಿಂದಲ್ಲೇ ಸತ್ತಿದೆ ಎಂದು ಯಾರೂ ನಮಗೆ ಹೇಳಿಲ್ಲ.ನೆರೆಹೊರೆಯವರೂ ಇದೇ ನೀರು ಬಳಸುತ್ತಿದ್ದು, ಅವರು ಕೂಡ ನಮಗೆ ವಿಷಯ ಹೇಳಲಿಲ್ಲ ಎಂದು ಮಗುವಿನ ತಂದೆ ಸುನಿಲ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಬಡವರು, ಇದರಲ್ಲಿ ಯಾರನ್ನೂ ದೂರುವುದಿಲ್ಲ. ದೇವರು ಕೊಟ್ಟ, ಅವನೇ ಕಿತ್ತುಕೊಂಡ ಎಂದು ಮಗುವಿನ ಅಜ್ಜಿ ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:21 pm, Fri, 2 January 26

Source link

ನಾಯಕರ ಬ್ಯಾನರ್ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು – Kannada News | Bellary War: Congress MLAs Bharath Reddy And JN Ganesh Gives A Shoulder To Party Worker mortal remains

ಬಳ್ಳಾರಿ, (ಜನವರಿ 02): ರಕ್ತ ರಾಜಕೀಯ.. ಹಿಂದೊಮ್ಮೆ ಗಣಿ ದೂಳಿನಿಂದ್ಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಹೌದು.. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಜನಾರ್ಧನ್ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಯಾಕೆ ಗಾಳಿಯಲ್ಲಿ ಫೈರಿಂಗ್ ಮಾಡಲಾಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಬಳ್ಳಾರಿಯ ಹುಸೇನ್​ನಗರದ ಮನೆಯಿಂದ ರಾಜಶೇಖರ್ ಶವಯಾತ್ರೆ ವೇಳೆ ಶಾಸಕರಾದ ಭರತ್ ರೆಡ್ಡಿ, ಗಣೇಶ್ ಹೆಗಲು ಕೊಟ್ಟರು.

Source link

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 2nd January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 2: ಚಿನ್ನದ ಬೆಲೆ (Gold Rate) ಇವತ್ತು ಶುಕ್ರವಾರ ಗ್ರಾಮ್​ಗೆ 105 ರೂನಷ್ಟು ಏರಿಕೆ ಕಂಡಿದೆ. ಮತ್ತೊಮ್ಮೆ ಇದರ ಬೆಲೆ 12,500 ರೂ ಸಮೀಪಕ್ಕೆ ಹೋಗಿದೆ. ಅಪರಂಜಿ ಚಿನ್ನದ ಬೆಲೆ 13,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಚಿನ್ನದ ಬೆಲೆಯಂತೆ ಬೆಳ್ಳಿ ಬೆಲೆಯೂ ಶುಕ್ರವಾರ ಏರಿದೆ. ಇಂದು ಇದರ ಬೆಲೆ ಗ್ರಾಮ್​ಗೆ 4 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,36,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,24,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,620 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,485 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,215 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 242 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,620 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,485 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 242 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,485 ರೂ
  • ಚೆನ್ನೈ: 12,580 ರೂ
  • ಮುಂಬೈ: 12,485 ರೂ
  • ದೆಹಲಿ: 12,500 ರೂ
  • ಕೋಲ್ಕತಾ: 12,485 ರೂ
  • ಕೇರಳ: 12,485 ರೂ
  • ಅಹ್ಮದಾಬಾದ್: 12,490 ರೂ
  • ಜೈಪುರ್: 12,500 ರೂ
  • ಲಕ್ನೋ: 12,500 ರೂ
  • ಭುವನೇಶ್ವರ್: 12,485 ರೂ

ಇದನ್ನೂ ಓದಿ: 21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 555 ರಿಂಗಿಟ್ (12,341 ರುಪಾಯಿ)
  • ದುಬೈ: 481.75 ಡಿರಾಮ್ (11,831 ರುಪಾಯಿ)
  • ಅಮೆರಿಕ: 134.50 ಡಾಲರ್ (12,132 ರುಪಾಯಿ)
  • ಸಿಂಗಾಪುರ: 174.20 ಸಿಂಗಾಪುರ್ ಡಾಲರ್ (12,215 ರುಪಾಯಿ)
  • ಕತಾರ್: 480 ಕತಾರಿ ರಿಯಾಲ್ (11,877 ರೂ)
  • ಸೌದಿ ಅರೇಬಿಯಾ: 489 ಸೌದಿ ರಿಯಾಲ್ (11,761 ರುಪಾಯಿ)
  • ಓಮನ್: 51.10 ಒಮಾನಿ ರಿಯಾಲ್ (11,973 ರುಪಾಯಿ)
  • ಕುವೇತ್: 39.24 ಕುವೇತಿ ದಿನಾರ್ (11,511 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 242 ರೂ
  • ಚೆನ್ನೈ: 260 ರೂ
  • ಮುಂಬೈ: 242 ರೂ
  • ದೆಹಲಿ: 242 ರೂ
  • ಕೋಲ್ಕತಾ: 242 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 242 ರೂ
  • ಜೈಪುರ್: 242 ರೂ
  • ಲಕ್ನೋ: 242 ರೂ
  • ಭುವನೇಶ್ವರ್: 260 ರೂ
  • ಪುಣೆ: 242

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link