Category Archives: Blog

Your blog category

ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ – Kannada News | Shivamogga: Father in Law Kills Son in Law with Iron Rod Over Alleged Harassment of Daughter

ಕೊಲೆಯಾದ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ

ಶಿವಮೊಗ್ಗ, ಜನವರಿ 2: ಶಿವಮೊಗ್ಗದ (Shivamogga) ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ ಎಂಟ್ರಿ ಕೊಟ್ಟ ಇಬ್ಬರು ವ್ಯಕ್ತಿಗಳು ಕೆಲವೇ ಕ್ಷಣದಲ್ಲಿ ಅರುಣ ಮೇಲೆ ರಾಡ್​​ನಿಂದ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅರುಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣನನ್ನು ಕೊಲೆ ಮಾಡಿದ್ದು ಮತ್ಯಾರೂ ಅಲ್ಲ, ಆತನಿಗೆ ಹೆಣ್ಣು ಕೊಟ್ಟ ಮಾವ ತಿಪ್ಪೇಶ್ ಮತ್ತು ಹೆಂಡತಿಯ ಸೋದರ ಮಾವ ಲೋಕೇಶ್! ತಲೆಗೆ ಬಿದ್ದ ರಾಡ್ ಹೊಡೆತದಿಂದ ಅರುಣ ಮೃತಪಟ್ಟಿದ್ದಾನೆ. ಎಲ್ಲಿಯೂ ಕೂಡಾ ರಕ್ತ ಸೇರಿದಂತೆ ಯಾವುದೇ ಸಾಕ್ಷಿಗಳು ಘಟನಾ ಸ್ಥಳದಲ್ಲಿ ಸಿಗಲಿಲ್ಲ.

ಅರುಣ್​ಗೆ ಯಶಸ್ವಿನಿ ಜೊತೆ ಮದುವೆಯಾಗಿ ಎರಡು ವರ್ಷವಾಗಿತ್ತು. ಪತಿ ಪತ್ನಿ ನಡುವೆ ಇತ್ತೀಚೆಗೆ ಪದೇ ಪದೇ ಗಲಾಟೆ ಆಗಿತ್ತು. ಈ ನಡುವೆ ಕೆಲವು ತಿಂಗಳನಿಂದ ಪತ್ನಿ ತವರು ಮನೆಯಲ್ಲಿ ಇದ್ದಳು. ಮಗಳಿಗೆ ಅಳಿಯ ಹಿಂಸೆ ಕೊಡುತ್ತಿದ್ದಾನೆ ಎಂದುಕೊಂಡು ಹೆಣ್ಣು ಕೊಟ್ಟ ಮಾವ ಮತ್ತು ಯಶಸ್ವಿನಿ ಸೋದರ ಮಾವ ಇಬ್ಬರು ಸೇರಿ ಅರುಣನನ್ನು ಹತ್ಯೆ ಮಾಡಿದ್ದಾರೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಪ್ರೀತಿಸಿ ಮದುವೆಯಾಗಿದ್ದ ಅರುಣ್, ಯಶಸ್ವಿನಿ!

ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ ಎರಡು ವರ್ಷ ಆಗಿದ್ದು, ಒಂದು ಮಗು ಕೂಡಾ ಇದೆ. ಅರುಣ್ ಕೂಲಿ ಕೆಲಸ ಮಾಡಿಕೊಂಡು ಮಾಡಿಕೊಂಡಿದ್ದ. ಅದರ ಜೊತೆಗೆ ಗಾಂಜಾ ಸೇವನೆಯ ಚಟ ಕೂಡ ಇತ್ತು. ಪದೇ ಪದೇ ಪತ್ನಿಗೆ ಹಿಂಸೆ ಕೊಡುತ್ತಿದ್ದ ಎನ್ನಲಾಗಿದೆ. ಕುಡಿದು ಬಂದು ಪತ್ನಿಯ ಜೊತೆ ಗಲಾಟೆ ಮಾಡುವುದು, ಹೆಂಡತಿಯನ್ನು ಹೊಡೆಯುವುದು ಮಾಡುತ್ತಿದ್ದ. ಆತನ ದೌರ್ಜನ್ಯ ತಾಳಲಾರದೇ ಪತ್ನಿ ತವರು ಮನೆಗೆ ಹೋಗಿದ್ದಳು. ಮೂರು ತಿಂಗಳಿನಿಂದ ತವರು ಮನೆಯಲ್ಲಿದ್ದ ಪತ್ನಿಗೆ, ‘ನಿಮ್ಮ ಇಡೀ ಕುಟುಂಬವನ್ನೇ ಟಾರ್ಗೆಟ್ ಮಾಡುವೆ’ ಎಂದು ಅರುಣ್ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ರಸ್ತೆ ಅಪಘಾತ: ತಮ್ಮದಲ್ಲದ ತಪ್ಪಿಗೆ ಮಗು ಸೇರಿ ನಾಲ್ವರು ದಾರುಣವಾಗಿ ಸಾವು

ಅಳಿಯ ಮಗಳಿಗೆ ಕೊಡುತ್ತಿದ್ದ ಟಾರ್ಚರ್ ನೋಡಿ ತಂದೆ ರೋಸಿ ಹೋಗಿದ್ದ. ಈ ಹಿನ್ನಲೆಯಲ್ಲಿ ಪತ್ನಿಯ ತಮ್ಮ ಮಂಜುನಾಥ್​ನನ್ನು ಕರೆದುಕೊಂಡು ಹೋಗಿ ಅಳಿಯನ ಕಥೆಯನ್ನೇ ಮುಗಿಸಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತರುಣ್-ಸೋನಲ್ ಹೊಸ ಮನೆ ಪ್ರವೇಶ; ವಿಶೇಷ ವ್ಯಕ್ತಿಯ ಫೋಟೋ ಇಟ್ಟು ಪೂಜೆ – Kannada News | Sonal Monteiro and Tharun Sudhir Enter New Home Sudhir Photo Is Highlight

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಅವರು ಹೊಸ ಮನೆಗೆ ಪ್ರವೇಶಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಇಡೀ ಮನೆ ತುಂಬಾನೇ ಸುಂದರವಾಗಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ.

ಅಪಾರ್ಟ್​​ಮೆಂಟ್ ಒಂದರಲ್ಲಿ ಮನೆಯನ್ನು ಖರೀದಿಸಿದ್ದಾರೆ ಈ ಜೋಡಿ. ಪೂಜೆ ಮಾಡುವ ಮೂಲಕ ಮನೆಯನ್ನು ಪ್ರವೇಶ ಮಾಡಿದರು. ಹೊಸ ಮನೆ ಖರೀದಿಸಿದ ದಂಪತಿಗೆ ಎಲ್ಲರೂ ಶುಭ ಕೋರುತ್ತಾ ಇದ್ದಾರೆ.

ಇಡೀ ಮನೆಯಲ್ಲಿ ಒಬ್ಬರ ಫೋಟೋ ಹೈಲೈಟ್ ಆಗಿದೆ. ಅದುವೇ ತರುಣ್ ತಂದೆ ಸುಧೀರ್. ಅವರ ಫೋಟೋವನ್ನು ಮನೆಯ ಹಾಲ್​​ನಲ್ಲಿ ದೊಡ್ಡದಾಗಿ ಹಾಕಲಾಗಿದೆ. ಈ ಫೋಟೋಗೆ ದಂಪತಿ ಪೂಜೆ ಮಾಡಿದ್ದಾರೆ.

ತರುಣ್ ಅವರಿಗೆ ತಂದೆಯ ಮೇಲೆ ಅಪಾರ ಪ್ರೀತಿ. ಸುಧೀರ್ ಅವರು ಹಲವು ವರ್ಷಗಳ ಕಾಲ ವಿಲನ್ ಆಗಿ ಮಿಂಚಿದ್ದರು. ಈ ಕಾರಣದಿಂದ ಸುಧೀರ್ ಫೋಟೋವನ್ನು ಮನೆಯಲ್ಲಿ ದೊಡ್ಡದಾಗಿ ಹಾಕಲಾಗಿದೆ.

ಪೂಜಾ ವಿಧಿ ವಿಧಾನಗಳನ್ನು ಸೋನಲ್ ಹಾಗೂ ತರುಣ್ ಅವರು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಸೋನಲ್ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಕೂಡ ಆಗಮಿಸಿ ದಂಪತಿಗೆ ಶುಭಕೋರಿದ್ದಾರೆ.

ಹೊಸ ಮನೆ ಪ್ರವೇಶಿಸುವಾಗ ಹಾಲುಕ್ಕಿಸೋ ಸಂಪ್ರದಾಯ ಇದೆ. ಸೋನಲ್ ಕೂಡ ಇದನ್ನು ಪಾಲಿಸಿದ್ದಾರೆ. ಅವರು ಮದುವೆ ಬಳಿಕ ಹಿಂದೂ ಧರ್ಮವನ್ನು ಪಾಲಿಸುತ್ತಾ ಇದ್ದಾರೆ. ಹಿಂದೂ ಸಂಪ್ರದಾಯಗಳನ್ನು ಇಷ್ಟಪಟ್ಟು ಅನುಸರಿಸುತ್ತಿದ್ದಾರೆ.

ತರುಣ್ ಕುಟುಂಬಕ್ಕೆ ಶರಣ್ ಎಂದರೆ ಅಚ್ಚುಮೆಚ್ಚು. ಇಬ್ಬರೂ ಒಳ್ಳೆಯ ಗೆಳೆಯರು. ಹೀಗಾಗಿ, ಗೆಳೆಯನ ಹೊಸ ಮನೆಯ ಪ್ರವೇಶಕ್ಕೆ ಶರಣ್ ಆಗಮಿಸಿ ವಿಶ್ ಮಾಡಿದ್ದಾರೆ. ಶ್ರುತಿ ಹಾಗೂ ಅವರ ಕುಟುಂಬ ಕೂಡ ಹಾಜರಿತ್ತು.

Published On – 8:50 am, Fri, 2 January 26

Source link

Bengaluru Air Quality: ದಿನ ಕಳೆದಷ್ಟೂ ಕುಸಿಯುತ್ತಿದೆ ಬೆಂಗಳೂರಿನ ಗಾಳಿಯ ಗುಣಮಟ್ಟ – Kannada News | Bangalore Air Pollution Crisis: Bengaluru and surrounding places face severe Air pollution

ದಿನ ಕಳೆದಷ್ಟೂ ಕುಸಿಯುತ್ತಿದೆ ಬೆಂಗಳೂರಿನ ಗಾಳಿಯ ಗುಣಮಟ್ಟ

ಬೆಂಗಳೂರು, ಜನವರಿ 02: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 161 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 70 ಇದ್ದರೆ, PM10 95 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ.

ಎಲ್ಲೆಲ್ಲಿ ಏರ್ ಕ್ವಾಲಿಟಿ ಕುಸಿತ?

ಬೆಂಗಳೂರು ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಅರೆಕೆರೆ-165, ಬಾಪೂಜಿ ನಗರ-154, ಬ್ರಿಗೇಡ್ ರೋಡ್-158, ಬ್ರೂಕ್ ಫೀಲ್ಡ್- 163, BTM ಲೇಔಟ್- 158, ಹೆಬ್ಬಾಳ- 161 , ಜಯನಗರ-175, ಕೋರಮಂಗಲ-172, ಸಿಲ್ಕ್ ಬೋರ್ಡ್-168​, ತಾವರೆಕೆರೆ-170, ವೈಟ್​ಫೀಲ್ಡ್- 189 ಇದ್ದು, ಇಷ್ಟು ಹದಗೆಟ್ಟ ಏರ್ ಕ್ವಾಲಿಟಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ರೋಗಗಳೂ ಬರಬಹುದೆಂದು ತಜ್ಞರು ಹೇಳುತ್ತಾರೆ. ಬೆಂಗಳೂರಿನಲ್ಲಿ 1.2 ಕೋಟಿ ದಾಟಿರುವ ವಾಹನಗಳಿಂದ ಹೊರಸೂಸುವ ಹೊಗೆ ನಗರದ ಮಾಲಿನ್ಯಕ್ಕೆ ಕೊಡುಗೆ ನೀಡುತ್ತಿದೆ.

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –163
  • ಮಂಗಳೂರು-160
  • ಮೈಸೂರು – 126
  • ಬೆಳಗಾವಿ – 152
  • ಕಲಬುರ್ಗಿ – 119
  • ಶಿವಮೊಗ್ಗ – 168
  • ಬಳ್ಳಾರಿ – 185
  • ಹುಬ್ಬಳ್ಳಿ- 96
  • ಉಡುಪಿ –110
  • ವಿಜಯಪುರ –117

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ – Kannada News | Dhanush Won Bigg Boss Kannada Season 12 Last Task And enter Finale week

ಬಿಗ್ ಬಾಸ್ ಮನೆಯ 12ನೇ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಧನುಷ್ ಹೊರ ಹೊಮ್ಮಿದ್ದಾರೆ. ಈ ಆಟವನ್ನು ಅವರು ನಿಯಮ ಪಾಲಿಸದೆ ಮೋಸದಿಂದ ಗೆದ್ದರೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಬಿಗ್ ಬಾಸ್ ಪ್ರಶ್ನೆ ಮಾಡಿದ್ದಾರೆ. ಅಶ್ವಿನಿ ಹಾಗೂ ಧನುಷ್ ಮಧ್ಯೆ ಕೊನೆಯ ಟಾಸ್ಕ್ ನಡೆದಿದೆ. ಅದು ಪಜಲ್ ಟಾಸ್ಕ್ ಆಗಿತ್ತು. ಸಂಪೂರ್ಣ ಫಲಿತಾಂಶ ನೋಡಲು ಇಂದಿನ ಎಪಿಸೋಡ್​ ವೀಕ್ಷಿಸಬೇಕು. ಮೇಲ್ಭಾಗದಲ್ಲಿ ಬಿಗ್ ಬಾಸ್ ಪ್ರೋಮೋ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ – Kannada News | Bengaluru temperature:Light rain in south part of karnataka

ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ

ಬೆಂಗಳೂರು, ಜನವರಿ 02: ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹಾಗೆಯೇ ಇಂದೂ ಸಹ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು

ಬೆಂಗಳೂರಿನಲ್ಲಿ ಇಂದು ಮಂಜು ಕವಿದ ವಾತಾವರಣವಿದ್ದು, ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಗ್ ಬಾಸ್​ ಅಲ್ಲಿ ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ – Kannada News | Gilli Nata Rap Song Full video Full video Of gilli Nata Rap song

ಬಿಗ್ ಬಾಸ್ ಮನೆಯಲ್ಲಿ ನಿಂತ ಜಾಗದಲ್ಲೇ ಸಖತ್ ಕೌಂಟರ್ ಕೊಡುತ್ತಾರೆ ಗಿಲ್ಲಿ. ಇದು ಅವರ ಬಲ. ಹೀಗಿರುವಾಗ ಸಮಯ ಕೊಟ್ಟರೆ ಅವರು ಬಿಡುತ್ತಾರೆಯೇ? ಗಿಲ್ಲಿಗೆ ರ್ಯಾಪ್ ಸಾಂಗ್ ಮಾಡೋ ಟಾಸ್ಕ್ ಅನ್ನು ಬಿಗ್ ಬಾಸ್ ಮನೆಯಲ್ಲಿ ಕೊಡಲಾಯಿತು. ಈ ಟಾಸ್ಕ್​ ಅನ್ನು ಯಶಸ್ವಿಯಾಗಿ ನಿರ್ವಹಿಸಿದರು. ಅವರು ಹಾಡಿದ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರ ಸಂಪೂರ್ಣ ವಿಡಿಯೋ ಮೇಲಿದೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು – Kannada News | Bengaluru Kogilu Eviction Case: Immediate Housing for Displaced Families Uncertain Amid Major Legal Hurdles

ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವಿನ ಸಂಗ್ರಹ ಚಿತ್ರ

ಬೆಂಗಳೂರು, ಜನವರಿ 2: ಬೆಂಗಳೂರಿನ (Bengaluru) ಕೋಗಿಲು ಬಡಾವಣೆ (Kogilu Layout Row) ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ ಇಂದು ಮನೆಗಳ ಹಸ್ತಾಂತರ ಮಾಡಬೇಕಿದೆ. ಆದರೆ ಇವತ್ತೇ ನಿರಾಶ್ರಿತರಿಗೆ ಮನೆ ಸಿಗುವುದು ಅನುಮಾನ. ಅಧಿಕಾರಿಗಳು ನಿಯಮ ಪಾಲನೆಯ ಗೊಂದಲಕ್ಕೆ ಸಿಲುಕಿದ್ದಾರೆ ಎಂಬ ಖಚಿತ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಒಂದೆಡೆ ನಿಯಮಗಳ ಪಾಲನೆ ಮಾಡಬೇಕು, ಮತ್ತೊಂದೆಡೆ ರಾಜಕಾರಣಿಗಳ ಒತ್ತಡವೂ ಇದೆ. ಇವೆರಡರ ನಡುವೆ ಅಧಿಕಾರಿಗಳು ಸಿಲುಕಿಕೊಂಡಿದ್ದಾರೆ. ಪರ್ಯಾಯ ಮನೆ ನೀಡುವ ಪ್ರಕ್ರಿಯೆ ಸುಲಭವಾಗಿಲ್ಲ ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ. ಅನಧಿಕೃತವಾಗಿ ನಿರ್ಮಿಸಿದ್ದ ಮನೆಗಳ ತೆರವುಗೊಳಿಸಿದ ಸಂದರ್ಭದಲ್ಲಿ ಇದುವರೆಗೆ ಯಾವುದೇ ಪರ್ಯಾಯ ಮನೆಗಳನ್ನು ಕೊಟ್ಟಿಲ್ಲ. ಹಾಗಾಗಿ ಈಗ ಹೇಗೆ ಕೊಡುವುದು ಎಂಬ ಪ್ರಶ್ನೆ ಉದ್ಭವಿಸಿದೆ.

ಅಲ್ಲದೆ, ಅನಧಿಕೃತವಾಗಿ ನಿರ್ಮಿಸಿದ ಮನೆಗಳಿಗೆ ಕಾನೂನಿನ ಪ್ರಕಾರ ಪರ್ಯಾಯ ಮನೆ ನೀಡಲು ಅವಕಾಶವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೂ ಮಾನವೀಯ ದೃಷ್ಟಿಯಿಂದ ಮನೆ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ.

ಮಾನವೀಯ ನೆಪದಲ್ಲಿ ಮನೆ ನೀಡಲು ಮುಂದಾದರೆ, ಲಕ್ಷಾಂತರ ಕುಟುಂಬಗಳು ಇದೇ ರೀತಿ ಬೀದಿಯಲ್ಲಿ ಇವೆಯಲ್ಲವೇ ಎಂಬ ಪ್ರಶ್ನೆ ಎದುರಾಗಲಿದೆ. ಬಾಂಗ್ಲಾ ಸೇರಿದಂತೆ ಬೇರೆ ಬೇರೆ ರಾಜ್ಯಗಳು ಹಾಗೂ ದೇಶಗಳಿಂದ ಬಂದ ಕಾರ್ಮಿಕರೂ ಕೂಡ ಮನೆಗಾಗಿ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಆಶ್ರಯ ಯೋಜನೆ ಅಡಿ ಮನೆ ನೀಡಲು ನಿಗದಿತ ನಿಯಮಗಳ ಪಾಲನೆ ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮ ಆಶ್ರಯ ಯೋಜನೆ ಅಡಿ ಮನೆ ನೀಡಲು ಮಾನದಂಡ ಏನು?

  • ಫಲಾನುಭವಿ ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
  • 18 ವರ್ಷ ಮೇಲ್ಪಟ್ಟರಬೇಕು.
  • ಆಧಾರ್ ಕಾರ್ಡ್, ನಿವಾಸ ಮತ್ತು ಗುರುತಿನ ಪುರಾವೆ ಹೊಂದಿರಬೇಕು.
  • ಕಂದಾಯ ಇಲಾಖೆಯಿಂದ ಆದಾಯ ಪ್ರಮಾಣಪತ್ರ ಪಡೆದಿರಬೇಕು. 3 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರಬೇಕು.
  • ವಾಸಸ್ಥಳ ದೃಢೀಕರಣಕ್ಕೆ ರೇಷನ್ ಕಾರ್ಡ್ ಅಥವಾ ಮತದಾರ ಚೀಟಿ ಹೊಂದಿರಬೇಕು.
  • 2-3 ಪಾಸ್‌ಪೋರ್ಟ್ ಸೈಜ್ ಫೋಟೋ, ಕಟ್ಟಡ ಕಾರ್ಮಿಕರ ನೋಂದಣಿ ಇತ್ಯಾದಿ ದಾಖಲೆಗಳು ಇರಲೇಬೇಕು.

ದುಡ್ಡು ಕಟ್ಟಿರುವ ನಮಗೆ ಮೊದಲು ಮನೆ ಕೊಡಿ: ಫಲಾನುಭವಿಗಳ ಪ್ರತಿಭಟನೆ

ಒಂದೆಡೆ ಕೋಗಿಲು ನಿರಾಶ್ರಿತರಿಗೆ ಮನೆ ಕೊಡಲು ಸರ್ಕಾರ ಮುಂದಾಗಿದ್ದರೆ, ಇನ್ನೊಂದೆಡೆ, ಅಸಲಿ ಫಲಾನುಭವಿಗಳು ಸಿಡಿದೆದ್ದಿದ್ದಾರೆ. ನಾವು ದುಡ್ಡು ಕೊಟ್ಟಿದ್ದೇವೆ. ನಮಗೆ ಮೊದಲು ಮನೆ ಕೊಡಿ, ಇಲ್ಲವಾದ್ರೆ ವಿಷ ಕೊಟ್ಬುಬಿಡಿ ಎಂದು ಪ್ರತಿಭಟನೆ ನಡೆಸಿದ್ದಾರೆ. ಕೋಗಿಲು ನಿರಾಶ್ರಿತರಿಗೆ ಮನೆ ನೀಡುವ ಸರ್ಕಾರದ ನಡೆ ಅಸಲಿ ಫಲಾನುಭವಿಗಳನ್ನು ಕೆರಳಿಸಿದೆ. ನಾವು 7 ವರ್ಷದಿಂದ ದುಡ್ಡು ಕಟ್ಟಿದ್ದೇವೆ. ನಾವು ಕಟ್ಟಿದ ದುಡ್ಡಲ್ಲಿ ಅಪಾರ್ಟ್‌ಮೆಂಟ್ ಕಟ್ಟಿ ಕನ್ನಡಿಗರಲ್ಲದವರಿಗೆ ಮನೆ ಕೊಡುತ್ತಿದ್ದೀರಾ? ದುಡ್ಡು ಕಟ್ಟಿರುವ ನಮಗೆ ಮೊದಲು ಮನೆ ಕೊಡಿ ಎಂದು ರಾಜೀವ್ ಗಾಂಧಿ ವಸತಿ ನಿಗಮದ ಎಂಡಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಆಗಿದ್ದು 167 ಮನೆ, ಫ್ಲಾಟ್​ಗಾಗಿ ಸಲ್ಲಿಕೆಯಾದ ಅರ್ಜಿ 250ಕ್ಕೂ ಹೆಚ್ಚು!

ರಾಜೀವ್ ಗಾಂಧಿ ವಸತಿ ಯೋಜನೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಪ್ರತಿಕ್ರಿಯಿಸಿದ್ದು, ಜಿಬಿಎಯಿಂದ ಫಲಾನುಭವಿಗಳ ಪಟ್ಟಿ ಬರುವ ವರೆಗೂ ಮನೆ ಕೊಡಲು ಆಗಲ್ಲ ಎಂದಿದ್ದಾರೆ. ವಸತಿ ಸಚಿವ ಜಮೀರ್ ಅಹ್ಮದ್, ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ.

ದಾವಣಗೆರೆ ನಿರಾಶ್ರಿತರಿಗೆ ಕಾಳಜಿ ಕೇಂದ್ರದಿಂದಲೂ ಗೇಟ್‌ಪಾಸ್!

ಕೋಗಿಲು ನಿರಾಶ್ರಿತರಿಗೆ ಮನೆ ನೀಡಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಆದರೆ, ದಾವಣಗೆರೆಯ ರವೀಂದ್ರನಾಥ ಬಡಾವಣೆಯ 36 ಕುಟುಂಬ ಕತ್ತಲಿಗೆ ಬಿದ್ದಿವೆ. ಕಳೆದ ಅಕ್ಟೋಬರ್‌ನಲ್ಲಿ ಅಕ್ರಮ ಮನೆ ತೆರವು ಮಾಡಿದ್ದ ಸರ್ಕಾರ, ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿತ್ತು. ಆದರೆ ಈಗ 10 ಜರನ್ನು ಕಾಳಜಿ ಕೇಂದ್ರದಿಂದಲೂ ಹೊರದಬ್ಬಲಾಗಿದೆ. ಕಳೆದ 15 ದಿನದಿಂದ ಒಪ್ಪೊತ್ತಿನ ಊಟಕ್ಕೂ ಇವರು ಪರದಾಡುತ್ತಿದ್ದಾರೆ. ಬೆಂಗಳೂರಿನ ಕೋಗಿಲು ನಿವಾಸಿಗಳಿಗೆ ಒಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ನಿರಾಶ್ರಿತರು ಆಕ್ರೋಶ ಹೊರಹಾಕಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ & ಶಿವರಾಜ್ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿ ಒಳಗೆ ಹಾಗೆ ಇರೋದು ಏಕೆ? ಗೆಳೆಯನಿಂದ ಸಿಕ್ತು ಉತ್ತರ – Kannada News | Bigg Boss Kannada Finale: Will Gilli Nata’s Simplicity Crown Him Winner?

ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ತಲುಪುವ ಹಂತದಲ್ಲಿ ಇದ್ದಾರೆ. ಅವರು ಉತ್ತಮವಾಗಿ ಆಟ ಆಡಿ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಗೆಲ್ಲುತ್ತಾರೆ ಎಂದು ಎಲ್ಲರೂ ಭಾವಿಸಿದ್ದಾರೆ. ಅವರ ಅಭಿಮಾನಿ ಹೊರಗೆ ದೊಡ್ಡದಾಗಿದೆ. ಅವರು ಸಿಂಪಲ್ ಆಗಿ ಇರುತ್ತಾರೆ. ಅವರು ಸಿಂಪಲ್ ಆಗಿ ನಡೆದುಕೊಳ್ಳುವುದೇ ಅನೇಕರ ಪ್ರಶ್ನೆಗೆ ಕಾರಣ ಆಗಿದೆ. ಗಿಲ್ಲಿ ನಟ ಅವರ ಗೆಳೆಯರೊಬ್ಬರು ಈ ಬಗ್ಗೆ ಮಾತನಾಡಿದ್ದರು.

ಗಿಲ್ಲಿ ಸರಿಯಾಗಿ ಕೂದಲು ಬಾಚಿಕೊಳ್ಳುವುದಿಲ್ಲ, ಬನಿಯನ್ ಅಲ್ಲಿ ಇರುತ್ತಾರೆ ಎಂದು ಅನೇಕರು ಅಪಸ್ವರ ಎತ್ತಿದ್ದು ಇದೆ. ಆದರೆ, ಗಿಲ್ಲಿ ನಟ ಹೊರಗೆ ಇರೋದು ಅದೇ ರೀತಿಯೇ. ಹೊರಗೆ ಇದ್ದಂತೆ ಒಳಗೂ ಇದ್ದೀಯಾ ಎಂದು ಅವರ ಅಮ್ಮ ಮಾತನಾಡಿದ್ದರು. ಗೆಳೆಯನ ಮಾತು ಕೇಳಿದರೆ ಅದು ನಿಜ ಎನಿಸದೆ ಇರದು.

‘ಗಿಲ್ಲಿ ಇಲ್ಲೇ ಮಲಗಬೇಕು, ಇಲ್ಲೇ ತಿನ್ನಬೇಕು, ಹೀಗೆ ಇರಬೇಕು ಎಂದು ಎಂದಿಗೂ ಅಂದುಕೊಂಡವನಲ್ಲ. ಅವನ ಸ್ವಭಾವ ಹೀಗೆ. ನಿದ್ದೆ ಬಂದಲ್ಲಿ ಮಲಗ್ತಾನೆ, ಏನು ಸಿಗತ್ತೋ ತಿಂತಾನೆ’ ಎಂದು ಅವರು ಹೇಳಿದ್ದರು. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಹೀಗೆಯೇ ಇದ್ದಾರೆ ಎಂದರೂ ತಪ್ಪಾಗಲಾರದು.

‘ನಮ್ಮ ರೂಂನಲ್ಲಿ 8 ಜನ ಮಲಗಿದ್ದರು. ಹೀಗಾಗಿ ಗಿಲ್ಲಿಗೆ ಅಲ್ಲಿ ಜಾಗ ಇರಲಿಲ್ಲ. ಅವನು ಚಾಪೆ ತೆಗೆದುಕೊಂಡು ಹೋಗಿ ಹೊರಗೆ ಹೋಗಿ ಮಲಗಿದ್ದ. ಬೆಳಿಗೆ 9 ಗಂಟೆ ಆಗಿಬಿಟ್ಟಿತ್ತು. ನಿದ್ದೆಗೆ ಡಿಸ್ಟರ್ಬ್ ಆಗಬಾರದು ಎಂದು ಬೆಡ್​ಶೀಟ್ ಹಾಕಿ ಅವನಿಗೆ ಬಿಸಿಲು ಬರಂದತೆ ಮಾಡಿದ್ದೆ. ಅವನು ಸಿಂಪಲ್ ಗುಣದವನು ’ ಎಂದಿದ್ದರು ಅವರು.

ಇದನ್ನೂ ಓದಿ: ಗೆಲ್ಲೋ ಮೊದಲೇ ಅಶ್ವಿನಿ ಎದುರು ಬೀಗಿದ ಗಿಲ್ಲಿ ನಟ; ಕೊನೆಗೆ ಸಿಕ್ಕಿದ್ದು ಸೋಲು 

ಜನವರಿ 17 ಹಾಗೂ 18ರಂದು ಬಿಗ್ ಬಾಸ್ ಫಿನಾಲೆ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ. ಸದ್ಯ ಬಿಗ್ ಬಾಸ್ ಮನೆಯಲ್ಲಿ 9 ಮಂದಿ ಉಳಿದುಕೊಂಡಿದ್ದಾರೆ. ಇವರ ಪೈಕಿ ಕೆಲವರು ಔಟ್ ಆಗುತ್ತಾರೆ. ಕಳೆದ ಬಾರಿಯಂತೆ ಈ ಬಾರಿಯೂ ಫಿನಾಲೆಯಲ್ಲಿ ಆರು ಮಂದಿ ಇರುವ ಸಾಧ್ಯತೆ ದಟ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗೆಲ್ಲೋ ಮೊದಲೇ ಅಶ್ವಿನಿ ಎದುರು ಬೀಗಿದ ಗಿಲ್ಲಿ ನಟ; ಕೊನೆಗೆ ಸಿಕ್ಕಿದ್ದು ಸೋಲು – Kannada News | Gilli Nata’s Big Boss Task Fiasco: Premature Celebration Leads to Shocking Defeat

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟ ಅವರಿಗೆ ಟಾಸ್ಕ್ ಆಡೋಕೆ ಬರೋದಿಲ್ಲ ಎಂದು ಅನೇಕರು ಅಪಸ್ವರ ತೆಗೆದಿದ್ದು ಇದೆ. ಆದರೆ. ಇದನ್ನು ಗಿಲ್ಲಿ ಒಪ್ಪಿಕೊಳ್ಳೋದಿಲ್ಲ. ತಾವು ಒಳ್ಳೆಯ ರೀತಿಯಲ್ಲಿ ಟಾಸ್ಕ್ ಆಡುತ್ತೇವೆ ಎಂದು ಅವರು ವಾದಿಸುತ್ತಲೇ ಬಂದಿದ್ದಾರೆ. ಈಗ ಗಿಲ್ಲಿ ನಟ ಅವರು ಟಾಸ್ಕ್ ಆಡುವಾಗ ಗೆಲ್ಲುವ ಮೊದಲೇ ಸಂಭ್ರಮಿಸಿದ್ದಾರೆ. ಕೊನೆಗೆ ಅವರಿಗೆ ಸಿಕ್ಕಿದ್ದು ಸೋಲು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ.

ಫಿನಾಲೆ ಕಂಟೆಂಡರ್ ಟಾಸ್ಕ್​​ಗೆ ಆಯ್ಕೆ ಆಗಲು ಟಾಸ್ಕ್ ಒಂದನ್ನು ನೀಡಲಾಯಿತು. ಗಿಲ್ಲಿ ರಾಶಿಕಾ ಒಂದು ತಂಡವಾದರೆ, ಧನುಷ್ ಹಾಗೂ ಅಶ್ವಿನಿ ಒಂದು ತಂಡದಲ್ಲಿ ಇದ್ದರು. ಆಟ ಆಡುವಾಗ ಗಿಲ್ಲಿ ಒಂದು ಮಾತನ್ನು ಹೇಳಿದರು. ‘ಆಡ್ತಾ ಇರೋದು ತಪ್ಪಲ್ಲ. ಆದರೆ, ಸರಿಯಾದ ವ್ಯಕ್ತಿ ಜೊತೆ ಆಡದೇ ಇರೋದು ತಪ್ಪು’ ಎಂದು ಗಿಲ್ಲಿ ನಟ ಹೇಳಿದ್ದಾರೆ. ಅಶ್ವಿನಿ ಬಲವಾದ ಎದುರಾಳಿ ಅಲ್ಲ ಎಂಬುದು ಇದರ ಅರ್ಥವಾಗಿತ್ತು. ಇದು ರಘು ಕೋಪಕ್ಕೆ ಕಾರಣ ಆಗಿದೆ.

‘ಇದೆಲ್ಲವನ್ನೂ ಗೆದ್ಮೇಲೆ ಇಟ್ಕೋ. ಗೆಲ್ಲುವ ಮೊದಲೇ ಸಂಭ್ರಮಿಸಬಾರದು’ ಎಂದು ರಘು ಕಿವಿಮಾತು ಹೇಳಿದರು. ಆದರೆ, ಗಿಲ್ಲಿ ಕೇಳಲೇ ಇಲ್ಲ. ಅವರು ತಾವೇ ಗೆಲ್ಲುತ್ತೇವೆ ಎಂದುಕೊಂಡು ಸಂಭ್ರಮಿಸಲು ಆರಂಭಿಸಿದರು. ಕೊನೆಗೆ ಅಲ್ಲಾಗಿದ್ದೇ ಬೇರೆ. ಗಿಲ್ಲಿ ತಂಡ ಸೋತಿದೆ. ಧನುಷ್ ಹಾಗೂ ಅಶ್ವಿನಿ ತಂಡ ಗೆದ್ದಿದೆ.

ಇದನ್ನೂ ಓದಿ: ಇಲ್ಲಿದ್ರೆ ಆನಂದ, ಮನೆಗೋದ್ರೆ ಗೋವಿಂದ: ಗಿಲ್ಲಿಯ ಬಿಗ್​ಬಾಸ್ ರ್ಯಾಪ್ ಸಾಂಗ್

ತಾನು ಸೋತಿದ್ದನ್ನು ಒಪ್ಪಿಕೊಳ್ಳಲು ಗಿಲ್ಲಿ ರೆಡಿ ಇರಲೇ ಇಲ್ಲ. ಅವರು ಅಶ್ವಿನಿ ಗೌಡ ಅವರ ವೀಕ್​​ನೆಸ್ ಪಾಯಿಂಟ್ ತೋರಿಸೋಕೆ ಹೋದರು. ‘ಅಶ್ವಿನಿಗೆ ಗೆಲ್ಲೋಕೆ ಮತ್ತೊಬ್ಬರು ಇರಲೇಬೇಕು. ಧನುಷ್ ಬೆಂಬಲದಿಂದ ಅವರು ಗೆದ್ದಿದ್ದಾರೆ ಅಷ್ಟೇ. ಇಲ್ಲಿಯವರೆಗೆ ನಾನು ಅವರನ್ನು ಕರೆದುಕೊಂಡು ಬಂದಿದ್ದೇನೆ. ಮುಂದೆ ಅವರನ್ನು ಕರೆದುಕೊಂಡು ಹೋಗುವ ಜವಾಬ್ದಾರಿ ನಿಮ್ಮದು’ ಎಂದು ಧನುಷ್​ಗೆ ಹೇಳಿದರು ಗಿಲ್ಲಿ. ಗಿಲ್ಲಿ ಗೆದ್ದು ತೋರಿಸಬೇಕಿತ್ತು ಎಂದು ಅನೇಕರು ಹೇಳಿದ್ದಾರೆ. ಗಿಲ್ಲಿ ಹಾಗೂ ರಾಶಿಕಾಗೆ ಫಿನಾಲೆ ವಾರಕ್ಕೆ ನೇರವಾಗಿ ತಲುಪುವ ಅವಕಾಶ ಮಿಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:00 am, Fri, 2 January 26

Source link

‘ಐ ಲವ್ ಯುವರ್..’ ಎಂದು ಗಿಲ್ಲಿಗೆ ಹೇಳಿದ ರಕ್ಷಿತಾ; ಶಾಕ್ ಆದ ಕಾವ್ಯಾ – Kannada News | Rakshitha Shetty’s I Love Your Life for Gilli: Bigg Boss Kannada 12 Chemistry

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟನ (Gilli Nata) ಮೇಲೆ ರಕ್ಷಿತಾ ಶೆಟ್ಟಿಗೆ ವಿಶೇಷ ಒಲವು ಇದೆ. ಗಿಲ್ಲಿ ನಟ ಅವರಂತಹ ಹುಡುಗ ಬೇಕು ಎಂದು ಈ ಮೊದಲು ರಕ್ಷಿತಾ ಹೇಳಿಕೊಂಡಿದ್ದರು. ಈಗ ಗಿಲ್ಲಿ ನಟ ಅವರು ‘ಐ ಲವ್ ಯುವರ್ ಲೈಫ್’ ಎಂದು ಹಾಡು ಹೇಳಿದ್ದಾರೆ. ಇದನ್ನು ಕೇಳಿ ಕಾವ್ಯಾ ಶಾಕ್ ಆಗಿದ್ದಾರೆ. ರಕ್ಷಿತಾ ಏನು ಹೇಳುತ್ತಿದ್ದಾರೆ ಎಂಬುದನ್ನು ಅರ್ಥೈಸಿಕೊಳ್ಳಲು ಅವರಿಗೆ ಸ್ವಲ್ಪ ಸಮುಯವೇ ಬೇಕಾಯಿತು.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಹಾಗೂ ಗಿಲ್ಲಿ ಇಬ್ಬರೂ ಭರ್ಜರಿ ಮನರಂಜನೆ ನೀಡುತ್ತಿದ್ದಾರೆ. ರಕ್ಷಿತಾ ಶೆಟ್ಟಿ ಆರಂಭದಲ್ಲಿ ಒಂದು ರೀತಿ ಇದ್ದರು. ಆದರೆ, ಈಗ ಅವರ ಆಟ ಸಂಪೂರ್ಣ ಬದಲಾಗಿದೆ. ಇತ್ತೀಚೆಗೆ ಮಾತನಾಡುವಾಗ ರಕ್ಷಿತಾ ಶೆಟ್ಟಿ ಅವರು, ‘ನನಗೆ ಗಿಲ್ಲಿ ರೀತಿಯ ಹುಡುಗ ಬೇಕು’ ಎಂದು ಹೇಳಿದ್ದರು. ಇದು ಚರ್ಚೆಗೆ ಕಾರಣ ಆಗಿತ್ತು.

ಗಿಲ್ಲಿ ರೀತಿಯ ಹುಡುಗನೇ ಬೇಕು ಎಂದು ರಕ್ಷಿತಾ ಶೆಟ್ಟಿ ಹೇಳಲು ಒಂದು ಕಾರಣವೂ ಇತ್ತು. ರಕ್ಷಿತಾ ಶೆಟ್ಟಿ ಅವರಿಗೆ ಕೀಟಲೆ ಮಾಡೋ ಹುಡುಗ ಎಂದರೆ ತುಂಬಾನೇ ಇಷ್ಟವಂತೆ. ಗಿಲ್ಲಿ ಇಡೀ ದಿನ ಮನೆಯಲ್ಲಿ ಕೀಟಲೆ ಮಾಡುತ್ತಾ ಇರುತ್ತಾರೆ. ಇದು ಅವರಿಗೆ ಸಖತ್ ಇಷ್ಟ ಆಗಿದೆ. ಈಗ ಗಿಲ್ಲಿ ಜೀವನವನ್ನು ಇಷ್ಟಪಡುತ್ತೇನೆ ಎಂದು ರಕ್ಷಿತಾ ಹೇಳಿಕೊಂಡಿದ್ದಾರೆ.

ಹೊಸ ವರ್ಷದ ಸಂದರ್ಭದಲ್ಲಿ ಎಲ್ಲರೂ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ರಕ್ಷಿತಾ ಶೆಟ್ಟಿ ಅವರು, ‘ಐ ಲವ್ ಯುವರ್ ಲೈಫ್’ ಎಂದು ಗಿಲ್ಲಿ ಬಳಿ ಹಾಡು ಹೇಳಿದ್ದಾರೆ. ಇದನ್ನು ಕೇಳಿ ಕಾವ್ಯಾ ಶಾಕ್ ಆದರು. ರಾಶಿಕಾ ಎಕ್ಸ್​​ಪ್ರೆಷನ್ ಬದಲಾಗಿದೆ.

ಇದನ್ನೂ ಓದಿ: ಗೆಲ್ಲೋ ಮೊದಲೇ ಬೀಗಿದ ಗಿಲ್ಲಿ ನಟ; ಕೊನೆಗೆ ಸಿಕ್ಕಿದ್ದು ಸೋಲು

ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಇಬ್ಬರೂ ಫಿನಾಲೆ ತಲುಪೋ ಕನಸು ಕಾಣುತ್ತಿದ್ದಾರೆ. ಸದ್ಯ ಬಿಗ್ ಬಾಸ್ ಮನೆಯಲ್ಲಿ 9 ಮಂದಿ ಇದ್ದಾರೆ. ಈ ವಾರ, ಮುಂದಿನ ವಾರ ಹಾಗೂ ಫಿನಾಲೆ ವಾರದ ಮಧ್ಯದಲ್ಲಿ ಒಬ್ಬರು ಎಲಿಮಿನೇಟ್ ಆಗುವ ಸಾಧ್ಯತೆ ಇದೆ. ಫಿನಾಲೆಯಲ್ಲಿ ಆರು ಮಂದಿ ಇದ್ದರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link