2026 ರಲ್ಲಿ ಎಷ್ಟು ಪಂದ್ಯಗಳನ್ನಾಡಲಿದ್ದಾರೆ ರೋಹಿತ್, ಕೊಹ್ಲಿ? ಇಲ್ಲಿದೆ ಪೂರ್ಣ ವಿವರ – Kannada News | Team India’s Rohit Kohli ODI Schedule 2026: Road to World Cup 2027

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಟೀಂ ಇಂಡಿಯಾದ (Team India) ಇಬ್ಬರು ಸೂಪರ್​ಸ್ಟಾರ್​ಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ ಮಿಂಚಿದ್ದರು. ಇದೀಗ ಇವರಿಬ್ಬರನ್ನು ಮತ್ತೆ ರಾಷ್ಟ್ರೀಯ ತಂಡದಲ್ಲಿ ನೋಡುವುದು ಯಾವಾಗ ಎಂಬ ಪ್ರಶ್ನೆ ಎಲ್ಲಾ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆ ಪ್ರಶ್ನೆಗಳಿಗೆ ನಾವು ಉತ್ತರ ಹೇಳಲಿದ್ದೇವೆ. ಇದರ ಜೊತೆಗೆ ಈ ಇಡೀ ವರ್ಷ ಅಂದರೆ 2026 ರಲ್ಲಿ ಈ…

Read More

ಸ್ವಿಜರ್ಲೆಂಡ್​ ಬಾರ್​​ನಲ್ಲಿ ಬೆಂಕಿ ಅವಘಡ; ಸಾವಿನ ಸಂಖ್ಯೆ 40ಕ್ಕೆ ಏರಿಕೆ – Kannada News | Death toll rises to 40 in Switzerland bar fire accident Swiss police rule out terrorist attack

ಬರ್ನ್ (ಸ್ವಿಟ್ಜರ್ಲೆಂಡ್), ಜನವರಿ 1: ಸ್ವಿಜರ್ಲೆಂಡ್‌ನ ಐಷಾರಾಮಿ ಬಾರ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಖಚಿತಪಡಿಸಿದ್ದಾರೆ. ಇದಲ್ಲದೆ, ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಬಾರ್ ಮತ್ತು ಲೌಂಜ್‌ನ ನೆಲಮಾಳಿಗೆಯಲ್ಲಿ ಸಂಭವಿಸಿದ ಸ್ಫೋಟವನ್ನು ಬೆಂಕಿ ಅವಘಡ ಎಂದು ಊಹಿಸಲಾಗಿದೆ, ಇದು ಭಯೋತ್ಪಾದಕ ದಾಳಿಯಲ್ಲ ಎಂದು ಸ್ವಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ 150ಕ್ಕೂ ಹೆಚ್ಚು ಜನರು ಬಾರ್‌ನಲ್ಲಿದ್ದರು….

Read More

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ – Kannada News | Ram Fighting Competition in Andhra Pradesh ahead of New Year

ಹೈದರಾಬಾದ್, ಜನವರಿ 1: ಇಂದು ಹೊಸ ವರ್ಷದ (New Year Celebration) ಆಚರಣೆಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಪಂಗುಲೂರು ಮಂಡಲದ ರೇಣಿಂಗವರಂ ಗ್ರಾಮದಲ್ಲಿ ನಡೆದ ಸಾಂಪ್ರದಾಯಿಕ ಟಗರು ಸ್ಪರ್ಧೆಗಳು ಪ್ರೇಕ್ಷಕರನ್ನು ವಿಶೇಷವಾಗಿ ಆಕರ್ಷಿಸಿದವು. ನೆರೆಯ ಹಳ್ಳಿಗಳಿಂದ ಹಾಗೂ ಪ್ರಕಾಶಂ, ಬಾಪಟ್ಲ ಮತ್ತು ಮಾರ್ಕಪುರಂ ಜಿಲ್ಲೆಗಳಿಂದ ಸುಮಾರು 41 ಜೋಡಿ ಟಗರುಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಈ ಅಪರೂಪದ ಟಗರು ಕಾಳಗ ನೋಡಲು ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು. ತೆಲುಗು ದೇಶಂ ಪಕ್ಷದ ನಾಯಕ ಬೋರೆಡ್ಡಿ ಓಬುಲ್…

Read More

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah says budget preparations will begin from January itself: Amid power sharing

ಬೆಂಗಳೂರು, ಜನವರಿ 01: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಪಟ್ಟದ ಪೈಟ್​​ ಮಧ್ಯೆ ಸಿಎಂ ಸಿದ್ದರಾಮಯ್ಯ 2026-27ರ ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿಯಲ್ಲಿ ಬಜೆಟ್ ಸಿದ್ಧತೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು – Kannada News | Another Hindu man attacked with weapons and set on fire by mob in Bangladesh

ಢಾಕಾ, ಜನವರಿ 1: ಬಾಂಗ್ಲಾದೇಶದ ಹಿಂದೂ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಇದರಿಂದ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ಇದು ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ಮೇಲೆ ನಡೆದ ಮತ್ತೊಂದು ಆತಂಕಕಾರಿ ದಾಳಿಯಾಗಿದೆ. ಡಿಸೆಂಬರ್ 31ರಂದು ಶರಿಯತ್‌ಪುರ ಜಿಲ್ಲೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದ್ವೇಷವು ಆತಂಕಕಾರಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು 50 ವರ್ಷದ ಖೋಕೋನ್ ದಾಸ್ ಎಂದು ಗುರುತಿಸಲಾಗಿದೆ. ಅವರು ಮನೆಗೆ ಹಿಂತಿರುಗುತ್ತಿದ್ದಾಗ ದಾಳಿಕೋರರ ಗುಂಪೊಂದು ಅವರ ಮೇಲೆ…

Read More

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ – Kannada News | Abhishek of Lord Neelkanthvarni performed by baps during New Year Celebration

ನವದೆಹಲಿ, ಜನವರಿ 1: 2026ರ ಹೊಸ ವರ್ಷದ ಪ್ರಯುಕ್ತ ಬಿಎಪಿಎಸ್ (BAPS)  ಸ್ವಾಮಿನಾರಾಯಣ ಸಂಸ್ಥೆಯು ಪ್ರಪಂಚದಾದ್ಯಂತದ ಭಕ್ತರಿಗೆ ತನ್ನ ಆತ್ಮೀಯ ಶುಭಾಶಯಗಳನ್ನು ಕೋರಿದೆ. ಈ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಶಾಂತಿ, ಸಮೃದ್ಧಿ, ಆರೋಗ್ಯ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಯಿಂದ ತುಂಬಿದ ವರ್ಷವಾಗಲಿ ಎಂದು ಸಂಸ್ಥೆಯು ಹಾರೈಸಿದೆ. ಬಿಎಪಿಎಸ್ ಆಧ್ಯಾತ್ಮಿಕ ಗುರು ಮಹಾಂತ ಸ್ವಾಮಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಈ ಹೊಸ ವರ್ಷವು ಭಕ್ತರ ಜೀವನವನ್ನು ದೈವಿಕ ಆಶೀರ್ವಾದ, ಆಂತರಿಕ ಶಕ್ತಿ ಮತ್ತು ಸಂತೋಷದಿಂದ ತುಂಬಲಿ ಎಂದು ನಾವು ಪ್ರಾರ್ಥಿಸುತ್ತೇವೆ…

Read More

ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ; ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು – Kannada News | Hassan Accident: 3 Dead as Pickup Overturns on NH 69 Near Areseekere

ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಅಪಘಾತ ಹಾಸನ, ಜನವರಿ 01: ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದ್ದೇನು? ಅಡಿಕೆ ಕಟಾವು…

Read More

ರೀಲ್ಸ್ ಮಾಡಿ ನಗದು ಬಹುಮಾನ ಗೆಲ್ಲಿ; ‘ಕೊರಗಜ್ಜ’ ಚಿತ್ರತಂಡದಿಂದ ಆಫರ್ – Kannada News | Koragajja movie giving cash prize how to participate

ಸಿನಿಮಾ (Cinema) ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಏನೇನೋ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು ಆಟೋ ಓಡಿಸುವುದು ಇನ್ನೂ ಏನೇನೋ, ಇವುಗಳಲ್ಲಿ ಬಹುಮಾನ ಘೋಷಣೆಯೂ ಒಂದು. ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್​​ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ ಇಂಥಹುದೇ ಒಂದು ಆಫರ್ ನೀಡಿದೆ. ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ…

Read More

VHT 2025-26: ದೇಶಿ ಟೂರ್ನಿಯಲ್ಲಿ ಎಡಗೈ ದಾಂಡಿಗರದ್ದೇ ಪಾರುಪತ್ಯ; ಅಗ್ರಸ್ಥಾನದಲ್ಲಿ ಕನ್ನಡಿಗ – Kannada News | Vijay Hazare 2025 26: Padikkal Leads Top Run Scorers; Left Handers Dominate

ಭಾರತದ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಏಕದಿನ ಪಂದ್ಯಾವಳಿಯಾದ ವಿಜಯ್ ಹಜಾರೆ ಟ್ರೋಫಿಯ 2025-26 ಸೀಸನ್ ಇಲ್ಲಿಯವರೆಗೆ 4 ಸುತ್ತುಗಳನ್ನು ಮುಗಿಸಿದೆ. ಈ ಪಂದ್ಯಾವಳಿಯಲ್ಲಿ ಬ್ಯಾಟ್ಸ್‌ಮನ್‌ಗಳು ಸ್ಪಷ್ಟವಾಗಿ ಪ್ರಾಬಲ್ಯ ಸಾಧಿಸುತ್ತಿದ್ದು ರನ್​ಗಳ ಮಳೆಯೇ ಹರಿಯುತ್ತಿದೆ. ಅನೇಕ ಆಟಗಾರರು ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಅದರಲ್ಲೂ ಗಮನಾರ್ಹವಾಗಿ, ಎಡಗೈ ಬ್ಯಾಟ್ಸ್‌ಮನ್‌ಗಳು ಅತಿ ಹೆಚ್ಚು ರನ್ ಗಳಿಸಿದ್ದು, ಅತ್ಯಧಿಕ ರನ್ ಕಲೆಹಾಕಿದ ಅಗ್ರ ಐವರಲ್ಲಿ ಮೂವರು ಎಡಗೈ ಬ್ಯಾಟ್ಸ್‌ಮನ್‌ಗಳೇ ಸೇರಿದ್ದಾರೆ. Source link

Read More

ಬಂಡೆ ಬ್ಲಾಸ್ಟ್​​ನಿಂದ 4 ಚಿರತೆಗಳು ಸಾವು: ಹೋರಾಟದ ಎಚ್ಚರಿಕೆ ಕೊಟ್ಟ ST ಸೋಮಶೇಖರ್, ಖಂಡ್ರೆ ಹೇಳಿದ್ದಿಷ್ಟು – Kannada News | Bengaluru: Four Leopards Killed in Rock Blasting Incident; MLA ST Somashekhar Warns of Protest

ಬೆಂಗಳೂರು, ಜನವರಿ 01: ನಾಲ್ಕು ಚಿರತೆಗಳ (Leopard) ಮೃತದೇಹ ಛಿದ್ರ ಛಿದ್ರವಾಗಿದೆ. ಕ್ವಾರಿಯಿಂದ  ಸಿಡಿದ (Quarry Blast) ಕಲ್ಲು ನಾಲ್ಕು ಚಿರತೆಗಳ ಪ್ರಾಣ ತೆಗೆದಿದೆ. ಗರ್ಭಿಣಿ ಚಿರತೆ ಮತ್ತು ಚಿರತೆಯ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಹುಟ್ಟುವ ಮೊದಲೇ ಸತ್ತು ಹೋಗಿವೆ. ಚಿರತೆ ಕೊಂದವರ ವಿರುದ್ಧ ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ ಸೋಮಶೇಖರ್ ಕಿಡಿಕಾರಿದ್ದಾರೆ. ಏನಿದು ಪ್ರಕರಣ? ಯಶವಂತಪುರ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿ ವಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಕಲ್ಲು…

Read More