Category Archives: Blog

Your blog category

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯ

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯ

ನವದೆಹಲಿ, ಏಪ್ರಿಲ್ 9: ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ (Assembly Elections) ಇಂದು (ಏಪ್ರಿಲ್ 9) ಮತದಾನ ಮುಕ್ತಾಯವಾಯಿತು. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಬಿಗಿ ಭದ್ರತೆಯಲ್ಲಿ ನಡೆಸಲಾಯಿತು. ಮೂರು ರಾಜ್ಯಗಳ ವಿಧಾನಸಭೆಗಳಲ್ಲಿ ನೂರಾರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಮತದಾರರು ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಪ್ರಮುಖ ನಾಯಕರು ಆರಂಭಿಕ ಮತದಾರರಲ್ಲಿ ಸೇರಿದ್ದರು. ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಕೂಡ ಮತ ಚಲಾಯಿಸಿದರು. ಅವರು ಮತಗಟ್ಟೆಗೆ ತಮ್ಮ ಮೋಟಾರ್ ಸೈಕಲ್ ಸವಾರಿ ಮಾಡುವ ದೀರ್ಘಕಾಲದ ಸಂಪ್ರದಾಯವನ್ನು ಮುಂದುವರೆಸಿದರು.

ಅಸ್ಸಾಂನಲ್ಲಿ ಈ ಬಾರಿಯ ಚುನಾವಣೆಯು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ನಡುವಿನ ನೇರ ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸತತ ಮೂರನೇ ಅವಧಿಗೆ ಸಿಎಂ ಆಗುವ ಗುರಿಯನ್ನು ಹೊಂದಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ವಿರೋಧ ಪಕ್ಷಗಳನ್ನು ಮುನ್ನಡೆಸುತ್ತಿದ್ದು, ಒಂದು ದಶಕದ ನಂತರ ಮತ್ತೆ ಅಧಿಕಾರವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್, ರೈಜೋರ್ ದಳ ಮತ್ತು ಅಸ್ಸಾಂ ಜಾತಿಯ ಪರಿಷತ್‌ನಂತಹ ಪ್ರಾದೇಶಿಕ ಪಕ್ಷಗಳು ಸಹ ಸ್ಪರ್ಧಿಸುತ್ತಿವೆ ಮತ್ತು ನಿಕಟ ಸ್ಥಾನಗಳಲ್ಲಿ ಫಲಿತಾಂಶಗಳ ಮೇಲೆ ಪರಿಣಾಮ ಬೀರಬಹುದು.

ಇದನ್ನೂ ಓದಿ: ಬಾರಾಮತಿ ಉಪಚುನಾವಣೆಯಲ್ಲಿ ಅಚ್ಚರಿಯ ಬೆಳವಣಿಗೆ; ಸುನೇತ್ರಾ ಪವಾರ್ ಅವಿರೋಧ ಆಯ್ಕೆ

ಅಸ್ಸಾಂನಲ್ಲಿ 126 ಸ್ಥಾನಗಳು, ಕೇರಳದಲ್ಲಿ 140 ಸ್ಥಾನಗಳು ಮತ್ತು ಪುದುಚೇರಿಯಲ್ಲಿ 30 ಸ್ಥಾನಗಳಿಗೆ ಚುನಾವಣೆಗಳು ನಡೆದವು. ಮೇ 4ರಂದು ಮತಗಳ ಎಣಿಕೆ ನಡೆಯಲಿದೆ. ಅಸ್ಸಾಂನಲ್ಲಿ 84.42% ಮತದಾನ ನಡೆದಿದೆ. 2021ರ ಚುನಾವಣೆಯಲ್ಲಿ ಶೇ. 82.04ರಷ್ಟು ಮತದಾನ ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಲ್ಗಾಂವ್‌ನಲ್ಲಿ ಶೇ. 94.57ರಷ್ಟು ಅತಿ ಹೆಚ್ಚು ಮತದಾನ ದಾಖಲಾಗಿದ್ದರೆ, ಅಮ್ರಿಯಲ್ಲಿ ಶೇ. 70.40ರಷ್ಟು ಅತಿ ಕಡಿಮೆ ಮತದಾನವಾಗಿದೆ.

ಕೇರಳದಲ್ಲಿ ಶೇ.75ಕ್ಕಿಂತ ಹೆಚ್ಚು ಮತದಾನ ದಾಖಲಾಗಿದೆ. ಇದು 2021ರ ವಿಧಾನಸಭಾ ಚುನಾವಣೆಗಿಂತ ಸ್ವಲ್ಪ ಹೆಚ್ಚಾಗಿದೆ. ಕೇರಳದಲ್ಲಿ 140 ವಿಧಾನಸಭಾ ಸ್ಥಾನಗಳಿಗೆ ಇಂದು ಸಂಜೆ 6 ಗಂಟೆಗೆ ಮತದಾನ ಮುಗಿದಾಗ ಶೇ.74.06ರಷ್ಟು ಮತದಾನವಾಗಿತ್ತು. ಆಡಳಿತಾರೂಢ ಎಲ್‌ಡಿಎಫ್ ನೇರವಾಗಿ ಮೂರನೇ ಅವಧಿಗೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ ಯುಡಿಎಫ್ ಪುನರಾಗಮನ ಮಾಡುತ್ತದೆಯೇ ಎಂಬುದನ್ನು ಈ ಚುನಾವಣೆಗಳು ನಿರ್ಧರಿಸುತ್ತವೆ.

ಇದನ್ನೂ ಓದಿ: Karnataka By Election 2026 Voting Live: ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲೂ ಮತದಾನ ಮುಕ್ತಾಯ

ಇನ್ನು, ಪುದುಚೇರಿಯಲ್ಲಿ ಶೇ.86ಕ್ಕಿಂತ ಹೆಚ್ಚು ಮತದಾನವಾಗಿದೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಇಂದು ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಆರಂಭಿಕ ಅಂದಾಜಿನ ಪ್ರಕಾರ, ಮತದಾನದ ಶೇಕಡಾವಾರು ಶೇ. 86 ದಾಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

2nd PUC Exam 2 Time Table: ಫೇಲಾದ್ರೇನಂತೆ ಇನ್ನೊಂದು ಎಕ್ಸಾಮ್ ಟೈಮ್ ಟೇಬಲ್ ಇಲ್ಲಿದೆ ನೋಡಿ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು (ಏಪ್ರಿಲ್ 09) ಸಂಜೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಫಲಿತಾಂಶ ಪ್ರಕಟಿಸಿದ್ದು, ಇದೇ ವೇಳೆ ಮೊದಲ ಪರೀಕ್ಷೆಯಲ್ಲಿ ಫೇಲಾದವರಿಗೆ ಎರಡನೇ ಪರೀಕ್ಷೆಯ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿಯನ್ನು (Karnataka Second PUC 2nd exam Timetable) ಬಿಡುಗಡೆ ಮಾಡಿದ್ದು, ಪರೀಕ್ಷೆಗಳು ಏಪ್ರಿಲ್ 30 ರಿಂದ ಮೇ 13ರ ವರೆಗೆ ನಡೆಯಲಿವೆ.

ಏಪ್ರಿಲ್ 30ರಿಂದ ದ್ವಿತೀಯ ಪಿಯುಸಿ 2ನೇ ಪರೀಕ್ಷೆ

ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆ (Exam-2) ಏಪ್ರಿಲ್ 30ರಿಂದ ಆರಂಭವಾಗಿ ಮೇ 13ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ತಮ್ಮ ಫಲಿತಾಂಶವನ್ನು ಸುಧಾರಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಬಾರಿ ಮೂರನೇ ಪರೀಕ್ಷೆ (Exam-3) ನಡೆಸುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದೆ.  ಇನ್ನು ಪರೀಕ್ಷೆ 2 ಬಹುತೇಕ ವಿಷಯಗಳ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ಕೆಲವು ವೃತ್ತಿಪರ ಹಾಗೂ ತಾಂತ್ರಿಕ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಿಗದಿಯಾಗಿವೆ.

ಇದನ್ನೂ ಓದಿ: ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

2ನೇ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ

  • 30/04/2026- ಕನ್ನಡ, ಅರೇಬಿಕ್
  • 02/05/2026- ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ರಸಾಯನಿಕ ಶಾಸ್ತ್ರ
  • 04/05/2026- ಇಂಗ್ಲೀಷ್
  • 05/05/2026- ವ್ಯವಹಾರ ಅಧ್ಯಯನ, ಔತಶಾಸ್ತ್ರ, ಶಿಕ್ಷಣ ಶಾಸ್ತ್ರ.
  • 06/05/2026- ಅರ್ಥಶಾಸ್ತ್ರ, ಜೀವಶಾಸ್ತ್ರ
  • 07/05/2026- ಇತಿಹಾಸ, ಗಣಿತ, ಗೃವಿಜ್ಷಾನ
  • 08/05/2026- ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ. ಗಣಕ ವಿಜ್ಷಾನ
  • 09/05/2026- ಹಿಂದಿ.
  • 11/05/2026- ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ
  • 12/05/2026- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ, ಮೂಲ ಗಣಿತ.
  • 13/05/2026- ತಮಿಳು. ತೆಲುಗು, ಮಲಯಾಳಂ,ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್,
  • 13/05/2026 ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್‌ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್‌ ವೆಲ್‌ನೆಸ್‌ (ಮಧ್ಯಾಹ್ನ 2ರಿಂದ ಸಂಜೆ 4.15ರವರೆಗೆ)

ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸೈನ್ಸ್ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB vs RR: ಶೇ. 56 ರಷ್ಟು ಮಳೆ..! ಆರ್​ಸಿಬಿ- ರಾಜಸ್ಥಾನ್​ ಪಂದ್ಯಕ್ಕೆ ಮಳೆ ಅಡ್ಡಿ

ಐಪಿಎಲ್ 2026 (IPL 2026) ರ 16 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವೆ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಇದುವರೆಗೆ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿವೆ. ರಾಜಸ್ಥಾನ್ ರಾಯಲ್ಸ್ ಆಡಿರುವ ಮೂರಕ್ಕೆ ಮೂರು ಪಂದ್ಯಗಳಲ್ಲಿಯೂ ಗೆದ್ದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದೆ. ಹೀಗಾಗಿ ಈ ಪಂದ್ಯದ ಬಳಿಕ ಒಂದು ತಂಡ ಮೊದಲ ಸೋಲಿಗೆ ಕೊರಳೊಡ್ಡಬೇಕಾಗಿದೆ. ಇತ್ತ ವಿಜೇತ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಲಿದೆ. ಆದ್ದರಿಂದ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿದೆ.

ಈ ಪಂದ್ಯವು ರಾಜಸ್ಥಾನ್ ರಾಯಲ್ಸ್‌ನ ತವರು ಮೈದಾನವಾದ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಳೆದ ಪಂದ್ಯದಲ್ಲಿ, ರಾಜಸ್ಥಾನ್ ಅದೇ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 27 ರನ್‌ಗಳಿಂದ ಸೋಲಿಸಿತ್ತು. ಈಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಸವಾಲನ್ನು ಎದುರಿಸಲಿದೆ.

ಗುವಾಹಟಿಯಲ್ಲಿ ಹವಾಮಾನ ಹೇಗಿದೆ?

ಈ ಪಂದ್ಯದ ಸಮಯದಲ್ಲಿ ಗುವಾಹಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಅಕ್ಯೂವೆದರ್ ಪ್ರಕಾರ, ಶುಕ್ರವಾರ ಗುವಾಹಟಿಯಲ್ಲಿ ಮಳೆಯಾಗುವ ಸಾಧ್ಯತೆ ಶೇ. 56 ರಷ್ಟು ಇದೆ. ಹೀಗಾಗಿ ಮಳೆಯು ಪಂದ್ಯದಲ್ಲಿ ಪ್ರಮುಖ ಪಾತ್ರವಹಿಸಲಿದ್ದು ಪಂದ್ಯಕ್ಕೆ ಅಡ್ಡಿಯಾಗಬಹುದು.

ಕಳೆದ ಪಂದ್ಯಕ್ಕೂ ಮಳೆ ಅಡ್ಡಿ

ಈ ಪಂದ್ಯಕ್ಕೂ ಮುನ್ನ ಏಪ್ರಿಲ್ 7 ರಂದು ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತು, ಪರಿಣಾಮವಾಗಿ ತಲಾ 11 ಓವರ್‌ಗಳ ಪಂದ್ಯವನ್ನು ಆಡಿಸಲಾಯಿತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 11 ಓವರ್‌ಗಳಲ್ಲಿ 150 ರನ್ ಗಳಿಸಿದರೆ, ಗುರಿ ಬೆನ್ನಟ್ಟಿದ ಮುಂಬೈ ಕೇವಲ 123 ರನ್ ಗಳಿಸಿ ಪಂದ್ಯವನ್ನು 27 ರನ್‌ಗಳಿಂದ ಸೋತಿತು.

IPL 2026: ತವರಿನಿಂದ ಹೊರಗೆ ಆರ್​ಸಿಬಿಗೆ ಮೊದಲ ಪಂದ್ಯ; ಎದುರಾಳಿ ಯಾರು ಗೊತ್ತಾ?

ಮುಖಾಮುಖಿ ದಾಖಲೆ

ಐಪಿಎಲ್‌ನಲ್ಲಿ ಇದುವರೆಗೆ ರಾಜಸ್ಥಾನ ರಾಯಲ್ಸ್ ಮತ್ತು ಆರ್‌ಸಿಬಿ ನಡುವೆ 34 ಪಂದ್ಯಗಳು ನಡೆದಿವೆ. ಆರ್‌ಸಿಬಿ ಆಡಿರುವ 34 ಪಂದ್ಯಗಳಲ್ಲಿ 17 ರಲ್ಲಿ ಗೆದ್ದಿದ್ದರೆ, ರಾಜಸ್ಥಾನ ರಾಯಲ್ಸ್ 14 ಪಂದ್ಯಗಳನ್ನು ಗೆದ್ದಿದೆ. ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಕಳೆದ ಸೀಸನ್​ನಲ್ಲಿ ಈ ಎರಡೂ ತಂಡಗಳು ಎರಡು ಪಂದ್ಯಗಳನ್ನು ಆಡಿದ್ದವು. ಈ ಎರಡೂ ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್

ಮುಂಬೈ ಮೂಲದ ಪ್ರಮುಖ ಉದ್ಯಮಿ ಮತ್ತು ಬಿಜೆಪಿ ಮುಖಂಡ ಮೋಹಿತ್ ಕಂಬೋಜ್ ಅವರ ಪುತ್ರಿ ಮಿಷ್ಕಾ ಕಂಬೋಜ್ ಅವರ 16ನೇ ಜನ್ಮದಿನದ ಸೆಲೆಬ್ರೇಷನ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಬಾಲಿವುಡ್‌ನ ಘಟಾನುಘಟಿ ತಾರೆಗಳು ಪಾಲ್ಗೊಂಡಿದ್ದರು. ವಿಶೇಷವಾಗಿ ಶಾರುಖ್ ಖಾನ್ (Shah Rukh Khan) ಮತ್ತು ರಣವೀರ್ ಸಿಂಗ್ ಅವರ ನಡುವಿನ ಆತ್ಮೀಯ ಕ್ಷಣಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ. ‘ಧುರಂಧರ್ 2’ (Dhurandhar 2) ಸಕ್ಸಸ್ ಬೆನ್ನಲ್ಲೇ ಈ ಭೇಟಿ ನಡೆದಿರುವುದು ವಿಶೇಷ. ಈ ಬಗ್ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಧುರಂಧರ್ 2’ ಸಿನಿಮಾದ ಯಶಸ್ಸಿನ ಬಗ್ಗೆ ಅನೇಕ ಸೆಲೆಬ್ರಿಟಿಗಳು ಈಗಾಗಲೇ ಮಾತನಾಡಿದ್ದಾರೆ. ಆದರೆ ಶಾರುಖ್ ಖಾನ್ ಬಹಿರಂಗವಾಗಿ ಏನನ್ನೂ ಹೇಳಿಲ್ಲ. ಅವರಿಗೆ ರಣವೀರ್ ಸಿಂಗ್ ಬಗ್ಗೆ ಅಸಮಾಧಾನ ಇರಬಹುದು ಎಂದು ಅನೇಕರು ಊಹಿಸಿದ್ದರು. ಆದರೆ ಈಗ ಪಾರ್ಟಿಯಲ್ಲಿ ರಣವೀರ್ ಸಿಂಗ್ ಮತ್ತು ಶಾರುಖ್ ಖಾನ್ ಜೊತೆಯಾಗಿ ಇರುವ ವಿಡಿಯೋ ನೋಡಿ ಎಲ್ಲರ ಅನುಮಾನ ಪರಿಹಾರ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ರಣವೀರ್ ಸಿಂಗ್ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರೊಂದಿಗೆ ಸಂಭಾಷಣೆ ನಡೆಸುತ್ತಿರುವುದನ್ನು ಕಾಣಬಹುದು. ಈ ವೇಳೆ ಅಲ್ಲಿಗೆ ಆಗಮಿಸುವ ಶಾರುಖ್ ಖಾನ್ ಅವರು ರಣವೀರ್ ಹೆಗಲ ಮೇಲೆ ತಟ್ಟಿ ಅತ್ಯಂತ ಪ್ರೀತಿಯಿಂದ ಅವರ ಕೆನ್ನೆಯನ್ನು ಸವರಿದ್ದಾರೆ. ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ರಣವೀರ್ ಕೆನ್ನೆಗೆ ಮುತ್ತಿಟ್ಟು ಪ್ರೀತಿ ತೋರಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸೃಷ್ಟಿಸಿರುವ ಸುನಾಮಿಗೆ ಶಾರುಖ್ ಈ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಅಭಿಮಾನಿಗಳು ಚರ್ಚಿಸುತ್ತಿದ್ದಾರೆ. ವಿಡಿಯೋದಲ್ಲಿ ರಣವೀರ್ ಕೂಡ ಮುಗುಳ್ನಗುತ್ತಾ ‘ಥ್ಯಾಂಕ್ ಯೂ’ ಎಂದು ಹೇಳುವುದು ಕೇಳಿಸುತ್ತದೆ. ‘ಇವರಿಬ್ಬರೂ ಒಂದು ಕುಟುಂಬದಂತೆ ಇದ್ದಾರೆ’ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ರಣವೀರ್ ಸಿಂಗ್ ಅವರಿಗೆ ಸದ್ಯ ಎಲ್ಲವೂ ಶುಭವಾಗಿಯೇ ನಡೆಯುತ್ತಿದೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಹೊಸ ಇತಿಹಾಸ ನಿರ್ಮಿಸಿವೆ. ಮಾರ್ಚ್ 19ರಂದು ಬಿಡುಗಡೆಯಾದ ‘ಧುರಂಧರ್ 2’ ಈಗಾಗಲೇ ವಿಶ್ವಾದ್ಯಂತ 1,600 ಕೋಟಿ ರೂಪಾಯಿ ಗಡಿ ದಾಟಿ ಮುನ್ನುಗ್ಗುತ್ತಿದೆ. ಅವರ ಹೊಸ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ.

Source link

ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ

ಮುಂಬೈ, ಏಪ್ರಿಲ್ 9: ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Mumbai Airport) ಟರ್ಮಿನಲ್ 1 ಬಿ ಒಳಗೆ ಇಂದು ಸಂಜೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಟರ್ಮಿನಲ್ ಒಳಗಿನ ಕೇಬಲ್ ಟ್ರೇಗಳು ಮತ್ತು ಸ್ವಿಚ್ ಬಾಕ್ಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಗ್ನಿಶಾಮಕ ಅಧಿಕಾರಿ ರವೀಂದ್ರ ಅಂಬಲ್ಗೇಕರ್ ಹೇಳಿದ್ದಾರೆ. ಬೆಂಕಿ ಟರ್ಮಿನಲ್‌ನ ನೆಲ ಮಹಡಿಯಲ್ಲಿ ಮಾತ್ರ ಕಾಣಿಸಿಕೊಂಡಿದ್ದು ಮಾಹಿತಿ ಪಡೆದ ಕೂಡಲೇ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಮತ್ತು ವಾರ್ಡ್ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

KKR vs LSG: ಅಂಪೈರ್​ಗಳ ಅಜಾಗರೂಕತೆ; ಕೆಕೆಆರ್​ಗೆ ಮಹಾಮೋಸ? ವಿಡಿಯೋ ನೋಡಿ

ಐಪಿಎಲ್ 2026 (IPL 2026) ರ 15 ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್​ಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಫಿನ್ ಅಲೆನ್ ಮತ್ತೊಮ್ಮೆ ಬಹುಬೇಗ ವಿಕೆಟ್ ಒಪ್ಪಿಸಿದ್ದಾರೆ. ಆದರೆ ಇದೀಗ ಆ ವಿಕೆಟ್ ಹೊಸ ವಿವಾದಕ್ಕೆ ಕಾರಣವಾಗಿದೆ. ಪಂದ್ಯದ ಎರಡನೇ ಓವರ್‌ನಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಪ್ರಿನ್ಸ್ ಯಾದವ್ ಫಿನ್ ಅಲೆನ್ ಅವರನ್ನು ಔಟ್ ಮಾಡಿದರು. ಆದಾಗ್ಯೂ, ಅಂಪೈರ್ ಅವರ ಜಾಗರೂಕತೆಯಿಂದ ಕೆಕೆಆರ್​ಗೆ ಅನ್ಯಾಯವಾಗಿದೆ ಎಂಬುದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿರುವ ವಿಷಯವಾಗಿದೆ.

ಫಿನ್ ಅಲೆನ್ ನಾಟೌಟ್?

ವಾಸ್ತವವಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇನ್ನಿಂಗ್ಸ್‌ನ ಎರಡನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಪ್ರಿನ್ಸ್ ಯಾದವ್ ಕೆಕೆಆರ್ ಆರಂಭಿಕ ಆಟಗಾರ ಫಿನ್ ಅಲೆನ್ ಅವರನ್ನು ಔಟ್ ಮಾಡಿದರು. ಆಫ್ ಸ್ಟಂಪ್ ಹೊರಗೆ ಹೋಗುತ್ತಿದ್ದ ಚೆಂಡನ್ನು ಅಲೆನ್ ಪುಲ್ ಶಾಟ್ ಮಾಡಲು ಪ್ರಯತ್ನಿಸಿದನು, ಆದರೆ ಚೆಂಡು ಅವರ ಬ್ಯಾಟ್‌ನ ಮೇಲಿನ ಅಂಚನ್ನು ತಾಗಿ ಮೇಲಕ್ಕೆ ಏರಿತು. ಡೀಪ್ ಥರ್ಡ್ ಮ್ಯಾನ್​ನಲ್ಲಿ ನಿಂತಿದ್ದ ದಿಗ್ವೇಶ್ ರಥಿ ಬೌಂಡರಿ ಬಳಿ ಅದ್ಭುತ ಕ್ಯಾಚ್ ಹಿಡಿದರು.

ಬೌಂಡರಿ ಕುಶನ್‌ನಲ್ಲಿ ಸ್ವಲ್ಪ ಚಲನೆ

ಆರಂಭದಲ್ಲಿ, ಅದು ಅದ್ಭುತ ಕ್ಯಾಚ್‌ನಂತೆ ಕಾಣುತ್ತಿತ್ತು. ಆದರೆ ರಿಪ್ಲೇಗಳಲ್ಲಿ ದಿಗ್ವೇಶ್ ರಥಿ ಕ್ಯಾಚ್ ತೆಗೆದುಕೊಳ್ಳುವಾಗ ಬೌಂಡರಿ ಹಗ್ಗವನ್ನು ಮುಟ್ಟಿದ್ದಾರೆಂದು ಸ್ಪಷ್ಟವಾಗಿ ತೋರಿಸಿದೆ. ಒಂದು ಕ್ಷಣ, ಅವರ ಕಾಲು ಹಗ್ಗವನ್ನು ತಾಗುತ್ತಿರುವಂತೆ ಕಂಡುಬಂದಿದೆ. ಇದಲ್ಲದೆ, ಬೌಂಡರಿ ಕುಶನ್‌ನಲ್ಲಿ ಸ್ವಲ್ಪ ಚಲನೆ ಕಂಡುಬಂದಿದೆ. ಆದರೂ, ಅಂಪೈರ್ ಅದನ್ನು ಪರಿಶೀಲಿಸದೆ ಫಿನ್ ಅಲೆನ್‌ರನ್ನು ಔಟ್ ಎಂದು ಘೋಷಿಸಿದ್ದಾರೆ. ಈ ನಿರ್ಧಾರವು ತಕ್ಷಣವೇ ವಿವಾದವನ್ನು ಹುಟ್ಟುಹಾಕಿದ್ದು, ಅಂಪೈರ್ ಜಾಗರೂಕರಾಗಿದ್ದರೆ, ಅಲೆನ್ ಔಟ್ ಆಗುತ್ತಿರಲಿಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯವಾಗಿದೆ.

KKR vs LSG IPL 2026 Live Score: ಕೆಕೆಆರ್ 4ನೇ ವಿಕೆಟ್ ಪತನ

ಅಂಪೈರ್ ವಿರುದ್ಧ ಅಸಮಾಧಾನ

ಅಂಪೈರ್ ಅವರ ಈ ನಿರ್ಧಾರದಿಂದ ಕೋಪಗೊಂಡಿರುವ ನೆಟ್ಟಿಗರು #FinnAllenNotOut ಮತ್ತು #BadUmpiring ನಂತಹ ಹ್ಯಾಶ್‌ಟ್ಯಾಗ್‌ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಮಾಡಲು ಪ್ರಾರಂಭಿಸಿದ್ದಾರೆ. ಏತನ್ಮಧ್ಯೆ, ಈ ಅಂಪೈರ್‌ನ ತಪ್ಪಿನಿಂದಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ ಕೇವಲ 15 ರನ್‌ಗಳಿಗೆ ತಮ್ಮ ಮೊದಲ ವಿಕೆಟ್ ಕಳೆದುಕೊಂಡಿತು. ಫಿನ್ ಅಲೆನ್ 8 ಎಸೆತಗಳಲ್ಲಿ 9 ರನ್​ಗಳಿಸಲಷ್ಟೇ ಶಕ್ತರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆಯಲ್ಲೇ ಕುಳಿತು ಹಣ ಸಂಪಾದಿಸಲು ಇಲ್ಲಿವೆ ಬೆಸ್ಟ್‌ ಐಡಿಯಾ

ಇಂದಿನ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಬಯಸಿದ ಕೆಲಸವನ್ನು (Job) ಗಳಿಸವುದು ಅಷ್ಟು ಸುಲಭವಲ್ಲ. ಒಂದು ಕೆಲಸ ಗಿಟ್ಟಿಸಿಕೊಳ್ಳಲು ತುಂಬಾನೇ ಕಷ್ಟಪಡಬೇಕಾಗುತ್ತದೆ. ಹೀಗೆ ಕೆಲಸವನ್ನು ಹುಡುಕಲು ಹಲವರು ಕಷ್ಟಪಡುತ್ತಿರುತ್ತಾರೆ. ಇನ್ನೂ ಕೆಲವರು ಕೆಲಸವೇ ಇಲ್ಲದೇ ಮನೆಯಲ್ಲಿಯೇ ಟೈಮ್‌ ಪಾಸ್‌ ಮಾಡುತ್ತಿರುತ್ತಾರೆ. ಇಂತಹವರಿಗೆ ಮನೆಯಲ್ಲಿಯೇ ಕುಳಿತು ಸುಲಭವಾಗಿ ಕೈ ತುಂಬಾ ಹಣ ಸಂಪಾದನೆ ಮಾಡಬಹುದು. ಹೌದು ಇಂದಿನ ಈ ಇಂಟರ್‌ನೆಟ್‌ ಯುಗದಲ್ಲಿ ಮನೆಯಲ್ಲಿಯೇ ಕುಳಿತು ಸ್ಮಾರ್ಟ್‌ ಫೋನ್‌ ಮೂಲಕ ಕೆಲಸ ಮಾಡಲು ಹಲವು ವೇದಿಕೆಗಳಿದ್ದು, ಇವುಗಳ ಸರಿಯಾದ ಸದ್ಬಳಕೆಯಿಂದ, ನಿಮ್ಮಲ್ಲಿರುವ ಕೌಶಲ್ಯಗಳಿಂದ ನೀವು ಕೂಡ ಕೈ ತುಂಬಾ ಹಣ ಸಂಪಾದನೆ ಮಾಡಬಹುದು.

ಮನೆಯಲ್ಲಿಯೇ ಕುಳಿತು ಹಣ ಗಳಿಸುವುದು ಹೇಗೆ?

ಸ್ವತಂತ್ರ್ಯೋದ್ಯಮ: ಕಂಟೆಂಟ್‌ ರೈಟಿಂಗ್‌, ವಿಡಿಯೋ ಎಡಿಟಿಂಗ್‌, ಗ್ರಾಫಿಕ್‌ ಡಿಸೈನ್‌ ಇತ್ಯಾದಿಗಳಲ್ಲಿ ನೀವು ಪರಿಣಿತಿಯನ್ನು ಹೊಂದಿದ್ದರೆ, ಈ ಫೀಲ್ಡ್‌ಗಳ ಮೂಲಕ ನೀವು ಮನೆಯಲ್ಲಿಯೇ ಕುಳಿತು ಸಾಕಷ್ಟು ಹಣ ಗಳಿಸಬಹುದು.

ಯೂಟ್ಯೂಬ್‌ ಬಾನೆಲ್: ಇಂದಿನ ಈ ಡಿಜಿಟಲ್‌ ಯುಗದಲ್ಲಿ ಹಲವರು ಯೂಟ್ಯೂಬ್‌ ಮೂಲಕವೇ ತಿಂಗಳಿಗೆ ಲಕ್ಷಾಂತರ ರೂಪಾಯಿ ಹಣ ಸಂಪಾದನೆ ಮಾಡುತ್ತಿದ್ದಾರೆ. ನೀವು ಕೂಡ ಫ್ಯಾಷನ್‌, ಲೈಫ್‌ ಸ್ಟೈಲ್‌, ಕುಕ್ಕಿಂಗ್‌ ಡೈಲಿ ವ್ಲಾಗಿಂಗ್‌ ಸೇರಿದಂತೆ ಹಲವು ವಿಡಿಯೋಗಳನ್ನು ಶೂಟ್‌ ಮಾಡಿ ಹರಿ ಬಿಡುವ ಮೂಲಕ ಯೂಟ್ಯೂಬ್‌ನಿಂದ ಹಣವನ್ನು ಗಳಿಸಬಹುದು.  ಲಕ್ಷಾಂತರ ರೂಪಾಯಿ ಹಣ ಸಂಪಾದನೆ ಮಾಡಲು ಇದೊಂದು ಬೆಸ್ಟ್‌ ಪ್ಲಾಟ್‌ಫಾರ್ಮ್‌ ಅಂತಾನೇ ಹೇಳಬಹುದು. ಇದಲ್ಲದೆ ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ನಲ್ಲಿ ಕಂಟೆಂಟ್‌ ಕ್ರಿಯೇಟರ್‌ ಆಗಿಯೂ ಹಣ ಸಂಪಾದಿಸಬಹುದು.

ಆನ್‌ಲೈನ್‌ ಟೀಚಿಂಗ್, ಇ ಟ್ಯೂಷನ್:‌ ನೀವು ಒಂದು ವಿಷಯದಲ್ಲಿ ಪರಿಣಿತರಾಗಿದ್ದರೆ, ಆ ಜ್ಞಾನವನ್ನು ಕಲಿಸಲು ಬಳಸಿ. ಈ ಮೂಲಕ ಹಣವನ್ನು ಸಂಪಾದನೆ ಮಾಡಬಹುದು.  ಹೌದು TutorMe, Chegg, Vedantu ನಂತಹ ವೆಬ್‌ಸೈಟ್‌ಗಳು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಬೋಧನೆ ಮಾಡಲು ನಿಮಗೆ ಅವಕಾಶ ನೀಡುತ್ತವೆ. ನಿಮ್ಮ ಪರಿಣತಿಯ ಆಧಾರದ ಮೇಲೆ ನೀವು ತರಗತಿಗಳು ಮತ್ತು ವಿಷಯಗಳನ್ನು ಆಯ್ಕೆ ಮಾಡಬಹುದು.

ವೆಬ್ ಡಿಸೈನಿಂಗ್: Wix ಮತ್ತು WordPress ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ವೆಬ್‌ಸೈಟ್‌ಗಳನ್ನು ವಿನ್ಯಾಸಗೊಳಿಸುವ ಮೂಲಕ ಮತ್ತು ಸಣ್ಣ ವ್ಯವಹಾರ ಯೋಜನೆಗಳಲ್ಲಿ ಕೆಲಸ ಮಾಡುವ ಮೂಲಕ ನೀವು ಹಣ ಗಳಿಸಬಹುದು.

ಬ್ಲಾಗಿಂಗ್:‌ ಬ್ಲಾಗ್‌ ಬರೆಯುವ ಮೂಲಕವೂ ನೀವು ಹಣ ಗಳಿಸಬಹುದು. ಮನೆಯಲ್ಲಿ ಕುಳಿತು ನಿಮಗೆ ತಿಳಿದಿರುವ ವಿಷಯಗಳ ಬಗ್ಗೆ ಬ್ಲಾಗ್‌ ಬರೆಯುವ ಮೂಲಕ ನೀವು ಹಣ ಗಳಿಸಬಹುದು.‌ನಿಮಗೆ ಬೇಕಾಗಿರುವುದು ಲ್ಯಾಪ್‌ಟಾಪ್ ಮತ್ತು ಇಂಟರ್ನೆಟ್ ಸಂಪರ್ಕ. ನೀವು ದೊಡ್ಡ ಪ್ರಮಾಣದಲ್ಲಿ ಬ್ಲಾಗಿಂಗ್ ಪ್ರಾರಂಭಿಸಲು ಬಯಸಿದರೆ, ನೀವು ನಿಮ್ಮ ಸ್ವಂತ ವೆಬ್‌ಸೈಟ್ ಅನ್ನು ಸಹ ರಚಿಸಬಹುದು. ಈ ಡಿಜಿಟಲ್ ಯುಗದಲ್ಲಿ ಬ್ಲಾಗಿಂಗ್ ಹೆಚ್ಚು ಜನಪ್ರಿಯವಾಗುತ್ತಿದೆ.

ಡಿಜಿಟಲ್‌ ಪ್ರಾಡೆಕ್ಟ್:‌ ನೀವು ಇ ಪುಸ್ತಕ, ಕೋರ್ಸ್‌ ಇತ್ಯಾದಿಗಳನ್ನು ರಚಿಸಬಹುದು. ಮತ್ತು ಅದನ್ನು ಮಾರಾಟ ಮಾಡಬಹುದು. ಅಲ್ಲದೆ ಕಸ್ಟಮೈಸ್ಡ್‌ ಉತ್ಪನ್ನಗಳನ್ನು ತಯಾರಿಸಿ ಅದನ್ನು ಮಾರಾಟ ಮಾಡುವ ಮೂಲಕವೂ ಹಣ ಸಂಪಾದನೆ ಮಾಡಬಹುದು.

ಇದನ್ನೂ ಓದಿ: ಕೆಲಸಗಳ ಮಾಡೋ ಮುನ್ನ ನೂರು ಬಾರಿ ಯೋಚಿಸಿ, ಇಲ್ಲಾಂದ್ರೆ ಪಶ್ಚಾತಾಪ ಪಡಬೇಕಾಗುತ್ತದೆ

ಸಾಮಾಜಿಕ ಮಾಧ್ಯಮ ನಿರ್ವಹಣೆ: ಅನೇಕ ವ್ಯವಹಾರಗಳಿಗೆ ತಮ್ಮ ಸಾಮಾಜಿಕ ಮಾಧ್ಯಮ ಪೇಜ್‌ಗಳನ್ನು ನಿರ್ವಹಿಸಲು ಸಹಾಯದ ಅಗತ್ಯವಿರುತ್ತದೆ. ನೀವು ಸೋಷಿಯಲ್‌ ಮೀಡಿಯಾ ಹ್ಯಾಂಡಲ್‌ ಮಾಡುವುದರಲ್ಲಿ ಎಕ್ಸ್‌ಪರ್ಟ್‌ ಆಗಿದ್ರೆ, ಕೆಲವೊಂದು ಬ್ರಾಂಡ್‌ಗಳ ಸೋಷಿಯಲ್‌ ಮೀಡಿಯಾ ಖಾತೆಗಳನ್ನು ನಿರ್ವಹಿಸುವ ಮೂಲಕ  ಮನೆಯಲ್ಲಿಯೇ ಕುಳಿತು ಹಣ ಸಂಪಾದಿಸಬಹುದು.

ಷೇರು ವ್ಯಾಪಾರ ಮತ್ತು ಹೂಡಿಕೆ: ನಿಮಗೆ ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದರೆ  ನೀವು ಷೇರು ವ್ಯಾಪಾರ ಅಥವಾ ಹಣಕಾಸು ಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಬಹುದು. ಅನೇಕ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಷೇರುಗಳು, ಕ್ರಿಪ್ಟೋಕರೆನ್ಸಿಗಳು ಅಥವಾ ಇತರ ಹಣಕಾಸು ಮೂಲಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಬಳಕೆದಾರ ಸ್ನೇಹಿ ಇಂಟರ್ಫೇಸ್‌ಗಳನ್ನು ನೀಡುತ್ತವೆ. ಆದರೆ ಈ ಕ್ಷೇತ್ರವನ್ನು ಆಯ್ಕೆ ಮಾಡುವ ಮೊದಲು ಸಂಪೂರ್ಣ ಸಂಶೋಧನೆ ನಡೆಸುವುದು ಮತ್ತು ಇದರ ಸಾಧಕ ಬಾಧಕಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು

ಬೆಂಗಳೂರು, ಏಪ್ರಿಲ್​ 09: ಬೆಂಗಳೂರಿನ ಆರ್‌ವಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ನಿಹಾರಿಕಾ, ಅಭಿಜ್ಞಾ ಹಾಗೂ ಪ್ರಿಯಾ 600ಕ್ಕೆ 597 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ತಮ್ಮ ಮಕ್ಕಳ ಸಾಧನೆ ಕುರಿತು ಮಾತನಾಡಿದ ಪೋಷಕರು ಭಾವುಕರಾದರು. ನಮ್ಮ ಮಕ್ಕಳಿಗೆ ಯಾವುದೇ ರೀತಿಯ ಒತ್ತಡವನ್ನು ಹೇರದೆ, ಅವರ ಆಸಕ್ತಿಗಳಿಗೆ ಮತ್ತು ಆಯ್ಕೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾಗಿ ಹೇಳಿದ್ದಾರೆ. ತಮ್ಮ ಮಕ್ಕಳ ಸಾಧನೆಗೆ ಅತೀವ ಸಂತೋಷ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಲ್ಲಿಕ್ ಮಾಡಿ.

Source link

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಇರಾನ್ ಯುದ್ಧದ ಪರಿಣಾಮದಿಂದಾಗಿ ಎಲ್​ಪಿಜಿ (LPG) ಅಭಾವ ಉಂಟಾಗಿದೆ. ಆಟೋ ಚಾಲಕರು ಗ್ಯಾಸ್ ಇಲ್ಲದೇ ಪರದಾಡುವಂತಾಗಿದೆ. ಹಾಗಾಗಿ ನಟ ವಿನೋದ್ ರಾಜ್ ಅವರು ಆಟೋ ಚಾಲಕರ ನೆರವಿಗೆ ಬಂದಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ತಾಯಿ, ನಟಿ ಲೀಲಾವತಿ ಸಮಾಧಿ ಬಳಿ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಲಾಗಿದೆ. ತಾಯಿಯ ಹೆಸರಿನಲ್ಲಿ ವಿನೋದ್ ರಾಜ್ (Vinod Raj) ಅವರು ಈ ಕಾರ್ಯ ಮಾಡಿದ್ದಾರೆ. ಈ ವೇಳೆ ಆಟೋ ಚಾಲಕರಿಗೆ ಅವರು ಊಟ ಹಾಕಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ವರದಿ: ಮಂಜುನಾಥ್, ನೆಲಮಂಗಲ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link