Category Archives: Blog

Your blog category

ಮೆಟ್ರೋ ಹೊಸ ನಿಯಮಗಳು: ಪ್ರಯಾಣಿಕರೇ ಇನ್ಮುಂದೆ ರೀಲ್ಸ್ ನೋಡುವ ಮುನ್ನ ಎಚ್ಚರ – Kannada News | Namma Metro Penalties: 7,429 Cases for Loud Volume, Eating and Tobacco

ಬೆಂಗಳೂರು, ಡಿ.31: ಪ್ರಯಾಣಿಕರು ಇನ್ಮುಂದೆ ಮೆಟ್ರೋದಲ್ಲಿ (Bangalore Metro rules) ಈ ಕೆಲಸಗಳನ್ನು ಮಾಡುವಂತಿಲ್ಲ, ಒಂದು ವೇಳೆ ಮಾಡಿದ್ರೆ ಕೇಸ್​​ ದಾಖಲು ಮಾಡಲಾಗುತ್ತದೆ. ಮೆಟ್ರೋದಲ್ಲಿ ರೀಲ್ಸ್ ನೋಡುವುದು, ಫೋನ್​​ನಲ್ಲಿ ಜೋರಾಗಿ ಮಾತನಾಡುವುದು, ತಿಂಡಿ ಊಟ ಮಾಡಿದ್ರೆ ದಂಡದ ಜತೆಗೆ ಪ್ರಕರಣ ಕೂಡ ದಾಖಲು ಮಾಡಲಾಗುತ್ತದೆ. ಕಳೆದ 20 ದಿನದಲ್ಲಿ ಮೆಟ್ರೋ ಪ್ರಯಾಣಿಕರ ವಿರುದ್ಧ 7,429 ಕೇಸ್ ದಾಖಲಾಗಿದೆ. ಈ ಕ್ರಮವನ್ನು ತರಲು ಒಂದು ಕಾರಣವಿದೆ. ಹೌದು ಮೆಟ್ರೋದಲ್ಲಿ ಇತ್ತೀಚೆಗೆ ಜೋರಾಗಿ ಸೌಂಡ್​​ ಇರುವುದನ್ನು ತಡೆಯಲು ಹಾಗೂ ಇತರ ಸಹ ಪ್ರಯಾಣಿಕರಿಗೆ ತೊಂದರೆ ಆಗುವುದನ್ನು ತಡೆಯಲು ವಿಭಿನ್ನ ಕ್ರಮವನ್ನು ತರಲಾಗಿದೆ. ಒಂದು ವೇಳೆ ಈ ನಿಮಯವನ್ನು ಮೀರಿದ್ರೆ ದಂಡಾಸ್ತ್ರ ಪ್ರಯೋಗ ಮಾಡಲಾಗುವುದು.

ಮೆಟ್ರೋವನ್ನು ಲಕ್ಷಾಂತರ ಜನ ಓಡಾಡುತ್ತಾರೆ. ಒಂದು ಕಡೆಯಿಂದ ಇನ್ನೊಂದು ಕಡೆ ವೇಗವಾಗಿ ಹೋಗಲು ಮೆಟ್ರೋವನ್ನು ಬಳಸುತ್ತಾರೆ. ಈ ಹೊತ್ತಿನಲ್ಲಿ ಸುಮ್ಮನೆ ಕೂರುವ ಬದಲು ಟೈಮ್​​ ಪಾಸ್​​ ಮಾಡಲು ಬಹುತೇಕ ಜನ ಮೊಬೈಲ್ ಬಳಕೆ ಮಾಡುತ್ತಾರೆ. ಹೆರ್​​ ಪೋನ್​​​​ ಹಾಕಿಕೊಳ್ಳದೇ ರಿಲ್ಸ್​​​ ಯೂಟ್ಯೂಬ್​​​ ನೋಡುತ್ತಾರೆ. ಈ ಹಿಂದೆಯೇ ಮೆಟ್ರೋ ಈ ರೀತಿ ಮಾಡಬಾರದು ಎಂಬ ರೂಲ್​ಸ್​​​​ ಮಾಡಿತ್ತು. ಆದರೆ ಇದನ್ನು ಮೀರಿ ಅನೇಕರ ಈ ತಪ್ಪುಗಳನ್ನು ಮಾಡುತ್ತಿದ್ದಾರೆ. ಅದಕ್ಕಾಗಿ ದಂಡಾಸ್ತ್ರ ಪ್ರಯೋಗ ಚಿಂತನೆ ಮಾಡಲಾಗಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಕೌಂಟ್​ಡೌನ್: ಖಾಕಿ ಅಲರ್ಟ್​​; ಎಣ್ಣೆ ಏಟಲ್ಲಿ ಎಲ್ಲಾದ್ರೂ ಮಲಗಿದ್ರೆ ಪೊಲೀಸರೇ ಮನೆಗೆ ಬಿಡ್ತಾರೆ!

ಮೊಬೈಲ್ ಅಲ್ಲಿ ಗಟ್ಟಿಯಾಗಿ ವಾಲ್ಯೂಮ್ ಜಾಸ್ತಿ ಕೊಡುವುದು, ಬ್ಲೂ ಟೂತ್ ಬಳಕೆ ಮಾಡಿ ಗಟ್ಟಿಯಾಗಿ ಮಾತನಾಡಿ ಇತರೆ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುವುದು , ಅಲ್ಲಲ್ಲಿ ಊಟ-ತಿಂಡಿ ಮಾಡುವುದು, ತಂಬಾಕು ಸೇವನೆ ಮಾಡುವ ದೂರುಗಳು ಬರುತ್ತಿದೆ. ಡಿಸೆಂಬರ್ 5 ರಿಂದ 25ರ ವರೆಗಿನ ಡಾಟಾ ಪ್ರಕಾರ 6 ಸಾವಿರದ 520 ಮಂದಿ ವಿರುದ್ಧ ಲೌಡ್ ಸೌಂಡ್ ಕೇಸ್ ದಾಖಲಾಗಿದೆ. ಮೆಟ್ರೋದಲ್ಲಿ ತಿಂಡಿ ತಿಂದವರ ವಿರುದ್ಧ 268 ಕೇಸ್ ದಾಖಲಾಗಿದ್ದು, ತಂಬಾಕು ಸೇವನೆಯ ಅಡಿ 641 ದೂರು ರಿಜಿಸ್ಟರ್ ಆಗಿದೆ. 20 ದಿನದಲ್ಲಿ ಒಟ್ಟು 7,429 ಕೇಸ್ ಗಳು ದಾಖಲು ಮಾಡಲಾಗಿದೆ ಎಂದು ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಹೇಳಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಮೆಟ್ರೋ ಪ್ರಯಾಣಿಕರು ಅಧಿಕಾರಿಗಳ ನಿರ್ಧಾರವನ್ನು ಸ್ವಾಗತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; 2 ವಾರಗಳಲ್ಲಿ ಮೂರನೇ ಘಟನೆ – Kannada News | Bangladesh Violence again Hindu man Bajendra Biswas killed by coworker amid unrest

ಢಾಕಾ, ಡಿಸೆಂಬರ್ 30: ಬಾಂಗ್ಲಾದೇಶದ (Bangladesh) ಮೈಮೆನ್ಸಿಂಗ್‌ನ ಭಾಲುಕಾ ಉಪ ಜಿಲ್ಲೆಯಲ್ಲಿ 40 ವರ್ಷದ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್ ಅವರನ್ನು ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ನೋಮನ್ ಮಿಯಾ ಎಂಬಾತನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದಾತ ಮತ್ತು ಆರೋಪಿ ಇಬ್ಬರೂ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಧೀನದಲ್ಲಿರುವ ಅರೆಸೈನಿಕ ಪಡೆಯಾದ ಅನ್ಸಾರ್‌ನ ಸದಸ್ಯರಾಗಿದ್ದರು. ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ ಗುಂಪು ಹಲ್ಲೆ ನಡೆದ ನಂತರ ಈ ಘಟನೆ ನಡೆದಿದೆ.

ವರದಿಯ ಪ್ರಕಾರ, ಸೋಮವಾರ ಸಂಜೆ 6.30ರ ಸುಮಾರಿಗೆ ಮೆಹ್ರಾಬರಿ ಪ್ರದೇಶದ ಸುಲ್ತಾನ ಸ್ವೆಟರ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಅನ್ಸಾರ್ ಸದಸ್ಯ ಮೃತ ಬಿಸ್ವಾಸ್ ಸಿಲ್ಹೆಟ್ ಸದರ್ ಉಪ ಜಿಲ್ಲೆಯ ಕದಿರ್ಪುರ್ ಗ್ರಾಮದ ಪ್ರೊಬಿತ್ರ ಬಿಸ್ವಾಸ್ ಅವರ ಮಗ. ಆರೋಪಿ ನೋಮನ್ ಮಿಯಾ ಸುನಮ್‌ಗಂಜ್ ಜಿಲ್ಲೆಯ ಬಲುತುರಿ ಬಜಾರ್ ಪ್ರದೇಶದ ಲುಟ್ಫರ್ ರೆಹಮಾನ್ ಅವರ ಮಗ. ಈ ಘಟನೆಯ ಸಮಯದಲ್ಲಿ ನೋಮನ್ ಮಿಯಾ ಮತ್ತು ಬಿಸ್ವಾಸ್ ಒಟ್ಟಿಗೆ ಕುಳಿತಿದ್ದರು. ಈ ವೇಳೆ ನೋಮನ್ ತನ್ನ ಬಳಿಯಿದ್ದ ಶಾಟ್‌ಗನ್‌ನಿಂದ ಗುಂಡು ಹಾರಿಸಿದ್ದಾನೆ. ಇದರಿಂದ ಬಿಸ್ವಾಸ್ ಎಡ ತೊಡೆಗೆ ಗಂಭೀರವಾಗಿ ಗಾಯವಾಯಿತು.

ಇದನ್ನೂ ಓದಿ: ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ

ತಕ್ಷಣ ಬಿಸ್ವಾಸ್ ಅವರ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಬಿಸ್ವಾಸ್ ಸತ್ತಿದ್ದಾರೆಂದು ಘೋಷಿಸಿದರು. ಗುಂಡು ಹಾರಿಸಿದ ಆರೋಪಿ ನೋಮನ್ ಮಿಯಾ (22)ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಸಮಯದಲ್ಲಿ ಸುಮಾರು 20 ಅನ್ಸಾರ್ ಸಿಬ್ಬಂದಿ ಕಾರ್ಖಾನೆಯಲ್ಲಿ ಕರ್ತವ್ಯದಲ್ಲಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಕಳೆದ 10 ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯಾದ ಮೂರನೇ ಘಟನೆ ಇದಾಗಿದೆ. ಇದಕ್ಕೂ ಮೊದಲು ಬಾಂಗ್ಲಾದೇಶದಲ್ಲಿ ದೀಪು ಚಂದ್ರ ದಾಸ್ ಅವರನ್ನು ಹೊಡೆದು ಕೊಲ್ಲಲಾಯಿತು. ಈ ಘಟನೆ ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು.

ಇದನ್ನೂ ಓದಿ: Khaleda Zia Death: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

ದೀಪು ಚಂದ್ರ ದಾಸ್ ನಂತರ, 3 ದಿನಗಳ ಹಿಂದೆ ಢಾಕಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯಾದ ಅಮೃತ್ ಮಂಡಲ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಅವರ ಮೇಲೆ ಸುಲಿಗೆ ಆರೋಪ ಹೊರಿಸಲಾಗಿತ್ತು. ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ ಮತ್ತು ಅವರ ಮನೆಗಳನ್ನು ಸುಡಲಾಗುತ್ತಿದೆ. ಇದಕ್ಕೆ ಭಾರತವೂ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಹೊಸ ವರ್ಷಕ್ಕೆ ಕೌಂಟ್​ಡೌನ್: ಖಾಕಿ ಅಲರ್ಟ್​​; ಎಣ್ಣೆ ಏಟಲ್ಲಿ ಎಲ್ಲಾದ್ರೂ ಮಲಗಿದ್ರೆ ಪೊಲೀಸರೇ ಮನೆಗೆ ಬಿಡ್ತಾರೆ! – Kannada News | New Year 2026 Countdown Begins: Police Security Measures, DCM Warning, and Celebration Guidelines Issued

ಬೆಂಗಳೂರು, ಡಿಸೆಂಬರ್​​ 30: 2025ಕ್ಕೆ ಗುಡ್ ಬೈ ಹೇಳಿ, ಹೊಸ ವರ್ಷ 2026ರನ್ನು (New Year 2026) ಸ್ವಾಗತಿಸೋದಕ್ಕೆ ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿವೆ. ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರು (bangaluru) ಸೇರಿ ರಾಜ್ಯಾದ್ಯಂತ ಜನರು ಸಜ್ಜಾಗಿದ್ದಾರೆ. ಪೊಲೀಸ್ ಇಲಾಖೆ ಕೂಡ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿದೆ. ಎಣ್ಣೆ ಏಟಿನಲ್ಲಿ ಎಲ್ಲಾದರೂ ಮಲಗಿದರೆ ಪೊಲೀಸರೇ ಮನೆಗೆ ಬಿಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಎಲ್ಲೆಡೆ ಪೊಲೀಸ್​ ಹದ್ದಿನ ಕಣ್ಣು

ಹೊಸ ವರ್ಷಾಚರಣೆಗೆ ಕೌಂಟ್​ಡೌನ್ ಶುರುವಾಗಿದೆ. ನಾಳೆ ಸಂಜೆಯಿಂದಲೇ ವಿಶ್ವಾದ್ಯಂತ ಸಂಭ್ರಮದ ವಾತಾವರಣ ಮನೆ ಮಾಡಲಿದೆ. ಬೆಂಗಳೂರಿಗರೂ ನ್ಯೂ ಇಯರ್ ಸ್ವಾಗತಿಸೋದಕ್ಕೆ ಕಾತರರಾಗಿದ್ದಾರೆ. ಅತೀ ಹೆಚ್ಚು ಜನರು ಸೇರುವ ಎಂ.ಜಿ.ರೋಡ್, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ ಸೇರಿ ಹಲವೆಡೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ: ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು

ಬ್ರಿಗೇಡ್ ರಸ್ತೆಯೊಂದರಲ್ಲೇ 360ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಿದ್ದು, ಬೆಂಗಳೂರು ನಗರದಾದ್ಯಂತ 6ಸಾವಿರ ಹೆಚ್ಚುವರಿ ಕ್ಯಾಮರಾ ಅಳವಡಿಸಲಾಗಿದೆ. ಹಲವೆಡೆ ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಹಾಕಿದ್ದಾರೆ. ಪೊಲೀಸ್ ಹಿರಿಯ ಅಧಿಕಾರಿಗಳು ಭದ್ರತೆ ಬಗ್ಗೆ ಪರಿಶೀಲಿಸಿದ್ದಾರೆ.

ಎಲ್ಲಾದ್ರೂ ಮಲಗಿದ್ರೆ ಮನೆಗೆ ಬಿಡ್ತಾರೆ: ಡಿ.ಕೆ.ಶಿವಕುಮಾರ್

ಇನ್ನು ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಇಡೀ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಅಂದರು. ಡಿಸಿಎಂ ಡಿಕೆ ಶಿವಕುಮಾರ್​ ಮಾತನಾಡಿ, ನೀವೇನಾದರೂ ಎಲ್ಲಾದರೂ ಮಲಗಿದರೆ ಪೊಲೀಸರೇ ಮನೆಗೆ ತಲುಪಿಸುತ್ತಾರೆ ಎಂದಿದ್ದಾರೆ.

ಹೋಟೆಲ್​ಗಳೂ ಹೊಸ ವರ್ಷಾಚರಣೆಗೆ ಸಜ್ಜಾಗಿವೆ. ಡಿಸೆಂಬರ್ 31 ಮತ್ತು ಜನವರಿ 1ರಂದು ಬೆಂಗಳೂರಿನ ರೆಸ್ಟೋರೆಂಟ್​ಗಳಲ್ಲಿ ಹೆಚ್ಚಿನ ವ್ಯಾಪಾರ ವಹಿವಾಟು ನಿರೀಕ್ಷೆಯಿದೆ. ಆದರೆ ಎಂಜಿ ರಸ್ತೆ, ರೆಸಿಡೆನ್ಸಿ ರಸ್ತೆ ಸುತ್ತಮುತ್ತಲು ಮಾತ್ರ ವ್ಯಾಪಾರ ವಹಿವಾಟು ಡಲ್ ಹೊಡೆಯುವ ಭೀತಿಯಿದೆ. ಯಾಕಂದರೆ, ವಾಹನಗಳ ಓಡಾಟ ಹಾಗೂ ಪಾರ್ಕಿಂಗ್ ಬಂದ್ ಮಾಡೋದ್ರಿಂದ ಗ್ರಾಹಕರ ಸಂಖ್ಯೆಯೂ ಕಡಿಮೆಯಾಗಲಿದ್ದು, ರೆಸ್ಟೋರೆಂಟ್​ಗಳಿಗೆ ಸಂಕಷ್ಟ ಎದುರಾಗಲಿದೆ.

ಇದನ್ನೂ ಓದಿ: ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತಾ ಕ್ರಮ? ಇಲ್ಲಿದೆ ನೋಡಿ

ನ್ಯೂ ಇಯರ್​ಗೆ ಭರ್ಜರಿ ಆನ್​ಲೈನ್ ಬ್ಯುಸಿನೆಸ್ ಆಗಲಿದೆ. ಆದರೆ ಶೀಘ್ರ ಫುಡ್ ಡೆಲಿವರಿ ಒತ್ತಡಕ್ಕೆ ಸಿಲುಕಿ ಡೆಲಿವರಿ ಬಾಯ್ಸ್ ಹೆಣಗಾಡುವಂತಾಗಿದೆ. ಬೆಂಗಳೂರಿನ ಕೋರಮಂಗಲದ ಪಬ್, ಬಾರ್​ಗಳು ಎಷ್ಟು ಸೇಫ್ ಅನ್ನೋದ್ರ ಬಗ್ಗೆ ಟಿವಿ9 ರಿಯಾಲಿಟಿ ಚೆಕ್ ನಡೆಸಿದೆ.

ಬೆಂಗಳೂರಿನಲ್ಲಷ್ಟೇ ಅಲ್ಲ, ರಾಜ್ಯದ ಮೂಲೆ ಮೂಲೆಯಲ್ಲೂ ಹೊಸ ವರ್ಷಾಚರಣೆ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಡ್ರಗ್ಸ್ ಪಾರ್ಟಿ ಆಯೋಜನೆಗೆ ಸಿದ್ಧತೆ ಮಾಡಿಕೊಂಡ ಶಂಕೆ ಹಿನ್ನೆಲೆ, ಐವರು ಲಾಕ್ ಆಗಿದ್ದಾರೆ. ಇನ್ನು, ಚಿಕ್ಕಬಳ್ಳಾಪುರದ ಸ್ಕಂದಗಿರಿ, ಕೈವಾರ ಬೆಟ್ಟಗಳ ಚಾರಣಕ್ಕೂ ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ನಿರ್ಬಂಧ ಹೇರಿದೆ.

ವರದಿ: ಬ್ಯೂರೋ ರಿಪೋರ್ಟ್, ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

21 ದಿನಗಳ ಅವಧಿಗೆ ವಿಶೇಷ ಅಧಿಕಾರ ವಹಿಸಿಕೊಂಡ ಲಸಿತ್ ಮಾಲಿಂಗ – Kannada News | Lasith Malinga Appointed SriLanka Fast Bowling Consultant for 2026 T20 World Cup Prep

2026 ರ ಟಿ 20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಆಯೋಜಿಸಲಿದ್ದು, ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಏತನ್ಮಧ್ಯೆ, ಶ್ರೀಲಂಕಾದ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಆದಾಗ್ಯೂ, ಅವರ ಈ ಅಧಿಕಾರಾವಧಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ.

Source link

8ನೇ ವೇತನ ಆಯೋಗ; ಜನವರಿ 1ರಿಂದ ಯಾರಿಗೆಲ್ಲ ಸಂಬಳ ಹೆಚ್ಚಾಗಲಿದೆ? – Kannada News | 8th Pay Commission Who will get the maximum salary hike after 2026 January 1

ನವದೆಹಲಿ, ಡಿಸೆಂಬರ್ 30: ಇನ್ನೇನು ಹೊಸ ವರ್ಷದ (New Year 2026) ಆರಂಭಕ್ಕೆ ಒಂದೇ ದಿನ ಉಳಿದಿದೆ. 2026ರ ಆರಂಭದೊಂದಿಗೆ 8ನೇ ವೇತನ ಆಯೋಗವು (8th Pay Commission) ಜನವರಿ 1ರಿಂದ ಜಾರಿಗೆ ಬರಲಿದೆ ಎನ್ನಲಾಗಿದೆ. ಹೀಗಾಗಿ ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರು ಸಂಬಳ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಪ್ರಸ್ತುತ ಸಿಪಿಸಿ, 7ನೇ ವೇತನ ಆಯೋಗದ ಸಿಂಧುತ್ವವು ಡಿಸೆಂಬರ್ 31ರಂದು ಮುಕ್ತಾಯಗೊಳ್ಳುತ್ತದೆ. ಜನವರಿ 1ರಿಂದ 8ನೇ ವೇತನ ಆಯೋಗದ ಇನ್ನೂ ಘೋಷಿಸದ ನಿಬಂಧನೆಗಳು ಜಾರಿಗೆ ಬರುತ್ತವೆ.

ಈ ವರ್ಷದ ಜನವರಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು 8ನೇ ವೇತನ ಆಯೋಗವನ್ನು ಘೋಷಿಸಿತು. ಅದಾದ ತಿಂಗಳುಗಳ ನಂತರ ಸಿಪಿಸಿಯ ಸದಸ್ಯರನ್ನು ಘೋಷಿಸಲಾಯಿತು. ಈಗ ನಡೆಯುತ್ತಿರುವ 8ನೇ ವೇತನ ಆಯೋಗದ ಬಗ್ಗೆ ದೊಡ್ಡ ಚರ್ಚೆಗಳು ವೇತನ ಹೆಚ್ಚಳ ಮತ್ತು ಫಿಟ್‌ಮೆಂಟ್ ಅಂಶಕ್ಕೆ ಸಂಬಂಧಿಸಿವೆ. ಫಿಟ್​​ಮೆಂಟ್ ಆಧಾರದ ಮೇಲೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪಾವತಿಯನ್ನು ನಿರ್ಧರಿಸಲಾಗುತ್ತದೆ. 7ನೇ ವೇತನ ಆಯೋಗದ ಅಡಿಯಲ್ಲಿ ಫಿಟ್‌ಮೆಂಟ್ ಅಂಶವು 2.57 ಆಗಿದೆ.

8ನೇ ವೇತನ ಆಯೋಗದ ವೇತನ ಹೆಚ್ಚಳವನ್ನು ಯಾವಾಗ ಘೋಷಿಸಲಾಗುತ್ತದೆ ಎಂಬುದರ ಕುರಿತು ಸ್ಪಷ್ಟತೆ ಇಲ್ಲ. ಆದರೆ, ಮೂಲಗಳ ಪ್ರಕಾರ ಹೊಸ ವರ್ಷದಿಂದಲೇ ಇದು ಜಾರಿಗೆ ಬರುವ ಸಾಧ್ಯತೆಯಿದೆ. 8ನೇ ವೇತನ ಆಯೋಗದ ವೇತನ ಹೆಚ್ಚಳವನ್ನು ಫಿಟ್‌ಮೆಂಟ್ ಅಂಶದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಸಿಪಿಸಿಯ ಸದಸ್ಯರು ಫಿಟ್‌ಮೆಂಟ್ ಅಂಶವನ್ನು ಸೂಚಿಸುತ್ತಾರೆ. ಇದು ಸಿಪಿಸಿ ಹೊಸ ಮೂಲ ವೇತನವನ್ನು ಲೆಕ್ಕಾಚಾರ ಮಾಡಲು ಬಳಸುವ ಗುಣಕವಾಗಿದೆ. ಫಿಟ್‌ಮೆಂಟ್ ಅಂಶವನ್ನು ನಿರ್ಧರಿಸಲು 8ನೇ ವೇತನ ಆಯೋಗವು ಹಣದುಬ್ಬರ ಸೇರಿದಂತೆ ಹಲವಾರು ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: SBI PO Salary: 8ನೇ ವೇತನ ಆಯೋಗದ ಪ್ರಕಾರ ಎಷ್ಟಾಗಲಿದೆ SBI ನ ಪಿಓಗಳ ಸಂಬಳ?

8ನೇ ವೇತನ ಆಯೋಗ ಜಾರಿಗೆ ಬಂದ ನಂತರ ಎಲ್ಲಾ ಸರ್ಕಾರಿ ಉದ್ಯೋಗಿಗಳು ಮತ್ತು ಪಿಂಚಣಿದಾರರ ಮೂಲ ವೇತನವು ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಅವರ ವೇತನ ಮಟ್ಟವನ್ನು ಅವಲಂಬಿಸಿ ಇದು ಉದ್ಯೋಗಿಯಿಂದ ಉದ್ಯೋಗಿಗೆ ಭಿನ್ನವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದರಂತೆ, ಕ್ಯಾಬಿನೆಟ್ ಕಾರ್ಯದರ್ಶಿಯಂತಹ ಉನ್ನತ ಅಧಿಕಾರಿಗಳನ್ನು ಒಳಗೊಂಡ 18ನೇ ಹಂತದ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗದ ಜಾರಿಯಿಂದ ಅತಿ ಹೆಚ್ಚು ವೇತನ ಹೆಚ್ಚಳವಾಗಲಿದೆ.

ಎಕ್ಸ್​ನಲ್ಲಿ 8ನೇ ವೇತನ ಆಯೋಗದ ಜಾರಿಯಿಂದ ಆಗುವ ಸಂಬಳದ ಹೆಚ್ಚಳದ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಇದು ಜಾರಿಯಾದ ಬಳಿಕ ಪೊಲೀಸ್​ ಕಾನ್​ಸ್ಟೆಬಲ್​ಗೂ ಸಾಫ್ಟ್​ವೇರ್ ಇಂಜಿನಿಯರ್​​ ಸಮವಾಗಿ ಸಂಬಳ ಸಿಗಲಿದೆ ಎನ್ನಲಾಗಿದೆ.

8ನೇ ವೇತನ ಆಯೋಗದ ಅಧಿಕೃತ ಘೋಷಣೆಯ ನಂತರವೇ ನೌಕರರಿಗೆ ವೇತನ ದೊರೆಯುತ್ತದೆಯಾದರೂ, ಜನವರಿಯಿಂದ ಬಾಕಿ ಸಂಗ್ರಹವಾಗಲು ಪ್ರಾರಂಭವಾಗುತ್ತದೆ. 8ನೇ ವೇತನ ಆಯೋಗದ ನಿಬಂಧನೆಗಳನ್ನು ಘೋಷಿಸಿದ ನಂತರ ಅವುಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗಿಗಳಿಗೆ ಖುಷಿ ಸುದ್ದಿ; 8ನೇ ವೇತನ ಆಯೋಗ ಜಾರಿಯಾದರೆ ಶೇ. 34ರಷ್ಟು ಸಂಬಳ ಹೆಚ್ಚಳ?

ಸಿಪಿಸಿ ಸದಸ್ಯರು ಸೂಚಿಸುವ ಫಿಟ್‌ಮೆಂಟ್ ಅಂಶದ ಆಧಾರದ ಮೇಲೆ 8ನೇ ವೇತನ ಆಯೋಗದ ವೇತನ ಹೆಚ್ಚಳವನ್ನು ನಿರ್ಧರಿಸಲಾಗುತ್ತದೆ. ಈ ಫಿಟ್‌ಮೆಂಟ್ ಅಂಶವನ್ನು 2.15ನಲ್ಲಿ ಇರಿಸಿದರೆ ಅವರ ಮೂಲ ವೇತನ ಎಷ್ಟು ಹೆಚ್ಚಾಗುತ್ತದೆ ಎಂಬುದರ ಲೆಕ್ಕಾಚಾರ ಇಲ್ಲಿದೆ.

ಹಂತ 1 – ಪ್ರಸ್ತುತ ಸಂಬಳ: 18,000 ರೂ.; ಹೆಚ್ಚಿದ ಸಂಬಳ: 38,700 ರೂ.

ಹಂತ 5 – ಪ್ರಸ್ತುತ ಸಂಬಳ: 29,200 ರೂ.; ಹೆಚ್ಚಿದ ಸಂಬಳ: 62,780 ರೂ.

ಹಂತ 10 – ಪ್ರಸ್ತುತ ಸಂಬಳ: 56,100 ರೂ.; ಹೆಚ್ಚಿದ ಸಂಬಳ: 1,20,615 ರೂ.

ಹಂತ 15 – ಪ್ರಸ್ತುತ ಸಂಬಳ: 1,82,200 ರೂ.; ಹೆಚ್ಚಿದ ಸಂಬಳ: 3,91,730 ರೂ.

ಹಂತ 18 – ಪ್ರಸ್ತುತ ಸಂಬಳ: 2,50,000 ರೂ.; ಹೆಚ್ಚಿದ ಸಂಬಳ: 5,37,500 ರೂ.

ವೇತನ ಆಯೋಗವು ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತರ ವೇತನ ರಚನೆ, ಪಿಂಚಣಿಗಳು ಮತ್ತು ಭತ್ಯೆಗಳನ್ನು ಪರಿಶೀಲಿಸುತ್ತದೆ ಮತ್ತು ಪರಿಷ್ಕರಿಸುತ್ತದೆ. 8ನೇ ವೇತನ ಆಯೋಗದ ಜಾರಿಯಿಂದ ಕ್ಯಾಬಿನೆಟ್ ಕಾರ್ಯದರ್ಶಿಯಂತಹ ಉನ್ನತ ಅಧಿಕಾರಿಗಳನ್ನು ಒಳಗೊಂಡಂತೆ ಹಂತ 18ರ ಸರ್ಕಾರಿ ನೌಕರರು ಅತಿಯಾದ ವೇತನದ ಹೆಚ್ಚಳವನ್ನು ಪಡೆಯಲಿದ್ದಾರೆ. ಹಾಗಂತ ಇದು ಅಧಿಕೃತ ಘೋಷಣೆಯಲ್ಲ. ಇದೊಂದು ಅಂದಾಜಿನ ಲೆಕ್ಕಾಚಾರವಷ್ಟೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಿಂದಿ ಚಿತ್ರರಂಗಕ್ಕೆ ಹೊಸ ಡಾನ್ ಆಗ್ತಾರಾ ಹೃತಿಕ್ ರೋಷನ್? – Kannada News | Farhan Akhtar reportedly in talks with Hrithik Roshan for Don 3 after Ranveer Singh exit

ಈ ಮೊದಲು ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಅವರು ಡಾನ್ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು. ಆ ಬಳಿಕ ಡಾನ್ ಆಗುವ ಅವಕಾಶ ರಣವೀರ್ ಸಿಂಗ್ (Ranveer Singh) ಅವರಿಗೆ ಸಿಕ್ಕಿತ್ತು. ಆದರೆ ಅವರು ಡಾನ್ ಆಗಲು ಮನಸ್ಸು ಮಾಡುತ್ತಿಲ್ಲ. ಹಾಗಾಗಿ ಹೃತಿಕ್ ರೋಷನ್ (Hrithik Roshan) ಅವರು ಮುಂದಿನ ಡಾನ್ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಕೇಳಿ ಹೃತಿಕ್ ರೋಷನ್ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ‘ಡಾನ್ 3’ (Don 3) ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಹೊರಬೀಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಡಾನ್ 3’ ಸಿನಿಮಾಗೆ ಫರ್ಹಾನ್ ಅಖ್ತರ್ ಅವರು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ರಣವೀರ್ ಸಿಂಗ್ ಹೀರೋ ಎಂದು ಘೋಷಿಸಲಾಗಿತ್ತು. ಆದರೆ ‘ಧುರಂಧರ್’ ಸಿನಿಮಾದ ಸೂಪರ್ ಸಕ್ಸಸ್ ನಂತರ ರಣವೀರ್ ಸಿಂಗ್ ಅವರು ‘ಡಾನ್ 3’ ಸಿನಿಮಾದಲ್ಲಿ ನಟಿಸಲು ಹಿಂದೇಟು ಹಾಕಿದರು. ‘ಧುರಂಧರ್’ ರೀತಿಯ ಸಿನಿಮಾ ಮಾಡಿದ ಬಳಿಕ ಮತ್ತೆ ಡಾನ್ ಪಾತ್ರ ಮಾಡುವುದು ಅವರಿಗೆ ಸರಿ ಎನಿಸಲಿಲ್ಲ.

ಹಾಗಾದರೆ ಡಾನ್ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡುವುದು ಎಂದು ನಿರ್ದೇಶಕ ಫರ್ಹಾನ್ ಅಖ್ತರ್ ಅವರು ತಲೆ ಕೆಡಿಸಿಕೊಂಡಿದ್ದಾರೆ. ಹೃತಿಕ್ ರೋಷನ್ ಜೊತೆ ಫರ್ಹಾನ್ ಅಖ್ತರ್ ಅವರು ಬಹುಕಾಲದ ಸ್ನೇಹ ಹೊಂದಿದ್ದಾರೆ. ಈ ಮೊದಲು ಕೂಡ ಅವರಿಬ್ಬರು ಜೊತೆಯಾಗಿ ಸಿನಿಮಾ ಮಾಡಿದ್ದಾರೆ. ಆ ಕಾರಣದಿಂದಲೇ ಹೃತಿಕ್ ರೋಷನ್ ಅವರು ಡಾನ್ ಪಾತ್ರವನ್ನು ಒಪ್ಪಿಕೊಳ್ಳುವ ಸಾಧ್ಯತೆ ಇದೆ.

ಸದ್ಯಕ್ಕೆ ‘ಡಾನ್ 3’ ಸಿನಿಮಾ ಕುರಿತು ಮಾತುಕಥೆ ಆರಂಭಿಕ ಹಂತದಲ್ಲಿ ಇದೆ. ಅಂತಿಮವಾಗಿ ಹೃತಿಕ್ ರೋಷನ್ ಅವರು ಒಪ್ಪಿಕೊಳ್ಳುತ್ತಾರಾ ಅಥವಾ ಇಲ್ಲವಾ ಎಂಬುದನ್ನು ಕಾದು ನೋಡಬೇಕಿದೆ. ‘ಡಾನ್ 2’ ಸಿನಿಮಾದಲ್ಲಿ ಹೃತಿಕ್ ರೋಷನ್ ಅವರು ಅತಿಥಿ ಪಾತ್ರ ಮಾಡಿದ್ದರು. ಈಗ ಡಾನ್ ಪಾತ್ರ ಮಾಡಲು ಅವರೇ ಸೂಕ್ತ ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ‘ಧುರಂದರ್’ ಸಿನಿಮಾದ ‘ರಾಜಕೀಯ’ದ ಬಗ್ಗೆ ಹೃತಿಕ್ ರೋಷನ್ ಅಸಮಾಧಾನ

2023ರ ಆಗಸ್ಟ್ ತಿಂಗಳಲ್ಲಿ ‘ಡಾನ್ 3’ ಸಿನಿಮಾಗೆ ರಣವೀರ್ ಸಿಂಗ್ ಹೀರೋ ಎಂದು ಘೋಷಿಸಲಾಗಿತ್ತು. ಆಗ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಅವರು ಮಾಡಿದ್ದ ಡಾನ್ ಪಾತ್ರವನ್ನು ಈಗ ರಣವೀರ್ ಸಿಂಗ್ ಸರಿಯಾಗಿ ನಿಭಾಯಿಸುತ್ತಾರಾ ಎಂಬ ಅನುಮಾನ ಎದುರಾಗಿತ್ತು. ಕಡೆಗೂ ಅವರು ಡಾನ್ ಪಾತ್ರವನ್ನು ಬಿಟ್ಟುಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೊಸ ವರ್ಷಕ್ಕೆ ಆನ್‌ಲೈನ್ ಆಹಾರ ವಿತರಕರಿಗೆ ಭರ್ಜರಿ ಬಿಸಿನೆಸ್ ನಿರೀಕ್ಷೆ, ಆದರೆ ಡೆಲಿವರಿ ಬಾಯ್ಸ್​​ಗೆ ಸಂಕಷ್ಟ! – Kannada News | Delivery Challenges in Bengaluru: High Traffic, Strict Timelines, and Low Pay Plague Riders

ಬೆಂಗಳೂರು, ಡಿ.30: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಆನ್‌ಲೈನ್ ಆಹಾರ ವಿತರಣೆ  ಭರ್ಜರಿ ಬಿಸಿನೆಸ್ ನಡೆಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಆದರೆ, ಈ ಅವಧಿಯಲ್ಲಿ ಆಹಾರ ತಲುಪಿಸುವ ಡೆಲಿವರಿ ಬಾಯ್‌ಗಳ ಸಂಕಷ್ಟಗಳು ಹೆಚ್ಚಾಗುತ್ತಿವೆ. ವಿತರಣಾ ಕಂಪನಿಗಳು ಗ್ರಾಹಕರಿಗೆ ತ್ವರಿತ ವಿತರಣೆಯ ಭರವಸೆ ನೀಡುವುದರಿಂದ, ಡೆಲಿವರಿ ಬಾಯ್‌ಗಳು ಕಠಿಣ ಸಮಯ ಮಿತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಇದೀಗ ಹೊಸ ವರ್ಷಕ್ಕೂ ಮುನ್ನವೇ ಹೆಚ್ಚು ಹೆಚ್ಚು ಫುಡ್​​​ ಆರ್ಡರ್ ಮಾಡಲು ಶುರುವಾಗಿದೆ.​​​​​​  ಬೆಂಗಳೂರಿನಲ್ಲಿ ವಿಪರೀತ ಸಂಚಾರ ದಟ್ಟಣೆ ಮತ್ತು ಹದಗೆಟ್ಟ ರಸ್ತೆಗಳಿಂದಾಗಿ ನಿಗದಿತ ಸಮಯಕ್ಕೆ ಆಹಾರ ತಲುಪಿಸುವುದು ಅವರಿಗೆ ಅಸಾಧ್ಯವಾಗಿದೆ. 10-20 ನಿಮಿಷಗಳಲ್ಲಿ ಡೆಲಿವರಿ ಆಗಲ್ಲ, ರೆಸ್ಟೋರೆಂಟ್‌ಗಳಲ್ಲಿ ಕಾಯಬೇಕು, ಆದರೂ ಗ್ರಾಹಕರು ಬೇಗ ಬನ್ನಿ ಎಂದು ಒತ್ತಾಯಿಸುತ್ತಾರೆ ಎಂದು ಡೆಲಿವರಿ ಬಾಯ್‌ಗಳು ಹೇಳುತ್ತಾರೆ. ಕಡಿಮೆ ವೇತನಕ್ಕೆ ಹೆಚ್ಚು ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಗ್ರಾಹಕರು ಮತ್ತು ರೆಸ್ಟೋರೆಂಟ್‌ಗಳಿಂದ ತಡವಾದರೆ, ಡೆಲಿವರಿ ಬಾಯ್‌ಗಳೇ ಬೈಸಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಪೊಲೀಸರ ರಸ್ತೆ ನಿಯಂತ್ರಣಗಳು ಮತ್ತು ಪಾರ್ಕಿಂಗ್ ಸಮಸ್ಯೆಗಳಿಂದಾಗಿ ರೆಸ್ಟೋರೆಂಟ್‌ಗಳಿಗೂ ವ್ಯಾಪಾರದಲ್ಲಿ ಹಿನ್ನಡೆಯಾಗಿದೆ. ಈ ಎಲ್ಲಾ ಅಂಶಗಳು ಡೆಲಿವರಿ ಬಾಯ್‌ಗಳ ಬದುಕನ್ನು ಮತ್ತಷ್ಟು ದುಸ್ತರಗೊಳಿಸಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೋದಿ 2025ರ ಸುಧಾರಣೆಗಳು: GST, ಉದ್ಯೋಗ, ಶಿಕ್ಷಣ ಕ್ಷೇತ್ರದ ಪ್ರಮುಖ ಬದಲಾವಣೆಗಳು – Kannada News | PM Modi’s 2025 Vision: India’s Major Reforms in GST, Jobs & Education

2025ರ ವರ್ಷದಲ್ಲಿ ಭಾರತದಲ್ಲಿ ಬಹಳ ವ್ಯಾಪಕವಾದ ಮತ್ತು ದೊಡ್ಡದೊಡ್ಡ ಸುಧಾರಣೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೆಯೇ ತಮ್ಮ ಲಿಂಕ್ಡ್​ಇನ್​ನಲ್ಲಿ ಒಂದು ಬ್ಲಾಗ್ ಬರೆದಿದ್ದು, 2025ರಲ್ಲಿ ಸರ್ಕಾರ ಕೈಗೊಂಡ ವಿವಿಧ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾರತವು ಸುಧಾರಣೆ ಎಕ್ಸ್​ಪ್ರೆಸ್ ಗಾಡಿ ಹತ್ತಿದೆ. ಈ ದೇಶದ ಜನರೇ ಈ ಎಕ್ಸ್​ಪ್ರೆಸ್​ನ ಎಂಜಿನ್ ಎಂದು ಪ್ರಧಾನಿಗಳು ವ್ಯಾಖ್ಯಾನಿಸಿದ್ದಾರೆ. ಅವರು ಈ ವರ್ಷ ಜಾರಿಯಾದ ಕೆಲ ಸುಧಾರಣೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಜಿಎಸ್​ಟಿ ಸುಧಾರಣೆ, ಆದಾಯ ತೆರಿಗೆ ಇಳಿಕೆ, ಸಣ್ಣ ಉದ್ದಿಮೆಗಳಿಗೆ ರಿಲೀಫ್, ಇನ್ಷೂರೆನ್ಸ್ ಸೆಕ್ಟರ್​ಗೆ ಎಫ್​ಡಿಐ, ಸೆಕ್ಯೂರಿಟೀಸ್ ಮಾರ್ಕೆಟ್ ಸುಧಾರಣೆ, ಸಮುದ್ರ ಆರ್ಥಿಕತೆ ಸುಧಾರಣೆ, ಜನ್ ವಿಶ್ವಾಸ್, ಸುಲಭ ಉದ್ಯಮ ವಾತಾವರಣ, ಕಾರ್ಮಿಕ ಸುಧಾರಣೆ, ವ್ಯಾಪಾರ ಮಾರುಕಟ್ಟೆ ವೃದ್ಧಿ, ಪರಮಾಣ ಶಕ್ತಿ ಸುಧಾರಣೆ, ಗ್ರಾಮೀಣ ಉದ್ಯೋಗ ಖಾತ್ರಿ ಸುಧಾರಣೆ, ಶಿಕ್ಷಣ ಸುಧಾರಣೆ, ಇವುಗಳನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಲೇಖನದಲ್ಲಿ ಪ್ರಸ್ತಾಪಿಸಿದ್ದಾರೆ.

ಜಿಎಸ್​ಟಿ ಸುಧಾರಣೆ

ಶೇ. 5, ಶೇ. 12, ಶೇ. 18 ಮತ್ತು ಶೇ. 28, ಹೀಗೆ ನಾಲ್ಕು ಇದ್ದ ಜಿಎಸ್​ಟಿ ಸ್ಲ್ಯಾಬ್​ಗಳನ್ನು ಎರಡಕ್ಕೆ ಇಳಿಸಲಾಗಿದೆ. ಶೇ. 5 ಮತ್ತು ಶೇ. 18 ಟ್ಯಾಕ್ಸ್ ಸ್ಲ್ಯಾಬ್ ಮಾತ್ರವೇ ಇರುವುದು. ಶೇ. 12 ಮತ್ತು ಶೇ. 28 ಟ್ಯಾಕ್ಸ್ ಸ್ಲ್ಯಾಬ್​ಗಳನ್ನು ರದ್ದು ಮಾಡಲಾಗಿದೆ. ನರೇಂದ್ರ ಮೋದಿ ಅವರು ಈ ಕ್ರಮದಿಂದ ಗ್ರಾಹಕರ ಉತ್ಸಾಹ ಹೆಚ್ಚಿಸಲು ಸಹಾಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೆಕ್ಯೂರಿಟೀಸ್ ಮಾರ್ಕೆಟ್ ರಿಫಾರ್ಮ್

ಸೆಕ್ಯೂರಿಟೀಸ್ ಮಾರ್ಕೆಟ್ ಕೋಡ್ ಬಿಲ್ ಅನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸೆಬಿ ಆಡಳಿತ ನಿಯಮಗಳನ್ನು ಇದು ಸುಧಾರಿಸುತ್ತದೆ. ಹೂಡಿಕೆದಾರರಿಗೆ ಹೆಚ್ಚಿನ ಭದ್ರತೆ, ಕಟ್ಟುಪಾಡು ಸಡಿಲಿಕೆಗೆ ನೆರವಾಗುತ್ತದೆ. ತಂತ್ರಜ್ಞಾನ ಶಕ್ತ ಮಾರುಕಟ್ಟೆಯನ್ನು ಬಲಗೊಳಿಸುತ್ತದೆ ಎಂದು ಲಿಂಕ್ಡ್​ಇನ್ ಪೋಸ್ಟ್​ನಲ್ಲಿ ನರೇಂದ್ರ ಮೋದಿ ಬರೆದಿದ್ದಾರೆ.

ಇದನ್ನೂ ಓದಿ: ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು

ಸಾಗರ ಆರ್ಥಿಕತೆಯ ಸುಧಾರಣೆಗಳು…

ಈ ವರ್ಷ ಮುಂಗಾರು ಅಧಿವೇಶನದಲ್ಲಿ ಲೇಡಿಂಗ್ ಆ್ಯಕ್ಟ್, ಸಮುದ್ರ ಮೂಲಕ ಸರಕು ಸಾಗಣೆ ಮಸೂದೆ, ಕರಾವಳಿ ಸಾಗಣೆ ಮಸೂದೆ, ವ್ಯಾಪಾರಿ ಸಾಗಣೆ ಮಸೂದೆ ಮತ್ತು ಭಾರತೀಯ ಬಂದರುಗಳ ಮಸೂದೆ, ಹೀಗೆ ಒಂದೇ ಅಧಿವೇಶನದಲ್ಲಿ ಸಮುದ್ರ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಲ್ಲ ಐದು ಬಿಲ್​ಗಳನ್ನು ಮಂಡಿಸಲಾಗಿದೆ. ಹಲವಾರು ದಶಕಗಳ ಹಿಂದಿನ ಕಾಯ್ದೆಗಳಿಗೆ ಸುಧಾರಣೆಗಳನ್ನು ತರಲಾಗಿದೆ.

ಸುಗಮ ವ್ಯಾಪಾರ ವಾತಾವರಣ

ಉದ್ದಿಮೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ಹಲವು ಉತ್ಪನ್ನಗಳಿಗೆ ಕ್ಯುಸಿಒಗಳನ್ನು (ಕ್ವಾಲಿಟಿ ಕಂಟ್ರೋಲ್ ಆರ್ಡರ್) ಹಿಂಪಡೆದಿದೆ. ಸಿಂತೆಟಿಕ್ ಫೈಬರ್, ಯಾರ್ನ್, ಪ್ಲಾಸ್ಟಿಕ್, ಪಾಲಿಮರ್, ಸ್ಟೀಲ್, ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಇತ್ಯಾದಿ ವಿವಿಧ ಕೆಟಗರಿಗಳಲ್ಲಿನ 70ಕ್ಕೂ ಹೆಚ್ಚು ಕ್ಯುಸಿಒಗಳನ್ನು ಕೈಬಿಡಲಾಗಿದೆ. ಇದರಿಂದ ಪಾದರಕ್ಷೆ, ವಾಹನ ಇತ್ಯಾದಿ ಹಲವು ಸೆಕ್ಟರ್​ಗಳಲ್ಲಿ ಉತ್ಪಾದನಾ ವೆಚ್ಚ ಕಡಿಮೆ ಆಗುತ್ತದೆ, ರಫ್ತು ಬೆಲೆ ಹೆಚ್ಚು ಸ್ಪರ್ಧಾತ್ಮಕವಾಗುತ್ತದೆ.

ಭಾರತೀಯ ಉತ್ಪನ್ನಗಳಿಗೆ ಜಾಗತಿಕವಾಗಿ ಹೆಚ್ಚು ಮಾರುಕಟ್ಟೆ

2025ರಲ್ಲಿ ನ್ಯೂಜಿಲ್ಯಾಂಡ್, ಓಮನ್ ಮತ್ತು ಬ್ರಿಟನ್ ಜೊತೆ ಭಾರತ ಟ್ರೇಡ್ ಡೀಲ್ ಮಾಡಿಕೊಂಡಿದೆ. ಇದರಿಂದ ಭಾರತದ ಹಲವು ಉತ್ಪನ್ನಗಳಿಗೆ ಈ ದೇಶಗಳು ಆಮದು ಸುಂಕವನ್ನು ರದ್ದು ಮಾಡಬಹುದು, ಅಥವಾ ಕಡಿಮೆ ಮಾಡಬಹುದು. ಇದರಿಂದ ಹೆಚ್ಚಿನ ಮಾರುಕಟ್ಟೆ ಪ್ರವೇಶ ಸಿಗುತ್ತದೆ. ಸ್ವಿಟ್ಜರ್​ಲ್ಯಾಂಡ್, ನಾರ್ವೆ, ಐಸ್​ಲ್ಯಾಂಡ್ ಮತ್ತು ಲೀಕ್ಟನ್​ಸ್ಟೀನ್ ದೇಶಗಳಿರುವ ಯೂರೋಪಿಯನ್ ಫ್ರೀ ಟ್ರೇಡ್ ಅಸೋಸಿಯೇಶನ್ ಜೊತೆಗೂ ಭಾರತ ಎಫ್​ಟಿಎ ಮಾಡಿಕೊಂಡಿದೆ.

ಇದನ್ನೂ ಓದಿ: ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ

ಗ್ರಾಮೀಣ ಉದ್ಯೋಗ ಖಾತ್ರಿಯಲ್ಲಿ ಸುಧಾರಣೆ

ಸರ್ಕಾರವು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಹೊಸ ಸ್ವರೂಪ ಕೊಟ್ಟಿದೆ. ವಿಕಸಿತ ಭಾರತ ಜಿ ರಾಮ್ ಜಿ ಕಾಯ್ದೆ ಜಾರಿಗೆ ತರುತ್ತಿದೆ. ಮನ್ರೇಗಾ ಬದಲು ಈ ಹೊಸ ಕಾಯ್ದೆ ಬರುತ್ತದೆ. ವರ್ಷಕ್ಕೆ ಖಾತ್ರಿ ಉದ್ಯೋಗ ಕೊಡಲಾಗುವ ದಿನಗಳ ಸಂಖ್ಯೆಯನ್ನು 100ರಿಂದ 125ಕ್ಕೆ ಹೆಚ್ಚಿಸಲಾಗಿರುವುದು ಸೇರಿದಂತೆ ಕೆಲ ಮಹತ್ವದ ಸುಧಾರಣೆಗಳನ್ನು ತರಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಆದಾಯ ಹರಿವು ಸಿಗಲು ಅವಕಾಶ ಇರುತ್ತದೆ.

ಶಿಕ್ಷಣ ಸುಧಾರಣೆಗಳು

ಸಂಸತ್​ನಲ್ಲಿ ವಿಕಸಿತ ಭಾರತ ಶಿಕ್ಷಾ ಅಧಿಸ್ಥಾನ್ ಮಸೂದೆಯನ್ನು ಮಂಡಿಸಲಾಗಿದೆ. ಇದು ಕಾಯ್ದೆಯಾದರೆ, ಏಕೀಕೃತ ಉನ್ನತ ಶಿಕ್ಷಣ ನಿಯಂತ್ರಕ ಸಂಸ್ಥೆ ಸ್​ಥಾಪಿತವಾಗುತ್ತದೆ. ಯುಜಿಸಿ, ಎಐಸಿಟಿಇ, ಎನ್​ಸಿಟಿಇ ಇತ್ಯಾದಿ ವಿವಿಧ ರೆಗ್ಯುಲೇಟರಿ ಸಂಸ್ಥೆಗಳ ಬದಲು ಒಂದೇ ಸಂಸ್ಥೆಯು ನಿಯಂತ್ರಕವಾಗಿ ಇರುತ್ತದೆ.

ಲಿಂಕ್ಡ್​ಇನ್ ಲೇಖನ ಇರುವ ನರೇಂದ್ರ ಮೋದಿ ಅವರ ಎಕ್ಸ್ ಪೋಸ್ಟ್

(ಮಾಹಿತಿ ಆಧಾರ: ಲಿಂಕ್ಡ್​ಇನ್​ನಲ್ಲಿ ಪ್ರಧಾನಿ ಮೋದಿ ಅವರ ಲೇಖನ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು – Kannada News | Darling Krishna talks about his upcoming movie Father

ಡಾರ್ಲಿಂಗ್ ಕೃಷ್ಣ (Darling Krishna) ಕಳೆದ ಕೆಲ ವರ್ಷಗಳಿಂದ ಗಮನ ಸೆಳೆಯುವ ಸಿನಿಮಾಗಳನ್ನು ಮಾಡುತ್ತಾ ಬರುತ್ತಿದ್ದಾರೆ. ‘ಕೌಸಲ್ಯ ಸುಪ್ರಬಾ ರಾಮ’, ‘ಬ್ರಾಟ್’ ಇನ್ನೂ ಕೆಲ ಒಳ್ಳೆಯ ಸಿನಿಮಾಗಳನ್ನು ಡಾರ್ಲಿಂಗ್ ಕೃಷ್ಣ ಮಾಡುತ್ತಾ ಬರುತ್ತಿದ್ದಾರೆ. ಇದೀಗ ‘ಫಾದರ್’ ಹೆಸರಿನ ಭಿನ್ನ ರೀತಿಯ ಸಿನಿಮಾನಲ್ಲಿ ನಟಿಸಿದ್ದಾರೆ. ಪ್ರಕಾಶ್ ರೈ ಅವರು ಸಿನಿಮಾನಲ್ಲಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಫಾದರ್’ ಸಿನಿಮಾ ಬಹಳ ಭಿನ್ನವಾದ ಆದರೆ ಮನಸ್ಸಿಗೆ ತಾಗುವ ಸಿನಿಮಾ, ಬಹಳ ವರ್ಷಗಳ ಕಾಲ ಈ ಸಿನಿಮಾ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯಲಿದೆ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Bhagavad Gita: ಭಗವದ್ಗೀತೆಯನ್ನು ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | Bhagavad Gita: Do you know how many benefits there are from reading the Bhagavad Gita?

ಶ್ರೀಮದ್ ಭಗವದ್ಗೀತೆ (Bhagavad Gita) ಹಿಂದೂ ಧರ್ಮದ ಪವಿತ್ರ ಗ್ರಂಥವಾಗಿದೆ. 18 ಅಧ್ಯಾಯಗಳು ಮತ್ತು 700 ಶ್ಲೋಕಗಳನ್ನು ಒಳಗೊಂಡಿರುವ ಭಗವದ್ಗೀತೆ  ಅಪಾರ ಮಹತ್ವವನ್ನು ಹೊಂದಿದೆ. ಈ ಪ್ರತಿ ಅಧ್ಯಾಯಗಳು ಆತ್ಮ, ಪರಮಾತ್ಮ, ಭಕ್ತಿ, ಕರ್ಮ ಮತ್ತು ಜೀವನದ ಸಾರವನ್ನು ಒಳಗೊಂಡಿದೆ. ಇಂತಹ ಪವಿತ್ರ ಭಗವದ್ಗೀತೆ ಕೇವಲ ಧಾರ್ಮಿಕ ಗ್ರಂಥವಲ್ಲ ನಮ್ಮ ಜೀವನಕ್ಕೆ ಮಾರ್ಗಸೂಚಿಯಿದ್ದಂತೆ. ಹೌದು ಪ್ರತಿನಿತ್ಯ ಗೀತೆಯನ್ನು ಓದುವ ಮೂಲಕ ಯಶಸ್ವಿ, ಸಂತೋಷದಾಯಕ ಜೀವನವನ್ನು ಹೇಗೆ ನಡೆಸುವುದು ಎಂಬುದನ್ನು ಕಲಿಯುವುದರ ಜೊತೆಗೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಈ ಲೇಖನದಲ್ಲಿ ಭಗವದ್ಗೀತೆಯನ್ನು ಓದುವುದರಿಂದ ಲಭಿಸುವ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.

ಭಗವದ್ಗೀತೆಯನ್ನು ಓದುವುದರಿಂದ ಲಭಿಸುವ ಪ್ರಯೋಜನಗಳು:

ಮಾನಸಿಕ ಶಾಂತಿ ಮತ್ತು ನಿಯಂತ್ರಣ: ಪ್ರತಿದಿನ ಗೀತೆಯನ್ನು ಪಠಿಸುವುದರಿಂದ ಮಾನಸಿಕ ಶಾಂತಿ ಮತ್ತು ಸಂಯಮವನ್ನು ಕಾಪಾಡಿಕೊಳ್ಳಬಹುದು. ಹಾಗೂ ಜೀವನವು ಎಷ್ಟೇ ಸವಾಲುಗಳನ್ನು ಒಡ್ಡಿದರೂ, ಭಾವನೆಗಳ ಮೇಲೆ ನಿಯಂತ್ರಣವನ್ನು ಕಾಯ್ದುಕೊಳ್ಳಬಹುದು. ಗೀತೆಯನ್ನು ಓದುವ ಮೂಲಕ, ಒಬ್ಬ ವ್ಯಕ್ತಿಯು ತನ್ನನ್ನು ತಾನು ಅರ್ಥಮಾಡಿಕೊಳ್ಳಲು ಕಲಿಯುತ್ತಾನೆ ಮತ್ತು ಸಂದರ್ಭಗಳ ಆಧಾರದ ಮೇಲೆ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಕಲಿಯುತ್ತಾನೆ.

ಸಕಾರಾತ್ಮಕ ಶಕ್ತಿ: ಶ್ರೀಮದ್ ಭಗವದ್ಗೀತೆಯನ್ನು ಪಠಿಸುವುದರಿಂದ ಜೀವನದಿಂದ ಎಲ್ಲಾ ನಕಾರಾತ್ಮಕತೆಗಳು ದೂರವಾಗುತ್ತವೆ ಮತ್ತು ಸಕಾರಾತ್ಮಕ ಶಕ್ತಿಯು ಹರಡುತ್ತದೆ. ಗೀತೆಯನ್ನು ನಿಯಮಿತವಾಗಿ ಪಠಿಸುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಮತ್ತು ಒಬ್ಬ ವ್ಯಕ್ತಿಯು ತನ್ನ ಗುರಿಗಳ ಮೇಲೆ ಗಮನಹರಿಸಲು ಸಹಾಯ ಮಾಡುತ್ತದೆ.

ಕೋಪ ಕಡಿಮೆಯಾಗುತ್ತದೆ: ನಿರಂತರವಾಗಿ ಕೋಪಗೊಳ್ಳುವವರು ಗೀತೆಯನ್ನು ಪಠಿಸಬೇಕು. ಗೀತೆಯನ್ನು ಪಠಿಸುವುದರಿಂದ ವ್ಯಕ್ತಿಯು ಕೋಪ, ದುರಾಸೆ, ಭ್ರಮೆ ಮತ್ತು ಮೋಹದ ಬಂಧಗಳಿಂದ ಮುಕ್ತನಾಗುತ್ತಾನೆ. ಮತ್ತು ಆತನ ಜೀವನದಲ್ಲಿ ಸಂತೋಷ ಮತ್ತು ತೃಪ್ತಿ ಹೆಚ್ಚಾಗುತ್ತದೆ.

ಒತ್ತಡ ಮತ್ತು ಆತಂಕದಿಂದ ಮುಕ್ತಿ: ಇಂದಿನ ಕಾರ್ಯನಿರತ  ಜೀವನದಲ್ಲಿ ಒತ್ತಡ ಮತ್ತು ಆತಂಕ ಸಾಮಾನ್ಯವಾಗಿ ಕಾಡುವ ಸಮಸ್ಯೆಯಾಗಿದೆ. ಗೀತೆಯನ್ನು ಓದುವುದರಿಂದ ಒಬ್ಬ ವ್ಯಕ್ತಿಗೆ ಜೀವನದ ಸರಿ ಮತ್ತು ತಪ್ಪುಗಳ ಜ್ಞಾನ ಸಿಗುತ್ತದೆ. ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಮತ್ತು ಮಾನಸಿಕ ಶಾಂತತೆಯನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದನ್ನು ಅರ್ಥಮಾಡಿಕೊಳ್ಳುತ್ತಾನೆ. ಗೀತೆಯು ವ್ಯಕ್ತಿಯನ್ನು ಒಳಗಿನಿಂದ ಬಲಪಡಿಸುತ್ತದೆ  ಮತ್ತು ಯಾವುದೇ ಬಿಕ್ಕಟ್ಟನ್ನು ತಾಳ್ಮೆ ಮತ್ತು ತಿಳುವಳಿಕೆಯಿಂದ ಎದುರಿಸಲು ಸಹಾಯ ಮಾಡುತ್ತದೆ.

ಜೀವನದ ಉದ್ದೇಶದ ಸ್ಪಷ್ಟತೆ: ಗೀತೆಯನ್ನು ಓದುವುದರಿಂದ ಒಬ್ಬ ವ್ಯಕ್ತಿಯು ತನ್ನ ಜೀವನದ ಉದ್ದೇಶವನ್ನು ಅರ್ಥಮಾಡಿಕೊಳ್ಳಬಹುದು. ಈ ಜ್ಞಾನವು ವ್ಯಕ್ತಿಯನ್ನು ಸ್ವಾವಲಂಬನೆಯೊಂದಿಗೆ ಯಶಸ್ವಿ ಮತ್ತು ಸಂತೋಷದಾಯಕ ಜೀವನವನ್ನು ನಡೆಸಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಪ್ರತಿನಿತ್ಯ ಪುಸ್ತಕ ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಭಗವದ್ಗೀತೆಯನ್ನು ಪಠಿಸುವ ನಿಯಮಗಳು:

  • ಬೆಳಿಗ್ಗೆ ಭಗವದ್ಗೀತೆಯನ್ನು ಓದಲು ಉತ್ತಮ ಸಮಯವೆಂದು ಪರಿಗಣಿಸಲಾಗಿದೆ ಏಕೆಂದರೆ ಈ ಸಮಯದಲ್ಲಿ ಮನಸ್ಸು, ಮೆದುಳು ಮತ್ತು ಪರಿಸರದಲ್ಲಿ ಶಾಂತಿ, ಸಕಾರಾತ್ಮಕತೆ ಇರುತ್ತದೆ.
  • ಸ್ನಾನದ ನಂತರ ಯಾವಾಗಲೂ ಗೀತೆಯನ್ನು ಪಠಿಸಿ. ಮತ್ತು ಈ ಸಮಯದಲ್ಲಿ ನಿಮ್ಮ ಮನಸ್ಸು ಸಂಪೂರ್ಣವಾಗಿ ಶಾಂತವಾಗಿರಬೇಕು.
  • ಗೀತೆಯನ್ನು ಪಠಿಸುವಾಗ ಯಾರೊಂದಿಗೂ ಹೆಚ್ಚು ಮಾತನಾಡಬೇಡಿ ಮತ್ತು ಒಂದೇ ಸ್ಥಳದಲ್ಲಿ ಕುಳಿತು ಓದಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link