ಸಂಕಷ್ಟಕ್ಕೆ ಸಿಲುಕಿಸಿದ ಪರಪುರುಷನ ಸಹವಾಸ: ಬ್ಲ್ಯಾಕ್ಮೇಲ್ಗೆ ಹೆದರಿ ಪುಟ್ಟ ಮಗನ ಜತೆ ಮಹಿಳೆ ಆತ್ಮಹತ್ಯೆ – Kannada News | Mother and Son body Found Dead in Tumakuru Lake: Blackmail Allegation Emerges in Kallambella Case
ತುಮಕೂರು, ಡಿಸೆಂಬರ್ 29: ತುಮಕೂರು (Tumkur) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ತಾಯಿ–ಮಗ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮಹಿಳೆ ಪರ ಪುರುಷನ ಸಹವಾಸ ಮಾಡಿದ್ದೇ ಆಕೆಗೆ ಮುಳುವಾಗಿದೆ ಎಂಬುದು ತಿಳಿದುಬಂದಿದೆ. ದೂರವಾಣಿ ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದು ಮಹಿಳೆ ಸಾವಿನ ಮೊರೆ ಹೋಗಿರುವುದು ಬಹಿರಂಗವಾಗಿದೆ. ಮೃತರನ್ನು ಹಂಸಲೇಖ (32) ಹಾಗೂ ಆಕೆಯ 8 ವರ್ಷದ ಪುತ್ರ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಎಂಬಾತನೊಂದಿಗೆ ಹಂಸಲೇಖ…