Headlines

ಐತಿಹಾಸಿಕ ಭೂತನಾಳ ಕೆರೆಯಲ್ಲಿ ಘೋರ ದುರಂತ: ಒಬ್ರನ್ನ ಹಿಡಿಯಲು ಹೋಗಿ ಮೂವರು ದುರಂತ ಸಾವು

ವಿಜಯಪುರ, ಏಪ್ರಿಲ್​ 08: ಕೆರೆಯಲ್ಲಿ ಮುಳುಗಿ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿರುವಂತಹ (death) ಘಟನೆ ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ನಡೆದಿದೆ. ಮೊಹಮ್ಮದ್ ಹಯಾತ್(12), ಹೈದರ್ ಪಾಷಾ(32) ಮತ್ತು ಅಬ್ದುಲ್ ಖುದ್ದೂಸ್(35) ಮೃತರು. ಸದ್ಯ ಕೆರೆಯಿಂದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದಿದ್ದೇನು? ಕುಟುಂಬ ಸಮೇತ ಒಟ್ಟು 14 ಜನರು ವಿಜಯಪುರಕ್ಕೆ ಪ್ರವಾಸಕ್ಕಾಗಿ ಆಗಮಿಸಿ ಭೂತನಾಳ…

Read More

ಟಿವಿಕೆ ಮುಖ್ಯಸ್ಥ ವಿಜಯ್ ರೋಡ್ ಶೋಗೆ ಸಾಗರದಂತೆ ಸೇರಿದ ಜನ

ನೆಲ್ಲೈ, ಏಪ್ರಿಲ್ 8: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ತಮಿಳುನಾಡು ವಿಕ್ಟರಿ ಪಕ್ಷದ (ಟಿವಿಕೆ) ನಾಯಕ ವಿಜಯ್ (Vijay) ಪ್ರತಿ ಜಿಲ್ಲೆಯಲ್ಲಿಯೂ ಪ್ರಚಾರ ನಡೆಸುತ್ತಿದ್ದಾರೆ. ಇಂದು ಸುಮಾರು 11 ಕಿಲೋಮೀಟರ್‌ಗಳ ಕಾಲ ನಡೆದ ಚುನಾವಣಾ ರ್ಯಾಲಿಯಲ್ಲಿ ನಟ ವಿಜಯ್ ಅವರನ್ನು ದಾರಿಯುದ್ದಕ್ಕೂ ಸಾರ್ವಜನಿಕರು ಉತ್ಸಾಹದಿಂದ ಸ್ವಾಗತಿಸಿದರು. ವಿಜಯ್ ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಎಂಬ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ತಮಿಳುನಾಡು ವಿಕ್ಟರಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅವರು ತಮ್ಮ…

Read More

ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯಾ

ಕೊಡಗು, (ಏಪ್ರಿಲ್ 08): ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯಾ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿಯನ್ನು ಏಪ್ರಿಲ್ 05ರಂದು ಪತ್ತೆ ಮಾಡಿ ಕಾಡಿನಿಂದ ಹೊರಗೆ ಕರೆದುಕೊಂಡು ಬರಲಾಗಿದೆ. ಇನ್ನು ದಟ್ಟಾರಣ್ಯದಲ್ಲಿ ಶರಣ್ಯಾ ದಾರಿ ತಪ್ಪಿದ್ದಿದ್ಹೇಗೆ? ಒಂದೇ ಬಾಟಲಿ ನೀರಿನಿಂದ ನಾಲ್ಕು ದಿನ ಬದುಕುಳಿದಿದ್ಹೆಗೆ? ನಾಲ್ಕು ದಿನದ…

Read More

ಹೆಲ್ತಿಯಾಗಿ ಕಾಣುವ ಈ ಆಹಾರಗಳಲ್ಲಿ ಹಿಡನ್ ಸೋಡಿಯಂ ಇರಬಹುದು ಎಚ್ಚರ! ಬಿಪಿ ರೋಗಿಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ

ಸಾಮಾನ್ಯವಾಗಿ ಉಪ್ಪಿನ ಪ್ರಮಾಣ ಹೆಚ್ಚಿರುವ ಆಹಾರಗಳು ಆರೋಗ್ಯಕ್ಕೆ ಹಾನಿಕಾರಕವೆಂಬುದು ತಿಳಿದಿರುವ ವಿಚಾರ. ವಿಶೇಷವಾಗಿ ಹೈ ಬ್ಲಡ್ ಪ್ರೆಷರ್ (High Blood Pressure) ಸಮಸ್ಯೆ ಇರುವವರಿಗೆ ಉಪ್ಪು ಕಡಿಮೆ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಆದರೆ, ನಮಗೆ ಆರೋಗ್ಯಕರವಾಗಿ ಕಾಣುವ ಕೆಲವು ಆಹಾರಗಳಲ್ಲಿ ಕೂಡ ‘ಹಿಡನ್ ಸೋಡಿಯಂ’ ಇರುವುದರಿಂದ ಇದು ದೀರ್ಘಕಾಲದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಹಾಗಾದರೆ ಯಾವ ಆಹಾರಗಳಲ್ಲಿ ಈ ರೀತಿಯ ಹಿಡನ್ ಸೋಡಿಯಂ ಇರುತ್ತದೆ, ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಉಪ್ಪಿನ ಸೇವನೆ…

Read More

DC vs GT: 600 ಸಿಕ್ಸರ್​ಗಳು..! ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಜೋಸ್ ಬಟ್ಲರ್

ಐಪಿಎಲ್ 2026 ರ 14 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಪರ ಜೋಸ್ ಬಟ್ಲರ್ ಅಬ್ಬರದ ಬ್ಯಾಟಿಂಗ್‌ ಮಾಡಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 600 ಸಿಕ್ಸರ್​ಗಳ ಗಡಿಯನ್ನು ದಾಟಿದರು. ಜೋಸ್ ಬಟ್ಲರ್ ಕೇವಲ 27 ಎಸೆತಗಳಲ್ಲಿ 52 ರನ್​ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ, ಬಟ್ಲರ್…

Read More

ಪರೀಕ್ಷೆ ಮುಗಿದ ಖುಷಿಯಲ್ಲಿ ಪಾರ್ಟಿ ಮಾಡಲು ಹೋಗಿ ಹೆಣವಾದ ಕಾಲೇಜು ವಿದ್ಯಾರ್ಥಿ

ನೊಯ್ಡಾ, ಏಪ್ರಿಲ್ 8: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಆತನ ಮೂವರು ಸ್ನೇಹಿತರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನು ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ ಹರ್ಷಿತ್ ಭಟ್ ಎಂದು ಗುರುತಿಸಲಾಗಿದೆ. ನೊಯ್ಡಾದ ಅಮಿಟಿ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳ ನಂತರ ಪಾರ್ಟಿಗಾಗಿ ಸೂಪರ್‌ನೋವಾ ಬಳಿಯ ನಿರ್ಜನ ಜಾಗಕ್ಕೆ ಹೋಗಿದ್ದರು. ಆಗ ಜಮೀನಿನಲ್ಲಿ ಹರ್ಷಿತ್ ಸ್ನಾನ ಮಾಡಲು ನೀರು…

Read More

ಈ ಶಾಂತಿ ಸದಾ ಉಳಿಯಲಿ ಎಂಬುದು ನಮ್ಮ ಆಶಯ, ಅಮೆರಿಕ-ಇರಾನ್ ಕದನ ವಿರಾಮದ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ

ನವದೆಹಲಿ, ಏಪ್ರಿಲ್ 08:ಅಮೆರಿಕ-ಇಸ್ರೇಲ್(Israel) ಮತ್ತು ಅಮೆರಿಕದ ನಡುವಿನ ಕದನ ವಿರಾಮದ ಕುರಿತು ಭಾರತ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. ನಾವು ಕದನ ವಿರಾಮವನ್ನು ಸ್ವಾಗತಿಸುತ್ತೇವೆ ಮತ್ತು ಅದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುತ್ತದೆ ಎಂದು ಆಶಿಸುತ್ತೇವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ನಾವು ಹಿಂದೆ ಪದೇ ಪದೇ ಹೇಳಿದಂತೆ, ನಡೆಯುತ್ತಿರುವ ಸಂಘರ್ಷವನ್ನು ಸಾಧ್ಯವಾದಷ್ಟು ಬೇಗ ಕೊನೆಗೊಳಿಸಲು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂವಾದ ಮತ್ತು ರಾಜತಾಂತ್ರಿಕತೆ ಅತ್ಯಗತ್ಯ ಎಂದು ಸಚಿವಾಲಯ ಹೇಳಿದೆ. ಈ ಸಂಘರ್ಷ ಈಗಾಗಲೇ ಜನರಿಗೆ…

Read More

ಗೃಹಲಕ್ಷ್ಮಿ ಬೇಡಯ್ಯ ಗೃಹವನ್ನ ನೀಡಯ್ಯ: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆ ಮನವಿ

ತುಮಕೂರು, (ಏಪ್ರಿಲ್ 08): ನಿವೇಶನ ಮಂಜೂರಾಗಿದ್ದರೂ ಸಹ ಹಕ್ಕುಪತ್ರ ನೀಡದ್ದಕ್ಕೆ ಮಹಿಳೆಯೋರ್ವಳು ಜಿಲ್ಲಾ ಉಸ್ತುವಾರಿ ಸಚಿವರ ಜನ ಸ್ಪಂದನಾ ಕಾರ್ಯಕ್ರಮದ ವೇದಿಕೆ ಮೇಲೆ ದಯಾಮರಣ ಕೋರಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಹಕ್ಕುಪತ್ರ ನೀಡದ್ದಕ್ಕೆ ವೇದಿಕೆಯಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಶಿರಾದ ರಾಬಿಯಾ ಅಸ್ಲಾಂ ಪಾಷ ಎಂಬ ಮಹಿಳೆ ಬೇಸರ ವ್ಯಕ್ತಪಡಿಸಿದ್ದಾಳೆ. ಸಚಿವರು, ಡಿಸಿಗೆ , ಡಿಸಿ ಕಮಿಷನರ್ ಕಡೆಗೆ ಕಳುಹಿಸುತ್ತಾರೆ. ಹೀಗೆ 15 ದಿನಕ್ಕೊಮ್ಮೆ ಅಲೆದಾಡುತ್ತಿದ್ದೇನೆ. ಜನಸಂಪರ್ಕ ಸಭೆಯಲ್ಲಿ ಸ್ಪಂದನೆಯಿಲ್ಲ. ಹಕ್ಕುಪತ್ರಕ್ಕೆ 25 ಸಾವಿರ…

Read More

ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ: ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು, (ಏಪ್ರಿಲ್ 08): ನಗರದ ಡಿಜೆ ಹಳ್ಳಿ (DJ Halli) ಬಳಿ ಇರುವ ಶಾಂಪುರ ರಸ್ತೆಯಲ್ಲಿ ನಿನ್ನೆ (ಏಪ್ರಿಲ್ 07) ಅಗ್ನಿ ದುರಂತವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆರು ಹಸುಗಳು (Cows) ಸಾವನ್ನಪ್ಪಿದ್ದವು. ಶೆಡ್​​​​ನಲ್ಲಿದ್ದ 20 ಹಸುಗಳ ಪೈಕಿ ಆರು ಮೂಕಜೀವಿಗಳು ಬೆಂಕಿಯ (Fire) ಜ್ವಾಲೆಗೆ ನರಳಿ ಪ್ರಾಣ ಬಿಟ್ಟಿದ್ದಾವೆ. ಮೊದಲು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿತ್ತು. ಆದರೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದ್ದು, ಬೇಕಂತಲೇ ಕಿರಾತಕನೊಬ್ಬ ಹಸುಗಳಿದ್ದ ಶೆಡ್​ಗೆ…

Read More

ಬೀದರ್​​: ಈರುಳ್ಳಿ ಬೀಜದ ದರ ಅರ್ಧದಷ್ಟು ಇಳಿಕೆ; ರೈತರಲ್ಲಿ ಕಣ್ಣೀರು ತರಿಸಿದ ಈರುಳ್ಳಿ

ಬೀದರ್, ಏಪ್ರಿಲ್​ 08: ಗಲ್ಫ್​​ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧಕ್ಕೆ (Gulf War) ಸದ್ಯ ಎರಡು ವಾರಗಳ ಕಾಲ ಕದನ ವಿರಾಮ ಘೋಷಿಸಲಾಗಿದೆ. ಆದರೆ ಯುದ್ಧದ ಎಫೆಕ್ಟ್​ ಈರುಳ್ಳಿ ಬೀಜ ಬೆಳೆಗಾರರಿಗೂ ತಟ್ಟಿದೆ. ಈರುಳ್ಳಿ ಬೀಜದ ದರ ಅರ್ಧದಷ್ಟು ಇಳಿಕೆಯಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧದ ಪರಿಣಾಮದಿಂದಾಗಿ ಬೆಳೆಗಳ ದರ ಕುಸಿಯುತ್ತಿದ್ದು, ರೈತರನ್ನು ಕಂಗಾಲು ಮಾಡಿದೆ. ಕ್ವಿಂಟಾಲ್​ಗೆ 80 ಸಾವಿರ ರೂ ಕುಸಿತ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಈರುಳ್ಳಿ ಬೆಳೆಗಾರರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಈರುಳ್ಳಿ…

Read More