Category Archives: Blog

Your blog category

ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ – Kannada News | Rakshitha Shetty Is the reason for Malu Elimination In bigg Boss Says Spandana Somanna

ಬಿಗ್ ಬಾಸ್ ಮನೆಯಿಂದ ಕಳೆದ ವಾರ ಮಾಳು ಅವರು ಎಲಿಮಿನೇಟ್ ಆಗಿದ್ದಾರೆ. ಮಾಳು ದೊಡ್ಮನೆಯಿಂದ ಹೊರ ಹೋಗಲು ರಕ್ಷಿತಾ ಕಾರಣ ಎಂದು ಸ್ಪಂದನಾ ಆರೋಪಿಸಿದ್ದಾರೆ. ಸ್ಪಂದನಾ ಅವರಿಂಗಿಂತ ಮಾಳು ಉತ್ತಮವಾಗಿದ್ದರು ಎಂದು ಎಕ್ಷಿತಾ ಹೇಳಿದರು. ಇದಕ್ಕೆ ಕೌಂಟರ್ ಕೊಡುವಾಗ ಸ್ಪಂದನಾ ಈ ಆರೋಪ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗಿಲ್ಲಿಯ ಆ ಒಂದು ಡೈಲಾಗ್​​ನಿಂದ ಸಹನಾ ಶೆಟ್ಟಿಗೆ ಸಿಕ್ತು ಮತ್ತಷ್ಟು ಜನಪ್ರಿಯತೆ; ಧನ್ಯವಾದ ಹೇಳಿದ ಮೋನಿಕಾ – Kannada News | Sahana Shetty and Gilli Viral: Big Boss Kannada 12 Boosts Gauri Kalyana Serial Buzz

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಭಾನುವಾರದ ಎಪಿಸೋಡ್ ಭರ್ಜರಿ ಗಮನ ಸೆಳೆಯಿತು. ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿ ತಂಡ ಬಿಗ್ ಬಾಸ್ ಮನೆಗೆ ಪ್ರವೇಶಿಸಿತ್ತು. ಈ ಧಾರಾವಾಹಿಯಲ್ಲಿ ಮೋನಿಕಾ ಪಾತ್ರದಲ್ಲಿ ಸಹನಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಹಾಗೂ ಗಿಲ್ಲಿ ಮಧ್ಯೆ ನಡೆದ ಸಂಭಾಷಣೆಗಳು ಸಾಕಷ್ಟು ವೈರಲ್ ಆಗುತ್ತಿವೆ. ಸಹನಾ ಶೆಟ್ಟಿ ಜನಪ್ರಿಯತೆ ಕೂಡ ಹೆಚ್ಚುತ್ತಿದೆ. ಅವರು ಗಿಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಸಹನಾ ಶೆಟ್ಟಿ ಅವರು ‘ಗೌರಿ ಕಲ್ಯಾಣ’ ಧಾರಾವಾಹಿಯಲ್ಲಿ ಮೋನಿಕಾ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಮೋನಿಕಾನ ಇಂಪ್ರೆಸ್ ಮಾಡಬೇಕು ಎಂಬ ಟಾಸ್ಕ್​ ಗಿಲ್ಲಿಗೆ ನೀಡಲಾಯಿತು. ಈ ವೇಳೆ ಗಿಲ್ಲಿ ಅವರು ಬಂದು, ‘ನನ್ನ ಬಳಿ ಫ್ಲ್ಯಾಟ್ ಇದೆ, ಜಾಗ ಇದೆ’ ಎಂದೆಲ್ಲ ಹೇಳಿದರು. ಕೊನೆಗೆ ಇದ್ಯಾವುದೂ ತಮ್ಮ ಹೆಸರಲ್ಲಿ ಇಲ್ಲ ಎಂದು ಉಲ್ಲೇಖಿಸಿದರು. ಆ ಬಳಿಕ ಮೋನಿಕಾಗೋಸ್ಕರ ಒಂದು ಕವನ ಬರೆದರು ಗಿಲ್ಲಿ.

‘ಮೋನಿಕಾ, ಬೇಡ ನಿನನಗೆ ಆತಂಕ, ಜೊತೆಗೆ ಇರ್ತೀನಿ ಕೊನೆ ತನಕ’ ಎಂದರು ಗಿಲ್ಲಿ. ಇದಕ್ಕೆ ಅವರ ತಾಯಿ ಪಾತ್ರಧಾರಿ, ‘ನಾನು ಇಂಪ್ರೆಸ್ ಆಗಿಲ್ಲ’ ಎಂದರು. ಆಗ ಮೋನಿಕಾ ಪಾತ್ರಧಾರಿ ಸಹನಾ ಶೆಟ್ಟಿ, ‘ನಾನು ಇಂಪ್ರೆಸ್ ಆದೆ ಅಮ್ಮ’ ಎಂದಿದ್ದಾರೆ. ಈ ವಿಡಿಯೋ ಸಖತ್ ಕ್ಯೂಟ್ ಆಗಿದೆ. ಟ್ರೋಲ್​ ಪೇಜ್​​ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದೆ. ಮೋನಿಕಾ ಕ್ಯೂಟ್​​ನೆಸ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಾ ಇದೆ. ಇದರಿಂದ ಸಹನಾ ಶೆಟ್ಟಿ ಅವರ ಹಿಂಬಾಲಕರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಸಾವಿರಾರು ಸಂಖ್ಯೆಯ ಹಿಂಬಾಲಕರು ಅವರ ಖಾತೆಯನ್ನು ಫಾಲೋ ಮಾಡೋಕೆ ಆರಂಭಿಸಿದ್ದಾರೆ. ‘ಗಿಲ್ಲಿ ಬಾಯ್ಸ್, ನಿಮಗೆ ಧನ್ಯವಾದ’ ಎಂದು ಸಹನಾ ಶೆಟ್ಟಿ ಹೊಸ ಪೋಸ್ಟ್​​ನಲ್ಲಿ ಹೇಳಿದ್ದಾರೆ. ಕಮೆಂಟ್ ಬಾಕ್ಸ್​ ಅಲ್ಲಿ ‘ಗಿಲ್ಲಿ ಗಿಲ್ಲಿ’ ಎಂಬ ಕಮೆಂಟ್​​ಗಳು ತುಂಬಿ ಹೋಗಿವೆ.

ಇದನ್ನೂ ಓದಿ: ಎಲಿಮಿನೇಷನ್​ನಿಂದ ಉ.ಕರ್ನಾಟಕ ಅಳ್ತಿದೆ ಎಂದ ಮಾಳುಗೆ ಅವರದ್ದೇ ಭಾಷೆಯಲ್ಲಿ ಬಂತು ಖಡಕ್ ಉತ್ತರ

ಸದ್ಯ ‘ಗೌರಿ ಕಲ್ಯಾಣ’ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದೆ. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಈ ಧಾರಾವಾಹಿ ಪ್ರಸಾರ ಕಾಣುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಂಕಷ್ಟಕ್ಕೆ ಸಿಲುಕಿಸಿದ ಪರಪುರುಷನ ಸಹವಾಸ: ಬ್ಲ್ಯಾಕ್​​ಮೇಲ್​ಗೆ ಹೆದರಿ ಪುಟ್ಟ ಮಗನ ಜತೆ ಮಹಿಳೆ ಆತ್ಮಹತ್ಯೆ – Kannada News | Mother and Son body Found Dead in Tumakuru Lake: Blackmail Allegation Emerges in Kallambella Case

ತುಮಕೂರು, ಡಿಸೆಂಬರ್ 29: ತುಮಕೂರು (Tumkur) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ತಾಯಿ–ಮಗ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮಹಿಳೆ ಪರ ಪುರುಷನ ಸಹವಾಸ ಮಾಡಿದ್ದೇ ಆಕೆಗೆ ಮುಳುವಾಗಿದೆ ಎಂಬುದು ತಿಳಿದುಬಂದಿದೆ. ದೂರವಾಣಿ ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದು ಮಹಿಳೆ ಸಾವಿನ ಮೊರೆ ಹೋಗಿರುವುದು ಬಹಿರಂಗವಾಗಿದೆ.

ಮೃತರನ್ನು ಹಂಸಲೇಖ (32) ಹಾಗೂ ಆಕೆಯ 8 ವರ್ಷದ ಪುತ್ರ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಎಂಬಾತನೊಂದಿಗೆ ಹಂಸಲೇಖ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಆತ ತನ್ನ ಬಳಿ ಇರುವ ಸಂಭಾಷಣೆಗಳು ಮತ್ತು ವಿಡಿಯೋಗಳನ್ನು ಆಧಾರವಾಗಿ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಭಯಗೊಂಡ ಹಂಸಲೇಖ, ಮಗನೊಂದಿಗೆ ಮನೆ ತೊರೆದು ಶುಕ್ರವಾರ ಸ್ನೇಹಿತೆಯ ಮನೆಯಲ್ಲಿ ಉಳಿದುಕೊಂಡಿದ್ದಳು.

ಶನಿವಾರ ಬೆಳಗ್ಗೆ ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ–ಮಗ ಇಬ್ಬರೂ ನೀರಿಗೆ ಹಾರಿ ಸಾವನ್ನಪ್ಪಿರುವುದು ಗೊತ್ತಾಗಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಕೆರೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಈ ಪ್ರಕರಣದ ಹಿನ್ನೆಲೆ ಪರಿಶೀಲನೆ ನಡೆಸುತ್ತಿರುವ ಪೊಲೀಸರು, ಬ್ಲ್ಯಾಕ್‌ಮೇಲ್ ಆರೋಪದ ಕುರಿತು ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಹಂಸಲೇಖ ಭೂಪಸಂದ್ರ ಗ್ರಾಮದ ನಾಗೇಶ್ ಜೊತೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಇದ್ದು, ಕೆಲವು ವರ್ಷಗಳ ಹಿಂದೆ ಹಂಸಲೇಖ ಪತಿ ನಾಗೇಶ್ ಅನಾರೋಗ್ಯದಿಂದ ಮೃತಪಟ್ಟಿದ್ದರು. 3 ವರ್ಷದ ಹಿಂದೆ ನಾಗೇಶ್ ಸಹೋದರ ಲೋಕೇಶ್​ ಜತೆ ಹಂಸಲೇಖಗೆ ಮದುವೆ ಮಾಡಲಾಗಿತ್ತು. ಆದಾಗ್ಯೂ ಪರ ಪುರುಷನ ಸಹವಾಸ ಮಾಡಿದ್ದು, ಮುಳುವಾಗಿದೆ. ಪರಿಣಾಮವಾಗಿ ಮಗನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru and surrounding places face severe Air pollution

ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ

ಬೆಂಗಳೂರು, ಡಿಸೆಂಬರ್ 30: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯು ಗುಣಮಟ್ಟ (Bengaluru Air Quality) ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 174 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 88 ಇದ್ದರೆ, PM10 124 ಇದೆ.

ಎಲ್ಲೆಲ್ಲಿ ಏರ್ ಕ್ವಾಲಿಟಿ ಕುಸಿತ?

ಬೆಂಗಳೂರು ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಅರೆಕೆರೆ-179, ಬಾಪೂಜಿ ನಗರ-171, ಬ್ರಿಗೇಡ್ ರೋಡ್-179, ಬ್ರೂಕ್ ಫೀಲ್ಡ್- 179, BTM ಲೇಔಟ್- 168, ಹೆಬ್ಬಾಳ- 173 , ಜಯನಗರ-175, ಕೋರಮಂಗಲ-172, ಸಿಲ್ಕ್ ಬೋರ್ಡ್-168​, ತಾವರೆಕೆರೆ-170, ವೈಟ್​ಫೀಲ್ಡ್- 189 ಇದ್ದು, ಇಷ್ಟು ಹದಗೆಟ್ಟ ಏರ್ ಕ್ವಾಲಿಟಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ರೋಗಗಳೂ ಬರಬಹುದೆಂದು ತಜ್ಞರು ಹೇಳುತ್ತಾರೆ. ಬೆಂಗಳೂರಿನಲ್ಲಿ 1.2 ಕೋಟಿ ದಾಟಿರುವ ವಾಹನಗಳಿಂದ ಹೊರಸೂಸುವ ಹೊಗೆ ನಗರದ ಮಾಲಿನ್ಯಕ್ಕೆ ಕೊಡುಗೆ ನೀಡುತ್ತಿದೆ.

ಸೂಕ್ಷ್ಮಕಣಗಳಿಂದಲೂ ಬರುತ್ತೆ ಶ್ವಾಸಕೋಶದ ತೊಂದರೆ

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –173
  • ಮಂಗಳೂರು-136
  • ಮೈಸೂರು – 174
  • ಬೆಳಗಾವಿ – 142
  • ಕಲಬುರ್ಗಿ – 107
  • ಶಿವಮೊಗ್ಗ – 73
  • ಬಳ್ಳಾರಿ – 185
  • ಹುಬ್ಬಳ್ಳಿ- 96
  • ಉಡುಪಿ –110
  • ವಿಜಯಪುರ –117

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

310ರ ಸ್ಟ್ರೈಕ್ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಆದರೆ… – Kannada News | Another impactful knock from Vaibhav Suryavanshi in the VHT

ದೇಶೀಯ ಅಂಗಳದಲ್ಲಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಅದು ಕೂಡ 310ರ ಸ್ಟ್ರೈಕ್ ರೇಟ್​ನಲ್ಲಿ. ಇದಾಗ್ಯೂ ಅವರಿಗೆ ದೊಡ್ಡ ಇನಿಂಗ್ಸ್ ಆಡಲು ಸಾಧ್ಯವಾಗಿಲ್ಲ.

Source link

Video: ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ – Kannada News | Tiger Enters Village Near Bandhavgarh, Injures Man

ಉಮಾರಿಯಾ, ಡಿಸೆಂಬರ್ 30: ಮಧ್ಯಪ್ರದೇಶದ ಬಾಂಧವ್‌ಗಢ ಹುಲಿ ಅಭಯಾರಣ್ಯದ ಹೊರವಲಯದಲ್ಲಿರುವ ಹಳ್ಳಿಯೊಂದಕ್ಕೆ ಸೋಮವಾರ ಹುಲಿಯೊಂದು ನುಗ್ಗಿ, ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ, ನಂತರ ಮಂಚದ ಮೇಲೆ ಮಲಗಿರುವ ಘಟನೆ ನಡೆದಿದೆ. ಹುಲಿ ಗೋಪಾಲ್ ಕೋಲ್ ಎಂಬ ಯುವಕನ ಮೇಲೆ ದಾಳಿ ಮಾಡಿ, ಒಂದೇ ದಾಳಿಯಲ್ಲಿ ಅವರನ್ನು ನೆಲಕ್ಕೆ ಉರುಳಿಸಿತ್ತು. ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಕಟ್ನಿ ಜಿಲ್ಲೆಯ ಬರ್ಹಿ ಆಸ್ಪತ್ರೆಗೆ ಕಳುಹಿಸಲಾಯಿತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಟ್ನಿಗೆ ಕರೆದೊಯ್ಯಲಾಯಿತು, ಅವರ ಜೊತೆ ಬಾಂಧವಗಢ ಹುಲಿ ಮೀಸಲು ಪ್ರದೇಶದ ಅಧಿಕಾರಿಗಳ ತಂಡವೂ ಇತ್ತು. ಗೋಪಾಲ್ ಮೇಲೆ ದಾಳಿ ಮಾಡಿದ ನಂತರ, ಹುಲಿ ದುರ್ಗಾ ಪ್ರಸಾದ್ ದ್ವಿವೇದಿ ಅವರ ಮನೆಗೆ ನುಗ್ಗಿ ಹಾಸಿಗೆಯ ಮೇಲೆ ಮಲಗಿತ್ತು, ಇದರಿಂದ ಗ್ರಾಮಸ್ಥರು ಭಯಭೀತರಾದರು, ಅನೇಕ ನಿವಾಸಿಗಳು ಭಯದಿಂದ ತಮ್ಮ ಮನೆಗಳ ಛಾವಣಿಯ ಮೇಲೆ ಹತ್ತಬೇಕಾಯಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್​ – Kannada News | Jason Holder breaks the T20s World record

ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಇಂಟರ್ನ್ಯಾಷನಲ್ ಟಿ೨೦ ಲೀಗ್ ಟೂರ್ನಿಯಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಹೋಲ್ಡರ್ ಈ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಹೆಸರಿನಲ್ಲಿತ್ತು. 2018 ರಲ್ಲಿ 61 ಟಿ೨೦ ಇನಿಂಗ್ಸ್ ಮೂಲಕ ರಶೀದ್ ಒಟ್ಟು 96 ವಿಕೆಟ್ ಕಬಳಿಸಿದ್ದರು.

ಈ ಮೂಲಕ ರಶೀದ್ ಖಾನ್ ಒಂದೇ ವರ್ಷದಲ್ಲಿ ಟಿ೨೦ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು. 8 ವರ್ಷಗಳ ಹಿಂದೆ ಬರೆದಿದ್ದ ಈ ವರ್ಲ್ಡ್ ರೆಕಾರ್ಡ್ ಅನ್ನು ಇದೀಗ ಜೇಸನ್ ಹೋಲ್ಡರ್ ಅಳಿಸಿ ಹಾಕಿದ್ದಾರೆ.

ಈ ವರ್ಷ ಈವರೆಗೆ 69 ಇನಿಂಗ್ಸ್ ಆಡಿರುವ ಜೇಸನ್ ಹೋಲ್ಡರ್ ಒಟ್ಟು 97 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಜೇಸನ್ ಹೋಲ್ಡರ್ ಹಾಗೂ ರಶೀದ್ ಖಾನ್ ಅವರನ್ನು ಹೊರತುಪಡಿಸಿ ಟಿ20 ಕ್ರಿಕೆಟ್​ನಲ್ಲಿ ಯಾವುದೇ ಬೌಲರ್ ಒಂದೇ ವರ್ಷದಲ್ಲಿ 90 ಕ್ಕಿಂತ ಹೆಚ್ಚು ವಿಕೆಟ್ ಪಡೆದಿಲ್ಲ. ಇದೀಗ ಭರ್ಜರಿ ದಾಖಲೆಯೊಂದಿಗೆ ಹೋಲ್ಡರ್ ಐಪಿಎಲ್​ಗಾಗಿ ಸಜ್ಜಾಗುತ್ತಿದ್ದಾರೆ.

Published On – 8:00 am, Tue, 30 December 25

Source link

Vaikuntha Ekadashi: ವೈಕುಂಠ ಏಕಾದಶಿ ಸಂಭ್ರಮ, ತಿಮ್ಮಪ್ಪನ ಸನ್ನಿಧಿ ಸೇರಿ ದೇಶದಾದ್ಯಂತ ವಿಶೇಷ ಪೂಜೆ, ಪುನಸ್ಕಾರ – Kannada News | Vaikuntha Ekadashi Celebrations: Special Prayers Across India Including Tirumala and Bengaluru Temples

ವೈಕುಂಠ ಏಕಾದಶಿ 2025 ರ ಹಿನ್ನೆಲೆಯಲ್ಲಿ ದೇಶಾದ್ಯಂತ ಪೂಜೆ ಮತ್ತು ಪುನಸ್ಕಾರದ ಸಡಗರ ಆವರಿಸಿದೆ. ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದುಬರುತ್ತಿದೆ. ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದ ಶ್ರೀನಿವಾಸ ದೇಗುಲಗಳಲ್ಲಿ ಹಬ್ಬದ ಕಳೆಗಟ್ಟಿದೆ. ಭಕ್ತರು ‘ಗೋವಿಂದ’ ನಾಮಸ್ಮರಣೆ ಮಾಡುತ್ತಾ ಭಕ್ತಿಯಿಂದ ವೈಕುಂಠ ಏಕಾದಶಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನ ಅಮೃತ ನಗರದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಚಳಿಯನ್ನು ಲೆಕ್ಕಿಸದೆ ದೇವರ ದರ್ಶನ ಪಡೆಯಲು ಸಾಲಿನಲ್ಲಿ ನಿಂತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ

ಬೆಂಗಳೂರು, ಡಿಸೆಂಬರ್ 30: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ನಾಳೆಯೂ ಸಹ ಇದೇ ರೀತಿಯ ವಾತಾವರಣವಿರಬಹುದೆಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 18°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಮುಂಬೈನಲ್ಲಿ ಪಾದಚಾರಿಗಳ ಮೇಲೆ ಹರಿದ ಬೆಸ್ಟ್​ ಬಸ್, ನಾಲ್ವರು ಸಾವು, 9 ಮಂದಿಗೆ ಗಾಯ – Kannada News | BEST Bus Ploughs Into Crowd in Bhandup, Four Killed

ಮುಂಬೈ, ಡಿಸೆಂಬರ್ 30: ಮುಂಬೈನ ಭಾಂಡಪ್ ಪ್ರದೇಶದಲ್ಲಿ ಬೆಸ್ಟ್​ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 9ಮಂದಿ ಗಾಯಗೊಂಡಿದ್ದಾರೆ. ಜನನಿಬಿಡ ಸ್ಟೇಷನ್ ರಸ್ತೆಯಲ್ಲಿ ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜನರು ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಜನದಟ್ಟಣೆಯ ಪ್ರದೇಶದಲ್ಲಿ ಭೀತಿ ಉಂಟಾಗಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link