Headlines

ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್​

ಬಳ್ಳಾರಿ, ಏಪ್ರಿಲ್​​ 08: ಜೈಲು ಎಂದರೆ ಮಾಡಿದ ತಪ್ಪಿಗೆ ಅಪರಾಧಿಗಳು ಶಿಕ್ಷೆಯ ಅವಧಿಯನ್ನು ಕಳೆಯಬೇಕಾದ ಮತ್ತು ತಮ್ಮನ್ನು ತಾವು ತಿದ್ದುಕೊಳ್ಳಬೇಕಾದ ಜಾಗ. ಆದರೆ ಪ್ರಸ್ತುತವಾಗಿ ರಾಜ್ಯದ ಜೈಲುಗಳು ಇವಕ್ಕೆ ತದ್ವಿರುದ್ಧವಾಗಿವೆ. ಮನಃ ಪರಿವರ್ತನೆ ಮಾಡಿಕೊಳ್ಳುವ ಬದಲು ಕೈದಿಗಳು ಹೊರಗಿನಗಿಂತಲೂ ಬಂಧೀಖಾನೆಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇರೋದು ಕಾರಗೃಹದಲ್ಲಿ ಅನ್ನೋದು ಒಂದನ್ನು ಹೊರತು ಪಡಿಸಿದರೆ ದುಡ್ಡು ಕೊಟ್ಟರೆ ಏನು ಬೇಕಾದರೂ ಇಲ್ಲಿ ಸಿಗುತ್ತೆ ಎಂಬ ಸ್ಥಿತಿ ಇದೆ. ರಾಜಾತಿಥ್ಯ ಪ್ರಕರಣಗಳ ಬಗ್ಗೆ ಸಾಲು ಸಾಲು ವರದಿಯಾಗುತ್ತಿದ್ದರೂ, ಕೈದಿಗಳ ಪುಂಡಾಟಕ್ಕೆ…

Read More

ಬೇರೆಯವರ ಪ್ಯಾನ್ ಕಾರ್ಡ್ ದಾಖಲೆ ಬಳಸಿ ಸಾಲ ಸೂರೆಗೊಂಡ ವಂಚಕರು; ನಿಮ್ಮ ಪ್ಯಾನ್ ದುರ್ಬಳಕೆ ಗುರುತಿಸುವುದು ಹೇಗೆ?

ಬೆಂಗಳೂರು, ಏಪ್ರಿಲ್ 8: ಆಧಾರ್, ಪ್ಯಾನ್ ಇತ್ಯಾದಿ ವೈಯಕ್ತಿಕ ದಾಖಲೆಗಳನ್ನು ಎಲ್ಲೆಂದರಲ್ಲಿ ನೀಡಬಾರದು ಎಂದು ಸರ್ಕಾರ ಪದೇ ಪದೇ ಹೇಳುತ್ತಿರುತ್ತದೆ. ವಂಚಕರು ಈ ದಾಖಲೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾದ ಘಟನೆಯೊಂದು ಈ ಎಚ್ಚರಿಕೆಯನ್ನು ಪುಷ್ಟೀಕರಿಸುತ್ತದೆ. ಒಬ್ಬ ವ್ಯಕ್ತಿಯ ಪ್ಯಾನ್ ಕಾರ್ಡ್ (PAN) ಅನ್ನು ಪಡೆದು, ದುರುಳರು 22 ಲಕ್ಷ ರೂ ಮೊತ್ತದ ಐದು ವಿವಿಧಗಳನ್ನು ಮಾಡಿದ್ದಾರೆ. ಉತ್ತಮವಾಗಿದ್ದ ಆ ವ್ಯಕ್ತಿಯ ಕ್ರೆಡಿಟ್ ಸ್ಕೋರ್ ಒಮ್ಮೆಗೇ ಕುಸಿದಿದೆ. ಈ ಘಟನೆಯನ್ನು ಟ್ಯಾಕ್ಸ್…

Read More

ಹಳೆ ಕೇಸ್​​ನಲ್ಲಿ ವಾಟಾಳ್ ನಾಗರಾಜ್ ಅರೆಸ್ಟ್, ಆಟೋದಲ್ಲಿ ಕೋರ್ಟ್​​ಗೆ ಕರೆದೊಯ್ದ ಪೊಲೀಸ್ರು

ಬೆಂಗಳೂರು, (ಏಪ್ರಿಲ್ 08): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Kannada Activist Vatal Nagaraj )  ಅವರನ್ನು ಬೆಂಗಳೂರಿನ ಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.  42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 08) ವಾಟಾಳ್ ನಾಗರಾಜ್ ಅವರನ್ನ ಬಂಧಿಸಿ ಆಟೋದಲ್ಲಿ ಕೋರ್ಟ್​​ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ…

Read More

ಸಖತ್ ಫೈಟ್ ಮಾಡ್ತಾರೆ ರಾಮ್ ಗೋಪಾಲ್ ವರ್ಮಾ: ವಿಡಿಯೋ

ರಾಮ್ ಗೋಪಾಲ್ ವರ್ಮಾ (Ram Gopal Varma) ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತಲೂ ತಮ್ಮ ವಿವಾದಾತ್ಮಕ ಹೇಳಿಕೆಗಳು, ಟ್ವೀಟುಗಳಿಂದಲೇ ಹೆಚ್ಚು ಜನಪ್ರಿಯರು. ಇತ್ತೀಚೆಗಷ್ಟೆ ತಾವು ಇನ್ನು ಮುಂದೆ ತೆಲುಗು ಸಿನಿಮಾ ಮಾಡುವುದಿಲ್ಲ, ಹಿಂದಿ ಸಿನಿಮಾ ಮಾಡುವುದಾಗಿ ಘೋಷಿಸಿ, ವಾಸ್ತವ್ಯವನ್ನು ಮುಂಬೈಗೆ ಶಿಫ್ಟ್ ಸಹ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ವರ್ಮಾ ಸಖತ್ ಆಗಿ ಫೈಟ್ ಮಾಡುತ್ತಿದ್ದಾರೆ. ಅವರ ಆಕ್ಷನ್​ ನೆಟ್ಟಿಗರನ್ನು ಅವಾಕ್ಕಾಗಿಸಿದೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದ ದೈಹಿಕ ಸಂಪರ್ಕ: ಪತಿಗೆ ಶಾಕ್​​ ಕೊಟ್ಟ ಹೈಕೋರ್ಟ್​​

ಬೆಂಗಳೂರು, ಏಪ್ರಿಲ್​​ 08: ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದಿಂದ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳಸಿರುವ ಪ್ರಕರಣ ಸಂಬಂಧ ಪತಿಯ ವಿರುದ್ಧದ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದಯ ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಅದಾಗಲೇ ದಂಪತಿ ಬೇರೆಯಾಗಿದ್ದರೂ ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ ಕಾರಣ ಪತಿಯ ವಿರುದ್ಧ ಐಪಿಸಿ ಸೆ. 376(ಬಿ) ಅಡಿ ಕೇಸ್ ದಾಖಲಾಗಿತ್ತು. ಪತ್ನಿ ದಾಖಲಿಸಿದ್ದ ಕೇಸ್ ರದ್ದು ಕೋರಿ ಹೈಕೋರ್ಟ್​ಗೆ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ…

Read More

ಚುನಾವಣೆ ಹತ್ತಿರ ಆದಾಗಲೇ ಡಿವೋರ್ಸ್ ವಿಷಯ ಬಹಿರಂಗ ಮಾಡಿದ್ದಕ್ಕೆ ದಳಪತಿ ವಿಜಯ್ ಗರಂ

ತಮಿಳುನಾಡು ಚುನಾವಣೆಯ (Tamil Nadu Elections) ಕಾವು ಏರುತ್ತಿರುವ ಬೆನ್ನಲ್ಲೇ, ನಟ ಮತ್ತು ರಾಜಕಾರಣಿ ದಳಪತಿ ವಿಜಯ್ ಅವರು ಬುಧವಾರ (ಏಪ್ರಿಲ್ 8) ತಿರುನಲ್ವೇಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾವೇಶದಲ್ಲಿ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ವೈಯಕ್ತಿಕ ಜೀವನದ ಏರಿಳಿತಗಳು ಮತ್ತು ತಮ್ಮ ಕೊನೆಯ ಸಿನಿಮಾ ‘ಜನ ನಾಯಕನ್’ ಎದುರಿಸುತ್ತಿರುವ ಸೆನ್ಸಾರ್ ಸಮಸ್ಯೆಗಳ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಅವರು ಆರೋಪಿಸಿದ್ದಾರೆ. ವಿಚ್ಛೇದನದ ಸುದ್ದಿ ಹೊರಬಂದಿದ್ದರ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ದಳಪತಿ ವಿಜಯ್ (Thalapathy Vijay)…

Read More

ಸೌರ ಯುಗಾದಿಯ ಪರಿಣಾಮದಿಂದ ಏನೆಲ್ಲ ಬದಲಾವಣೆಯಾಗಲಿದೆ…

ಸೌರಮಾನ ಯುಗಾದಿಯು ಏಪ್ರಿಲ್ 14ರಂದು ಆಗಲಿದ್ದು ಸಂದರ್ಭದಲ್ಲಿ ಗ್ರಹಗಳ ಸ್ಥಿತಿಗತಿಗಳು ಕೇವಲ ವೈಯಕ್ತಿಕ ಜೀವನದ ಮೇಲಲ್ಲದೆ, ಇಡೀ ಸಮಾಜದ ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಮಗ್ಗಲುಗಳ ಮೇಲೆ ಗಾಢವಾದ ಪರಿಣಾಮ ಬೀರಲಿವೆ. ಈ ಸಂಧಿಕಾಲದ ಕುರಿತು ಅವಲೋಕನ ಅಗತ್ಯ. ​ಸೌರಮಾನ ಯುಗಾದಿಯ ದಿನದಂದು ಗ್ರಹಗಳ ಸಂಯೋಜನೆಯು ಸಾಮಾಜಿಕವಾದ ಅನೇಕ ಬದಲಾವಣೆಗೆ ಕಾರಣವೂ ಆಗಲಿದೆ. ​ಈ ಬಾರಿಯ ಯುಗಾದಿಯು ಪರಿವರ್ತನೆಯ ಕಾಲ ಎಂದು ಕರೆಯಲ್ಪಡಲು ಪ್ರಮುಖ ಕಾರಣವೆಂದರೆ ಬೃಹತ್ ಗ್ರಹಗಳಾದ ಶನಿ, ರಾಹು ಮತ್ತು ಗುರುವಿನ ವಿಶಿಷ್ಟ ನಡೆ….

Read More

ಟಾಟಾ ಏಸ್, ಕಾರಿನ ನಡುವೆ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಹಾವೇರಿ, ಏಪ್ರಿಲ್​​ 08: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ವಾಹನ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು,…

Read More

ಆತನಿಗೆ ಮಹಿಳೆಯರ ಒಳ ಉಡುಪು ಮಾತ್ರ ಬೇಕು: ನಮಗೆ ತುಂಬಾ ಭಯ ಆಗ್ತಿದೆ ಎಂದ ಗೃಹಿಣಿ

ಚಾಮರಾಜನಗರ, ಏ.8: ಜಿಲ್ಲೆಯಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುವ ಸೈಕೋಪಾತ್ ಒಬ್ಬನ ಉಪಟಳದಿಂದ ಸ್ಥಳೀಯ ನಿವಾಸಿಗಳು, ವಿಶೇಷವಾಗಿ ಗೃಹಿಣಿಯರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಹೌಸಿಂಗ್ ಬೋರ್ಡ್ ಕಾಲೋನಿ, ಇಂದಿರಾನಗರ ಮತ್ತು ಕರಿನಂಜಿಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಸುಮಾರು ಒಂದೂವರೆ ತಿಂಗಳಿನಿಂದ ಈ ವಿಚಿತ್ರ ಕೃತ್ಯಗಳು ವರದಿಯಾಗುತ್ತಿವೆ. ರಾತ್ರಿ 12 ರಿಂದ ಬೆಳಗಿನ ಜಾವ 3 ಗಂಟೆಯ ನಡುವೆ, ಒಬ್ಬ ಅಪರಿಚಿತ ವ್ಯಕ್ತಿ ಮಹಿಳೆಯರ ವೇಷಧರಿಸಿ ಮನೆಗಳ ಮುಂದೆ ಒಣಗಲು ಹಾಕಿರುವ ಮಹಿಳೆಯರ ಒಳ ಉಡುಪುಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದಾನೆ. ಈ…

Read More

14 ತಿಂಗಳು ಕೋಮಾದಲ್ಲಿದ್ದ ಅಮೆರಿಕದ ಭಾರತೀಯ ವಿದ್ಯಾರ್ಥಿನಿಯ ದುರಂತ ಅಂತ್ಯ

ಮುಂಬೈ, ಏಪ್ರಿಲ್ 8: ಆಕೆ ಎಷ್ಟು ಸುಂದರಿಯೋ ಅಷ್ಟೇ ಜಾಣೆ. ಹೀಗಾಗಿಯೇ ತನ್ನ 35ನೇ ವಯಸ್ಸಿನಲ್ಲೂ ಹೊಸತೇನಾದರೂ ಕಲಿಯಬೇಕೆಂಬ ಬಯಕೆಯಿಂದ ಅವರು ಅಮೆರಿಕಕ್ಕೆ ಹಾರಿದ್ದರು. ಆದರೆ, ಅದೊಂದು ಅಪಘಾತ ಆಕೆಯ ಕನಸನ್ನು ನುಚ್ಚುನೂರು ಮಾಡಿಬಿಟ್ಟಿತ್ತು. ಮಗಳು ವಿದೇಶದಲ್ಲಿ ಓದಿ ಜೀವನದಲ್ಲಿ ಹೆಚ್ಚೆಚ್ಚು ಸಾಧನೆ ಮಾಡುತ್ತಾಳೆ ಎಂಬ ಕನಸು ಕಂಡಿದ್ದ ಆಕೆಯ ತಂದೆ ತಮ್ಮ ಮಗಳ ಸ್ಥಿತಿಯನ್ನು ನೋಡಿ ಮಮ್ಮಲ ಮರುಗಿದ್ದರು. ಭೀಕರ ಕಾರು ಅಪಘಾತದಲ್ಲಿ (Car Accident) ಗಾಯಗೊಂಡಿದ್ದ ನೀಲಂ ಶಿಂಧೆ (Neelam Tanaji Shinde) ಎಂಬ…

Read More