ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ
ಬೆಳಗಾವಿ, ಏಪ್ರಿಲ್ 08: ಸಿದ್ದೇಶ್ವರ ಜಾತ್ರೆಯಲ್ಲಿ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಕೊಲೆ (Murder) ನಡೆದಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿದೆ. ಸಂಗನಗೌಡ(50) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಘಟನೆ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಸಂಗನಗೌಡ ಮತ್ತು ಆರೋಪಿಗಳ ಎರಡು ಕುಟುಂಬಗಳ ಮಧ್ಯೆ ಕೆಲವು ವರ್ಷಗಳಿಂದ ವೈಷಮ್ಯ ಇತ್ತು. ಸಿದ್ದೇಶ್ವರ ಜಾತ್ರೆ ವೇಳೆ ರಾಜಕೀಯ ವಿರೋಧಿಗಳ ಮನೆ ಮುಂದೆ ಸಂಗನಗೌಡ ಪಾಟೀಲ್…