Headlines

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಫಿನಾಲೆಗೆ ವೇದಿಕೆ ರೆಡಿ; ಯಾರಾಗ್ತಾರೆ ಚಾಂಪಿಯನ್?

ಜೀ ಕನ್ನಡದಲ್ಲಿ ಪ್ರಸಾರ ಆಗುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ (DKD) ಮೂಲಕ ಅನೇಕ ಪ್ರತಿಭೆಗಳಿಗೆ ವೇದಿಕೆ ಸಿಕ್ಕಿದೆ.ಈಗ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 2025’ ಅಂತಿಮ ಹಂತ ತಲುಪಿದೆ. ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿಂದ 9:30ರವರೆಗೆ ಫಿನಾಲೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ಈ ವೇಳೆ ವಿಜೇತರ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಈ ಬಾರಿಯ ಡಿಕೆಡಿ ಚಾಂಪಿಯನ್ ಯಾರಾಗುತ್ತಾರೆ ಎನ್ನುವ ಕುತೂಹಲ ಮೂಡಿದೆ….

Read More

ವಿವಾದ ಪುರುಷರಾದ್ರಾ ಮಲ್ಲಿಕಾರ್ಜುನ ಖರ್ಗೆ?: ಟೀಕಿಸುವ ಭರದಲ್ಲಿ ಸಾಲು ಸಾಲು ಕಾಂಟ್ರವರ್ಸಿ!

ಬೆಂಗಳೂರು, ಏಪ್ರಿಲ್​​ 08: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್​​ನ ಹಿರಿಯ ರಾಜಕಾರಣಿ. ಎಐಸಿಸಿಯ ಅಧ್ಯಕ್ಷರೂ ಆಗಿರುವ ಇದೇ ಖರ್ಗೆ ಅದ್ಯಾಕೋ ಗೊತ್ತಿಲ್ಲ ಬೇಕು ಬೇಕಂತಲೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಮೊನ್ನೆ ಭಾನುವಾರ ಅಸ್ಸಾಂನ ನಿಲಾಂಬಜಾರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಇವರು, ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್ ಅಥವಾ ಬಿಜೆಪಿ ಕೂಡ ಅದೇ ರೀತಿಯ ಹಾವು, ಅವನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದಿದ್ದು, ಇದೀಗ ಭಾರೀ…

Read More

ಈ ಬಾಬಾ ನನ್ನನ್ನು ಅತ್ಯಾಚಾರ ಮಾಡಿದ್ದಾನೆ: ದಾರಿಯಲ್ಲಿ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ

ಮಥುರಾ, ಏ.8: ಉತ್ತರ ಪ್ರದೇಶದ ಮಥುರಾದಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿತ ವ್ಯಕ್ತಿಯನ್ನು ಬಾಲಕಿಯು ‘ಬಾಬಾ’ (ಸನ್ಯಾಸಿ ಅಥವಾ ಸ್ವಯಂ ಘೋಷಿತ ದೇವಮಾನವ) ಎಂದು ಗುರುತಿಸಿದ್ದು, ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದೆ. ವರದಿಗಳ ಪ್ರಕಾರ, ಬಾಲಕಿಯು ರಸ್ತೆಯ ಬದಿಯಲ್ಲಿ ಅಳುತ್ತಾ, ತನಗೆ ಸಹಾಯ ಮಾಡುವಂತೆ ದಾರಿಹೋಕರನ್ನು ವಿನಂತಿಸುತ್ತಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ. ತಾನು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಅಳುತ್ತಲೇ…

Read More

ಬೆಂಗಳೂರಿನಲ್ಲಿ ಮನೆ ಕಟ್ಟೋರು, ಕಟ್ಟಿದವರು ಈ ವಿಚಾರ ತಿಳಿದಿರಲೇಬೇಕು!

ಬೆಂಗಳೂರು, ಏಪ್ರಿಲ್ 8: ಸಿಲಿಕಾನ್ ಸಿಟಿಯ ಬೆಂಗಳೂರಿನಲ್ಲಿ (Bengaluru) ಸ್ವಂತ ಮನೆ ಕಟ್ಟಬೇಕು ಎಂಬುದು ಪ್ರತಿಯೊಬ್ಬರ ಕನಸು. ಆದರೆ, ನಗರ ಪಾಲಿಕೆಯ ಕಟ್ಟುನಿಟ್ಟಿನ ನಿಯಮಗಳಿಂದಾಗಿ ಅನೇಕರು ಅರಿಯದೇ ‘ಅಕ್ರಮ ಕಟ್ಟಡ’ಗಳ ಮಾಲೀಕರಾಗಿಬಿಡುತ್ತಾರೆ. ಇಂತಹವರಿಗೆ ರಾಜ್ಯ ಸರ್ಕಾರವು ಈಗ ದೊಡ್ಡ ಮಟ್ಟದ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳಿಗೆ ತಿದ್ದುಪಡಿ ತರಲು ಕರಡು ಅಧಿಸೂಚನೆಯನ್ನು ಇತ್ತೀಚೆಗೆ ಪ್ರಕಟಿಸಲಾಗಿದ್ದು, ಸೆಟ್ ಬ್ಯಾಕ್ ಉಲ್ಲಂಘನೆಯ ಮಿತಿಯನ್ನು ಹೆಚ್ಚಿಸಲಾಗಿದೆ. ಈ ಸಂದರ್ಭದಲ್ಲಿ, ಸೆಟ್ ಬ್ಯಾಕ್…

Read More

ಕದನವಿರಾಮ ಬೆನ್ನಲ್ಲೇ ತೈಲ ಬೆಲೆ ಐತಿಹಾಸಿಕ ಕುಸಿತ; ಪೆಟ್ರೋಲ್, ಡೀಸಲ್ ಬೆಲೆಯೂ ಇಳಿಯುತ್ತಾ?

ನವದೆಹಲಿ, ಏಪ್ರಿಲ್ 8: ಅಮೆರಿಕ ಇರಾನ್ ಕದನ ವಿರಾಮ ಘೋಷಣೆಯಾಗುತ್ತಿದ್ದಂತೆಯೇ ಜಾಗತಿಕ ಕಚ್ಛಾ ತೈಲ (global crude oil) ಮಾರುಕಟ್ಟೆ ಗರಿಗೆದರಿ ನಿಂತಿದೆ. ತೈಲ ಬೆಲೆ ಒಮ್ಮೆಯೇ ಶೇ. 20ರಷ್ಟು ಕುಸಿದಿದೆ. ಒಂದು ಬ್ಯಾರಲ್ ತೈಲ ಬೆಲೆ 117.63 ಡಾಲರ್ ಇದ್ದದ್ದು 91.05 ಡಾಲರ್​ಗೆ ಇಳಿದಿದೆ. ಕೆಲವೇ ಗಂಟೆಯಲ್ಲಿ ತೈಲ ಬೆಲೆ ಬರೋಬ್ಬರಿ 26 ಡಾಲರ್​ಗಳಷ್ಟು ಕುಸಿತ ಕಂಡಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕುಸಿತ ದಾಖಲಾದ ಸಂದರ್ಭಗಳಲ್ಲಿ ಇದೂ ಒಂದು. ಕೋವಿಡ್ ವೇಳೆ ಈ ರೀತಿಯ ಮಹಾ…

Read More

ರಾತ್ರಿ ಮಲಗಿದ್ದವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಆರು ಜನರ ಸ್ಥಿತಿ ಗಂಭೀರ

ಗದಗ, ಏಪ್ರಿಲ್ 08: ಜಿಲ್ಲೆಯ ಮುಂಡರಗಿ (Gadag) ತಾಲೂಕಿನ ಡೋಣಿ ತಾಂಡಾದಲ್ಲಿ ನಡುರಾತ್ರಿ ನಡೆದ ಭೀಕರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆ ಮುಂಭಾಗ ಗಾಢ ನಿದ್ರೆಯಲ್ಲಿ ಮಲಗಿದ್ದ ಆರು ಜನರ ಮೇಲೆ ಗ್ರಾಮದ ವ್ಯಕ್ತಿಯೊಬ್ಬನು ಮಾರಣಾಂತಿಕ ಹಲ್ಲೆ  ನಡೆಸಿರುವುದು ಆತಂಕ ಸೃಷ್ಟಿಸಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಂಡಾ ನಿವಾಸಿಗಳು ಕಂಗಾಲು ಘಟನೆ ತಡರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ನಡೆದಿದ್ದು, ಹರ್ಜಪ್ಪ ಲಮಾಣಿ ಎಂಬ ವ್ಯಕ್ತಿ ದೊಣ್ಣೆಯಿಂದ ಮಲಗಿದ್ದವರ ಹಲ್ಲೆ ಮನಸೋಇಚ್ಛೆ ಮಾಡಿದ್ದಾನೆ. ಹಲ್ಲೆಗೊಳಗಾದ…

Read More

ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆಗೆ ಭಾರಿ ಆಕ್ಷೇಪ

ಚೆನ್ನೈ, ಏಪ್ರಿಲ್ 08: ಅಂದು ಸನಾತನ ಧರ್ಮ ನಿರ್ಮೂಲನೆಯ ಮಾತನಾಡಿದ್ದ, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಇಂದು ತಿಲಕವಿಟ್ಟಿದ್ದಾರೆ. ಆದರೆ ಫೋಟೊ ತೆಗೆದ ಮೇಲೆ ಒಂದೇ ಒಂದು ಕ್ಷಣವೂ ಹಣೆಯಲ್ಲಿ ತಿಲಕವಿಟ್ಟುಕೊಳ್ಳದೆ ಬಟ್ಟೆಯಿಂದ ಅಳಿಸಿಹಾಕಿದ್ದಾರೆ. ಕೇವಲ ಚುನಾವಣೆಗಾಗಿ ಮಾತ್ರ ಈ ನಾಟಕವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬರಲಿದೆ. ನಾಮಪತ್ರ ಸಲ್ಲಿಕೆ ಮಾರ್ಚ್​ 30ರಿಂದ ಆರಂಭವಾಗಿದೆ. ಏಪ್ರಿಲ್ 6ಕ್ಕೆ ಕೊನೆಗೊಂಡಿದೆ. ಮಂಗಳವಾರ ನಾಮಪತ್ರಗಳ…

Read More

ಚಂದ್ರದ್ರೋಣ ಪರ್ವತದಲ್ಲಿ ಶ್ರೀನಂದಾ ನಾಪತ್ತೆ: ಈ ವಿಡಿಯೋ ಬಳಿಕ ಕೆಲವೇ ನಿಮಿಷಗಳಲ್ಲಿ ಗಯಾಬ್

ಚಿಕ್ಕಮಗಳೂರು, ಏಪ್ರಿಲ್ 08): ಕೇರಳ ಮೂಲದ 14 ವರ್ಷದ  ಶ್ರೀ ನಂದಾ ಎನ್ನುವ ಹುಡುಗಿ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ (Chandradrona Mountains) ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದಾಳೆ. ಆದ್ರೆ, ನಾಪತ್ತೆಯಾಗುವ ಕೆಲವು ನಿಮಿಷಗಳ ಮುನ್ನ ವಿಡಿಯೋ ಮಾಡಿಕೊಂಡಿದ್ದಾಳೆ. ಸಂಬಂಧಿ ಬಾಲಕಿಯೊಂದಿಗೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದು, ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಶ್ರೀ ನಂದಾ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹೀಗಾಗಿ ಶ್ರೀ ನಂದಾ ನಾಪತ್ತೆ ಹಿಂದೆ ಹಲವು…

Read More

ಕಾಲೇಜು ವಿದ್ಯಾರ್ಥಿ ಸಾವಿನ ಸುತ್ತ ಹತ್ತಾರು ಅನುಮಾನ: ಸ್ಫೋಟಕ ಆರೋಪ ಮಾಡಿದ ಮೃತನ ತಂದೆ

ಬೆಂಗಳೂರು, ಏಪ್ರಿಲ್​​ 08:  ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಯಲಹಂಕದಲ್ಲಿರೋ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​​ನಲ್ಲಿ ನಿನ್ನೆ ನಡೆದಿತ್ತು. ಘಟನೆಯಲ್ಲಿ ಮೂಲತಃ ಜಾರ್ಖಂಡ್​​ನ ರಾಂಚಿ ನಿವಾಸಿ 21 ವರ್ಷದ ಲಕ್ಷ್ಯ ಮಿಶ್ರಾ ಮೃತಪಟ್ಟಿದ್ದರು. ಯಲಹಂಕ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ ವಿದ್ಯಾರ್ಥಿ ನಸುಕಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್​​ನ 9ನೇ ಮಹಡಿಯಿಂದ ಜಿಗಿದಿದ್ದರು. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಆದರೀಗ ವಿದ್ಯಾರ್ಥಿ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ….

Read More

RCBಯ ಪಂಚ ಬೌಲರ್​ಗಳೇ ವೈಭವ್​ ಸೂರ್ಯವಂಶಿಯ ಮುಂದಿನ ಟಾರ್ಗೆಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ದಿಗ್ಗಜ ಬೌಲರ್‌ಗಳ ನಿದ್ದೆಗೆಡಿಸುತ್ತಿದ್ದಾರೆ. ಇತ್ತೀಚೆಗೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀರ್ ಬುಮ್ರಾ ಅವರ ಓವರ್‌ನಲ್ಲಿ ಅಬ್ಬರಿಸಿದ್ದ ವೈಭವ್, ಈಗ ಏಪ್ರಿಲ್ 10 ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯಕ್ಕೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬುಮ್ರಾ ವಿರುದ್ಧ ‘ಬಿರುಗಾಳಿ’! ಮುಂಬೈ ಇಂಡಿಯನ್ಸ್ ವಿರುದ್ಧದ ಮಳೆಬಾಧಿತ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ತೋರಿದ ಆಟ ಅಪ್ರತಿಮವಾಗಿತ್ತು. ವಿಶ್ವದ…

Read More