Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ
ಟೆಹ್ರಾನ್, ಏಪ್ರಿಲ್ 08: ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ ಎಂದಿದ್ದಾರೆ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ ಇಸ್ರೇಲ್ ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಅಮೆರಿಕ ಮತ್ತು…