RBI Policy: ಆರ್ಬಿಐನಿಂದ ಬಡ್ಡಿದರದಲ್ಲಿ ಇಲ್ಲ ಬದಲಾವಣೆ; ಹಣದುಬ್ಬರ ಶೇ. 4.6 ಎಂದು ಅಂದಾಜು
ನವದೆಹಲಿ, ಏಪ್ರಿಲ್ 8: ಭಾರತೀಯ ರಿಸರ್ವ್ ಬ್ಯಾಂಕ್ನ ಮಾನಿಟರಿ ಪಾಲಿಸಿ ಸಮಿತಿಯು (RBI MPC meeting) ನಿರೀಕ್ಷೆಯಂತೆ ರಿಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಆರ್ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಆರ್ಬಿಐನ ರಿಪೋ ದರ ಅಥವಾ ಬಡ್ಡಿದರವು (Repo Rate) ಶೇ. 5.25ರಲ್ಲಿ ಮುಂದುವರಿಯಲಿದೆ. ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ಇದ್ದರಿಂದ ಬಡ್ಡಿದರ ಇಳಿಸದೇ ಇರುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಎಂಪಿಸಿ ಸಭೆ ಬಳಿಕ ಆರ್ಬಿಐ…