ಕೋಗಿಲು ಬಡಾವಣೆ ತೆರವು: ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ ಎಂದ ಸಿಎಂ ಸಿದ್ಧರಾಮಯ್ಯ – Kannada News | Bengaluru Kogilu Demolition: Unauthorised Structures Razed, Migrants to Receive Aid
ಬೆಂಗಳೂರು, ಡಿ.27: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಹಲವು ಕುಟುಂಬಗಳನ್ನು ನಿರ್ಗತಿಕರನ್ನಾಗಿ ಮಾಡಿದೆ. 2021ರಿಂದಲೂ ಈ ಪ್ರದೇಶದಲ್ಲಿನ ನಿವಾಸಿಗಳು ಅನಧಿಕೃತವಾಗಿ ನೆಲೆಸಿದ್ದರು. ಈ ವಸತಿಗಳು ಐದು ಎಕರೆ ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದ ಕಾರಣ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತಿದ್ದವು. ನಿವಾಸಿಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದರೂ, ಅವರು ಜಾಗ ಖಾಲಿ ಮಾಡಿರಲಿಲ್ಲ. ಇದಾದ ಬಳಿಕ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕಮಿಷನರ್ ಮತ್ತು…