IPL 2026: ತನ್ನ 3ನೇ ಪಂದ್ಯದಲ್ಲಿ ಮತ್ತೊಂದು ಬಲಿಷ್ಠ ತಂಡವನ್ನು ಎದುರಿಸಲಿದೆ ಆರ್ಸಿಬಿ..!
2026 ರ ಐಪಿಎಲ್‌ನಲ್ಲಿ (IPL 2026) ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಆರ್ಸಿಬಿ (RCB) ಇದುವರೆಗೆ ಆಡಿರುವ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ತನ್ನ ತವರಿನಲ್ಲಿ ಮೊದಲ ಎರಡು ಪಂದ್ಯಗಳನ್ನು ಆಡಿದ ಆರ್ಸಿಬಿ ಎರಡು ಪಂದ್ಯಗಳಲ್ಲೂ ಏಕಪಕ್ಷೀಯ ಗೆಲುವು ಸಾಧಿಸಿದೆ. ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ್ದ ಆರ್ಸಿಬಿ, ಅದಾದ ಬಳಿಕ ನಡೆದಿದ್ದ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್ಕೆ ತಂಡವನ್ನು ಕೂಡ ಏಕಪಕ್ಷೀಯವಾಗಿ ಸೋಲಿಸಿತ್ತು….