ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಇಂಡಿಯನ್ ಪ್ರೀಮಿಯರ್ ಲೀಗ್ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ಸಂಘಟಿಸಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಲೈನಲ್ ಹೊಂದಿರುವ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಎಸೆದ ಶಮಿ ನೀಡಿದ್ದು ಕೇವಲ 9 ರನ್ಗಳು ಮಾತ್ರ. ಇದರ ನಡುವೆ 2 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ. ವಿಶೇಷ ಎಂದರೆ ಮೊಹಮ್ಮದ್ ಶಮಿ ತಮ್ಮ 24 ಎಸೆತಗಳಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಂಡಿಲ್ಲ. ಅಂದರೆ ಶಮಿ ಓವರ್ನಲ್ಲಿ ಫೋರ್ ಅಥವಾ ಸಿಕ್ಸ್…