Category Archives: Blog

Your blog category

ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!

ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!

ಚಿಕ್ಕಮಗಳೂರು, ಏ.6: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ.

ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಸೇರಿ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಇವರು, ಇಂದು ಬೆಳಿಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.

ಇದನ್ನೂ ಓದಿ: ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲೇ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ. ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಮತ್ತು ಕುಟುಂಬದವರಲ್ಲಿ ಈ ಘಟನೆ ತೀವ್ರ ಶೋಕವನ್ನುಂಟು ಮಾಡಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Rajat Patidar: ಒತ್ತಡಕ್ಕೆ ಒಳಗಾದ್ರೆ ನಾನು ಅವರತ್ತ ನೋಡುತ್ತೇನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡವು 43 ರನ್​ಗಳ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ತಂಡ ಸಾಂಘಿಕ ಪ್ರದರ್ಶನದ ಬಗ್ಗೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

“ಆರಂಭದಲ್ಲಿ ಪಿಚ್ ಸ್ವಲ್ಪ ನಿಧಾನಗತಿಯಲ್ಲಿತ್ತು. ಆದರೆ ವಿರಾಟ್ ಭಾಯ್ ಮತ್ತು ಫಿಲ್ ಸಾಲ್ಟ್ ಉತ್ತಮ ಆರಂಭ ನೀಡಿದರು. ಅವರ ಬ್ಯಾಟಿಂಗ್ ಅದ್ಭುತವಾಗಿತ್ತು,” ಎಂದು ರಜತ್ ಶ್ಲಾಘಿಸಿದರು.

ಇನ್ನು 13ನೇ ಓವರ್ ನಂತರ ಪಂದ್ಯದ ವೇಗವನ್ನು ಹೆಚ್ಚಿಸಿದ ಬಗ್ಗೆ ಕೇಳಿದಾಗ, ಬೌಲರ್‌ಗಳ ಮೇಲೆ ಒತ್ತಡ ಹೇರುವುದು ತಮ್ಮ ಗುರಿಯಾಗಿತ್ತು. ಅದರಂತೆ ನಾನು ಹಾಗೂ ಟಿಮ್ ಡೇವಿಡ್ ಬಿರುಸಿನ ಬ್ಯಾಟಿಂಗ್ ಮಾಡಿದೆವು ಎಂದರು.

ವಿಶೇಷವಾಗಿ ಟಿಮ್ ಡೇವಿಡ್ ಅವರ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಾಟಿದಾರ್, “ಟಿಮ್ ಡೇವಿಡ್ ವಿಶ್ವದ ಅತ್ಯುತ್ತಮ ಫಿನಿಶರ್‌ಗಳಲ್ಲಿ ಒಬ್ಬರು. ಅವರು ಹೊಡೆದ 106 ಮೀಟರ್‌ಗಳ ಬೃಹತ್ ಸಿಕ್ಸರ್ ಅನ್ನು ನಾನು ನಾನ್-ಸ್ಟ್ರೈಕರ್ ತುದಿಯಿಂದ ಎಂಜಾಯ್ ಮಾಡಿದೆ. ಅವರು ಕಳೆದ ವರ್ಷವೂ ಉತ್ತಮವಾಗಿ ಆಡಿದ್ದರು, ಅವರ ಸ್ಥಿರತೆ ತಂಡಕ್ಕೆ ದೊಡ್ಡ ಬಲ,” ಎಂದರು.

ಬೌಲರ್‌ಗಳ ಶಿಸ್ತುಬದ್ಧ ಪ್ರದರ್ಶನ:

ತಂಡದ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡುತ್ತಾ, ಜೇಕಬ್ ಡಫಿ ಅವರ ಔಟ್‌ಸ್ವಿಂಗರ್‌ಗಳು ಮತ್ತು ಅವರು ಪಡೆದ 3 ವಿಕೆಟ್‌ಗಳು ತಂಡವನ್ನು ಗೆಲುವಿನ ಹತ್ತಿರ ತಂದವು.

ಡೆತ್ ಓವರ್‌ಗಳಲ್ಲಿ ಭುವಿ (ಭುವನೇಶ್ವರ್ ಕುಮಾರ್) ಮತ್ತು ಅಭಿನಂದನ್ ಎಸೆದ ಯಾರ್ಕರ್ಸ್‌ಗಳು ನೋಡಲು ಅದ್ಭುತವಾಗಿದ್ದವು.

ಅದರಲ್ಲೂ ನಾನು ಒತ್ತಡಕ್ಕೆ ಒಳಗಾದರೆ ಯಾವಾಗಲೂ ಕೃನಾಲ್ ಪಾಂಡ್ಯರತ್ತ ನೋಡುತ್ತೇನೆ.  ತಂಡಕ್ಕೆ ವಿಕೆಟ್ ಅಗತ್ಯವಿದ್ದಾಗ ಯಾವಾಗಲೂ ನಾನು ಕೆ.ಪಿ (ಕೃನಾಲ್ ಪಾಂಡ್ಯ) ಕಡೆ ಮುಖ ಮಾಡುತ್ತೇನೆ. ಏಕೆಂದರೆ ಅವರ ಮೇಲೆ ನನಗೆ ಅತೀವ ನಂಬಿಕೆಯಿದೆ ಎಂದು ರಜತ್ ಪಾಟೀದಾರ್ ತಿಳಿಸಿದರು.

ಇನ್ನು ಸುಯಶ್ ಶರ್ಮಾ ಅವರ ನಾಲ್ಕು ಓವರ್‌ಗಳ ಶಿಸ್ತುಬದ್ಧ ಬೌಲಿಂಗ್ ಮತ್ತು ರೊಮಾರಿಯೋ ಶೆಫರ್ಡ್ ಅವರ ಒಂದು ಓವರ್‌ನ ಸಾಂಘಿಕ ಪ್ರಯತ್ನ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು ಎಂದು ಇದೇ ವೇಳೆ ರಜತ್ ಪಾಟಿದಾರ್ ಸ್ಮರಿಸಿದರು.

ಮುಂದಿನ ಪಂದ್ಯಗಳತ್ತ ಚಿತ್ತ:

ಬ್ಯಾಕ್ ಟು ಬ್ಯಾಕ್ ಗೆಲುವುಗಳೊಂದಿಗೆ ಆರ್​ಸಿಬಿ ತಂಡದ ಎಲ್ಲಾ ಆಟಗಾರರು ಈಗ ಉತ್ತಮ ಮಾನಸಿಕ ಸ್ಥಿತಿಯಲ್ಲಿದ್ದಾರೆ ಮತ್ತು ಫಾರ್ಮ್‌ನಲ್ಲಿದ್ದಾರೆ. ಮುಂದಿನ ಪಂದ್ಯಗಳಲ್ಲೂ ಇದೇ ಉತ್ಸಾಹದೊಂದಿಗೆ ಕಣಕ್ಕಿಳಿಯಲಿದ್ದೇವೆ ಎಂದು ನಾಯಕ ರಜತ್ ಪಾಟಿದಾರ್ ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಸರ್ಫರಾಝ್ ಖಾನ್

ಅಂದಹಾಗೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 10 ರಂದು ಆಡಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಾಳಿ ರಾಜಸ್ಥಾನ್ ರಾಯಲ್ಸ್. ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಹ್ಯಾಟ್ರಿಕ್ ಗೆಲುವು ತನ್ನದಾಗಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

 

Source link

ಬಸ್‌ ಸ್ಟ್ಯಾಂಡ್‌ನಲ್ಲಿ ಮಲಗುತ್ತಿದ್ದ ಬೆಳಗಾವಿ ಯುವಕ ಈಗ ರಾಜ್ಯದ ಅತ್ಯುತ್ತಮ ಶಿಕ್ಷಕ!

ಬೆಳಗಾವಿ, ಏ.6: ಬಡತನ ಎಂಬುದನ್ನು ಸಾಧನೆಗೆ ತೊಂದರೆಯನ್ನು ಉಂಟು ಮಾಡುವುದಿಲ್ಲ. ಇದೀಗ ಇಲ್ಲೊಂದು ಶಿಕ್ಷಕರ ಸಾಧನೆಗೆ ದೊಡ್ಡ ಮಟ್ಟದ ಪ್ರಶಸ್ತಿ ಲಭಿಸಿದೆ. ಅವರ ಸಾಧನೆ ಇದೀಗ ಬೆಳಗಾವಿಯ ಯುವಕರಲ್ಲಿ ಒಳ್ಳೆಯ ಕನಸುಗಳನ್ನು ಮೂಡಿಸಿದೆ. ಶಿಕ್ಷಕ ಯಾವಾಗಲೂ ವಿದ್ಯಾರ್ಥಿಯಾಗಿಯೇ ಇರಬೇಕು ಎಂಬ ಸರಳ ಮಂತ್ರವನ್ನು ನಂಬಿರುವ ರಾಜಶೇಖರ್ ರಗಟಿ (43) ಅವರು ಇಂದು ಕರ್ನಾಟಕದ ಮನೆಮಾತಾಗಿದ್ದಾರೆ. 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸ್ವೀಕರಿಸಿರುವ ಇವರ ಯಶೋಗಾಥೆಯ ಹಿಂದೆ ಹಸಿವು, ಕಷ್ಟ ಮತ್ತು ಬದ್ಧತೆಯ ದೊಡ್ಡ ಕಥೆಯನ್ನೇ ಜೋಡಿಸಿದ್ದಾರೆ.

1981ರಲ್ಲಿ ವಿಜಯಪುರ ಜಿಲ್ಲೆಯ ಹಲಸಂಗಿ ಗ್ರಾಮದಲ್ಲಿ ಜನಿಸಿದ ರಾಜಶೇಖರ್ ಅವರ ಆರಂಭಿಕ ಜೀವನ ಸುಲಭವಾಗಿರಲಿಲ್ಲ. ವಿಜ್ಞಾನ ಕಾಲೇಜು ಬಿಟ್ಟ ನಂತರ ಸುಮಾರು ಮೂರು ವರ್ಷಗಳ ಕಾಲ ಅವರು ಬದುಕಿಗಾಗಿ ಹರಸಾಹಸ ಪಟ್ಟಿದ್ದರು. ಹೋಟೆಲ್ ಕಾರ್ಮಿಕನಾಗಿ, ಮೆಡಿಕಲ್ ಶಾಪ್ ಸಹಾಯಕನಾಗಿ ಕೆಲಸ ಮಾಡಿದ್ದರು. ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳ ಮೇಲೆ ಪತ್ರಿಕೆಗಳನ್ನು ಹೊದ್ದುಕೊಂಡು ಚಳಿಯಲ್ಲಿ ಮಲಗಿದ ದಿನಗಳನ್ನೂ ಅವರು ನೆನಪಿಸಿಕೊಂಡಿದ್ದಾರೆ.

ತಂದೆಯ ಪ್ರೇರಣೆಯಿಂದ ಮತ್ತೆ ಶಿಕ್ಷಣ ಆರಂಭಿಸಿದ ಅವರು, ಪಿಯುಸಿಯಲ್ಲಿ ಶೇ. 56 ಹಾಗೂ ಬಿಎ ಪದವಿಯಲ್ಲಿ ಶೇ. 70 ಅಂಕ ಗಳಿಸಿ ಸಾಧನೆಯ ಹಾದಿ ಹಿಡಿದರು. ಕೆಎಎಸ್ (KAS), ಪಿಎಸ್‌ಐ (PSI), ಎಫ್‌ಡಿಎ (FDA) ಪರೀಕ್ಷೆಗಳಲ್ಲಿ ಅಲ್ಪ ಅಂಕಗಳ ಅಂತರದಿಂದ ಸೋತರೂ ಧೃತಿಗೆಡದ ಅವರು, ಆ ಸೋಲನ್ನೇ ಪಾಠವಾಗಿ ಬಳಸಿಕೊಂಡರು. “ನಾನು ಅನೇಕ ಬಾರಿ ಸೋತಿದ್ದೇನೆ, ಅದಕ್ಕೇ ನನ್ನ ವಿದ್ಯಾರ್ಥಿಗಳಿಗೆ ಗುರಿ ತಲುಪುವುದು ಹೇಗೆ ಎಂದು ಕಲಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಿಲೋಮೀಟರ್‌ಗೆ ಕೇವಲ 50 ಪೈಸೆ ಖರ್ಚು! ಎಲ್‌ಪಿಜಿ ಬೆಲೆ ಏರಿಕೆ ನಡುವೆ ಗಮನ ಸೆಳೆಯುತ್ತಿದೆ ಎಲೆಕ್ಟ್ರಿಕ್ ಆಟೋಗಳ ಮ್ಯಾಜಿಕ್

2010ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ ರಾಜಶೇಖರ್, ಬೆಳಗಾವಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ‘ಸಮಾಜ ವಿಜ್ಞಾನ ಪ್ರಯೋಗಾಲಯ’ ಸ್ಥಾಪಿಸಿದ ಕೀರ್ತಿ ಹೊಂದಿದ್ದಾರೆ. ಹಳೆಯ ವಿದ್ಯಾರ್ಥಿಗಳ ನೆರವಿನಿಂದ ಡಿಜಿಟಲ್ ಉಪಕರಣಗಳು, ನಕ್ಷೆಗಳು ಮತ್ತು ಮಾದರಿಗಳನ್ನು ಒಳಗೊಂಡ ಈ ಲ್ಯಾಬ್ ಗ್ರಾಮೀಣ ಮಕ್ಕಳಿಗೆ ವರದಾನವಾಗಿದೆ. ಅವರ ಶಾಲೆಯ ಸಮಾಜ ವಿಜ್ಞಾನ ಫಲಿತಾಂಶ ಸತತವಾಗಿ ಶೇ. 100 ರಷ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ತಾಂತ್ರಿಕ ದೋಷ, ನಿಂತಿದ್ದ ರೈಲಿನಿಂದ ಇಳಿದ ಪ್ರಯಾಣಿಕನ ಮೇಲೆ ಹರಿದ ಮತ್ತೊಂದು ರೈಲು

ಇಟಾವಾ, ಏಪ್ರಿಲ್ 06: ತಾಂತ್ರಿಕ ದೋಷದಿಂದಾಗಿ ನಿಂತಿದ್ದ ರೈಲಿನಿಂದ ಇಳಿದ ಯುವಕನೊಬ್ಬನಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಅಪಘಾತದ ಬಗ್ಗೆ ರೈಲ್ವೆ ಪೊಲೀಸರು ಯುವಕನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.ಓಖಾ-ಗುವಾಹಟಿ ಎಕ್ಸ್‌ಪ್ರೆಸ್ ಇಟಾವಾದಿಂದ ಕಾನ್ಪುರಕ್ಕೆ ಡೌನ್ ಲೈನ್‌ನಲ್ಲಿ ಪ್ರಯಾಣಿಸುತ್ತಿತ್ತು. ಪ್ರಯಾಣದ ಸಮಯದಲ್ಲಿ, 13 ನೇ ಕೋಚ್‌ನ ಚಕ್ರಗಳಿಂದ ಇದ್ದಕ್ಕಿದ್ದಂತೆ ಹೊಗೆ ಬರಲು ಪ್ರಾರಂಭಿಸಿತ್ತು.

ಪ್ರಯಾಣಿಕರು ಹೊಗೆಯಿಂದ ಗಾಬರಿಗೊಂಡರು, ಮತ್ತು ಅನೇಕರು ಭಯದಿಂದ ತಮ್ಮ ಆಸನಗಳಿಂದ ಎದ್ದರು. ತಾಂತ್ರಿಕ ತಂಡವನ್ನು ಸ್ಥಳಕ್ಕೆ ಕರೆಸಿ ಹೊಗೆಯನ್ನು ನಂದಿಸಲಾಯಿತು. ಈ ಸಮಯದಲ್ಲಿ ರೈಲು 10 ನಿಮಿಷಗಳ ಕಾಲ ನಿಂತಿತು. ರೈಲು ನಿಂತಾಗ, ಅನೇಕ ಪ್ರಯಾಣಿಕರು ಇಳಿದರು.

ತಾಂತ್ರಿಕ ದೋಷವನ್ನು ಸರಿಪಡಿಸಿದ ನಂತರ ರೈಲು ಮುಂದೆ ಚಲಿಸಿದ ತಕ್ಷಣ, ಪ್ರಯಾಣಿಕರಲ್ಲಿ ರೈಲು ಹತ್ತಲು ನೂಕುನುಗ್ಗಲು ಉಂಟಾಯಿತು. ಈ ಮಧ್ಯೆ, ಇನ್ನೊಂದು ಮಾರ್ಗವನ್ನು ದಾಟಿ ರೈಲು ಹತ್ತಲು ಓಡುತ್ತಿದ್ದ ಪ್ರಯಾಣಿಕನೊಬ್ಬನಿಗೆ ಕಾನ್ಪುರದಿಂದ ಇಟಾವಾ ಕಡೆಗೆ ಬರುತ್ತಿದ್ದ ಸೀಲ್ಡಾ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ದಿಲಾವರ್ ಹುಸೇನ್ ಎಂದು ಗುರುತಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಮಂಡ್ಯ , ಏಪ್ರಿಲ್ 06: ಕ್ಷುಲ್ಲಕ ಕಾರಣಗಳು ಹಾಗೂ ಆಸ್ತಿ ವಿವಾದಗಳಿಂದ ಮಂಡ್ಯದಲ್ಲಿ (Mandya) ಎರಡು ಪ್ರತ್ಯೇಕ ಹಿಂಸಾತ್ಮಕ ಘಟನೆಗಳು ನಡೆದಿದ್ದು, ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಿ ಸಂಧಾನ ನಡೆಯುತ್ತಿರುವಾಗಲೇ ಮತ್ತೆ ಗಲಾಟೆ

ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗೊರವನಹಳ್ಳಿ ಗ್ರಾಮದ ದರ್ಶನ್ ಮತ್ತು ಸಚಿನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲ ದಿನಗಳ ಹಿಂದೆ ಬಾರ್‌ನಲ್ಲಿ ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ಯುವಕರ ನಡುವೆ ಗಲಾಟೆ ನಡೆದಿತ್ತು. ಇದೇ ವಿಷಯಕ್ಕೆ ಕಳೆದ ರಾತ್ರಿ ರಾಜಿ ಮಾತುಕತೆ ನಡೆಯುವ ವೇಳೆ ಮತ್ತೆ ಜಗಳವಾಗಿದೆ. ಈ ಸಂದರ್ಭದಲ್ಲಿ ಯುವಕರು ದೊಣ್ಣೆಗಳಿಂದ ಪರಸ್ಪರ ದಾಳಿ ನಡೆಸಿಕೊಂಡಿದ್ದು, ಪರಿಣಾಮವಾಗಿ ಯಶವಂತ್ ಮೃತಪಟ್ಟಿದ್ದಾನೆ. ಮದ್ದೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಜೆ ಶೋಭಾರಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಆಸ್ತಿ ಸಂಬಂಧ ಇನ್ನೊಂದು ಗಲಾಟೆ!

ಇನ್ನೊಂದು ಘಟನೆ ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಿತ್ರಾರ್ಜಿತ ಆಸ್ತಿ ಸಂಬಂಧ ರಸ್ತೆ ಬಿಡುವ ವಿಚಾರವಾಗಿ ದಾಯಾದಿಗಳ ನಡುವೆ ಉಂಟಾದ ಜಗಳ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಸಂಬಂಧಿಕರು ಮಾರಕಾಸ್ತ್ರಗಳಿಂದ ಪರಸ್ಪರ ದಾಳಿ ನಡೆಸಿಕೊಂಡಿದ್ದಾರೆ. ಪರಿಣಾಮವಾಗಿ ಸೋಮೇಗೌಡ, ವಸಂತ್ ಮತ್ತು ನಿಶಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಪ್ರಕರಣದಲ್ಲಿ ಉಗ್ರೇಗೌಡ, ವೇಣು, ನೂತನ್, ಪ್ರಕಾಶ್ ಮತ್ತು ಸೋಮೇಶ್ ಎಂಬವರ ವಿರುದ್ಧ ದೂರು ದಾಖಲಾಗಿದ್ದು, ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪೇರಳೆ ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಇಂಥಾ ಶಿಕ್ಷೆಯೇ?

ಉನಾ, ಏಪ್ರಿಲ್ 06: ಪೇರಳೆ(Guava) ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಶಿಕ್ಷೆ ನೀಡಿರುವ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮನೆಯ ಹೊರಗಿರುವ ಮರದಲ್ಲಿ ಪೇರಳೆ ಹಣ್ಣು ಕದ್ದಿದ್ದಕ್ಕೆ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಅಪ್ರಾಪ್ತ ಬಾಲಕಿಗೆ ಕಠಿಣ ಶಿಕ್ಷೆ ನೀಡಿದ್ದಾರೆ. ಆಕೆಯನ್ನು ಕಟ್ಟಿಹಾಕಿ ಥಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಾಲಕಿ ವಲಸೆ ಕುಟುಂಬದ ಮಗಳು, ಆರೋಪಿಯ ನಿವಾಸದ ಬಳಿಯ ಮರದಿಂದ ಪೇರಳೆ ಹಣ್ಣುಗಳನ್ನು ಕಿತ್ತುಕೊಂಡಿದ್ದು ಆಕೆಯ ಅಪರಾಧ ಎಂದು ಹೇಳಲಾಗಿದೆ.

ಆರೋಪಿಯು ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು, ಸರಪಳಿಯಿಂದ ಮೆಟ್ಟಿಲುಗಳಿಗೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮರ್ಚೆಂಟ್ ನೇವಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ಯುವಕನೊಬ್ಬ ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಿದ್ದು, ಅದು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ.

ವೀಡಿಯೊದಲ್ಲಿ, ಬಾಲಕಿ ಅಳುತ್ತಾ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ತನ್ನನ್ನು ಉಳಿಸಲು ಬೇಡಿಕೊಳ್ಳುವುದನ್ನು ಕಾಣಬಹುದು, ಆದರೆ ಆರೋಪಿಯು ತನ್ನ ಕೃತ್ಯವನ್ನು ಸಮರ್ಥಿಸಿಕೊಳ್ಳುತ್ತಾನೆ, ವೀಡಿಯೊ ಚಿತ್ರೀಕರಿಸುತ್ತಿರುವ ವ್ಯಕ್ತಿಯು ಹಲ್ಲೆಯ ಬಗ್ಗೆ ಆರೋಪಿಯನ್ನು ಪ್ರಶ್ನಿಸುತ್ತಿರುವುದನ್ನು ಸಹ ಕೇಳಬಹುದು.

ಮತ್ತಷ್ಟು ಓದಿ: ನಿಮ್ಮ ಮನೆಯ ಪೇರಳೆ ಮರದಲ್ಲಿ ಹಣ್ಣು ಬಿಡುತ್ತಿಲ್ಲವೇ? ಹೀಗೆ ಮಾಡಿ

ಘಟನೆಯ ಬಗ್ಗೆ ಮಕ್ಕಳ ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾಗಿ ರೋಹಿತ್ ಹೇಳಿದ್ದಾರೆ. ಅವರ ಪ್ರಕಾರ, ಆರೋಪಿ ನಂತರ ಬಾಲಕಿ ಕುಟುಂಬಕ್ಕೆ ಕ್ಷಮೆಯಾಚಿಸಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ನಿವೃತ್ತ ಸೇನಾಧಿಕಾರಿಯನ್ನು ವಿಚಾರಣೆಗೆ ಒಳಪಡಿಸಿದರು, ಬಾಲಕಿಯ ಕುಟುಂಬದ ಹೇಳಿಕೆಗಳನ್ನು ದಾಖಲಿಸಿಕೊಂಡರು ಮತ್ತು ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದರು.ಆರೋಪಿಗಳ ವಿರುದ್ಧ ಸಂಬಂಧಿತ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Source link

2 ಸಾವಿರ ರೂ. ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ದೊಡ್ಡ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬಾಗಲಕೋಟೆ, ಏ.6: ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾಲದ ಹೊರೆ ಹೆಚ್ಚಿಸುತ್ತವೆ ಎಂದು ಅವರು ಎಚ್ಚರಿಸಿದರು. ಪ್ರಸ್ತುತ ಸರ್ಕಾರವು 8.17 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯನವರನ್ನು ಟೀಕಿಸಿದ ಕುಮಾರಸ್ವಾಮಿ, ಅವರ ಪುತ್ರನನ್ನು ರಾಜಕೀಯಕ್ಕೆ ತಂದಿರುವುದನ್ನು ಪ್ರಶ್ನಿಸಿದರು. ಅಹಿಂದ ಸಮುದಾಯದ ಹೆಸರನ್ನು ಅಧಿಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಬೆಳಕಿಗೆ ಬಂದ ವಾಲ್ಮೀಕಿ ಅಭಿವೃದ್ಧಿ ನಿಗಮದ 87 ಕೋಟಿ ರೂಪಾಯಿ ಹಗರಣ ಮಾಡಿದ್ದಾರೆ ಎಂದು ಹೇಳಿದರು. ವೀರಣ್ಣ ಚರಂತಿಮಠ ಅವರನ್ನು ಶಿಕ್ಷಣ ತಜ್ಞ ಎಂದು ಶ್ಲಾಘಿಸಿದ ಕುಮಾರಸ್ವಾಮಿ, ಅವರು ಈ ಭಾಗದ ಅನೇಕ ಕುಟುಂಬಗಳ ಮಕ್ಕಳಿಗೆ ವಿದ್ಯೆ ನೀಡಿ ಬದುಕಿಗೆ ದಾರಿ ತೋರಿದ್ದಾರೆ ಎಂದರು. ರಾಜ್ಯದ ಗೌರವವನ್ನು ಉಳಿಸಲು ಮತ್ತು ಉತ್ತಮ ಆಡಳಿತಕ್ಕಾಗಿ ಚರಂತಿಮಠ ಅವರನ್ನು ಆಯ್ಕೆ ಮಾಡುವಂತೆ ಬಾಗಲಕೋಟೆ ಮತದಾರರಲ್ಲಿ ಕುಮಾರಸ್ವಾಮಿ ಮನವಿ ಮಾಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಇದು ನಾಚಿಕೆಗೇಡಿನ ವಿಷಯ’; ಧನುಶ್ ಜೊತೆ ಕಿತ್ತಾಡಿದ ನಯನಾತಾರ ಬಗ್ಗೆ ಪತಿ ಅಸಮಾಧಾನ?

ತಮಿಳು ನಟ ಧನುಶ್ (Dhanush) ಹಾಗೂ ನಯನತಾರಾ-ವಿಘ್ನೇಶ್ ಶಿವನ್ ಮಧ್ಯೆ ಕಿರಿಕ್ ಆಗಿತ್ತು. ನೆಟ್​​ಫ್ಲಿಕ್ಸ್ ಅಲ್ಲಿ ರಿಲೀಸ್ ಆದ ನಯನತಾರಾ ಅವರ ಮದುವೆ ಡಾಕ್ಯುಮೆಂಟರಿಯಲ್ಲಿ ಧನುಶ್ ಸಿನಿಮಾದ ಸೆಟ್​​ ದೃಶ್ಯ ಒಂದನ್ನು ಹಾಕಲಾಗಿತ್ತು. ಈ ಸಂಬಂಧ ಧನುಶ್ ಕೇಸ್ ದಾಖಲು ಮಾಡಿದ್ದರು. ಆ ಬಳಿಕ ಇವರ ಸಂಬಂಧ ಹದಗೆಟ್ಟಿದೆ. ಈ ಬಗ್ಗೆ ವಿಘ್ನೇಶ್ ಶಿವನ್ ಮಾತನಾಡಿದ್ದಾರೆ. ಈ ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ ಎಂದು ವಿಘ್ನೇಶ್ ಹೇಳಿದ್ದಾರೆ.

2015ರಲ್ಲಿ ‘ನಾನುಮ್ ರೌಡಿ ದಾನ್’ ಸಿನಿಮಾ’ ತೆರೆಗೆ ಬಂತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಘ್ನೇಶ್ ಶಿವನ್. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಧನುಶ್. ನಯನತಾರಾ ಈ ಚಿತ್ರದ ನಾಯಕಿ. ವಿಘ್ನೇಶ್-ನಯನತಾರಾ ಮಧ್ಯೆ ಪ್ರೀತಿ ಮೂಡಿದ್ದು ಇದೇ ಸಿನಿಮಾದಲ್ಲಿ. ಈ ಚಿತ್ರದ ಶೂಟಿಂಗ್ ದೃಶ್ಯವನ್ನು ‘ನೆಟ್​ಫ್ಲಿಕ್ಸ್’ ಡಾಕ್ಯುಮೆಂಟರಿ ‘ನಯನತಾರಾ: ಬಿಯಾಂಡ್ ದಿ ಫೇರಿ ಟೇಲ್’ನಲ್ಲಿ ಬಳಕೆ ಮಾಡಲಾಗಿತ್ತು. ಇದಕ್ಕೆ ಧನುಶ್ ಒಪ್ಪಿಗೆ ನೀಡಿರಲಿಲ್ಲ. ಈ ದೃಶ್ಯ ಬಳಸಿದ್ದಕ್ಕಾಗಿ ನಯನತಾರಾಗೆ ಮತ್ತು ನೆಟ್​ಫ್ಲಿಕ್ಸ್​ಗೆ 10 ಕೋಟಿ ರೂಪಾಯಿ ನೀಡುವಂತೆ ಧನುಶ್ ಬೇಡಿಕೆ ಇಟ್ಟಿದ್ದರು.

ಈ ಘಟನೆ ಬಗ್ಗೆ ವಿಘ್ನೇಶ್ ಮಾತನಾಡಿದ್ದಾರೆ. ‘ನಿಮ್ಮ ಜೊತೆ ಒಳ್ಳೆ ರೀತಿಯಲ್ಲಿ ಇದ್ದವರನ್ನು ಕಳೆದುಕೊಂಡರೆ ಅದು ನಾಚಿಕೆಗೇಡಿನ ಸಂಗತಿ. ಎಲ್ಲೋ ಒಂದು ಕಡೆ ತಪ್ಪು ನಡೆದಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಈ ಮೂಲಕ ಜಗಳಕ್ಕೆ ಮೂಲ ಕಾರಣರಾದ ಪತ್ನಿ ನಯನಾತಾರಾ ಬಗ್ಗೆಯೇ ಅವರಿಗೆ ಬೇಸರ ಇದೆಯೇ ಎಂಬ ಪ್ರಶ್ನೆ ಮೂಡಿದೆ.

ಭಿನ್ನಾಭಿಪ್ರಾಯಗಳ ಹೊರತಾಗಿಯೂ, ವಿಘ್ನೇಶ್ ಅವರು ಧನುಷ್ ಬಗ್ಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ. ಅವರ ವೃತ್ತಿಜೀವನದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಹೇಳಿದ್ದಾರೆ. ‘ಅವರು ಇಲ್ಲದಿದ್ದರೆ ನಾನು ಇಲ್ಲಿ ಇರುತ್ತಿರಲಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ನಯನಾತಾರಾಗೆ ದೊಡ್ಡ ಹಿನ್ನಡೆ: ಧನುಷ್ ಪರವಾಗಿ ತೀರ್ಪು ನೀಡಿದ ಕೋರ್ಟ್

ವಿಘ್ನೇಶ್ ಶಿವನ್ ಅವರಿಗೆ ಧನುಷ್ ಅವರ ಬಗ್ಗೆ ಅಪಾರ ಗೌರವ ಇದೆ. ಅಲ್ಲದೆ, ಅವರನ್ನು ಕಳೆದುಕೊಂಡಿದ್ದಕ್ಕೆ ಸಾಕಷ್ಟು ಬೇಸರ ಕೂಡ ಇದೆ. ಕ್ಷಮೆ ಕೇಳಿ ಈ ಪ್ರಕರಣವನ್ನು ಕೊನೆಗೊಳಿಸಿಕೊಳ್ಳುತ್ತಾರಾ ಅಥವಾ ಇವರ ಕಿತ್ತಾಟ ಹೀಗೆಯೇ ಮುಂದುವರೆಯುತ್ತದೆಯೇ ಎಂಬುದು ಸದ್ಯದ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಸರ್ಫರಾಝ್ ಖಾನ್

Source link

ಕರ್ನಾಟಕ ಹವಾಮಾನ ವರದಿ: ಇಂದೂ ಗುಡುಗು ಸಹಿತ ಮಳೆಯಾಗುವ ಸಂಭವ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 06: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ  (Weather Forecast)ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಇದನ್ನೂ ಓದಿ 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಎಲ್ಲೆಲ್ಲಿ ಮಳೆ

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ರಾಯಚೂರು ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link