ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವೊಂದು ಕಡೆ ಹೀಗೆಲ್ಲ ಮಾಡ್ತಾರೆ ನೋಡಿ! – Kannada News | Gadag Poultry Farm Reality Check: Unhygienic Conditions Raise Health Concerns
ಗದಗ, ಡಿಸೆಂಬರ್ 26: ಗದಗ ಜಿಲ್ಲೆಯ ಉಣಚಗೆರೆ ಗ್ರಾಮದಲ್ಲಿರುವ ಕೋಳಿ ಫಾರಂ ಅತಿಯಾದ ಗಲೀಜಿನಿಂದ ಕೂಡಿದ್ದು, ಜನರ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದೆ. ಈ ಕೋಳಿ ಫಾರಂ ಅನೇಕ ವರ್ಷಗಳಿಂದ ಇದೇ ರೀತಿ ಕಾರ್ಯನಿರ್ವಹಿಸುತ್ತಿತ್ತು ಎಂಬುದು ‘ಟಿವಿ9’ ಗ್ರೌಂಡ್ ರಿಪೋರ್ಟ್ನಲ್ಲಿ ತಿಳಿದುಬಂದಿದೆ. ಕೋಳಿಗಳಿಗೆ ಕೊಳಕು ಮಿಶ್ರಿತ ಆಹಾರವನ್ನು ನೀಡಲಾಗುತ್ತಿದೆ ಮತ್ತು ಫಾರಂ ಪರಿಸರವು ತಿಪ್ಪೆಗುಂಡಿಗಿಂತಲೂ ಗಲೀಜಾಗಿದೆ. ಮಾರುಕಟ್ಟೆಗೆ ಸರಬರಾಜಾಗುವ ಕಳಪೆ ಮೊಟ್ಟೆಗಳು ಮತ್ತು ಕೋಳಿಗಳು ಗಜೇಂದ್ರಗಡ ಮತ್ತು ರೋಣ ತಾಲೂಕು ಸೇರಿದಂತೆ ಹಲವೆಡೆ ತಲುಪುತ್ತಿವೆ. ಇದು ಜನರ…