Yearly Horoscope 2026 : 2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ – Kannada News | Scorpio 2026 Yearly Horoscope: Dr Basavaraj Gurujis Astrological Predictions

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವೃಶ್ಚಿಕ ರಾಶಿಯವರಿಗೆ 2026ರ ವಾರ್ಷಿಕ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷ ಗುರು ಗ್ರಹವು ಎಂಟನೇ ಮನೆಯಿಂದ ಒಂಬತ್ತನೇ ಮನೆಗೆ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ದೈವಬಲ ಹೆಚ್ಚಾಗಲಿದೆ. ಶನಿ ಗ್ರಹವು ವರ್ಷವಿಡೀ ಪಂಚಮದಲ್ಲೇ ಇರಲಿದ್ದು, ರಾಹು ಚತುರ್ಥದಿಂದ ತೃತೀಯಕ್ಕೆ ಮತ್ತು ಕೇತು ದಶಮದಿಂದ ನವಮಕ್ಕೆ ಸಂಚಾರ ಮಾಡಲಿದೆ. ಆರ್ಥಿಕವಾಗಿ ಈ ವರ್ಷ ಪ್ರಗತಿ ಕಾಣುವ ಸಾಧ್ಯತೆ ಇದೆ. ಆದಾಯವು ಹೆಚ್ಚಾಗಿ, ಕೆಲಸ ಕಾರ್ಯಗಳಲ್ಲಿ ಶುಭ ಫಲಗಳು ದೊರೆಯುತ್ತವೆ. ಮೊದಲಾರ್ಧದಲ್ಲಿ…

Read More

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ? ತಜ್ಞ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ ನೋಡಿ – Kannada News | Chitradurga Bus Accident: How Burnt Bodies Are Identified After Tragedy? Expert Doctors Explain the Process

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಅನೇಕ ಮಂದಿ ಮೃತಪಟ್ಟಿದ್ದು, ಹಲವು ಮಂದಿ ಸುಟ್ಟು ಕರಕಲಾಗಿದ್ದಾರೆ. ಅವರ ಮೃತದೇಹಗಳ ಗುರುತು ಪತ್ತೆ ಮಾಡುವುದು ಸವಾಲಾಗಿದೆ. ಪ್ರಸ್ತುತ, ನಾಲ್ಕು ಮೃತದೇಹಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವು ಅತಿ ಹೆಚ್ಚು ಸುಟ್ಟುಹೋಗಿರುವ ಕಾರಣ ನೇರವಾಗಿ ಗುರುತಿಸಲು ಸಾಧ್ಯವಾಗುತ್ತಿಲ್ಲ. ಮೃತದೇಗಳ ಪತ್ತೆ ಕಾರ್ಯದ ಬಗ್ಗೆ ಚಿತ್ರದುರ್ಗದ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಮೃತದೇಹಗಳ ಗುರುತು…

Read More

ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು? – Kannada News | Shah Rukh Khan acting in Jailer 2 movie with Rajinikanth

ಶಾರುಖ್ ಖಾನ್ (Shah Rukh Khan) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ‘ಪಠಾಣ್’, ‘ಜವಾನ್’, ‘ಡಂಕಿ’ ಮೂಲಕ ಸತತ ಮೂರು ಹಿಟ್ ಸಿನಿಮಾಗಳನ್ನು ನೀಡಿರುವ ಶಾರುಖ್ ಖಾನ್ ಇದೀಗ ‘ಕಿಂಗ್’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾಕ್ಕೆ ತಯಾರಿ ನಡೆಸುತ್ತಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಅಪರೂಪ. ಅದರಲ್ಲೂ ಪರ ಭಾಷೆಯಲ್ಲಿ ಅತಿಥಿ ಪಾತ್ರಗಳಲ್ಲಿ ಶಾರುಖ್ ಖಾನ್ ನಟಿಸುವುದೆಂದರೆ ಅದಕ್ಕೆ ವಿಶೇಷ ಕಾರಣವೇ ಇರಬೇಕು. ಇದೀಗ ಶಾರುಖ್ ಖಾನ್, ತಮಿಳಿನ ಒಂದು ಸಿನಿಮಾದ ಅತಿಥಿ…

Read More

ಗ್ರಾಮಸ್ಥರ ಬೆಚ್ಚಿಬೀಳಿಸಿದ ಗಜಪಡೆ: ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು! – Kannada News | Wild Elephant Herd Strays Into Farmlands Near Hosur–Anekal Border, Watch Viral video of 40 Jumbos crossing road

ಆನೇಕಲ್, ಡಿಸೆಂಬರ್ 25: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಾಡಿನಿಂದ ನಾಡಿಗೆ ದಾಗುಂಡಿ ಇಟ್ಟ ಕಾಡಾನೆಗಳ ದೊಡ್ಡ ಹಿಂಡು ರೈತರ ಬೆಳೆಗಳನ್ನು ನಾಶಪಡಿಸಿ ಆತಂಕ ಮೂಡಿಸಿದೆ. ತಮಿಳುನಾಡಿನ ಹೊಸೂರು ಸಮೀಪದ ಶಾನಮಾವು ಪ್ರದೇಶದಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡು ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಶಾನಮಾವು, ಪಿರ್ಜೆಹಳ್ಳಿ ಹಾಗೂ ನಾಯಕನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿವೆ. ಈ ಹಾವಳಿಯಿಂದಾಗಿ ರೈತರು ಬೆಳೆದ ರಾಗಿ ಸೇರಿದಂತೆ ಇತರೆ…

Read More

‘ಮಾರ್ಕ್’ ಸಿನಿಮಾ ನೋಡಿದವರು ಹೇಳಿದ್ದೇನು? ಇಲ್ಲಿದೆ ಟ್ವಿಟ್ಟರ್ ವಿಮರ್ಶೆ – Kannada News | Sudeep starrer Mark movie twitter review in Kannada

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ಬಿಡುಗಡೆ ಆಗಿದೆ. ಸಿನಿಮಾದ ಶೋಗಳು ಬೆಳಿಗ್ಗೆ 6 ಗಂಟೆಯಿಂದಲೇ ಶುರುವಾಗಿದೆ. ಅಭಿಮಾನಿಗಳು ಬೆಳಿಗ್ಗೆಯಿಂದಲೇ ಚಿತ್ರಮಂದಿರದ ಮುಂದೆ ಸಾಲು ನಿಂತು ಸಿನಿಮಾ ವೀಕ್ಷಿಸಿದ್ದಾರೆ. ಬೆಳ್ಳಂಬೆಳಿಗ್ಗೆ ‘ಮಾರ್ಕ್’ ಸಿನಿಮಾ ವೀಕ್ಷಿಸಿದವರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದ ಹಲವರಿಗೆ ಸಿನಿಮಾ ಇಷ್ಟವಾಗಿದೆ. ‘ಮಾರ್ಕ್’ ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ… #MarkTheFilm: Brilliant from the first go. Multiple storylines unfold…

Read More

ಹೋಟೆಲ್, ರೆಸ್ಟೋರೆಂಟ್, ಬೇಕರಿಗಳ ಮೇಲೆ ಅಧಿಕಾರಿಗಳ ದಾಳಿ: 2-3 ದಿನದ ಹಳೆಯ ಮಾಂಸ, ಪನ್ನೀರ್ ಪತ್ತೆ – Kannada News | Karnataka Hotel Raids: Adulterated Food, License Violations in Raichur

ರಾಯಚೂರು, ಡಿ.25: ಕರ್ನಾಟಕದ ಅನೇಕ ಹೋಟೆಲ್ ರೆಸ್ಟೋರೆಂಟ್, ಬೇಕರಿ, ಬಾರ್ & ರೆಸ್ಟೋರೆಂಟ್​​​ಗಳಲ್ಲಿ ಕಳಪೆ ಆಹಾರಗಳು ಪತ್ತೆಯಾಗಿದೆ. ಇದೀಗ ಹೋಟೆಲ್ ರೆಸ್ಟೋರೆಂಟ್, ಬೇಕರಿಗಳಲ್ಲಿ ಸಿಗುವ ವೆರೈಟಿ ಆಹಾರವನ್ನು ಸೇವನೆ ಮಾಡುವ ಮುನ್ನ ಎಚ್ಚರ ಇರಲಿ. ಅಲ್ಲಿ ಸಿಗುವ ಆಹಾರಗಳು ಎಷ್ಟು ಸೇಫ್​​ ಎನ್ನುವುದನ್ನು ಮೊದಲು ತಿಳಿದುಕೊಳ್ಳುವುದು ಒಳ್ಳೆಯದು. ಹೌದು ಇದೀಗ ರಾಯಚೂರಿನಲ್ಲಿ ನಾಲ್ಕು ಇಲಾಖೆ ಅಧಿಕಾರಿಗಳಿಂದ ಹೋಟೆಲ್​​ಗಳ ಮೇಲೆ ದಾಳಿ ಮಾಡಲಾಗಿದೆ. ಎರಡು-ಮೂರು ದಿನದ ಹಳೆಯ ಮಾಂಸ, ಪನ್ನೀರ್ ಫ್ರೀಜರ್ ಗಳಲ್ಲಿ ಪತ್ತೆಯಾಗಿದೆ. ಇದರ ಜತೆಗೆ ಕಲಬೆರಿಕೆ,…

Read More

ನೆಲಮಂಗಲ: ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನಿಗೂಢವಾಗಿ ನವ ವಿವಾಹಿತೆ ಸಾವು – Kannada News | Nelamangala Newlywed Death, Husband Suspected in Mysterious Case

ನೆಲಮಂಗಲ, ಡಿಸೆಂಬರ್​​ 25: ಮದುವೆಯಾಗಿ ಒಂದು ತಿಂಗಳು ಕಳೆಯುವ ಒಳಗೆ ನವ ವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಐಶ್ವರ್ಯ (26) ಮೃತ ಯುವತಿಯಾಗಿದ್ದು, ಗಂಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪೋಷಕರು ಆರೋಪಿಸಿದ್ದಾರೆ. 27 ದಿನಗಳ ಹಿಂದೆಯಷ್ಟೇ ಲಿಖಿತ್ ಸಿಂಹ ಜೊತೆ ಐಶ್ವರ್ಯ ಮದುವೆ ನಡೆದಿತ್ತು. ಸುಂದರ ಸಂಸಾರದ ಕನಸು ಕಂಡಿದ್ದ ಐಶ್ವರ್ಯ, ಸಾಂಸಾರಿಕ ಬದುಕನ್ನು ಸರಿಯಾಗಿ ಆರಂಭಿಸುವ ಮುನ್ನವೇ ಪ್ರಾಣ ಕಳೆದುಕೊಂಡಿದ್ದಾರೆ. ಪತ್ನಿಗೆ ಕಿರುಕುಳ ಆರೋಪ ಮೂಲತಃ ನಾಗಮಂಗಲ ನಿವಾಸಿಗಳಾದ ಮಮತಾ ಹಾಗೂ ಕೃಷ್ಣಮೂರ್ತಿ…

Read More

ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣ ಎಷ್ಟು ಗೊತ್ತಾ? ಅನ್​ಕ್ಲೇಮ್ಡ್ ಡೆಪಾಸಿಟ್ ಮರಳಿಪಡೆಯುವುದು ಹೇಗೆ? – Kannada News | Rs 3,400 crore lies unclaimed in various bank accounts in Karnataka, says RBI officer

ಮಂಗಳೂರು, ಡಿಸೆಂಬರ್ 25: ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ ಕ್ಲೇಮ್ ಆಗದೇ ಉಳಿದಿರುವ ಹಣ 3,400 ಕೋಟಿ ರೂನಷ್ಟಿದೆಯಂತೆ. ಆರ್​ಬಿಐ (RBI) ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಈ ಮಾಹಿತಿ ನೀಡಿದ್ದಾರೆ. ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಾಮರ್ಶೆ ಸಮಿತಿ (ಡಿಎಲ್​ಆರ್​ಸಿ) ಸಭೆಯಲ್ಲಿ ಆರ್​ಬಿಐ ಅಧಿಕಾರಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಹತ್ತಕ್ಕೂ ಹೆಚ್ಚು ವರ್ಷಗಳಿಂದ ಬ್ಯಾಂಕ್ ಖಾತೆಗಳು, ಡೆಪಾಸಿಟ್ ಪ್ಲಾನ್​ಗಳು ಬಳಕೆ ಇಲ್ಲದೇ ನಿಷ್ಕ್ರಿಯವಾಗಿದ್ದರೆ…

Read More

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್ – Kannada News | 45 Movie Twitter Review Fans Happy After Watching Shivarajkumar Upendra And Raj Movie

‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ. ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’…

Read More

PM Modi Christmas: ದೆಹಲಿಯ ಚರ್ಚ್‌ನ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಮೋದಿ ಭಾಗಿ; ಕ್ಯಾಥೆಡ್ರಲ್ ಚರ್ಚ್‌ನ ವಿಶೇಷತೆ ಇಲ್ಲಿದೆ – Kannada News | PM Modi’s Christmas Visit to Delhi’s Historic Cathedral Church: History and Architecture

ದೇಶಾದ್ಯಂತ ಇಂದು ಕ್ರಿಸ್‌ಮಸ್‌ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಅತ್ಯಂತ ಹಳೆಯ ಮತ್ತು ಭವ್ಯವಾದ ಚರ್ಚ್‌ಗಳಲ್ಲಿ ಒಂದಾದ ಕ್ಯಾಥೆಡ್ರಲ್ ಚರ್ಚ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿಯವರ ಈ ಭೇಟಿ ಧಾರ್ಮಿಕ ಸಾಮರಸ್ಯದ ಸಂದೇಶ ಮಾತ್ರವಲ್ಲದೆ, ರಾಜಧಾನಿ ದೆಹಲಿಯ ಈ ಐತಿಹಾಸಿಕ ಚರ್ಚ್ ಅನ್ನು ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವನ್ನಾಗಿ ಮಾಡಿದೆ. ಆದ್ದರಿಂದ ಈ ಚರ್ಚೆ ಯಾವಾಗ ಸ್ಥಾಪನೆಯಾಯಿತು, ಅದ್ಭುತ ಇತಿಹಾಸ ಮತ್ತು ವಾಸ್ತುಶಿಲ್ಪದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ….

Read More