‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ
ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿವೆ. ಈ ಸಿನಿಮಾಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆ ಆಗಿದೆ. ಅನೇಕರು ಈ ಸಿನಿಮಾಗಳನ್ನು ‘ಪ್ರೊಪಗಾಂಡ’ ಎಂದು ಟೀಕಿಸಿದ್ದಾರೆ. ಈ ಸಿನಿಮಾಗಳ ಬಗ್ಗೆ ಈಗ ನರೇಂದ್ರ ಮೋದಿ (Narendra Modi) ಕೂಡ ಮಾತನಾಡಿದ್ದಾರೆ. ಕೇರಳದಲ್ಲಿ ಮಾತನಾಡುವಾಗ ‘ಧುರಂಧರ್’, ‘ದಿ ಕೇರಳ ಸ್ಟೋರಿ’, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ‘ಕೇರಳ ಸ್ಟೋರಿ ಬಂತು….