RCB vs CSK IPL 2026: ಹೈವೋಲ್ಟೇಜ್ ಪಂದ್ಯದ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಮ್ನಲ್ಲಿ ಪೊಲೀಸ್ ಬಿಗಿ ಭದ್ರತೆ!
ಬೆಂಗಳೂರು, ಏಪ್ರಿಲ್ 05: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಪಿಎಲ್ 2026 ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) vs ಚೆನ್ನೈ ಸೂಪರ್ ಕಿಂಗ್ಸ್ (CSK) ಪಂದ್ಯದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನದು ಹೈವೋಲ್ಟೇಜ್ ಪಂದ್ಯವಾಗಿರುವುದರಿಂದ ಅಭಿಮಾನಿಗಳು ಕಿಕ್ಕಿರಿದು ಸೇರಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸುಮಾರು 2,300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕಳೆದ ಬಾರಿ ಸ್ಟೇಡಿಯಂನಲ್ಲಿ 70ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾದ ಹಿನ್ನೆಲೆ ಈ ಬಾರಿ…