ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ – Kannada News | Chitradurga Horrific Accident: 17 Dead as Bus Catches Fire on NH 48

ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿಉರಿದಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಅತ್ಯಂತ ಕ್ರಿಯಾಶೀಲವಾದ ದಿನ ಇದಾಗಿರುತ್ತದೆ. ಉದ್ಯೋಗಕ್ಕೆ ರಜೆಯ ದಿನವಾಗಿದ್ದರೂ ನಿಮ್ಮ ಮನಸ್ಸು ಮುಂದಿನ ಗುರಿಗಳ ಬಗ್ಗೆ ಯೋಚಿಸುತ್ತಾ ಇರಲಿದೆ. ಕೌಟುಂಬಿಕವಾಗಿ ಸಂಭ್ರಮದ ಸಮಯವನ್ನು ಕಳೆಯಲಿದ್ದೀರಿ. ಮನೆಯ ಹಿರಿಯರೊಂದಿಗೆ ಹಳೆಯ ನೆನಪುಗಳನ್ನು ಮೆಲುಕು ಹಾಕುವಿರಿ. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಆಕರ್ಷಣೆ ಹಾಗೂ ಬದಲಾವಣೆ ಕಂಡುಬರಲಿದ್ದು, ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಲಿದೆ. ಆರ್ಥಿಕವಾಗಿ ಹಳೆಯ ಹೂಡಿಕೆಗಳಿಂದ ಸಣ್ಣ ಪ್ರಮಾಣದ ಲಾಭ ನಿರೀಕ್ಷೆ ಮಾಡಬಹುದು….

Read More

Horoscope Today 25 December : ಇಂದು ಈ ರಾಶಿಯವರಿಗೆ ಯಾವುದೂ ಸುಲಭವಾಗಿ ಸಿಗಲ್ಲ

ಮೇಷ ರಾಶಿ : ನಿಮ್ಮ ಸೂಕ್ಷ್ಮ ಮನಸ್ಸಿಗೆ ಭೇದಭಾವ ಬಿಸಿ ಬೇಗ ತಟ್ಟಬಹುದು. ಧಾರ್ಮಿಕತೆಯಲ್ಲಿ ಅಚಲವಾದ ಶ್ರದ್ಧೆ ಶಾಂತಿಯನ್ನು ತಾನಾಗಿಯೇ ನೀಡುತ್ತದೆ. ಆಸ್ತಿ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಿರಿ. ವೃತ್ತಿಯ ಸ್ಥಳದಲ್ಲಿ ನಿಮಗೆ ಕೆಲವು ಬದಲಾವಣೆಯು ಇರಲಿದೆ‌. ಸ್ನೇಹಿತನ ಮಾತಿನಿಂದ ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ಅನಿರೀಕ್ಷಿತ ವಾರ್ತೆಯಿಂದ ನಿಮಗೆ ಬೇಸರವಾಗಬಹುದು. ಬಂಧುಗಳು ಪ್ರೀತಿಯನ್ನು ತೋರಿಸುವರು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು…

Read More

ಶಿವಣ್ಣ ಫ್ಯಾನ್ಸ್ ಕ್ರೇಜ್ ಯಾವತ್ತೂ ಕಡಿಮೆ ಆಗಲ್ಲ: ಸಾಕ್ಷಿ ತೋರಿಸಿದ ಕೆ.ಪಿ. ಶ್ರೀಕಾಂತ್ – Kannada News | KP Srikanth talks about Shivarajkumar fans craze during 45 Kannada Movie release

‘ಹ್ಯಾಟ್ರಿಕ್ ಹೀರೋ’ ಶಿವರಾಜ್​​ಕುಮಾರ್ ನಟನೆಯ ‘45’ ಸಿನಿಮಾ (45 Kannada Movie) ಡಿಸೆಂಬರ್ 25ಕ್ಕೆ ಎಲ್ಲೆಡೆ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಮತ್​ತು ಉಪೇಂದ್ರ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಡಿಸೆಂಬರ್ 24ರಂದು ಈ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಬೆಂಗಳೂರಿನ ‘ಪ್ರಸನ್ನ’ ಚಿತ್ರಮಂದಿರದಲ್ಲಿ 2 ಪ್ರೀಮಿಯರ್ ಶೋ ಹೌಸ್​ಫುಲ್ ಆಗಿದೆ. ಶಿವರಾಜ್​​ಕುಮಾರ್ (Shivarajkumar) ಅವರ ಆಪ್ತರಾದ ಕೆ.ಪಿ. ಶ್ರೀಕಾಂತ್ ಕೂಡ ಸಿನಿಮಾ ನೋಡಲು ಬಂದಿದ್ದಾರೆ. ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ…

Read More

ದವಡೆ ಹಲ್ಲು ಉದುರಿಸಿಕೊಂಡು ಹೋಗಬೇಕು… ಗಗನಯಾತ್ರಿಯಾಗಲು ಬೇಕು ದಂತ ತ್ಯಾಗ; ಯಾಕೆ ಗೊತ್ತಾ? – Kannada News | To become Astronaut, one has to sacrifice some wisdom teeth, surprise revelation by Shubhanshu Shukla

ಮುಂಬೈ, ಡಿಸೆಂಬರ್ 24: ಸುನೀತಾ ವಿಲಿಯಮ್ಸ್, ಕಲ್ಪನಾ ಚಾವ್ಲಾ ಮತ್ತು ಶುಭಾಂಶು ಶುಕ್ಲಾ (Shubhanshu Shukla) ಅವರು ಗಗನಕ್ಕೆ ಹೋಗಿ ಬಂದ ಬಳಿಕ ಕೋಟ್ಯಂತರ ಭಾರತೀಯರಿಗೆ ಗಗನಯಾತ್ರಿಗಳಾಗಬೇಕೆಂಬ ಹಂಬಲ ಉಂಟಾಗಿರಬಹುದು. ಆದರೆ, ಆಸ್ಟ್ರೋನಾಟ್ (Astronaut) ಆಗುವುದು ವಿಮಾನದ ಪೈಲಟ್ ಆಗುವುದಕ್ಕಿಂತ ಬಹಳ ಕಠಿಣದ ಕೆಲಸ. ಬಹಳಷ್ಟು ಶ್ರಮ, ತರಬೇತಿ, ಸಹನೆ, ದೈಹಿಕ ಕ್ಷಮತೆ, ಮಾನಸಿಕ ಕ್ಷಮತೆ ಇವೆಲ್ಲವೂ ಬೇಕು. ಇತ್ತೀಚೆಗಷ್ಟೇ ಗಗನಯಾನ ಮಾಡಿಬಂದ ಭಾರತದ ಶುಭಾಂಶು ಶುಕ್ಲಾ ಅವರು ದಂತತ್ಯಾಗದ ಅಚ್ಚರಿಯ ವಿಚಾರ ಪ್ರಸ್ತಾಪಿಸಿದ್ದಾರೆ. ಇಂದು ಬುಧವಾರ…

Read More

VHT 2025-26: ದೇಶಿ ಅಂಗಳದಲ್ಲಿ ಶತಕಗಳ ಮಳೆ; ಮೊದಲ ದಿನವೇ ಸಿಡಿದವು 22 ಶತಕಗಳು – Kannada News | Vijay Hazare Trophy 2025 26: Rohit, Kohli Shine, 22 Centuries on Day 1!

ವಿಜಯ್ ಹಜಾರೆ ಟ್ರೋಫಿಯ 2025-26 (Vijay Hazare Trophy 2025-26) ರ ಆವೃತ್ತಿ ಡಿಸೆಂಬರ್ 24 ರಿಂದ ಅಬ್ಬರದಿಂದ ಆರಂಭವಾಗಿದೆ. ಮೊದಲ ಸುತ್ತಿನ ಮೊದಲ ದಿನವೇ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದ್ದಾರೆ. ಇದಕ್ಕೆ ಪುರಾವೆ ಎಂಬಂತೆ ಟೂರ್ನಿಯ ಮೊದಲ ದಿನವೇ ಒಟ್ಟು 22 ಶತಕಗಳು ದಾಖಲಾಗಿವೆ. ಇವುಗಳಲ್ಲಿ ಇಬ್ಬರು ಭಾರತೀಯ ದಂತಕಥೆಗಳಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಅವರ ಶತಕಗಳು ಸೇರಿರುವುದು ವಿಶೇಷ. ಬಹಳ ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ್ದ…

Read More

ಲೋಕಾಯುಕ್ತ ದಾಳಿ ವೇಳೆ ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ – Kannada News | Lokayukta Finds Assets Worth Over ₹14 Crore at Minister Zameer Ahmed’s Personal Aide Surfraj Khans House

ಬೆಂಗಳೂರು, ಡಿಸೆಂಬರ್​​ 24: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸದಲ್ಲಿ ಲೋಕಾಯುಕ್ತ ದಾಳಿ ಮುಕ್ತಾಯವಾಗಿದ್ದು, ಸರ್ಫರಾಜ್ ಖಾನ್ ಬಳಿ 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. 8.44 ಕೋಟಿ ರೂ. ಮೌಲ್ಯ ಸ್ಥಿರಾಸ್ತಿ ಮತ್ತು 5.93 ಕೋಟಿ ರೂ. ಮೊತ್ತದ ಚರಾಸ್ತಿ ಪತ್ತೆಯಾಗಿದೆ. 4 ವಾಸದ ಮನೆ ಮತ್ತು 35 ಎಕರೆ ಕೃಷಿ ಜಮೀನು ದಾಖಲೆ, 66,500 ಹಣ, 2.99 ಲಕ್ಷ ಮೌಲ್ಯದ ಚಿನ್ನ, 1.29 ಕೋಟಿ ಎಫ್​ಡಿ…

Read More

ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್ – Kannada News | Arjun Janya reaction to Kichcha Sudeep controversial statement

ನಟ ಕಿಚ್ಚ ಸುದೀಪ್ (Kichcha Sudeep) ಅವರು ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಹೇಳಿದ್ದರು. ಹಾಗಾದರೆ ಅವರು ಆ ಮಾತು ಹೇಳಿದ್ದು ಯಾರಿಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿತ್ತು. ‘ಮಾರ್ಕ್’ ತೆರೆಕಾಣುತ್ತಿರುವ ದಿನವೇ (ಡಿಸೆಂಬರ್ 25) ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ (Arjun Janya) ಅವರು ಟಿವಿ9 ಜೊತೆ ಮಾತನಾಡಿ ಪ್ರತಿಕ್ರಿಯೆ ನೀಡಿದ್ದಾರೆ. ‘ಪೈರಸಿಗೋಸ್ಕರ ತಾವು ಆ…

Read More

ಕೇವಲ ಬೌಂಡರಿ, ಸಿಕ್ಸರ್​ಗಳಿಂದಲೇ 126 ರನ್ ಚಚ್ಚಿದ ರೋಹಿತ್; ವಿಡಿಯೋ ನೋಡಿ – Kannada News | Rohit Sharma Century: 155 Runs for Mumbai in Vijay Hazare Trophy

7 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಹೊಡಿಬಡಿ ಆಟದ ಮೂಲಕ ಮೊದಲ ದಿನವೇ ಭರ್ಜರಿ ಶತಕ ಸಿಡಿಸಿದರು. ಈ ಟೂರ್ನಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ರೋಹಿತ್, ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸಿದರು. ತಮ್ಮ ಈ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ ರೋಹಿತ್ 9 ಸಿಕ್ಸರ್ ಮತ್ತು 18 ಬೌಂಡರಿಗಳ ಸಹಾಯದಿಂದ ಬರೋಬ್ಬರಿ 155 ರನ್ ಸಿಡಿಸಿದರು. ಅಂದರೆ ರೋಹಿತ್ ಬರಿ ಬೌಂಡರಿ ಹಾಗೂ…

Read More

Bomb Attack: ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಬಾಂಬ್ ದಾಳಿಗೆ ಒಬ್ಬ ಬಲಿ – Kannada News | Bangladesh Violence, 1 killed in crude bomb attack in Dhaka moghbazar area

ಢಾಕಾ, ಡಿಸೆಂಬರ್ 24: ಬಾಂಗ್ಲಾದೇಶ ಹೊತ್ತಿ ಉರಿಯುವುದು ಮುಂದುವರಿದಿದೆ. ಅದರ ರಾಜಧಾನಿ ಢಾಕಾದ ಮೋಘಬಜಾರ್ ಪ್ರದೇಶದಲ್ಲಿ ಬುಧವಾರ ಸಂಜೆ ಬಾಂಬ್ ದಾಳಿಯಾಗಿದೆ. ಇಲ್ಲಿಯ ಫ್ಲೈಓವರ್ ಮೇಲಿಂದ ಅಪರಿಚಿತ ದುಷ್ಕರ್ಮಿಗಳು ಕಚ್ಛಾ ಬಾಂಬ್ (crude bomb blast) ಅನ್ನು ಎಸೆದಿದ್ದಾರೆ. ಕೆಳಗೆ ರಸ್ತೆಬದಿಯಲ್ಲಿ ಚಹಾ ಕುಡಿಯುತ್ತಿದ್ದ ವ್ಯಕ್ತಿಯ ತಲೆ ಮೇಲೆ ಬಾಂಬ್ ಬಿದ್ದು ಸ್ಫೋಟಗೊಂಡಿದೆ. ಪರಿಣಾಮವಾಗಿ, ಆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ 7 ಗಂಟೆಗೆ ಈ ಘಟನೆ ಸಂಭವಿಸಿರುವುದು ತಿಳಿದುಬಂದಿದೆ. ಬಾಂಬ್​ಗೆ ಬಲಿಯಾದ ವ್ಯಕ್ತಿ 21…

Read More