ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್!: ನಿರ್ಮಾಣ ಆಗೋದೆಲ್ಲಿ ಗೊತ್ತಾ? – Kannada News | Yelahanka Gets India’s 1st China Model Multi Level Railway Terminal
ಬೆಂಗಳೂರು, ಡಿಸೆಂಬರ್ 24: ದೇಶದಲ್ಲಿ ಇದೇ ಮೊದಲ ಬಾರಿಗೆ ಚೈನಾದ ಹ್ಯಾಂಗ್ಜೋ ಮಾದರಿಯಲ್ಲಿ ಬೆಂಗಳೂರಿನ ಯಲಹಂಕದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಇಲಾಖೆ ಸಿದ್ದತೆ ನಡೆಸಿದೆ. ಒಟ್ಟು 20 ಎಕರೆ ವಿಸ್ತೀರ್ಣದ ಜಾಗದಲ್ಲಿ, 6 ಸಾವಿರ ಕೋಟಿ ರೂಪಾಯಿ ವೆಚ್ಚದೊಂದಿಗೆ ಮಲ್ಟಿ ಲೆವಲ್ ರೈಲ್ವೆ ಸ್ಟೇಷನ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರೀತಿಯಲ್ಲಿ ಇದು ಇರಲಿದೆ ಎನ್ನಲಾಗಿದೆ. ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್ ನಿರ್ಮಾಣ ಮೊದಲಿಗೆ ದೇವನಹಳ್ಳಿಯಲ್ಲಿ ಈ ಟರ್ಮಿನಲ್ ಸ್ಟೇಷನ್…