ಥೈರಾಯ್ಡ್ ಸಮಸ್ಯೆ ಇದ್ಯಾ? ಚಿಂತೆ ಬೇಡ, ಈ ಸಲಹೆಗಳನ್ನು ಪಾಲಿಸಿ ಸಮಸ್ಯೆಯನ್ನು ನಿಯಂತ್ರಿಸಿ
ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಈ ಸಮಸ್ಯೆಯಲ್ಲಿ ಆಹಾರ ಪದ್ಧತಿ ಬಹಳ ಮಹತ್ವದ್ದಾಗಿದ್ದು, ಕೆಟ್ಟ ಆಹಾರ ಸೇವನೆಯಿಂದ ಸಮಸ್ಯೆ ಇನ್ನಷ್ಟು ಗಂಭೀರವಾಗಬಹುದು. ನಿಮಗೆ ತಿಳಿರಿರಬಹುದು ಥೈರಾಯ್ಡ್ ಒಂದು ಗ್ರಂಥಿಯಾಗಿದ್ದು, ಇದು ಕುತ್ತಿಗೆಯ ಭಾಗದಲ್ಲಿ ಇರುತ್ತದೆ ಮತ್ತು ದೇಹದ ಮೆಟಾಬಾಲಿಸಮ್‌ನ್ನು ನಿಯಂತ್ರಿಸುತ್ತದೆ. ಇದು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ದಣಿವು, ಕೂದಲು ಉದುರುವುದು ಮುಂತಾದ ಸಮಸ್ಯೆಗಳು ಕಂಡುಬರಬಹುದು. ಜೀವನಶೈಲಿ, ಒತ್ತಡ, ಹಾರ್ಮೋನ್ ಬದಲಾವಣೆಗಳು ಮತ್ತು ಪೌಷ್ಟಿಕಾಂಶ ಕೊರತೆ ಇದಕ್ಕೆ ಕಾರಣವಾಗಬಹುದು. ಹಾಗಾಗಿ…