RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್ ಸಂಚಾರ
ಬೆಂಗಳೂರು, ಏಪ್ರಿಲ್ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಾಳೆ ಐಪಿಎಲ್ ಮ್ಯಾಚ್ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್ಸಿಎಲ್ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್ಗಳು ಓಡಾಟ ನಡೆಸಲಿವೆ. ಬಸ್ ಸಂಚರಿಸಲಿರುವ ಮಾರ್ಗಗಳು…