Category Archives: Blog

Your blog category

‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ? – Kannada News | Akshaye Khanna and Ranveer Singh Opts out of Drishyam 3 and Don 3 respectively

2025ರಲ್ಲಿ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಪಾತ್ರವಾಗಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಿಂದ ನಟ ಅಕ್ಷಯ್ ಖನ್ನಾ (Akshaye Khanna) ಅವರ ಖ್ಯಾತಿ ಹೆಚ್ಚಾಗಿದೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ. ಇದರ ಪರಿಣಾಮವಾಗಿ ಅವರು ‘ದೃಶ್ಯಂ 3’ (Drishyam 3) ಸಿನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಆಗಿರುವುದು ದುಬಾರಿ ಸಂಭಾವನೆ!

‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ರೆಹಮಾನ್ ಡಕಾಯಿತ್ ಎಂಬ ಪಾತ್ರವನ್ನು ಮಾಡಿದ್ದಾರೆ. ಇದು ವಿಲನ್ ಪಾತ್ರ. ಈ ಪಾತ್ರಕ್ಕಾಗಿ ಅವರು 2.5 ಕೋಟಿಯಿಂದ 3 ಕೋಟಿ ರೂಪಾಯಿ ತನಕ ಸಂಭಾವನೆ ಪಡೆದಿದ್ದರು ಎಂಬ ಮಾಹಿತಿ ಹರಿದಾಡುತ್ತಿದೆ. ‘ಧುರಂಧರ್’ ಸೂಪರ್ ಹಿಟ್ ಆಗಿದ್ದೇ ತಡ, ಅಕ್ಷಯ್ ಖನ್ನಾ ಅವರು ಏಕಾಏಕಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.

‘ದೃಶ್ಯಂ 3’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಪಾತ್ರ ಮಾಡಬೇಕಿತ್ತು. ಆದರೆ ಈಗ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿರುವುದರಿಂದ ನಿರ್ಮಾಪಕರಿಗೆ ಚಿಂತೆ ಶುರುವಾಗಿದೆ. ಅಲ್ಲದೇ, ಅಕ್ಷಯ್ ಖನ್ನಾ ಅವರು ತಮ್ಮ ಪಾತ್ರದ ಲುಕ್ ಕೂಡ ಬದಲಾಗಬೇಕು ಎಂದು ಹಠ ಹಿಡಿದಿದ್ದಾರಂತೆ. ಈ ವಿಚಾರದಲ್ಲಿ ಚಿತ್ರತಂಡದ ಜೊತೆ ಮಾತುಕಥೆ ನಡೆದು, ಸಫಲವಾಗದ ಪರಿಣಾಮ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಅದೇ ರೀತಿ, ‘ಧುರಂಧರ್’ ಸಿನಿಮಾದ ನಾಯಕ ರಣವೀರ್ ಸಿಂಗ್ ಕೂಡ ತಮ್ಮ ಮುಂದಿನ ಸಿನಿಮಾಗಳಲ್ಲಿ ಕೆಲವು ಬದಲಾವಣೆ ಮಾಡಿಕೊಂಡಿದ್ದಾರೆ. ‘ಧುರಂಧರ್’ ಬಳಿಕ ಅವರು ‘ಡಾನ್ 3’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ಅವರು ಆ ಸಿನಿಮಾ ಮಾಡಲು ಈಗ ಸಿದ್ಧರಿಲ್ಲ ಎನ್ನಲಾಗುತ್ತಿದೆ. ಬ್ಯಾಕ್ ಟು ಬ್ಯಾಕ್ ಒಂದೇ ರೀತಿಯ ಸಿನಿಮಾ ಮಾಡುವ ಬದಲು ಬೇರೆ ಏನಾದರೂ ಪ್ರಯತ್ನಿಸಬೇಕು ಎಂಬುದು ಅವರ ಆಲೋಚನೆ.

ಇದನ್ನೂ ಓದಿ: 167 ಕೋಟಿ ರೂ. ಒಡೆಯ, ಧುರಂಧರ್ ನಟ ಅಕ್ಷಯ್ ಖನ್ನಾ ಮದುವೆ ಆಗಿಲ್ಲ ಯಾಕೆ?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2026ರ ಜನವರಿಯಿಂದ ‘ಡಾನ್ 3’ ಸಿನಿಮಾದ ಶೂಟಿಂಗ್ ಆರಂಭಿಸಲು ನಿರ್ದೇಶಕ ಫರ್ಹಾನ್ ಅಖ್ತರ್ ಅವರು ಸಜ್ಜಾಗುತ್ತಿದ್ದರು. ಆದರೆ ಈಗ ರಣವೀರ್ ಸಿಂಗ್ ಅವರು ತಮ್ಮ ಮನಸ್ಸು ಬದಲಾಯಿಸಿ ‘ಡಾನ್ 3’ ಮಾಡದೇ ಇರಲು ತೀರ್ಮಾನಿಸಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಆದರೆ ಈ ಎಲ್ಲ ಅಂತೆ-ಕಂತೆಗಳ ಬಗ್ಗೆ ರಣವೀರ್ ಸಿಂಗ್ ಅವರಾಗಲಿ, ಅಕ್ಷಯ್ ಖನ್ನಾ ಅವರಾಗಲಿ ಅಥವಾ ಚಿತ್ರತಂಡದವರಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

2025ರ ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳಲ್ಲಿ ಒಂದು ಕನ್ನಡ ಸಿನಿಮಾ

Source link

Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ – Kannada News | Virat Kohli’s 16,000 List A Runs: Sachin Tendulkar Milestone in Vijay Hazare Trophy Return

ಮತ್ತೊಂದು ಪ್ರಸಿದ್ಧ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಇಂದಿನಿಂದ ಆರಂಭವಾಗಿದೆ. ದೇಶದ ನಾನಾ ಸ್ಥಳಗಳಲ್ಲಿ ಹಲವು ತಂಡಗಳು ಕಣಕ್ಕಿಳಿದಿವೆ. ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯ ವಿಶೇಷತೆಯೆಂದರೆ, ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ.

ಬರೋಬ್ಬರಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಪುನಾರವರ್ತಿಸಿದರು. ವಾಸ್ತವವಾಗಿ ಕೊಹ್ಲಿ ಒಂದು ರನ್‌ ಕಲೆಹಾಕುವ ಮೂಲಕ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 16,000 ರನ್‌ಗಳನ್ನು ಪೂರ್ಣಗೊಳಿಸಿದರು.

ಆಂಧ್ರಪ್ರದೇಶ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಆಡುವ ಮೊದಲು, ವಿರಾಟ್ ಕೊಹ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 15,999 ರನ್ ಗಳಿಸಿದ್ದರು. 342 ಪಂದ್ಯಗಳ 329 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ, 57 ಶತಕಗಳು ಮತ್ತು 54 ಅರ್ಧಶತಕಗಳೊಂದಿಗೆ ಇಷ್ಟು ರನ್ ಕಲೆಹಾಕಿದ್ದರು. ಇದೀಗ ಆಂಧ್ರಪ್ರದೇಶ ವಿರುದ್ಧದ ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ 330 ನೇ ಲಿಸ್ಟ್ ಎ ಇನ್ನಿಂಗ್ಸ್ ಆಡಿದ ಕೊಹ್ಲಿ 16,000 ರನ್ ಪೂರೈಸಿದರು.

ಲಿಸ್ಟ್ ಎ ಕ್ರಿಕೆಟ್​ನಲ್ಲಿ 16,000 ರನ್ ಗಳಿಸಿದ ಎರಡನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ತಮ್ಮ 343 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿರುವ ವಿರಾಟ್ ಈ ಹಿಂದೆ ಸಚಿನ್ ತೆಂಡೂಲ್ಕರ್ ಹೊಂದಿದ್ದ ಮೈಲಿಗಲ್ಲನ್ನು ಮೀರಿದ್ದಾರೆ. ಲಿಸ್ಟ್ ಎ ಕ್ರಿಕೆಟ್​ನಲ್ಲಿ 16,000 ರನ್ ಕಲೆಹಾಕಿದ ಮೊದಲ ಭಾರತೀಯ ಸಚಿನ್ ತೆಂಡೂಲ್ಕರ್.

ವಿರಾಟ್ ಕೊಹ್ಲಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿದ್ದಾರೆ. ಕೊನೆಯ ಬಾರಿಗೆ ಈ ಪಂದ್ಯಾವಳಿಯಲ್ಲಿ 2010-11ರಲ್ಲಿ ಆಡಿದ್ದ ಕೊಹ್ಲಿ ಇದೀಗ ಆಡಿದ ಮೊದಲ ಪಂದ್ಯದಲ್ಲೇ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಪುನಾರವರ್ತಿಸಿದ್ದಾರೆ. ಕೊಹ್ಲಿಗೆ, ಪ್ರಸ್ತುತ ವಿಜಯ್ ಹಜಾರೆ ಟ್ರೋಫಿಯು 2027 ರ ಜನವರಿಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಸಿದ್ಧತೆಗಾಗಿ ನಿರ್ಣಾಯಕವಾಗಿದೆ.

Published On – 3:46 pm, Wed, 24 December 25

Source link

ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ – Kannada News | Roddam Jewellers Under Scrutiny in Sabarimala Temple Gold Theft Case

ಬಳ್ಳಾರಿ,ಡಿ.24: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ನಡೆದ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ವಿಶೇಷ ತನಿಖಾ ತಂಡ (ಎಸ್ಐಟಿ) ಬಳ್ಳಾರಿಯ ರೊದ್ದಂ ಜುವೆಲರ್ಸ್ ಮೇಲೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದೆ. ಕೇರಳದ ಐವರು ಅಧಿಕಾರಿಗಳು ಜುವೆಲರಿ ಅಂಗಡಿಯನ್ನು ಸಂಪೂರ್ಣವಾಗಿ ಮುಚ್ಚಿ ಪರಿಶೀಲನೆ ನಡೆಸಿದ್ದಾರೆ. ಈ ಅಂಗಡಿಯ ಮಾಲೀಕ ಗೋವರ್ಧನ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿದೆ. ಗೋವರ್ಧನ್ ಅವರು ಕದ್ದ ಚಿನ್ನದಲ್ಲಿ ಸುಮಾರು 475 ಗ್ರಾಂ ಖರೀದಿಸಿದ್ದರು ಎಂಬ ಮಾಹಿತಿ ಎಸ್ಐಟಿಗೆ ಲಭ್ಯವಾಗಿದೆ. ಈ ಹಿಂದೆ 2019ರಲ್ಲಿ ಅಯ್ಯಪ್ಪ ದೇಗುಲದ ದ್ವಾರಪಾಲಕ ಮೂರ್ತಿಗಳಿಗೆ ಚಿನ್ನ ಲೇಪನ ಮಾಡುವ ಜವಾಬ್ದಾರಿಯನ್ನು ಉನ್ನಿಕೃಷ್ಣನ್ ಅವರಿಗೆ ವಹಿಸಲಾಗಿತ್ತು. ಆದರೆ ಹಿಂದಿರುಗಿಸುವಾಗ ಚಿನ್ನದ ತೂಕದಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಈ ಪ್ರಕರಣದ ತನಿಖೆ ಇದೀಗ ತೀವ್ರಗೊಂಡಿದೆ. ಎಸ್ಐಟಿ ಅಧಿಕಾರಿಗಳು ಗೋವರ್ಧನ್ ಅವರ ಹೇಳಿಕೆಗಳು ಮತ್ತು ಜ್ಯುವೆಲರಿ ಅಂಗಡಿಯಲ್ಲಿ ಲಭ್ಯವಿರುವ ದಾಖಲೆಗಳನ್ನು ತಾಳೆ ಹಾಕಿ ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಅಂಗಡಿಯಲ್ಲಿ ಕೆಲಸ ಮಾಡುವ ಹತ್ತಕ್ಕೂ ಹೆಚ್ಚು ಸಿಬ್ಬಂದಿಯನ್ನೂ ವಿಚಾರಣೆಗೊಳಪಡಿಸಲಾಗಿದೆ. ರೊದ್ದಂ ಜುವೆಲರ್ಸ್ ಮೇಲೆ ಮಾತ್ರವಲ್ಲದೆ, ಗೋವರ್ಧನ್ ಅವರ ಮನೆ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ನ್ಯಾಯಾಲಯದ ಸೂಚನೆಯ ನಂತರ ಎಸ್ಐಟಿ ತಂಡವು ತನಿಖೆಯನ್ನು ಚುರುಕುಗೊಳಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ – Kannada News | A little boy sang a bhajan of Lord Krishna, video goes viral

ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ.

ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ ಕುಳಿತುಕೊಂಡು ಕೈಯಲ್ಲಿ ಪೂಜಾ ತಟ್ಟೆ ಹಿಡಿದುಕೊಂಡು ಭಜನೆಯಲ್ಲಿ ಮುಳುಗಿದೆ. ಈ ಪುಟಾಣಿಯೂ “ಅಚ್ಯುತಂ ಕೇಶವಂ” ಎಂಬ ಪ್ರಸಿದ್ಧ ಸ್ತೋತ್ರವನ್ನು ಹಾಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಕಲಿಸುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ

ಈ ವಿಡಿಯೋ 6 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮತ್ತೆ ಮತ್ತೆ ನೋಡಬೇಕೇನಿಸುವ ದೃಶ್ಯ ಎಂದಿದ್ದಾರೆ. ಇನ್ನೊಬ್ಬರು, ವಿಡಿಯೋ ನನ್ನ ಹೃದಯ ಗೆದ್ದಿದೆ” ಎಂದು ಹೇಳಿದ್ದಾರೆ. ಮತ್ತೊಬ್ಬರು ಅಪ್ಪಟ ಕೃಷ್ಣ ಭಕ್ತ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:30 pm, Wed, 24 December 25

Source link

ರೋಹಿತ್ ಶರ್ಮಾ ಸ್ಫೋಟಕ ಸೆಂಚುರಿ: 183 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮುಂಬೈ – Kannada News | Rohit Sharma hits century on Vijay Hazare Trophy return

ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಕ್ಕಿಂ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಕ್ಕಿಂ ಪರ ವಿಕೆಟ್ ಕೀಪರ್ ಬ್ಯಾಟರ್ ಆಶಿಶ್ ಥಾಪಾ 79 ರನ್​ಗಳ ಇನಿಂಗ್ಸ್ ಆಡಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಸಿಕ್ಕಿಂ ತಂಡ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 236 ರನ್​ ಕಲೆಹಾಕಿತು.

ರೋಹಿತ್ ಶರ್ಮಾ ಸ್ಫೋಟಕ ಶತಕ:

237 ರನ್​ಗಳ ಸುಲಭ ಗುರಿ ಪಡೆದ ಮುಂಬೈ ಪರ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಹಿಟ್​ಮ್ಯಾನ್ ಸಿಕ್ಕಿಂ  ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಕೇವಲ 62 ಎಸೆತಗಳಲ್ಲಿ ಶತಕ ಪೂರೈಸಿದರು.

ಈ ಶತಕದ ಬಳಿಕ ಕೂಡ ಹೊಡಿಬಡಿ ಆಟ ಮುಂದುವರೆಸಿದ ಹಿಟ್​ಮ್ಯಾನ್ 9 ಭರ್ಜರಿ ಸಿಕ್ಸ್ ಹಾಗೂ 18 ಫೋರ್​ಗಳೊಂದಿಗೆ 94 ಎಸೆತಗಳಲ್ಲಿ 155 ರನ್ ಬಾರಿಸಿದರು. ಈ ಮೂಲಕ ಮುಂಬೈ ತಂಡವು 30.3 ಓವರ್​ಗಳಲ್ಲಿ 237 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಮುಂಬೈ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಅಂಗ್ಕ್ರಿಶ್ ರಘುವಂಶಿ, ಸರ್ಫರಾಝ್ ಖಾನ್, ಸಿದ್ಧೇಶ್ ಲಾಡ್, ಮುಶೀರ್ ಖಾನ್, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಶಾರ್ದೂಲ್ ಠಾಕೂರ್ (ನಾಯಕ), ತುಷಾರ್ ದೇಶಪಾಂಡೆ, ಸಿಲ್ವೆಸ್ಟರ್ ಡಿಸೋಝ.

ಇದನ್ನೂ ಓದಿ: ಬರೋಬ್ಬರಿ 15 ಸಿಕ್ಸ್… ವಿಶ್ವ ದಾಖಲೆಯ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

ಸಿಕ್ಕಿಂ (ಪ್ಲೇಯಿಂಗ್ XI): ಲೀ ಯೋಂಗ್ ಲೆಪ್ಚಾ (ನಾಯಕ), ಆಶಿಶ್ ಥಾಪಾ (ವಿಕೆಟ್ ಕೀಪರ್), ಅಮಿತ್ ರಾಜೇರಾ, ರಾಬಿನ್ ಲಿಂಬೂ, ಗುರಿಂದರ್ ಸಿಂಗ್, ಕ್ರಾಂತಿ ಕುಮಾರ್, ಪಲ್ಜೋರ್ ತಮಾಂಗ್, ಅಂಕುರ್ ಮಲಿಕ್, ಕೆ ಸಾಯಿ ಸಾತ್ವಿಕ್, ಎಂಡಿ ಸಪ್ತುಲ್ಲಾ, ಅಭಿಷೇಕ್ ಶಾ.

Source link

Vasthu Shastra: ತುಳಸಿ ಗಿಡದ ಪಕ್ಕದಲ್ಲಿ ಈ ಸಸ್ಯ ಬೆಳೆದಿದ್ಯಾ? ಇದು ಕೌಟುಂಬಿಕ ಸಂತೋಷ ಮತ್ತು ಸಮೃದ್ಧಿಯ ಸಂಕೇತ – Kannada News | Tulasi Durva: Unveiling Spiritual Meanings and Prosperity Omens in Sanatana Dharma

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ತುಳಸಿಗೆ ವೈಜ್ಞಾನಿಕ ಮತ್ತು ಧಾರ್ಮಿಕ ಮಹತ್ವವೂ ಇದೆ ಎಂದು ಪರಿಗಣಿಸಲಾಗಿದೆ. ತುಳಸಿ ಮಾತೆಯನ್ನು ಪೂಜಿಸುವ ಜನರಿಗೆ ತಮ್ಮ ಮನೆಗಳಲ್ಲಿ ಎಂದಿಗೂ ಸಂಪತ್ತು ಮತ್ತು ಸಮೃದ್ಧಿಯ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡದ ಸ್ಥಾನವು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕುಟುಂಬ ಸದಸ್ಯರಿಗೆ ಶುಭ ಮತ್ತು ಅಶುಭ ಚಿಹ್ನೆಗಳನ್ನು ನೀಡುತ್ತದೆ.

ಮನೆಯಲ್ಲಿ ತುಳಸಿ ಗಿಡದಲ್ಲಿ ಆಗುವ ಬದಲಾವಣೆಗಳು ಕುಟುಂಬ ಮತ್ತು ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರುವ ಅನೇಕ ಚಿಹ್ನೆಗಳನ್ನು ನೀಡುತ್ತವೆ ಎಂಬುದನ್ನು ಗಮನಿಸಬೇಕು. ಇದಲ್ಲದೆ, ತುಳಸಿ ಗಿಡದ ಬಳಿ ಗರಿಕೆ (ದೂರ್ವೆ) ಇದ್ದಕ್ಕಿದ್ದಂತೆ ಬೆಳೆದರೆ, ಅದಕ್ಕೂ ಗಮನಾರ್ಹ ಮಹತ್ವವಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಗರಿಕೆ ಹುಲ್ಲು ಕೂಡ ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ತುಳಸಿಯನ್ನು ಪೂಜಿಸುವಂತೆಯೇ, ಗರಿಕೆ ಹುಲ್ಲುಗೂ ವಿಶೇಷ ಮಹತ್ವವಿದೆ. ಗಣೇಶನಿಗೆ ಗರಿಕೆ ಅರ್ಪಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ತುಳಸಿ ಗಿಡದ ಸುತ್ತಲೂ ಗರಿಕೆ ಹಠಾತ್ತನೆ ಬೆಳೆಯುವುದು ವಿಶೇಷ ಮಹತ್ವವನ್ನು ಹೊಂದಿದೆ.

ಶುಭ ಸುದ್ದಿಯ ಲಕ್ಷಣ:

ನಿಮ್ಮ ಮನೆಯಲ್ಲಿರುವ ತುಳಸಿ ಗಿಡದ ಸುತ್ತಲೂ ಗರಿಕೆ ಹುಲ್ಲು ಇದ್ದಕ್ಕಿದ್ದಂತೆ ಬೆಳೆಯಲು ಪ್ರಾರಂಭಿಸಿದರೆ, ಶೀಘ್ರದಲ್ಲೇ ನಿಮಗೆ ಒಳ್ಳೆಯ ಸುದ್ದಿ ಸಿಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಗರಿಕೆ ಹುಲ್ಲಿನ ಬೆಳವಣಿಗೆ ಬಹಳ ಶುಭವೆಂದು ಪರಿಗಣಿಸಲಾಗಿದೆ.

ಕೌಟುಂಬಿಕ ಸಂತೋಷ ಮತ್ತು ಸಮೃದ್ಧಿಯ ಸಂಕೇತ:

ಧಾರ್ಮಿಕ ನಂಬಿಕೆಗಳ ಪ್ರಕಾರ, ಗರಿಕೆ ಹುಲ್ಲನ್ನು ಗಣೇಶನಿಗೆ ಪ್ರಿಯವೆಂದು ಪರಿಗಣಿಸಲಾಗುತ್ತದೆ ಮತ್ತು ಗಣೇಶನನ್ನು ಸಮೃದ್ಧಿ, ಸಂತೋಷ ಮತ್ತು ಸಮೃದ್ಧಿಯ ಪೋಷಕ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ನಿಮ್ಮ ಮನೆಯಲ್ಲಿರುವ ತುಳಸಿ ಗಿಡದ ಬಳಿ ಗರಿಕೆ ಹುಲ್ಲು ಬೆಳೆದರೆ, ಅದನ್ನು ಹಲವು ವಿಧಗಳಲ್ಲಿ ಸಂತೋಷ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅಲ್ಲದೆ, ಶೀಘ್ರದಲ್ಲೇ ನಿಮ್ಮ ಮನೆಗೆ ಸಮೃದ್ಧಿ ಬರಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ:

ತುಳಸಿ ಗಿಡಗಳ ಬಳಿ ಗರಿಕೆ ನೆಡುವುದರಿಂದ ಆರ್ಥಿಕ ಯೋಗಕ್ಷೇಮ ಸುಧಾರಿಸುತ್ತದೆ. ಇದು ನಿಮಗೆ ಶೀಘ್ರದಲ್ಲೇ ಉತ್ತಮ ಕೊಡುಗೆ ಸಿಗಬಹುದು ಎಂಬುದನ್ನು ಸೂಚಿಸುತ್ತದೆ, ಇದು ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿಗೆ ದಾರಿ ಮಾಡಿಕೊಡುತ್ತದೆ ಎಂದು ನಂಬಲಾಗಿದೆ.

ನಕಾರಾತ್ಮಕ ಶಕ್ತಿಯ ಅಂತ್ಯ:

ನಿಮ್ಮ ಮನೆಯಲ್ಲಿರುವ ತುಳಸಿ ಗಿಡದ ಬಳಿ ಗರಿಕೆ ಬೆಳೆಯಲು ಪ್ರಾರಂಭಿಸಿದಾಗ, ಮನೆಯಲ್ಲಿರುವ ಎಲ್ಲಾ ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ ಮತ್ತು ಸಕಾರಾತ್ಮಕ ಶಕ್ತಿಯು ಪ್ರವೇಶಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಇದಲ್ಲದೆ, ಸಂಪತ್ತು ಶೀಘ್ರದಲ್ಲೇ ನಿಮ್ಮ ಮನೆಗೆ ಬರಲಿದೆ ಎಂಬುದರ ಸೂಚನೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಡುಗೆಗೆ ಉಪ್ಪು ಜಾಸ್ತಿ ಆದ್ರೆ ಏನು ಮಾಡಬೇಕು?

ಮೊಸರು ಸೇರಿಸಿ: ಉಪ್ಪು ಜಾಸ್ತಿಯಾಗಿ ಅಡುಗೆಯ ರುಚಿ ಕೆಟ್ಟು ಹೋದರೆ ರುಚಿಯನ್ನು ಸರಿದೂರಿಸಲು ನೀವು ಅಡುಗೆಗೆ ಮೊಸರನ್ನು ಸೇರಿಸಬಹುದು. ಅಡುಗೆಗೆ ಎರಡು ಚಮಚ ಮೊಸರು ಸೇರಿಸಿ ಎರಡು ನಿಮಿಷ ಬೇಯಿಸಿ. ಇದು ಉಪ್ಪಿನ ಅಂಶವನ್ನು ಸಮತೋಲನಗೊಳಿಸುತ್ತದೆ ಮತ್ತು ಅಡುಗೆಯ ರುಚಿಯನ್ನು ಸುಧಾರಿಸುತ್ತದೆ.

ಕಡಲೆ ಹಿಟ್ಟು: ನೀವು ಹುರಿದ ಕಡಲೆ ಹಿಟ್ಟನ್ನು ಸಹ ಬಳಸಬಹುದು. ನೀವು ಮಾಡಿದ ಅಡುಗೆಯಲ್ಲಿ ಉಪ್ಪು ಹೆಚ್ಚು ಇದ್ದರೆ, ಅದಕ್ಕೆ ಹುರಿದ ಕಡಲೆ ಹಿಟ್ಟನ್ನು ಸೇರಿಸಿ. ಇದು ಹೆಚ್ಚುವರಿ ಉಪ್ಪನ್ನು ಸಮತೋಲನಗೊಳಿಸುತ್ತದೆ ಮತ್ತು ಅಡುಗೆಯ ರುಚಿಯನ್ನು ಸುಧಾರಿಸುತ್ತದೆ.

ಬೇಯಿಸಿದ ಆಲೂಗಡ್ಡೆ: ಬೇಯಿಸಿದ ಆಲೂಗಡ್ಡೆಯನ್ನು ಬಳಸುವ ಮೂಲಕ ಅಡುಗೆಯಲ್ಲಿನ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡಬಹುದು. ಉಪ್ಪು ಹೆಚ್ಚಾಗಿ ರುಚಿ ಕೆಟ್ಟಿದ್ದರೆ ಬೇಯಿಸಿದ ಆಲೂಗಡ್ಡೆಯನ್ನು ಕಟ್‌ ಮಾಡಿ, ನೀವು ತಯಾರಿಸಿಟ್ಟ ಅಡುಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದು ಉಪ್ಪಿನಾಂಶವನ್ನು ಹೀರಿಕೊಳ್ಳುತ್ತದೆ. ಹಸಿ ಆಲೂಗಡ್ಡೆಯ ತುಂಡನ್ನು ಸಹ ಸೇರಿಸಬಹುದು.

ಇದನ್ನೂ ಓದಿ: ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಸರಳ ಸಲಹೆಯನ್ನು ಪಾಲಿಸಿ

ನಿಂಬೆ ರಸ: ಅಡುಗೆಯಲ್ಲಿ ಉಪ್ಪು ಹೆಚ್ಚಾಗಿದ್ದರೆ ಅದನ್ನು ಸಮತೋಲನಗೊಳಿಸಲು ನಿಂಬೆ ರಸ ಕೂಡ ಸಹಕಾರಿಯಾಗಿದೆ. ಹೌದು ಉಪ್ಪು ಜಾಸ್ತಿಯಾದ್ರೆ ಅಡುಗೆಗೆ ಅರ್ಧ ನಿಂಬೆಹಣ್ಣನ್ನು ಹಿಂಡಿ ಚೆನ್ನಾಗಿ ವಿಶ್ರಣ ಮಾಡಿ. ಇದು ಹೆಚ್ಚಾದ ಉಪ್ಪಿನಾಂಶವನ್ನು ಸಮತೋಲನಗೊಳಿಸುತ್ತದೆ.

ತೆಂಗಿನ ಹಾಲು: ನೀವು ಮಾಡಿದ ಗ್ರೇವಿಯ ಉಪ್ಪು ಜಾಸ್ತಿ ಆದ್ರೆ ಅದಕ್ಕೆ ತೆಂಗಿನ ಹಾಲನ್ನು ಸೇರಿಸಬಹುದು. ತೆಂಗಿನ ಹಾಲಿನೊಂದಿಗೆ ಸ್ವಲ್ಪ ನೀರು ಬೆರೆಸಿ ಗ್ರೇವಿಗೆ ಸೇರಿಸಿ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚುವರಿ ಉಪ್ಪನ್ನು ಸಮತೋಲನಗೊಳಿಸುತ್ತದೆ.

ಸಕ್ಕರೆ: ಅಡುಗೆಗೆ ಉಪ್ಪು ಹೆಚ್ಚಾದರೆ ಅದಕ್ಕೆ ಸ್ವಲ್ಪ ಸಕ್ಕರೆ ಅಥವಾ ಬೆಲ್ಲ ಸೇರಿಸಿ. ಸಕ್ಕರೆಯ ಸಿಹಿಯು ಉಪ್ಪಿನ ಪ್ರಮಾಣವನ್ನು ಸರಿದೂಗಿಸಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:11 pm, Wed, 24 December 25

Source link

‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ – Kannada News | Rashmika Mandanna starrer Mysaa movie First Glimpse released

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ಹೀರೋಗಳಿಗೆ ನಾಯಕಿಯಾಗಿ ಅವರು ಮಿಂಚಿದ್ದಾರೆ. ಹಾಗಂತ ಅವರು ಒಂದೇ ಬಗೆಯ ಸಿನಿಮಾಗಳನ್ನು ಮಾಡುತ್ತಿಲ್ಲ. ಬದಲಿಗೆ, ಬೇರೆ ಬೇರೆ ರೀತಿಯ ಸಿನಿಮಾ ಮತ್ತು ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಅವರ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಗಮನ ಸೆಳೆದಿತ್ತು. ಈಗ ಅವರು ‘ಮೈಸಾ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ. ಈ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್ (Mysaa First Glimpse) ಬಿಡುಗಡೆ ಆಗಿದೆ.

ಸ್ಟಾರ್ ನಟರಿಗೆ ಜೋಡಿಯಾಗಿ ನಟಿಸಲು ರಶ್ಮಿಕಾ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಅದರ ನಡುವೆಯೂ ಅವರು ಹೊಸ ಬಗೆಯ ಪಾತ್ರಗಳನ್ನು ಮಾಡುತ್ತಿದ್ದಾರೆ. ಅದಕ್ಕೆ ‘ಮೈಸಾ’ ಸಿನಿಮಾವೇ ಬೆಸ್ಟ್ ಉದಾಹರಣೆ. ಈ ಸಿನಿಮಾದಲ್ಲಿ ಅವರು ಹಿಂದೆಂದೂ ಕಾಣಿಸಿಕೊಳ್ಳದ ಗೆಟಪ್​​ನಲ್ಲಿ ಪ್ರೇಕ್ಷಕರ ಎದುರು ಬರಲಿದ್ದಾರೆ. ಆ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸಲು ಈ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ.

ರವೀಂದ್ರ ಪುಲ್ಲೆ ಅವರು ‘ಮೈಸಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕರಾಗಿ ಇದು ಅವರ ಮೊದಲ ಸಿನಿಮಾ. ಹಾಗಿದ್ರೂ ಕೂಡ ಓರ್ವ ಅನುಭವಿ ನಿರ್ದೇಶಕನ ರೀತಿಯಲ್ಲಿ ಅವರು ಸಿನಿಮಾ ಮಾಡಿದ್ದಾರೆ ಎಂಬುದಕ್ಕೆ ಫಸ್ಟ್ ಗ್ಲಿಂಪ್ಸ್ ಟೀಸರ್​​ನಲ್ಲಿ ಸುಳಿವು ಸಿಕ್ಕಿದೆ. ‘ಅನ್‌ಫಾರ್ಮುಲಾ ಫಿಲ್ಮ್ಸ್’ ಸಂಸ್ಥೆಯ ಮೂಲಕ ‘ಮೈಸಾ’ ಸಿನಿಮಾ ನಿರ್ಮಾಣ ಆಗುತ್ತಿದೆ.

ಮೈಸಾ ಸಿನಿಮಾ ಫಸ್ಟ್ ಗ್ಲಿಂಪ್ಸ್:

ಇದು ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡ, ತೆಲುಗು, ಹಿಂದೆ, ತಮಿಳು ಮುಂತಾದ ಭಾಷೆಗಳಲ್ಲಿ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿದೆ. ಭಾರಿ ಬಜೆಟ್​​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಕೈಯಲ್ಲಿ ಬೇಡಿ, ಬಂದೂಕು, ಮೈಯೆಲ್ಲಾ ರಕ್ತ, ಮುಖದಲ್ಲಿ ನೋವು, ಆಕ್ರೋಶ.. ಹೀಗೆ ಮೊದಲ ಲುಕ್​​ನಲ್ಲೇ ಕಥೆಯ ಬಗ್ಗೆ ಒಂದಷ್ಟು ಸುಳಿವು ಬಿಟ್ಟುಕೊಡಲಾಗಿದೆ. ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳಿಗೆ ಈ ಫಸ್ಟ್ ಗ್ಲಿಂಪ್ಸ್ ಇಷ್ಟ ಆಗಿದೆ. ಸಿನಿಮಾ ನೋಡಲು ತಾವೆಲ್ಲ ಕಾಯುತ್ತಿರುವುದಾಗಿ ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮದುವೆಗೆ ಮುನ್ನ ಗೆಳತಿಯರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡಿದ ರಶ್ಮಿಕಾ: ಚಿತ್ರಗಳು ಇಲ್ಲಿವೆ

‘ಮೈಸಾ’ ಸಿನಿಮಾದ ಈ ಪಾತ್ರಕ್ಕಾಗಿ ರಶ್ಮಿಕಾ ಮಂದಣ್ಣ ಅವರು ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಆ ಪಾತ್ರದ ಹಿನ್ನೆಲೆ ಹೇಗಿದೆ ಎಂಬುದನ್ನು ತಾಯಿಯ ಧ್ವನಿ ವಿವರಿಸುತ್ತದೆ. ಈಶ್ವರಿ ರಾವ್, ಗುರು ಸೋಮಸುಂದರಂ, ರಾವ್ ರಮೇಶ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಶ್ರೀಯಾಸ್ ಪಿ. ಕೃಷ್ಣ ಅವರ ಛಾಯಾಗ್ರಹಣ, ಜೇಕ್ಸ್ ಬೆಜೋಯ್ ಅವರ ಸಂಗೀತ, ಆಂಡಿ ಲಾಂಗ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಶ್ಲೀಲ ಕಮೆಂಟ್ ಹಾಕಿದವರಿಗೆ ಸಂಕಷ್ಟ; ದೂರು ದಾಖಲಿಸಿ, ದಾಖಲೆ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Files Cyber Complaint: Darshan Wife Battles Online Hate and Fan Wars

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳು ಇದಕ್ಕೆ ಹೆಚ್ಚು ಸಂತ್ರಸ್ತರಾಗುತ್ತಿದ್ದಾರೆ. ಈಗ ವಿಜಯಲಕ್ಷ್ಮೀ ಕೂಡ ಇದರಿಂದ ತೊಂದರೆ ಅನುಭವಿಸಿದ್ದಾರೆ. ಈ ಸಂಬಂಧ ಅವರು ದೂರು ಕೂಡ ದಾಖಲು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಂದ ಹೇಟ್ ಕಮೆಂಟ್ ಹಾಗೂ ಮೆಸೇಜ್​​ಗಳ ಸ್ಕ್ರೀನ್​ಶಾಟ್​​ಗಳನ್ನು ಸೈಬರ್ ಪೊಲೀಸರಿಗೆ ನೀಡುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ.

ಸುದೀಪ್ ಅವರು ಇತ್ತೀಚೆಗೆ ‘ಸಿನಿಮಾ ರಿಲೀಸ್ ವೇಳೆ ಒಂದು ಪಡೆ ಯುದ್ಧಕ್ಕೆ ರೆಡಿ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ ಮಾತು ಎಂದು ಬಣ್ಣಿಸಲಾಯಿತು. ಆ ಬಳಿಕ ವಿಜಯಲಕ್ಷ್ಮೀ ಅವರು ನೇರವಾಗಿ ಅಖಾಡಕ್ಕೆ ಇಳಿದು, ಸುದೀಪ್​​ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. ಆ ಬಳಿಕ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇದ್ದವು. ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮೀ ಅವರಿಗೆ ಹೇಟ್ ಕಮೆಂಟ್ ಹೆಚ್ಚಿದೆ.

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಜಯಲಕ್ಷ್ಮೀ ದೂರು ದಾಖಲು ಮಾಡಿದ್ದಾರೆ. ತಮಗೆ ಬಂದ ಹೇಟ್ ಕಮೆಂಟ್​ ಸ್ಕ್ರೀನ್​ಶಾಟ್ ಹಾಗೂ ಆಯಾ ಖಾತೆಗಳ ವಿವರಗಳನ್ನು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಸೈಬರ್ ಅಪರಾಧ ವಿಭಾಗದ ಇನ್ಸ್​ಪೆಕ್ಟರ್​ ದೂರು ಸ್ವೀಕರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಸುದೀಪ್ ಫ್ಯಾನ್ಸ್?

ವಿಜಯಲಕ್ಷ್ಮೀ ಖಾತೆಗೆ ಬಂದ ಕಾಮೆಂಟ್​​ಗಳು ಸುದೀಪ್ ಅಭಿಮಾನಿಗಳದ್ದೇ ಎಂಬ ಅನುಮಾನ ಮೂಡಿದೆ. ಏಕೆಂದರೆ ಕೆಲವು ಖಾತೆಗಳು ಸುದೀಪ್ ಅಭಿಮಾನಿಗಳ ಹೆಸರಲ್ಲಿ ಇದೆ. ಇನ್ನೂ ಕೆಲವರು ಸುದೀಪ್ ಹೆಸರು ಬಳಸಿದ್ದಾರೆ. ಇನ್ನೂ ಕೆಲವರು ಸುದೀಪ್ ಸ್ಟಿಕ್ಕರ್ ಬಳಸಿದ್ದಾರೆ. ಇವರ ಪೈಕಿ ಎಷ್ಟು ಮಂದಿ ನಿಜವಾದ ಸುದೀಪ್ ಅಭಿಮಾನಿಗಳು ಎಂಬುದು ತನಿಖೆ ಬಳಿಕವೇ ತಿಳಿಯಬೇಕಿದೆ.

ಇದನ್ನೂ ಓದಿ: ‘ಅವರು ಯಾವ ನೋವಲ್ಲಿದ್ದಾರೋ ಗೊತ್ತಿಲ್ಲ’; ವಿಜಯಲಕ್ಷ್ಮೀ ಬಗ್ಗೆ ಕಿಚ್ಚನ ಮಾತು

ಡಿ ಬಾಸ್ ಫ್ಯಾನ್ಸ್ ಅರೆಸ್ಟ್

ಈ ಮೊದಲು ರಮ್ಯಾ ಅವರು ಇದೇ ರೀತಿಯ ಕ್ರಮ ಕೈಗೊಂಡಿದ್ದರು. ತಮಗೆ ಬಂದ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್​​ಗಳನ್ನು ನೀಡಿ ದೂರು ದಾಖಲಿಸಿದ್ದರು. ಕೆಲ ದರ್ಶನ್ ಅಭಿಮಾನಿಗಳನ್ನು ಕೇಸ್​​ನಲ್ಲಿ ಅರೆಸ್ಟ್ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link