ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ಒಲಿದ ನಾಯಕತ್ವ ಪಟ್ಟ
ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ಗೆ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತನ್ನ ತಂಡದ ನಾಯಕಿಯನ್ನು ಬದಲಾಯಿಸಲು ನಿರ್ಧರಿಸಿದೆ. ಕಳೆದ ಎರಡು ವರ್ಷಗಳಿಂದ ಮೆಗ್ ಲ್ಯಾನಿಂಗ್ ತಂಡದ ನಾಯಕಿಯಾಗಿದ್ದರು. ಆದರೆ ಈಗ ಈ ಜವಾಬ್ದಾರಿಯನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಜೆಮಿಮಾ ರೊಡ್ರಿಗಸ್‌ಗೆ ನೀಡಲಾಗುತ್ತಿದೆ. ಡಿಸೆಂಬರ್ 23 ರಂದು ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ವರದಿಯಾಗಿದೆ. 2 ಆವೃತ್ತಿಗಳಲ್ಲಿ ತಂಡವನ್ನು ಫೈನಲ್ಗೆ ಮುನ್ನಡೆಸಿದ್ದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಅವರನ್ನು ಹರಾಜಿಗೂ ಮುನ್ನ ತಂಡದಿಂದ…