ವಿದ್ಯುತ್ ಚಾಲಿತ ವಾಹನಗಳಿಗೂ ಇನ್ನು ತೆರಿಗೆ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಬೆಂಗಳೂರು, ಏಪ್ರಿಲ್ 03: ವಿದ್ಯುತ್ ಚಾಲಿತ ವಾಹನಗಳಿಗೆ ಇಲ್ಲಿಯವರೆಗೆ ನೀಡಲಾಗಿದ್ದ ತೆರಿಗೆ (Tax) ವಿನಾಯಿತಿಯನ್ನು ಹಿಂಪಡೆದ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶ ಮತ್ತು ಜಗತ್ತಿನಲ್ಲಿ ವಿದ್ಯುತ್ ವಾಹನಗಳತ್ತ ಸಾಗುವ ಪ್ರಯತ್ನಕ್ಕೆ ದೊಡ್ಡ ಹಿನ್ನಡೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕ್ರಮವು ಜನರನ್ನು ಮತ್ತೆ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳತ್ತ ಸೆಳೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಇದರಿಂದ ಮಾಲಿನ್ಯ ಹೆಚ್ಚಾಗುವುದಲ್ಲದೆ, ಕಚ್ಚಾ ತೈಲ ಆಮದಿನ ಮೇಲೆ ದೇಶದ ಅವಲಂಬನೆ…