ಮಂಗಳೂರಿನಲ್ಲಿ ಕೆಂಡದಂತಹ ಬಿಸಿಲು: ಕರಾವಳಿ ಕರ್ನಾಟಕಕ್ಕೆ ಶಾಖಾಘಾತದ ಎಚ್ಚರಿಕೆ
ಮಂಗಳೂರು, ಏಪ್ರಿಲ್ 3: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ರಣಬಿಸಿಲು ಜನರನ್ನು ಹೈರಾಣಾಗಿಸಿದೆ. ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ (Heat Stroke)’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್ನಿಂದ 6.4 ಡಿಗ್ರಿ ಸೆಲ್ಶಿಯಸ್ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ…