Yearly Horoscope 2026: 2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ – Kannada News | Leo Horoscope 2026: Dr. Basavaraj Gurujis Yearly Predictions

2026ರ ವರ್ಷವು ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಈ ವರ್ಷದಲ್ಲಿ ಗ್ರಹಗಳ ಸಂಚಾರವು ಜೀವನದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಗುರು ಗ್ರಹವು ಜೂನ್ ಎರಡನೇ ತಾರೀಖಿನ ತನಕ ಲಾಭ ಸ್ಥಾನದಲ್ಲಿ ಇದ್ದು, ನಂತರ 12ನೇ ಮನೆಗೆ (ದ್ವಾದಶ ಸ್ಥಾನ) ಪ್ರವೇಶಿಸಲಿದ್ದಾನೆ. ಅಷ್ಟಮ ಶನಿ ವರ್ಷವಿಡೀ ಮುಂದುವರಿದರೆ, ರಾಹು 7ನೇ ಮನೆಯಿಂದ 6ನೇ ಮನೆಗೆ, ಕೇತು 1ನೇ ಮನೆಯಿಂದ 12ನೇ ಮನೆಗೆ ಸಂಚರಿಸಲಿದ್ದಾರೆ….

Read More

ನೋರಾ ಫತೇಹಿ ಕಾರು ಅಪಘಾತ: ಈಗ ಹೇಗಿದೆ ನಟಿಯ ಪರಿಸ್ಥಿತಿ? – Kannada News | Actress Nora Fatehi gives her health update after car accident in Mumbai

ಖ್ಯಾತ ನಟಿ ನೋರಾ ಫತೇಹಿ (Nora Fatehi) ಅವರ ಅಭಿಮಾನಿಗಳಿಗೆ ಇದು ಕಹಿ ಸುದ್ದಿ. ಮುಂಬೈನಲ್ಲಿ ನೋರಾ ಚಲಿಸುತ್ತಿದ್ದ ಕಾರು ಅಪಘಾತಕ್ಕೆ (Car Accident) ಒಳಗಾಗಿದೆ. ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು ನೋರಾ ಅವರ ಕಾರಿಗೆ ಬಂದು ಡಿಕ್ಕಿ ಹೊಡೆದಿದ್ದಾನೆ. ಹಾಡುಹಗಲು 3 ಗಂಟೆಗೆ ಈ ಘಟನೆ ನಡೆದಿದೆ. ಇದರಿಂದಾಗಿ ನೋರಾ ಫತೇಹಿ ಅವರಿಗೆ ಚಿಕ್ಕ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಸುರಕ್ಷಿತವಾಗಿದ್ದಾರೆ. ಆದರೆ ಅವರು ಈ ಘಟನೆಯಿಂದ ಆತಂತಕ್ಕೆ ಒಳಗಾಗಿದ್ದಾರೆ. ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು…

Read More

ಹೋಗಿ ದೃಷ್ಟಿ ತೆಗಿಯಿರಿ… ಶುಭ್​ಮನ್ ಗಿಲ್​ಗೆ ಸುನಿಲ್ ಗವಾಸ್ಕರ್ ಸಲಹೆ – Kannada News | Sunil Gavaskar’s heartfelt advice to Shubman Gill

ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ಲಭಿಸಿಲ್ಲ. ಅಚ್ಚರಿ ಎಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಗಿಲ್ ಭಾರತ ಟಿ20 ತಂಡದ ಉಪನಾಯಕರಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಹಾಗೂ ಟಿ20 ವಿಶ್ವಕಪ್​ಗೆ ಪ್ರಕಟಿಸಲಾದ ತಂಡದಲ್ಲಿ ಗಿಲ್​ಗೆ ಸ್ಥಾನ ನೀಡಲಾಗಿಲ್ಲ. ಇತ್ತ ಶುಭ್​ಮನ್ ಗಿಲ್​ಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು ಟೀಮ್…

Read More

Video: ಕರುವಿನೊಂದಿಗೆ ವಾಕಿಂಗ್ ಹೊರಟ ಯುವಕ, ವೈರಲ್ ಆಯ್ತು ದೃಶ್ಯ – Kannada News | Young man goes for a walk with a calf, video goes viral

ವಾಕಿಂಗ್‌ ವೇಳೆ ಮನೆಯ ಮುದ್ದಿನ ಶ್ವಾನಗಳನ್ನು (Dog) ತಮ್ಮೊಂದಿಗೆ ಕರೆದುಕೊಂಡು ಬರುವವರನ್ನು ನೀವು ನೋಡಿರುತ್ತೀರಿ. ವಾಕಿಂಗ್‌ಗೆಂದು ಬಂದ ಸಂದರ್ಭದಲ್ಲಿ ಮಾಲೀಕ ಹಾಗೂ ಶ್ವಾನಗಳ ನಡುವಿನ ಪ್ರೀತಿ ಹಾಗೂ ಬಾಂಧವ್ಯಕ್ಕೆ ಈ ಕೆಲ ದೃಶ್ಯಗಳು ಸಾಕ್ಷಿಯಾಗುತ್ತವೆ. ಆದರೆ ಇಲ್ಲೊಬ್ಬ ಯುವಕನು ವಾಕಿಂಗ್‌ಗೆ ಶ್ವಾನವನ್ನು ಕರೆದುಕೊಂಡು ಹೋಗಿಲ್ಲ. ಬದಲಾಗಿ ಪುಟಾಣಿ ಕರುವಿನೊಂದಿಗೆ (calf) ಸಂಜೆಯ ವೇಳೆ ವಾಕಿಂಗ್‌ಗೆ ತೆರಳಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಸೌರಭ್ ಜೈನ್ (Sourabh Jain) ಹೆಸರಿನ…

Read More

‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ – Kannada News | Yash starrer Toxic movie team released Kiara Advani first look as Nadia

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಹತ್ತಿರ ಆಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿದ ಸಿನಿಮಾ ಆದ್ದರಿಂದ ‘ಟಾಕ್ಸಿಕ್’ (Toxic) ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗ ‘ಟಾಕ್ಸಿಕ್’ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದರಿಂದ ಕುತೂಹಲ ಹೆಚ್ಚಿಸಲಾಗಿದೆ. ಗ್ಲಾಮರಸ್ ಆದ ಗೆಟಪ್​​ನಲ್ಲಿ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಡಿ. 21 ರಿಂದ 27ರ ವರೆಗಿನ ವಾರಭವಿಷ್ಯ ತಿಳಿಯಿರಿ – Kannada News | December Weekly Horoscope: Zodiac Predictions and Planetary Influences

ಡಿಸೆಂಬರ್ ತಿಂಗಳ ಈ ವಾರ ಸೂರ್ಯ, ಶುಕ್ರ, ಕುಜರ ಯೋಗ ಧನುರಾಶಿಯಲ್ಲಿ ಆಗಲಿದ್ದು ಗುರುವಿನ ರಾಶಿಯಲ್ಲಿ ಇರುವ ಇವರು ಶುಭ ಫಲವನ್ನೇ ಕೊಡುವರು. ಉತ್ಸಾಹ ಹಾಗು ಸರ್ಕಾರದ ಕಾರ್ಯಗಳು ಬೇಗ ಆಗಲಿವೆ. ಶಸ್ತ್ರಕ್ಕೆ ಸಂಬಂಧಿಸಿದ ಉದ್ಯೋಗಳು ಫಲಿತವಾಗುವುದು. ಎಲ್ಲ ಗ್ರಹಗಳೂ ಏಕಾದಶ ಸ್ಥಾನದ ಫಲವನ್ನು ಕೊಡಲಿ. ಮೇಷ ರಾಶಿ: ಈ ವಾರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ನಿಮಗೆ ಇಂದ್ರಜಾಲದಂತೆ ಮಾಯವಾಗಲಿದೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಬಹುದು. ಕಿವಿಗೆ ಹಾಕಿಕೊಳ್ಳಿ, ಚಿಂತಿಸುವ…

Read More

Vastu for Electronics: ಮನೆಯಲ್ಲಿ ಪದೇ ಪದೇ ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗುತ್ತಿದೆಯೇ? ವಾಸ್ತು ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Vastu for Electronics: Solve Malfunctions and Rahu Dosha in Your Home

ಮನೆಯಲ್ಲಿನ ಶಕ್ತಿಯ ಅಸಮತೋಲನವು ಮನೆಯಲ್ಲಿರುವ ಎಲೆಕ್ಟ್ರಾನಿಕ್ ಸಾಧನಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಎಲೆಕ್ಟ್ರಾನಿಕ್ ಸಾಧನಗಳು ಅಗ್ನಿ ಅಂಶಕ್ಕೆ ಸಂಬಂಧಿಸಿವೆ, ಆದ್ದರಿಂದ ಅವುಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸದಿದ್ದರೆ, ಮನೆಯ ಶಕ್ತಿಯ ಸಮತೋಲನವು ತೊಂದರೆಗೊಳಗಾಗುತ್ತದೆ. ಮನೆಯಲ್ಲಿ ಅಸ್ತವ್ಯಸ್ತವಾಗಿರುವ ರೀತಿಯಲ್ಲಿ ಇರಿಸಲಾಗಿರುವ ಎಲೆಕ್ಟ್ರಾನಿಕ್ ವಸ್ತುಗಳು, ಫ್ರಿಡ್ಜ್, ಟಿವಿ, ಆರ್‌ಒ, ಮಿಕ್ಸರ್, ದೀಪಗಳು, ಫ್ಯಾನ್‌ಗಳು ದೋಷಗಳಿಗೆ ಕಾರಣ ಮತ್ತು ರಾಹು ದುರ್ಬಲ ಸ್ಥಾನದಲ್ಲಿರುವುದೇ ಕಾರಣ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ, ಅಗ್ನಿ ಅಂಶವು ಎಲೆಕ್ಟ್ರಾನಿಕ್ ಸಾಧನಗಳೊಂದಿಗೆ…

Read More

WTC ಅಂಕ ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತ ಕೆಳಗೆ ಟೀಮ್ ಇಂಡಿಯಾ – Kannada News | WTC Points Table 2025: Team India slip to 6th position in WTC Standings

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು ಗೆಲುವಿನ ನಾಗಾಲೋಟ ಮುಂದುವರೆಸಿದೆ. ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಆಸೀಸ್ ಪಡೆ ಜಯಭೇರಿ ಬಾರಿಸಿದ್ದು, ಈ ಮೂಲಕ WTC ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲನುಭವಿಸಿದ್ದ ಟೀಮ್ ಇಂಡಿಯಾ ಇದೀಗ ಅಂಕ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಈ ಬಾರಿ ಭಾರತ ತಂಡವು ಪಾಕಿಸ್ತಾನಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ…

Read More

Viral: ಕೆನಡಾದಿಂದ ಭಾರತಕ್ಕೆ ಮರಳಿದ ಬಳಿಕ ಜೀವನವೇ ಬದಲಾಯ್ತು ಎಂದ ಅನಿವಾಸಿ ಭಾರತೀಯ ಮಹಿಳೆ – Kannada News | NRI woman says Indian lifestyle is a lesson in life

ಜೀವನದಲ್ಲಿ ಬದಲಾವಣೆ ಸಹಜ. ಆದರೆ ಎಲ್ಲವನ್ನೂ ಸಲೀಸಾಗಿ ಸ್ವೀಕರಿಸುವ ಮನಸ್ಸು ಇರಬೇಕು. ಜೀವನದ ಅನುಭವಗಳು ಬದುಕಿಗೆ ಪಾಠವಾಗುತ್ತದೆ. ಕೆನಡಾದಿಂದ (Canada) ಭಾರತಕ್ಕೆ ಮರಳಿದ ಅನಿವಾಸಿ ಭಾರತೀಯ ಮಹಿಳೆ (NRI Women) ತಮ್ಮ ಜೀವನ ಅನುಭವವನ್ನು ತೆರೆದಿಟ್ಟಿದ್ದಾರೆ. ಪ್ರಸ್ತುತ ಗುಜರಾತ್‌ನ ಸೂರತ್‌ನಲ್ಲಿ ವಾಸಿಸುತ್ತಿದ್ದು  ತನ್ನ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಯಿತು ಎಂದು ಬಹಿರಂಗ ಪಡಿಸಿದ್ದಾರೆ. ಈ ಕುರಿತಾದ ಪೋಸ್ಟ್ ಸದ್ಯ ವೈರಲ್ ಆಗಿದೆ. reellifeofzeel ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು ದಿನನಿತ್ಯ…

Read More

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ; ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿದ್ದರಾ ಸಿಬ್ಬಂದಿ? – Kannada News | Hassan Hospital Scam: Scanning Machine Stolen in Beluru, Sex Determination Suspected

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಹಾಸನ, ಡಿಸೆಂಬರ್ 21:  ಹಾಸನದ (Hassan) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಕದ್ದೊಯ್ದ ಯಂತ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆ ವ್ಯಕ್ತವಾಗಿದೆ….

Read More