Karnataka 2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ, ಆನ್ಲೈನಲ್ಲಿ ನೋಡೋದು ಹೇಗೆಂಬ ಮಾಹಿತಿ ಇಲ್ಲಿದೆ
ಬೆಂಗಳೂರು, ಏಪ್ರಿಲ್ 1: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಾರ್ಚ್ 31ರಂದು ಪ್ರಥಮ ಪಿಯುಸಿ ಫಲಿತಾಂಶ ಯಶಸ್ವಿಯಾಗಿ ಪ್ರಕಟಗೊಂಡ ಬೆನ್ನಲ್ಲೇ, ಈಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕೌತುಕ ಹೆಚ್ಚಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಏಪ್ರಿಲ್ ಎರಡನೇ ವಾರದಲ್ಲಿ (ಏಪ್ರಿಲ್ 7 ಅಥವಾ 8) ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ…