ಯುದ್ಧದಿಂದ ವೈದ್ಯಕೀಯ ಕ್ಷೇತ್ರಕ್ಕೂ ಹೊಡೆತ: ರಾಜ್ಯದ ಅತಿದೊಡ್ಡ ಸಿರಿಂಜ್ ಉತ್ಪಾದನಾ ಘಟಕ ಸ್ಥಗಿತ ಆತಂಕ
ಹುಬ್ಬಳ್ಳಿ, ಏಪ್ರಿಲ್ 01: ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ದದಿಂದಾಗಿ ಈಗಾಗಲೇ ಕಮರ್ಷಿಯಲ್ ಸಿಲಿಂಡರ್ ಅಭಾವ ಉಂಟಾಗಿದೆ. ಆಮದು, ರಫ್ತು ಮೇಲೆ ಬೀರಿದ ಪರಿಣಾಮದಿಂದ ಅನೇಕ ವಸ್ತುಗಳ ಬೆಲೆ ಹೆಚ್ಚಳವಾಗಿವೆ. ಇದೇ ರೀತಿ ಯುದ್ಧ ಮುಂದವರಿದರೆ ವೈದ್ಯಕೀಯ (Medical) ವಸ್ತುಗಳಿಗೆ ಕೂಡ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚು ಬಳಕೆಯಾಗುವ ಇಂಜೆಕ್ಷನ್ ಸಿರಿಂಜ್, ಐವಿ ಕೆನಾಲ್ ಸೇರಿದಂತೆ ಇನ್ನಿತರ ವಸ್ತುಗಳ ಉತ್ಫಾದನೆಗೆ ಕಚ್ಚಾವಸ್ತುವಿನ ಕೊರತೆ ಆರಂಭವಾಗಿದೆ. ಬಹುತೇಕ ಘಟಕಗಳು ಕಚ್ಚಾವಸ್ತುಗಳಿಲ್ಲದೇ…