Category Archives: Blog

Your blog category

ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಪ್ರಸ್ತುತ ಹಾಲಿವುಡ್​​ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​​ನೊಂದಿಗೆ ಸಂಬಂಧ ಕಡಿದುಕೊಂಡು ಹಲವು ವರ್ಷಗಳಾಗಿದ್ದು ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಭಾರತೀಯ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಸ್ಟಾರ್ ನಟಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರ ಜೀವನ ಶೈಲಿಯೂ ಸ್ಟಾರ್ ಮಾದರಿಯಲ್ಲಿಯೇ ಇದೆ. ಪತಿ ನಿಕ್ ಜೋನಸ್ ಜೊತೆಗೆ ಅಮೆರಿಕದ ಪ್ರತಿಷ್ಠಿತ ಬೆವರ್ಲಿ ಹಿಲ್ಸ್​​ನ ಐಶಾರಾಮಿ ಮನೆಯಲ್ಲಿ ವಾಸಿಸುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ, ಸಾಮಾನ್ಯರಂತೆ, ಸಾಮಾನ್ಯ ಜನ ತಿಂದುಂಡು ಬಿಟ್ಟು ಹೋದ ತಟ್ಟೆ-ಲೋಟಗಳನ್ನು ತೊಳೆದಿದ್ದು, ಆ ವಿಡಿಯೋ ವೈರಲ್ ಆಗಿದೆ.

ಪ್ರಿಯಾಂಕಾ ಚೋಪ್ರಾ, ಹಾಲಿವುಡ್​​ನಲ್ಲಿ ನೆಲೆಸಿದ್ದರೂ ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಮರೆತಿಲ್ಲ. ಹಾಲಿವುಡ್​​ನಲ್ಲಿ ನೆಲೆಸಿದ್ದರೂ ಅಲ್ಲಿಯೂ ಸಹ ತಪ್ಪದೇ ಭಾರತೀಯ ಸಂಪ್ರದಾಯದ ಹಬ್ಬಗಳ ಆಚರಣೆಗಳನ್ನು ಸಹ ಮಾಡುತ್ತಲೇ ಇರುತ್ತಾರೆ. ಆಗಾಗ್ಗೆ ಭಾರತಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಭಾರತಕ್ಕೆ ಬಂದಾಗೆಲ್ಲ ಇಲ್ಲಿನ ಕೆಲ ದೇವಾಲಯಗಳಿಗೆ ಸಹ ಭೇಟಿ ನೀಡುತ್ತಾರೆ. ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಬಂದಿದ್ದರು. ಈ ಭೇಟಿಯ ಸಂದರ್ಭದಲ್ಲಿ ಅವರು ಅಮೃತಸರದ ಗೋಲ್ಡನ್ ಟೆಂಪಲ್​​ಗೆ ಭೇಟಿ ನೀಡಿದ್ದರು.

ದರ್ಬಾರ್ ಸಾಹೀಬ್ ಎಂದು ಕರೆಯಲಾಗುವ ಸಿಖ್ಖರ ಈ ಪವಿತ್ರ ದೇವಾಲಯದಲ್ಲಿ ಭಕ್ತರು ಸೇವೆ ಮಾಡುತ್ತಾರೆ. ಕಸ ಗುಡಿಸುವುದು, ಪಾತ್ರೆಗಳನ್ನು ತೊಳೆಯುವುದು, ಅಡುಗೆ ಮಾಡುವುದು, ಬಡಿಸುವುದು ಹೀಗೆ ನಾನಾ ರೀತಿಯ ಸೇವೆಗಳನ್ನು ಭಕ್ತರು ಮಾಡುತ್ತಾರೆ. ದೇವಾಲಯಕ್ಕೆ ಭೇಟಿ ನೀಡಿದ್ದ ನಟಿ ಪ್ರಿಯಾಂಕಾ ಚೋಪ್ರಾ ಸಹ ಸೇವೆ ಸಲ್ಲಿಸಿದ್ದು, ದೇವಾಲಯಕ್ಕೆ ಬಂದ ಭಕ್ತರು ಊಟ ತಿಂದ ತಟ್ಟೆಗಳು, ಲೋಟಗಳನ್ನು ತೊಳೆದಿದ್ದಾರೆ. ನಟಿ ಪ್ರಿಯಾಂಕಾ ಅವರು ಈ ‘ಬರ್ತನ್ ಸೇವಾ’ (ಪಾತ್ರೆಗಳ್ನು ತೊಳೆಯುವ ಸೇವೆ) ಮಾಡುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ಪ್ರಿಯಾಂಕಾ ಚೋಪ್ರಾ ಅವರ ಈ ಸೇವೆಯ ವಿಡಿಯೋಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಹಲವರು ಪ್ರಿಯಾಂಕಾರ ಸೇವೆಯನ್ನು ಮೆಚ್ಚಿ ಕಮೆಂಟ್ ಮಾಡಿದ್ದು, ‘ಗ್ಲೋಬಲ್ ಸ್ಟಾರ್ ಆದರೂ ಸಹ ತಮ್ಮ ಮೂಲವನ್ನು ಪ್ರಿಯಾಂಕಾ ಮರೆತಿಲ್ಲ’ ಎಂದಿದ್ದಾರೆ. ಇನ್ನು ಕೆಲವರು, ‘ವಿದೇಶಿಗನ ಮದುವೆಯಾಗಿ, ವಿದೇಶದಲ್ಲಿ ನೆಲೆಸಿದ್ದರೂ ಸಹ ಭಾರತೀಯ ಸಂಸ್ಕೃತಿಗೆ ಗೌರವ ಕೊಡುವುದು ಪ್ರಶಂಸನಾರ್ಹ’ ಎಂದಿದ್ದಾರೆ. ಆದರೆ ಕೆಲವರು ಇದರಲ್ಲೂ ಕೊಂಕು ಹುಡುಕುವ ಕೆಲಸವನ್ನೂ ಸಹ ಮಾಡಿದ್ದಾರೆ. ‘ತಮ್ಮ ಮುಂದಿನ ಸಿನಿಮಾದ ಪ್ರಚಾರಕ್ಕಾಗಿ ಹೀಗೆ ಪೂರ್ವ ಸಿದ್ಧತೆ ಮಾಡುತ್ತಿದ್ದಾರೆ’ ಎಂದೆಲ್ಲ ವ್ಯಂಗ್ಯ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ನಟನೆಯ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಸಿನಿಮಾದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾದವು. ಇದೀಗ ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ. ಹಾಲಿವುಡ್ ಆಕ್ಷನ್ ಸಿನಿಮಾ ‘ಜಡ್ಜ್​ಮೆಂಟ್ ಡೇ’ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಆ ಸಿನಿಮಾ ಸಹ ಇದೇ ವರ್ಷ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೆಎಸ್‌ಆರ್‌ಟಿಸಿಗೆ ಮತ್ತೊಂದು ಗರಿ: ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ ಪ್ರತಿಷ್ಠಿತ ಪ್ರಶಸ್ತಿ ಮುಡಿಗೆ!

ಬೆಂಗಳೂರು/ಕೊಚ್ಚಿನ್, ಏಪ್ರಿಲ್ 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ (Training and Organisation Development) ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಪ್ರತಿಷ್ಠಿತ ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ (World HRD Congress Award) ‘ಕೇರಳ ಲೀಡರ್‌ಶಿಪ್ ಪ್ರಶಸ್ತಿ-2026’ ಅನ್ನು ತನ್ನದಾಗಿಸಿಕೊಂಡಿದೆ. ಕೇರಳದ ಕೊಚ್ಚಿನ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು.

ತರಬೇತಿ ಕ್ಷೇತ್ರದಲ್ಲಿ KSRTC ಕ್ರಾಂತಿ

ನಿಗಮದ ವ್ಯಾಪ್ತಿಯ ಐದು ತರಬೇತಿ ಕೇಂದ್ರಗಳಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ 12,000ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಪರಿಣಾಮಕಾರಿ ತರಬೇತಿ ನೀಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಇಂಧನ ಕ್ಷಮತೆ, ಅಪಘಾತ ರಹಿತ ಚಾಲನೆ, ಸಿಮ್ಯುಲೇಟರ್ ತರಬೇತಿ ಹಾಗೂ ರಸ್ತೆ ಸುರಕ್ಷತೆಯಂತಹ ಪ್ರಮುಖ ವಿಷಯಗಳಲ್ಲಿ ಸಿಬ್ಬಂದಿಗಳನ್ನು ಸಜ್ಜುಗೊಳಿಸಿರುವುದು ನಿಗಮದ ಈ ಸಾಧನೆಗೆ ಕಾರಣವಾಗಿದೆ.

ಇದರೊಂದಿಗೆ ಸಾರಿಗೆ ಇಲಾಖೆ ಮತ್ತು ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಉಚಿತ ಭಾರಿ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ ವಿತರಿಸುವಂತಹ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳೂ ಸಹ ಈ ಪ್ರಶಸ್ತಿಗೆ ಪೂರಕವಾಗಿವೆ.

ಕೊಚ್ಚಿನ್‌ನಲ್ಲಿ ನಡೆದ ಸಮಾರಂಭದಲ್ಲಿ ಶಿಪ್ ಟೆಕ್ನಾಲಜಿ ಕಾಲೇಜಿನ ನಿರ್ದೇಶಕ ಕ್ಯಾಪ್ಟನ್ ಎಸ್.ಟಿ. ಶ್ರೀಧರನ್ ಅವರಿಂದ ಕೆಎಸ್‌ಆರ್‌ಟಿಸಿ ಪರವಾಗಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್. ಹಾಗೂ ಹಾಸನ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಎ.ಎಸ್. ಗೀತಾಂಜಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇದನ್ನೂ ಓದಿ: ರಾಷ್ಟ್ರಮಟ್ಟದಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕೆಎಸ್​ಆರ್​ಟಿಸಿ!

ಐದು ದಿನಗಳ ಹಿಂದಷ್ಟೇ ಇಲೆಟ್ಸ್ ಮೊಬಿಲಿಟಿ ಎಕ್ಸೆಲೆನ್ಸ್ ಪ್ರಶಸ್ತಿಗಳಲ್ಲಿ ಧ್ವನಿ ಸ್ಪಂದನ ಮತ್ತು AWATAR 4.0 ಯೋಜನೆಗಳಿಗಾಗಿ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಕೆಎಸ್​ಆರ್​ಟಿಸಿ ತನ್ನ ಮುಡಿಗೇರಿಸಿಕೊಂಡಿತ್ತು. ತಂತ್ರಜ್ಞಾನ ಮತ್ತು ಸಮುದಾಯದ ಸಲಹೆಗಳನ್ನು ಬಳಸಿ, ಸಮಾಜದ ಪ್ರತಿಯೊಬ್ಬರಿಗೂ (ವಿಶೇಷವಾಗಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ) ಸುಲಭ ಹಾಗೂ ಸುರಕ್ಷಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಧ್ವನಿ ಸ್ಪಂದನ ಯೋಜನೆಗೆ ಪ್ರಶಸ್ತಿ ಲಭಿಸಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್

ನಯನಾ ನಾಗರಾಜ್ ಅವರು ‘ಗಿಣಿ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ತಮ್ಮದೇ ಕಾರಣಕ್ಕೆ ಅವರು ಧಾರಾವಾಹಿ ತೊರೆದಿದ್ದರು. ಆ ಬಳಿಕ ಅವರು ಈ ಬಗ್ಗೆ ಸ್ಪಷ್ಟನೆ ಕೊಟ್ಟರು. ಅವರು ಹಲವು ಆರೋಪಗಳನ್ನು ಮಾಡಿದ್ದರು. ಈಗ ನಯನಾ ನಾಗರಾಜ್ ಅವರು ಜೀ ಕನ್ನಡದ ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಪತಿ ಸುಹಾಸ್ ಜೊತೆ ನಯನಾ ಈ ಶೋಗೆ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ದಾವಣಗೆರೆ: ಹಳೇ ಪೇಟೆ ವೀರಭದ್ರೇಶ್ವರ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್, ಪುತ್ರಿ ಶ್ರೇಷ್ಠ!

ದಾವಣಗೆರೆ, ಎಪ್ರಿಲ್ 1: ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಟುಂಬದೊಂದಿಗೆ ಭಾಗವಹಿಸಿ, ಅಗ್ನಿಕುಂಡ ಹಾಯುವ ಮೂಲಕ ದೈವಭಕ್ತಿ ಮೆರೆದರು. ವಿಶೇಷವೆಂದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿರುವ ಸಚಿವರ ಪುತ್ರ ಸಮರ್ಥ್ ಶಾಮನೂರು ಮತ್ತು ಪುತ್ರಿ ಶ್ರೇಷ್ಠ ಕೂಡ ತಂದೆಯೊಂದಿಗೆ ಕೊಂಡ ಹಾಯ್ದರು. ಕೊಂಡೋತ್ಸವಕ್ಕೂ ಮುನ್ನ ಸಚಿವ ಮಲ್ಲಿಕಾರ್ಜುನ ಅವರ ಕುಟುಂಬವು ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಏಳಿಗೆಗಾಗಿ ಪ್ರಾರ್ಥಿಸಿತು. ಉಪಚುನಾವಣೆಯ ಪ್ರಚಾರದ ನಡುವೆಯೇ ಸಚಿವರ ಕುಟುಂಬ ಈ ರೀತಿ ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದು ಬೆಂಬಲಿಗರಲ್ಲಿ ಉತ್ಸಾಹ ತುಂಬಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ಸಿಲಿಂಡರ್​​ ಜೋಡಿಸುವ ವೇಳೆ ಅವಘಡ: ಭೀಕರ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ

ಬೆಂಗಳೂರು, ಏಪ್ರಿಲ್​​ 01: ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಘಟನೆ ವರದಿಯಾಗಿದೆ. ಘಟನೆಯ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ನಡೆಸಿವೆ. ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಅವಘಡ ನಡೆದಿದ್ದು, ಹರಗಯ್ಯ ಎಂಬುವವರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದು ಗಂಟೆ ಮುನ್ನ ಹೊಸ ಎಲ್‌ಪಿಜಿ ಸಿಲಿಂಡರ್ ಬಂದಿತ್ತು. ಅದನ್ನು ಜೋಡಿಸುವ ವೇಳೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯವರು ತಕ್ಷಣ ಹೊರಬಂದಿದ್ದು, ಹರಗಯ್ಯ ಪತ್ನಿ ಭಾಗ್ಯಮ್ಮ ಮತ್ತು ಮಕ್ಕಳು ಸೇರಿ ಐವರು ಮನೆಯಲ್ಲಿ ವಾಸವಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರೀಮಿಯಮ್ ಪೆಟ್ರೋಲ್, ಡೀಸಲ್ ಬೆಲೆ ಮತ್ತೆ ಏರಿಕೆ; ಲೀಟರ್​ಗೆ 11 ರೂ ದರ ಹೆಚ್ಚಳ

ನವದೆಹಲಿ, ಏಪ್ರಿಲ್ 1: ಹೊಸ ವರ್ಷದ ಮೊದಲ ದಿನದಂದು ಸಾಮಾನ್ಯ ಜನರಿಗೆ ಡಬಲ್ ಶಾಕ್ ಸಿಕ್ಕಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 19 ರೂ ಏರಿಕೆಯಾದರೆ, ಪ್ರೀಮಿಯಮ್ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ (Premium Petrol price) ಭರ್ಜರಿ ಹೆಚ್ಚಳ ಆಗಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಲೀಟರ್​ಗೆ 11 ರೂನಷ್ಟು ಹೆಚ್ಚಿದೆ. ಪ್ರೀಮಿಯಮ್ ಡೀಸಲ್ ಬೆಲೆಯಲ್ಲಿ ಒಂದೂವರೆ ರೂನಷ್ಟು ಅಲ್ಪ ಹೆಚ್ಚಳ ಆಗಿದೆ. ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಈ ದರ ಏರಿಕೆ ಮಾಡಿವೆ. ಕಳೆದ ತಿಂಗಳು ಕೂಡ ಪ್ರೀಮಿಯಮ್ ಇಂಧನ ಬೆಲೆಗಳಲ್ಲಿ ಏರಿಕೆ ಮಾಡಲಾಗಿತ್ತು.

ಭಾರತದ ಅತಿದೊಡ್ಡ ತೈಲ ಮಾರುಕಟ್ಟೆ ಸಂಸ್ಥೆಯಾದ ಇಂಡಿಯನ್ ಆಯಿಲ್ ತನ್ನ ಪ್ರೀಮಿಯಮ್ ದರ್ಜೆಯ ಎಕ್ಸ್​ಪಿ100 ಪೆಟ್ರೋಲ್ ಬೆಲೆಯನ್ನು 160 ರೂ ಹೆಚ್ಚಿಸಿದೆ. 149 ರೂ ಇದ್ದ ಇದರ ಬೆಲೆಯಲ್ಲಿ 11 ರೂ ಏರಿಕೆ ಆಗಿದೆ. ಈ ಎಕ್ಸ್​ಪಿ100 ಭಾರತದ ಮೊದಲ 100 ಆಕ್ಟೇನ್ ಪ್ರೀಮಿಯಮ್ ಪೆಟ್ರೋಲ್ ಎನಿಸಿದೆ.

ಇದನ್ನೂ ಓದಿ: Commercial LPG Cylinder Price: ಗಾಯದ ಮೇಲೆ ಬರೆ; ಕಮರ್ಷಿಯಲ್​​ ಸಿಲಿಂಡರ್​​ ದರ 195ರೂ. ಹೆಚ್ಚಳ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಸಂಸ್ಥೆಯ ಪವರ್100 ಪೆಟ್ರೋಲ್ ದರವೂ ಏರಿಕೆ ಆಗಿರುವುದು ತಿಳಿದುಬಂದಿದೆ. ಈ ಪ್ರೀಮಿಯಮ್ ಪೆಟ್ರೋಲ್ ಅನ್ನು ಅಧಿಕ ಎಂಜಿನ್ ಕಾರ್ಯಕ್ಷಮತೆ ಅಗತ್ಯ ಇರುವ ಲಕ್ಷುರಿ ಕಾರು, ಸ್ಪೋರ್ಟ್ಸ್ ಬೈಕ್​ಗಳಲ್ಲಿ ಬಳಸಲಾಗುತ್ತದೆ.

ಪ್ರೀಮಿಯಮ್ ಡೀಸಲ್ ಬೆಲೆಯಲ್ಲೂ ಏರಿಕೆ

ಇನ್ನು, ಪ್ರೀಮಿಯಮ್ ಡೀಸಲ್ ಬೆಲೆಯಲ್ಲೂ ಹೆಚ್ಚಳ ಆಗಿದೆ. ಇಂಡಿಯನ್ ಆಯಿಲ್​ನ ಎಕ್ಸ್​ಟ್ರಾ ಗ್ರೀನ್ ಪ್ರೀಮಿಯಮ್ ಡೀಸಲ್​ನ ರೀಟೇಲ್ ಬೆಲೆ ಒಂದು ಲೀಟರ್​ಗೆ 91.49 ರೂನಿಂದ 92.99 ರೂಗೆ ಏರಿದೆ.

ಆದರೆ, ಇತರ ಸಾಮಾನ್ಯ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳಲ್ಲಿ ಯಾವುದೇ ಏರಿಕೆ ಆಗಿಲ್ಲ. ನಯಾರಾ ಪೆಟ್ರೋಲ್ ಬಂಕ್​ಗಳಲ್ಲಿ ಮಾತ್ರ ಪೆಟ್ರೋಲ್ ಬೆಲೆ 5 ರೂ ಹೆಚ್ಚಿದೆ. ಇಂಡಿಯನ್ ಆಯಿಲ್, ಬಿಪಿ, ಎಚ್​ಪಿ ಪಂಪ್​ಗಳಲ್ಲಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳಲ್ಲಿ ವ್ಯತ್ಯಯ ಆಗಿಲ್ಲ. ಕಳೆದ ವಾರ ಸರ್ಕಾರವು ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳ ಮೇಲಿನ ಹೊರೆಯನ್ನು ಸರ್ಕಾರ ಇಳಿಸಿದಂತಾಗಿದೆ.

ಇದನ್ನೂ ಓದಿ: ಎಲ್​ಪಿಜಿ ಕೊರತೆ ನಡುವೆ ಗ್ಯಾಸ್ ಬುಕಿಂಗ್ ನಿಯಮ ಬದಲಿಸಿದ ಕೇಂದ್ರ , ಸಿಲಿಂಡರ್ ಬುಕ್ ಮಾಡಿದ್ರೆ ಎಷ್ಟು ದಿನ ಕಾಯ್ಬೇಕು?

ಇದೇ ವೇಳೆ ಇವತ್ತು 19 ಕಿಲೋ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 195 ರೂನಷ್ಟು ಏರಿಕೆ ಆಗಿದೆ. ಮಾರ್ಚ್ ತಿಂಗಳಿಂದೀಚೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 300 ರೂ ಹೆಚ್ಚಳ ಆದಂತಾಗಿದೆ. ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಕಳೆದ ತಿಂಗಳು ಒಮ್ಮೆ ಏರಿಕೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ಎಷ್ಟು ಚಂದ ಈ ಬಾಂಧವ್ಯ; ಅಪ್ಪನಿಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿದ ಪುಟಾಣಿ

ತಾಯಿ ತನ್ನ ಕಂದಮ್ಮನನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಹೀಗಾಗಿ ಪ್ರತಿಯೊಬ್ಬ ಮಗಳಿಗೂ (daughter) ಅಪ್ಪ ಅಂದ್ರೆ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ಮಗಳ ಯಾವುದೇ ಬೇಡಿಕೆಗೆ ಇಲ್ಲ ಎನ್ನದೇ ಈಡೇರಿಸುತ್ತಾನೆ.  ಇತ್ತ ತಮದೆಗೆ ಮಗಳು ತಾಯಿ ಪ್ರೀತಿಸುತ್ತಾಳೆ. ಇದೀಗ ಮಗಳೊಬ್ಬಳು ಕೆಲಸದಲ್ಲಿದ್ದ ಬ್ಯುಸಿಯಾಗಿದ್ದ ತಂದೆಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಈ ಸುಂದರ ಸಂಬಂಧವನ್ನು ಮೆಚ್ಚಿಕೊಂಡಿದ್ದಾರೆ.

ಇಂದ್ರಜಿತ್‌ ಎಎನ್‌ (Indrajith AN) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟಾಣಿಯೂ ಪ್ಲೇಟ್‌ನಲ್ಲಿ ದ್ರಾಕ್ಷಿ ಹಣ್ಣು ಇಟ್ಟುಕೊಂಡಿದೆ. ತನ್ನ ತಂದೆ ಲ್ಯಾಪ್ ಟಾಪ್ ಮುಂದೆ ಕುಳಿತು ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಒಂದೊಂದು ದ್ರಾಕ್ಷಿ ಹಣ್ಣನ್ನು ತನ್ನ ಪುಟ್ಟ ಕೈಯಿಂದ ತೆಗೆದು ತನ್ನ ಅಪ್ಪನ ಬಾಯಿಗೆ ಇಡುತ್ತಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಇವ್ಳು ಪುಟ್ಟ ಟೀಚರಮ್ಮ; ಅಪ್ಪನಿಗೆ ಪದ್ಯ ಹೇಳಿಕೊಡುತ್ತಿರುವ ಪುಟಾಣಿ

ಈ ವಿಡಿಯೋ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅಪ್ಪನ ಮುದ್ದು ಮಗಳು ಎಂದರೆ, ಮತ್ತೊಬ್ಬರು, ಬೆಸ್ಟ್ ವರ್ಕ್ ಫ್ರಮ್ ಹೋಮ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ದೇವರ ಉಡುಗೊರೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಕಲಬುರಗಿ, ಏಪ್ರಿಲ್ 01: ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಾಲದ ಸುಳಿಯಲ್ಲಿರುವ ರಾಜ್​​ಪಾಲ್​​ಗೆ ಅತ್ಯಮೂಲ್ಯ ಸಲಹೆ ನೀಡಿದ ಅಕ್ಷಯ್ ಕುಮಾರ್

ತಮ್ಮ ಹಾಸ್ಯಪ್ರಜ್ಞೆಯಿಂದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ನಟ ರಾಜ್‌ಪಾಲ್ ಯಾದವ್, ತಿಹಾರ್ ಜೈಲಿನಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಚಿತ್ರ ನಿರ್ಮಿಸಲು ಅವರು 5 ಕೋಟಿ ರೂ. ಸಾಲ ಪಡೆದಿದ್ದರು, ಆದರೆ ಚಿತ್ರ ವಿಫಲವಾದ ಕಾರಣ, ಅವರು ಸಾಲವನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ. ಅವರು ನೀಡಿದ ಎಲ್ಲಾ ಚೆಕ್‌ಗಳು ಬೌನ್ಸ್ ಆದ ನಂತರ, ಅವರು ಅಂತಿಮವಾಗಿ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಯಿತು. ಅದರ ನಂತರ, ಬಾಲಿವುಡ್ ಉದ್ಯಮದ ಅನೇಕ ನಟರು ಅವರಿಗೆ ಸಹಾಯ ಮಾಡಿದರು. ಈಗ ನಟ ಅಕ್ಷಯ್ ಕುಮಾರ್ ಈ ಪ್ರಕರಣದ ಬಗ್ಗೆ ರಾಜ್‌ಪಾಲ್ ಬಗ್ಗೆ ಮಾತನಾಡಿದ್ದಾರೆ.

ಅಕ್ಷಯ್ ಕುಮಾರ್ ಅವರ ಮುಂಬರುವ ಚಿತ್ರ ‘ಭೂತ್ ಬಾಂಗ್ಲಾ’ದಲ್ಲಿ ರಾಜ್‌ಪಾಲ್ ಪ್ರಮುಖ ಪಾತ್ರ ವಹಿಸಲಿದ್ದಾರೆ. ಈ ಚಿತ್ರದ ಸಂದರ್ಭದಲ್ಲಿ ನೀಡಿದ ಸಂದರ್ಶನದಲ್ಲಿ, ರಾಜ್‌ಪಾಲ್ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಅಕ್ಷಯ್ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿದರು. ಈ ಮೊದಲು ರಾಜ್​​ಪಾಲ್ ಹಾಗೂ ಅಕ್ಷಯ್ ಕುಮಾರ್ ‘ಫಿರ್ ಹೇರಾ ಫೇರಿ’, ‘ಭೂಲ್​ ಭುಲಯ್ಯ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು.

‘ಭೂತ್ ಬಾಂಗ್ಲಾ’ ಚಿತ್ರದ ಪ್ರಚಾರದ ಸಮಯದಲ್ಲಿ, ಅಕ್ಷಯ್ ಅವರು ರಾಜ್‌ಪಾಲ್‌ಗೆ ಈಗಾಗಲೇ ಸಿನಿಮಾ ನಿರ್ಮಿಸದಂತೆ ಸಲಹೆ ನೀಡಿರುವುದಾಗಿ ಸ್ಪಷ್ಟಪಡಿಸಿದರು. ಹಿರಿಯ ನಟ ಅಸ್ರಾನಿ ಅವರು ಅಕ್ಷಯ್​​ಗೆ ಒಂದು ಸಲಹೆ ನೀಡಿದ್ದರು. ತಮ್ಮ ಜೀವನದ ಕಠಿಣ ಅವಧಿಯನ್ನು ಉಲ್ಲೇಖಿಸಿದ್ದ ಅಸ್ರಾನಿ, ಚಲನಚಿತ್ರಗಳನ್ನು ನಿರ್ಮಿಸುವುದು ತಮ್ಮ ದೊಡ್ಡ ತಪ್ಪು ಎಂದು ಅಕ್ಷಯ್‌ಗೆ ಹೇಳಿದ್ದರು. ಈ ಅನುಭವದ ಆಧಾರದ ಮೇಲೆ, ನಟರು ಮೊದಲು ನಿರ್ಮಾಣ ಕ್ಷೇತ್ರಕ್ಕೆ ಹಾರುವ ಮೊದಲು ಸಂಪೂರ್ಣವಾಗಿ ಅಧ್ಯಯನ ಮಾಡಬೇಕು ಎಂದು ಅಕ್ಷಯ್ ಅವರು ರಾಜ್‌ಪಾಲ್ ಯಾದವ್‌ಗೆ ವಿವರಿಸಿದ್ದರು. ’ನಾವು ನಟರು ಮತ್ತು ನಿರ್ಮಾಪಕರ ಕೆಲಸವು ತುಂಬಾ ವಿಭಿನ್ನವಾಗಿದೆ. ನಾವು ಶಾರ್ಟ್‌ಕಟ್‌ಗಳ ಮೂಲಕ ಹಣ ಗಳಿಸಲು ಪ್ರಯತ್ನಿಸಬಾರದು’ ಎಂದು ಅಕ್ಷಯ್ ರಾಜ್‌ಪಾಲ್‌ಗೆ ಈ ಮಾತುಗಳಲ್ಲಿ ವಿವರಿಸಿದರು.

ಇದನ್ನೂ ಓದಿ: ‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ

ನಿರ್ದೇಶಕ ಪ್ರಿಯದರ್ಶನ್ ಮತ್ತು ಅಕ್ಷಯ್ ಕುಮಾರ್ ‘ಭೂತ್ ಬಾಂಗ್ಲಾ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಅಕ್ಷಯ್ ಕುಮಾರ್ ಜೊತೆಗೆ, ಪರೇಶ್ ರಾವಲ್, ರಾಜ್‌ಪಾಲ್ ಯಾದವ್, ವಾಮಿಕಾ ಗಬ್ಬಿ ಮತ್ತು ಟಬು ಕೂಡ ಇದರಲ್ಲಿ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ಹಾರರ್ ಕಾಮಿಡಿ ಚಿತ್ರಕ್ಕಾಗಿ ಅಕ್ಷಯ್ ಸುಮಾರು 50 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಟಬು 2.5 ಕೋಟಿ ರೂ. ಸ್ವೀಕರಿಸಿದ್ದಾರೆ. ಹಿರಿಯ ನಟ ಪರೇಶ್ ರಾವಲ್ 2 ಕೋಟಿ ರೂ. ಮತ್ತು ನಟಿ ವಾಮಿಕಾ ಗಬ್ಬಿ 3 ಕೋಟಿ ರೂ. ಇದರಲ್ಲಿ, ರಾಜ್‌ಪಾಲ್ 1 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪೊಲೀಸ್ ಇಲಾಖೆಗೆ ಸೇರಿದ 80 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ! ಬೆಸ್ಕಾಂ ಅಧಿಕಾರಿಗಳು ಸೇರಿ ಹಲವರ ಮೇಲೆ ಎಫ್ಐಆರ್

ಬೆಂಗಳೂರು, ಏಪ್ರಿಲ್ 01: ಪೊಲೀಸ್ ಇಲಾಖೆಗೆ ಸೇರಿದ ಸುಮಾರು 80 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿರುವ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಸ್ಕಾಂ, ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಮಹಿಳೆಯ ಹೆಸರಲ್ಲಿ ಬಂದ ವಿದ್ಯುತ್ ಬಿಲ್

ಹಳೆಯ ಮಲ್ಲೇಶ್ವರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿರುವ ಈ ಜಾಗಕ್ಕೆ 100 ವರ್ಷಕ್ಕೂ ಹೆಚ್ಚು ಇತಿಹಾಸವಿದೆ. 1913ರ ಮಾಪನ ನಕ್ಷೆಯಲ್ಲಿಯೇ ಈ ಪ್ರದೇಶವನ್ನು ಪೊಲೀಸ್ ವಸತಿಗೃಹ ಎಂದು ಗುರುತಿಸಲಾಗಿದೆ. ಪ್ರಸ್ತುತವೂ ಇಲ್ಲಿ ನಾಲ್ವರು ಇನ್ಸ್‌ಪೆಕ್ಟರ್‌ಗಳ ಕುಟುಂಬಗಳು ವಾಸಿಸುತ್ತಿವೆ. ಆದರೆ ಇತ್ತೀಚೆಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ಕುಮಾರ್ ಅವರ ಮನೆಗೆ ಬಂದ ವಿದ್ಯುತ್ ಬಿಲ್ಲಿನಲ್ಲಿ ಮಹಾಲಕ್ಷ್ಮೀ ಎಂಬ ಖಾಸಗಿ ವ್ಯಕ್ತಿಯ ಹೆಸರು ನಮೂದಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಇದರಿಂದ ಅನುಮಾನಗೊಂಡ ಕುಮಾರ್ ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಕ್ರಮವಾಗಿ ಆಸ್ತಿ ದಾಖಲೆಗಳನ್ನು ಮಹಾಲಕ್ಷ್ಮೀ ಹೆಸರಿಗೆ ವರ್ಗಾವಣೆ ಮಾಡಿರುವುದು ಬಹಿರಂಗವಾಗಿದೆ.

ಇದನ್ನೂ ಓದಿ ಬ್ರ್ಯಾಂಡೆಡ್ ವಾಚ್ ಎಂದು ಕಮ್ಮಿ ಬೆಲೆಗೆ ನಕಲಿ ವಾಚ್​ಗಳನ್ನು ಮಾರುತ್ತಿದ್ದ ಐವರ ಬಂಧನ!

ಇದಲ್ಲದೆ, ಬಿಬಿಎಂಪಿ ಮೂಲಕ ಅಕ್ರಮವಾಗಿ ಇ-ಖಾತಾ ಮಾಡಿಸಿರುವುದು ಹಾಗೂ ಕೃಷ್ಣಮೂರ್ತಿ ಎಂಬಾತನಿಗೆ ಮಾರಾಟ ಮಾಡಲು ಒಪ್ಪಂದ ಪತ್ರ (ಅಗ್ರಿಮೆಂಟ್ ಆಫ್ ಸೇಲ್) ಕೂಡ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ನಡುವೆ, ಅಧಿಕಾರಿಗಳಿದ್ದರೂ ಜಾಗ ಖಾಲಿ ಮಾಡಿಸುತ್ತೇನೆ ಎಂದು ಮಹಿಳೆ ಕಡೆಯವರು ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಪ್ರಸ್ತುತ ಲೋಕಾಯುಕ್ತ ಇನ್ಸ್‌ಪೆಕ್ಟರ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link