ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ
ಹಾವೇರಿ, ಏಪ್ರಿಲ್ 1: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್…