Headlines

ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಪ್ಯಾನ್ ನಿಯಮಗಳ ಬದಲಾವಣೆ ಗಮನಿಸಿ… – Kannada News | New Income Tax law, key PAN rules changes for common people

ನವದೆಹಲಿ, ಫೆಬ್ರುವರಿ 11: ಸರ್ಕಾರ ಆದಾಯ ತೆರಿಗೆ ಕಾನೂನಿನಲ್ಲಿ (New Income Tax rules) ಕೆಲ ಸುಧಾರಣೆಗಳನ್ನು ಮಾಡುತ್ತಿದ್ದು, ಹೊಸ ಕರಡು ನಿಯಮಗಳನ್ನು ರೂಪಿಸಿದೆ. ಇವು ಸಾರ್ವಜನಿಕ ಪರಾಮರ್ಶೆಗೆ ಒಳಪಡುತ್ತಿದ್ದು, ಅಂತಿಮ ನಿಯಮಗಳು 2026ರ ಏಪ್ರಿಲ್ 1ರಿಂದ ಜಾರಿಗೆ ಬರುತ್ತವೆ. ಈ ಪ್ರಸ್ತಾಪಿತ ನಿಯಮಗಳಲ್ಲಿ ಕೆಲ ಪ್ಯಾನ್ ನಿಯಮಗಳ ಬದಲಾವಣೆಗಳೂ ಇವೆ. ನಿಮ್ಮ ಹಣಕಾಸು ಸ್ಥಿತಿ ಗತಿ ಮತ್ತು ವರ್ತನೆಯ ಮೇಲೆ ಪರಿಣಾಮ ಬೀರಬಲ್ಲ ನಿಯಮಗಳೂ ಇದರಲ್ಲಿವೆ. ಕ್ಯಾಷ್ ಡೆಪಾಸಿಟ್ ಮಿತಿ, ವಾಹನ ಖರೀದಿ, ಇನ್ಷೂರೆನ್ಸ್ ಇತ್ಯಾದಿ…

Read More

ಕುಡಿದ ಮತ್ತಿನಲ್ಲಿ ಗೆಳೆಯ ಒಳಚರಂಡಿಯ ಮ್ಯಾನ್​ಹೋಲ್​ಗೆ ಬಿದ್ದಿದ್ದೇ ತಿಳಿಯಲಿಲ್ಲ! – Kannada News | Rohini Sewer Death case Drunk Man Did not Notice his Friend Fall In Manhole

ನವದೆಹಲಿ, ಫೆಬ್ರವರಿ 11: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೋಹಿಣಿ ಸೆಕ್ಟರ್ 32ರಲ್ಲಿ ತೆರೆದ ಒಳಚರಂಡಿ ಮ್ಯಾನ್‌ಹೋಲ್‌ಗೆ (Manhole) ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿ ಬಿರ್ಜು ಕುಮಾರ್ ರೈ ಎಂದು ಗುರುತಿಸಲಾಗಿದೆ. ಈ ಘಟನೆ ಸೋಮವಾರ ಸಂಜೆ ಬೇಗಂಪುರ ಪ್ರದೇಶದ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿ ಸಂಭವಿಸಿದೆ. ಬಿರ್ಜು ಕುಮಾರ್ ಸೋಮವಾರ ಸಂಜೆ ರೋಹಿಣಿ ಸೆಕ್ಟರ್ 32ರಲ್ಲಿ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಿರ್ಜು ಆಕಸ್ಮಿಕವಾಗಿ…

Read More

ಅಜಿತ್​​​ ಪವಾರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್​​​: ವಿಮಾನ ಪತನದ ಕೊನೆಯ ವಿಡಿಯೋ ವೈರಲ್ – Kannada News | Ajit Pawar Baramati Crash: Viral Video Reveals Fog, ILS Shortage Under Scrutiny

ಮಹಾರಾಷ್ಟ್ರ, ಫೆ.11: ಬಾರಾಮತಿಯಲ್ಲಿ ಜನವರಿ 28, 2026 ರಂದು ಸಂಭವಿಸಿದ ಭೀಕರ ವಿಮಾನ ಪತನದಿಂದ ಡಿಸಿಎಂ ಅಜಿತ್​​​ ಪವಾರ್​​​ ಸಾವನ್ನಪ್ಪಿದ್ದರು. ಇದೀಗ ವಿಮಾನ ಪತನದ ಪ್ರಮುಖ ವಿಡಿಯೋ ವೈರಲ್​​ ಆಗಿದೆ. ಇದು ಇಡೀ ದೇಶವನ್ನೇ ಬೆಚ್ಚಿಬೀಳಿಸಿವೆ. ವಿಮಾನ ನಿಲ್ದಾಣದ ಸಮೀಪವಿರುವ ಸಿಸಿ ಟಿವಿ ಕ್ಯಾಮರಾದಲ್ಲಿ ಬೆಳಿಗ್ಗೆ 8:46 ರ ಸುಮಾರಿಗೆ ಈ ದೃಶ್ಯ ಸೆರೆಯಾಗಿದೆ. ವಿಮಾನವು ರನ್‌ವೇ ಹತ್ತಿರ ಬರುತ್ತಿದ್ದಂತೆ ಹತೋಟಿ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿ, ಕ್ಷಣಾರ್ಧದಲ್ಲಿ ಬೆಂಕಿಯ ಉಂಡೆಯಾಗಿ (Fireball) ಮಾರ್ಪಡುವುದನ್ನು ವಿಡಿಯೋ ತೋರಿಸುತ್ತದೆ. ವಿಡಿಯೋದಲ್ಲಿ…

Read More

Bharat Bodhan AI Conclave 2026: ಶಿಕ್ಷಣದಲ್ಲಿ ಎಐ ಕ್ರಾಂತಿ; ಕೇಂದ್ರ ಶಿಕ್ಷಣ ಸಚಿವಾಲಯದಿಂದ AI ಸಮಾವೇಶಕ್ಕೆ ಸಿದ್ಧತೆ – Kannada News | Bharat Bodhan AI Conclave 2026: AI Integration for Indian Education Transformation

ಕೃತಕ ಬುದ್ಧಿಮತ್ತೆ (AI) ವಿಶ್ವಾದ್ಯಂತ ವೇಗವಾಗಿ ಪ್ರಭಾವ ಬೀರುತ್ತಿರುವ ತಂತ್ರಜ್ಞಾನವಾಗಿ ಹೊರಹೊಮ್ಮಿದೆ. ಮುಂಬರುವ ದಶಕಗಳು AI ಯುಗವಾಗಿರಲಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂಟರ್ನೆಟ್ ಕ್ರಾಂತಿಗಿಂತಲೂ ಹೆಚ್ಚಿನ ಪರಿಣಾಮವನ್ನು ಬೀರುವ ಶಕ್ತಿ AI ಗೆ ಇದೆ ಎನ್ನಲಾಗುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ AI ಮಹತ್ವದ ಬದಲಾವಣೆಗಳನ್ನು ತರುತ್ತಿದೆ. ಈ ಹಿನ್ನೆಲೆ ಭಾರತ ಸರ್ಕಾರವೂ AI ತಂತ್ರಜ್ಞಾನವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಹೆಜ್ಜೆಗಳನ್ನು ಇಡುತ್ತಿದೆ. ಕೇಂದ್ರ ಶಿಕ್ಷಣ ಸಚಿವಾಲಯವು ‘ಭಾರತ್ ಬೋಧನ್ AI…

Read More

‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿತ್ತು. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IND vs NAM: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India’s Playing XI For Namibia Match in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡುವುದು ಬಹುತೇಕ ಖಚಿತ. ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಈ ಮ್ಯಾಚ್​ನಲ್ಲಿ ಕಣಕ್ಕಿಳಿಯುವುದು ಕನ್ಫರ್ಮ್​ ಆಗಿದೆ.  ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ…

Read More

‘ಮಗನಿಗೆ ಒಳ್ಳೆಯ ಅಪ್ಪ ಇದ್ದಾನೆ’; ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮೌನ ಮುರಿದ ಮಯೂರಿ – Kannada News | Mayuri on Divorce Rumors: It’s Personal, My Son’s Happiness Matters Most

ಮಯೂರಿ (Mayuri) ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತುಂಬಾನೇ ಫೇಮಸ್ ಆದವರು. ‘ಅಗ್ನಿ ನಕ್ಷತ್ರ’ ಧಾರಾವಾಹಿ ಮಾಡಿದ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ನಂತರ ಹಿರಿತೆರೆಗೆ ಕಾಲಿಟ್ಟರು. ಅಲ್ಲಿಯೂ ಜನಪ್ರಿಯತೆ ಸಿಕ್ಕಿತು. 2020ರಲ್ಲಿ ಅವರು ಮದುವೆ ಆದರು. ಆದರೆ, ಅವರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವರದಿ ಇದೆ. ಆದರೆ, ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ. ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ ಮಯೂರಿ. ‘ನಾನು ಸಿಟ್ಟು ಮಾಡಿಕೊಳ್ಳುವುದಿಲ್ಲ….

Read More

Hug Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಹಗ್‌ ಡೇ ಆಚರಿಸುವ ಪದ್ಧತಿ ಆರಂಭವಾದದ್ದು ಹೇಗೆ ಗೊತ್ತೇ? – Kannada News | Hug Day 2026: Know the history and significance of Hug Day celebration

ವ್ಯಾಲೆಂಟೈನ್‌ ವೀಕ್‌ನ ಪ್ರತಿ ದಿನವೂ ಪ್ರೇಮಿಗಳಿಗೆ ತುಂಬಾನೇ ವಿಶೇಷವಾಗಿದೆ. ಈ ಪ್ರಣಯ ವಾರದ ಆರನೇ ದಿನ ಅಂದರೆ ಫೆಬ್ರವರಿ 12 ರಂದು ಹಗ್‌ ಡೇಯನ್ನು (Hug Day) ಆಚರಿಸಲಾಗುತ್ತದೆ. ಹೆಸರೇ ಸೂಚಿಸುವಂತೆ, ಈ ದಿನವು ವಿಶೇಷವಾಗಿ ಸಿಹಿ ಅಪ್ಪುಗೆಗೆ ಮೀಸಲಿಡಲಾಗಿದೆ. ಇದು ಪ್ರೀತಿ, ವಾತ್ಸಲ್ಯ ಮತ್ತು ಭಾವನಾತ್ಮಕ ಸಂಪರ್ಕ, ಸಂಬಂಧದಲ್ಲಿ ನಂಬಿಕೆಯನ್ನು ಬಲಪಡಿಸುತ್ತದೆ ಮತ್ತು ಸಂಗಾತಿಗಳ ನಡುವಿನ ಅಂತರವನ್ನು ಕಡಿಮೆ ಮಾಡಿ ಪ್ರೀತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ ಈ ದಿನವು ಪ್ರೀತಿ, ವಾತ್ಸಲ್ಯ ಮತ್ತು ಅನ್ಯೋನ್ಯತೆಯನ್ನು ವ್ಯಕ್ತಪಡಿಸಲು ಇರುವಂತಹ…

Read More

ಬಲವಂತದ ಮದುವೆ: ಹೋಮ್ ಗಾರ್ಡ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ವಿವಾಹ – Kannada News | Shocking Bihar Pakadwa Vivah: Home Guard Aspirant Kidnapped and Drugged for Marriage

ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು ಎನ್ನಲಾಗಿದೆ. ಯುವಕನ ಹೇಳಿಕೆಯ ಪ್ರಕಾರ,…

Read More

ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ – Kannada News | Karnataka Government Closes 638 Kannada Schools; Former CM Basavaraj Bommai Demands Reopening

ಮಾಜಿ ಸಿಎಂ ಬಸವರಾಜ ಬೊಮ್ಮಾಯಿImage Credit source: scroll.in ಬೆಂಗಳೂರು, ಫೆಬ್ರವರಿ 11: ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್​ ಸ್ಕೂಲ್​​ (KPS​​) ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದೆ. ಆ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ಚರ್ಚೆಗಳು ನಡೆಯುತ್ತಿವೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj S Bommai) ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು ಕನ್ನಡ…

Read More