ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!
ಬೆಂಗಳೂರು, ಮಾರ್ಚ್ 30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2026) ಉದ್ಘಾಟನಾ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳ ಸಾಗರವೇ ಹರಿದುಬಂದಿದ್ದು, ನಮ್ಮ ಮೆಟ್ರೋ (Namma Metro) ಕೂಡ ಸಾಕ್ಷಿಯಾಗಿದೆ. ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾಮಾನ್ಯ ದಿನಗಳಿಗಿಂತ ದ್ವಿಗುಣ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿದ್ದಾರೆ ಎಂದು ಬಿಎಂಆರ್ಸಿಎಲ್ ಮೂಲಗಳು ತಿಳಿಸಿವೆ. ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ ಸುಮಾರು 22,000 ಜನರು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಿಂದ…