ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಜೋರಾಯ್ತು ವರುಣಾರ್ಭಟ! ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಮಾರ್ಚ್ 30: ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ (Weather Forecast) ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ಸುರಿದ ಮಳೆಯ ವಿವರ ಬೆಂಗಳೂರು ನಗರ –…