Headlines

ಮೀನುಗಾರರ ಸಾಲ ಮನ್ನಾ ಹೆಸರಲ್ಲಿ ಕೋಟ್ಯಂತರ ರೂ ವಂಚನೆ: ಮೂಕಾಂಬಿಕಾ ಟ್ರಸ್ಟ್ ವಿರುದ್ಧ ದೂರು ದಾಖಲಿಸಿದ ಇಡಿ

ಮಂಗಳೂರು, ಮಾರ್ಚ್​ 27: ಉಡುಪಿ ಜಿಲ್ಲೆಯ ವಿವಿಧ ಮೀನುಗಾರರ ಸ್ವಸಹಾಯ ಗುಂಪುಗಳ ಹೆಸರಲ್ಲಿ ವಂಚನೆಯಿಂದ ಪಡೆದ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ, ಮಂಗಳೂರು ಉಪ ವಲಯ ಜಾರಿ ನಿರ್ದೇಶನಾಲಯವು (ED) 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ, ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಶ್ರೀಮತಿ ಬೇಬಿ, ಹರೀಶ್, ಪಿ. ರಾಮದಾಸ್ ಮತ್ತು ರಾಮಕೃಷ್ಣ ಪಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಾಲ ಮನ್ನಾ ಯೋಜನೆಯನ್ನು ಬಳಸಿಕೊಂಡು ಅನರ್ಹ ಮೀನುಗಾರರ ಸ್ವಸಹಾಯ…

Read More

ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗೆ ಹಿಗ್ಗಾಮುಗ್ಗ ಥಳಿಸಿದ ಅಂಗಡಿ ವ್ಯಾಪಾರಿ

ಮೀರತ್​, ಮಾರ್ಚ್ 27: ಮೀರತ್‌ನ ಸರ್ರಾಫಾ ಮಾರುಕಟ್ಟೆಗೆ ಬಂದಿದ್ದ ವಕೀಲರೊಬ್ಬರು ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಎಲ್ಲರಿಗೂ ತೊಂದರೆ ಕೊಡುತ್ತಿದ್ದೀರಿ ಎಂದು ಜಗಳ ಆರಂಭಿಸಿದ ಅಲ್ಲಿನ ಅಂಗಡಿಯ ವ್ಯಾಪಾರಿಯೊಬ್ಬರು ಬಳಿಕ ಆ ವಕೀಲರಿಗೆ ಕ್ರೂರವಾಗಿ ಥಳಿಸಿದ ಘಟನೆ ನಡೆದಿದೆ. ತಮ್ಮ ಮೇಲಾದ ಹಲ್ಲೆಯನ್ನು ವಕೀಲರು ಪ್ರತಿಭಟಿಸಿದಾಗ ಅವರನ್ನು ಕೆಳಗೆ ಬೀಳಿಸಿ ಥಳಿಸಲಾಯಿತು. ಅವರ ಮೂಗಿನ ಮೂಳೆ ಮುರಿದಿದೆ. ಈ ಇಡೀ ಘಟನೆ ಸಿಸಿಟಿವಿಯಲ್ಲಿ (Viral Video) ಸೆರೆಯಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ…

Read More

‘ಧುರಂಧರ್’ ನಿರ್ಮಾಪಕರ ಜೊತೆ ಜೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಜನ್ಮದಿನದ ಅಂಗವಾಗಿ ಬಿಡುಗಡೆಯಾದ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದನ್ನು ನೋಡಿದ ಬಳಿಕ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ. ರಾಮ್ ಚರಣ್ ಅವರ ಕಟ್ಟುಮಸ್ತಾದ ಬಾಡಿ ಮತ್ತು ಬುಚ್ಚಿ ಬಾಬು ಸಾನ ಅವರ ಮೇಕಿಂಗ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಂಭ್ರಮದ ನಡುವೆಯೇ ಚಿತ್ರದ ಹಿಂದಿ ವರ್ಷನ್ ವಿತರಣೆ ಬಗ್ಗೆ ದೊಡ್ಡ ಸುದ್ದಿ ಕೇಳಿಬರುತ್ತಿದೆ. ‘ಪೆದ್ದಿ’ ಸಿನಿಮಾ (Peddi) ಜೊತೆ…

Read More

ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

ಬೆಂಗಳೂರು, ಮಾರ್ಚ್​​ 27:  ತುಮಕೂರು ಮಾರ್ಗವಾಗಿ ಬೆಂಗಳೂರಿನಿಂದ ಅರಸೀಕೆರೆಗೆ ಮೆಮು ರೈಲು ಸೇವೆ ಆರಂಭವಾಗಿದ್ದು, ಯಲಹಂಕದಿಂದ ಯಶವಂತಪುರ ಮಾರ್ಗವಾಗಿ ಮೆಮು ರೈಲು ಸಂಚಾರ ನಡೆಸಲಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದ್ದು ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಕೂಡ ಎಕ್ಸ್​​ ಪೋಸ್ಟ್​​ ಮಾಡಿ ಮಾಹಿತಿ ನೀಡಿದ್ದಾರೆ. ಸೋಮಣ್ಣ ಪೋಸ್ಟ್​​ನಲ್ಲಿ ಏನಿದೆ? ಪ್ರಯಾಣಿಕರ…

Read More

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್‌ನ 19 ನೇ ಸೀಸನ್ (IPL 2026) ಮಾರ್ಚ್ 28 ರ ಶನಿವಾರದಿಂದ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 65 ದಿನಗಳಲ್ಲಿ 74 ಪಂದ್ಯಗಳು ನಡೆಯಲಿವೆ. ಒಟ್ಟು 10 ತಂಡಗಳು ಲೀಗ್ ಹಂತದಲ್ಲಿ 70 ಪಂದ್ಯಗಳನ್ನು ಮತ್ತು ಪ್ಲೇಆಫ್‌ನಲ್ಲಿ 4 ಪಂದ್ಯಗಳನ್ನು ಆಡಲಿವೆ. ಈ ಆವೃತ್ತಿಯ ಆರಂಭಿಕ ಪಂದ್ಯದಲ್ಲಿ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಹೀಗಾಗಿ ಈ ಬಾರಿಯೂ, ಆರ್‌ಸಿಬಿ ಅದೇ ಆವೇಗವನ್ನು ಮುಂದುವರೆಸಿ ಗೆಲುವಿನ…

Read More

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಮಾರ್ಚ್ 27: ಇರಾನ್ ಜೊತೆಗಿನ ಇಸ್ರೇಲ್ ಮತ್ತು ಅಮೆರಿಕದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ನಿರ್ಬಂಧದಿಂದ ಉಂಟಾದ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಇಂಧನ ಪೂರೈಕೆಯ ಕುರಿತಾದ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಸನ್ನದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ…

Read More

IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್​ ಹೇಳಿದ್ದಿಷ್ಟು

ಬೆಂಗಳೂರು, ಮಾರ್ಚ್​ 27: ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ ನಡೆಯಲಿದೆ. ಸಕಲ ಭದ್ರತೆ ಕೂಡ ಕೈಗೊಳ್ಳಲಾಗಿದೆ. ಈ ಬಗ್ಗೆ ಬೆಂಗಳೂರು ಕಮಿಷನರ್​ ಸೀಮಂತ್ ಕುಮಾರ್​ ಪ್ರತಿಕ್ರಿಯಿಸಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3 ಹಂತದ ಸೆಕ್ಯುರಿಟಿ ಇರಲಿದೆ. ಆರ್​ಎಎಫ್​​ ಮತ್ತು ಗರುಡ ಟೀಂ, ಪಿಕಪ್ ಸ್ಕ್ವಾಡ್ ಇದೆ. ಭದ್ರತೆಗೆ 2,500 ಪೊಲೀಸ್​ ಸಿಬ್ಬಂದಿ ನಿಯೋಜಿಸಲಾಗಿದೆ. ಆಫ್​ಲೈನ್ ಟಿಕೆಟ್ ಸಿಗುತ್ತೆ ಎಂದು ಯಾರು ಬರಬಾರದು. ಮೈದಾನ ಬಳಿ ರಸ್ತೆಗೆ ಬಂದು ನಿಲ್ಲುವವರಿಗೆ…

Read More

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

ರಾಯಚೂರು, ಮಾರ್ಚ್​ 27: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ (death) ಹೊಂದಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಬಳಿ ನಡೆದಿದೆ. ಉಮಾವತಿ(35), ರತ್ನ(24), ಮಹೇಶ್(28) ಮತ್ತು ಶಿವಾನಂದ(24) ಮೃತ ದುರ್ದೈವಿಗಳು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಕೋಸಗಿ ಆಸ್ಪತ್ರೆಗೆ ಶವಗಳ ಸ್ಥಳಾಂತರ ಮಾಡಲಾಗಿದೆ. ನಡೆದಿದ್ದೇನು? ಒಂದೇ ಕುಟುಂಬದವರು ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತುನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು….

Read More

ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ಬೆಂಗಳೂರು ನಂ.1, ಎರಡನೇ ಸ್ಥಾನ ಯಾವ ಸಿಟಿಗೆ?

ಬೆಂಗಳೂರು, ಮಾರ್ಚ್​​ 27: ಭಾರತದ ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಟೆಕ್ ಪ್ರಾಬಲ್ಯಕ್ಕಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಐಟಿ ಸೇವೆ, ಸ್ಟಾರ್ಟ್‌ಅಪ್ ಹೂಡಿಕೆ ಮತ್ತು ಕೃತಕ ಬುದ್ಧಿಮತ್ತೆ (AI) ವಲಯಗಳಲ್ಲಿ ಹೈದರಾಬಾದ್‌ಗಿಂತ ಸ್ಪಷ್ಟವಾಗಿ ಮುಂದಿದೆ. ಜಾಗತಿಕ ಟಾಪ್ 10 ಟೆಕ್ ಹಬ್‌ಗಳಲ್ಲಿ ಬೆಂಗಳೂರು ಆರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 26ನೇ ಸ್ಥಾನದಲ್ಲಿದೆ. 2020ರಿಂದ 2024ರ ಅವಧಿಯಲ್ಲಿ ಬೆಂಗಳೂರಿನ ಸ್ಟಾರ್ಟ್‌ಅಪ್‌ಗಳು 42.3 ಬಿಲಿಯನ್ ಡಾಲರ್​​ ಹೂಡಿಕೆಯನ್ನು ಆಕರ್ಷಿಸಿದ್ದರೆ, ಹೈದರಾಬಾದ್…

Read More

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಲಾಕ್‌ಡೌನ್ (Lockdown) ಆಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಳ್ಳಿಹಾಕಿದ್ದಾರೆ. ಆ ವದಂತಿಗಳು “ಆಧಾರರಹಿತ” ಎಂದು ಕರೆದಿದ್ದಾರೆ. ರಾಜಕಾರಣಿಗಳು ಮತ್ತು ಸಾರ್ವಜನಿಕರು ವಿನಾಕಾರಣ ಭಯವನ್ನು ಹರಡದಂತೆ ಅವರು ಒತ್ತಾಯಿಸಿದ್ದಾರೆ. “ಲಾಕ್​ಡೌನ್ ಪರಿಸ್ಥಿತಿ ಪಾಕಿಸ್ತಾನದಲ್ಲಿ ಉಂಟಾಗಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ದೇಶಾದ್ಯಂತ ಆಧಾರರಹಿತ ವದಂತಿಗಳನ್ನು ಹರಡಲಾಗುತ್ತಿದೆ….

Read More