ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರು ಕಂಡೊಡನೆ ಖರೀದಿಸುವ ಮುನ್ನ ಹುಷಾರ್!
ಮೈಸೂರು, ಮಾರ್ಚ್ 27: ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರುಗಳ ಫೋಟೋ ನೋಡಿ ಮರುಳಾಗಬೇಡಿ. ಏಕೆಂದರೆ ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುತ್ತೇವೆ ಅಂತ ನಂಬಿಸಿ ಕೋಟ್ಯಂತರ ರೂ ವಂಚಿಸುತ್ತಿದ್ದ (Luxury Car Scam) ದೊಡ್ಡ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಅಸಲಿ ಮಾಲೀಕರಿಗೂ ಇಲ್ಲ, ಇತ್ತ ಖರೀದಿ ಮಾಡುವವರಿಗೂ ಇಲ್ಲ ಎನ್ನುವ ರೀತಿ ವಂಚಿಸುತ್ತಿದ್ದರು. ಈ ಖದೀಮರ ಮೋಸದ ಆಟ ಹೇಗಿತ್ತು ಅಂತಾ ಕೇಳಿದರೆ ಶಾಕ್ ಆಗುವುದು ಗ್ಯಾರಂಟಿ. ಅಂತಾರಾಜ್ಯ ವಂಚಕರ ಜಾಲ ಪತ್ತೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ…