Headlines

ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಹೆಡ್ ಕೋಚ್

ಪ್ರಸ್ತುತ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು 2026 ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2026) ಭಾಗವಹಿಸಲಿದ್ದಾರೆ. ಈ ಪಂದ್ಯಾವಳಿಯ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ, ಆರ್​ಸಿಬಿ ತಂಡದಲ್ಲಿ ವಿಕೆಟ್ ಕೀಪರ್ ಜವಾಬ್ದಾರಿ ನಿಭಾಯಿಸುತ್ತಿರುವ ಜಿತೇಶ್ ಶರ್ಮಾ ಪಾಡ್‌ಕ್ಯಾಸ್ಟ್‌ವೊಂದರಲ್ಲಿ ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ (Dinesh Karthik) ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಬಹುದು ಎಂದಿದ್ದಾರೆ….

Read More

ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ

ಚಿಕ್ಕಮಗಳೂರು, ಮಾರ್ಚ್​​ 27: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ ಸಂಬಂಧ ಮನನೊಂದು ಮಹಿಳಾ ಸಂಘದ ಕಾರ್ಯದರ್ಶಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರಿನ ತರೀಕೆರೆಯ ಹೆಚ್​​. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಷಾ (45) ಮೃತ ಮಹಿಳೆಯಾಗಿದ್ದು, ಕಿರುಕುಳ ತಡೆಯಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿರುವ ವಿಡಿಯೋ ರೆಕಾರ್ಡ್​​ ಮಾಡಿ ನೇಣಿಗೆ ಶರಣಾಗಿದ್ದಾರೆ. ಲೆಕ್ಕಪತ್ರ ಪುಸ್ತಕ ಕಳೆದುಹೋಗಿರೋದು ತನ್ನಿಂದಾದ ತಪ್ಪು ಎಂದು ವಿಡಿಯೋದಲ್ಲವರು ಅಲವತ್ತುಕೊಂಡಿದ್ದಾರೆ. ಕಳೆದ 10 ವರ್ಷಗಳಿಂದ ಹಣ ದುರುಪಯೋಗ ಎಂದು ಗ್ರಾಮಸ್ಥರು…

Read More

ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು

ನವದೆಹಲಿ, ಮಾರ್ಚ್ 27: ಜನರಿಗೆ ತೈಲ ಬೆಲೆ ಏರಿಕೆಯ ಬಿಸಿ ತಾಗದಿರಲೆಂದು ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು (Excise Duty) ಕಡಿಮೆಗೊಳಿಸಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ಆಗಬಹುದಾಗಿದ್ದ ನಷ್ಟದ ಹೊರೆ ಕಡಿಮೆ ಆಗಲಿದೆ. ಜನಸಾಮಾನ್ಯರಿಗೆ ಪೆಟ್ರೋಲ್, ಡೀಸಲ್ ಬೆಲೆ (Petrol Price) ಏರಿಕೆಯ ಭಾರವೂ ತಪ್ಪಿದಂತಾಗುತ್ತದೆ. ಅಬಕಾರಿ ಸುಂಕ ಇಳಿಕೆಯಿಂದ ಸರಕಾರದ ಆದಾಯಕ್ಕೆ ಸಾಕಷ್ಟು ನಷ್ಟ ಆಗಲಿದೆ. ಕೇಂದ್ರೀಯ ನೇರ…

Read More

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಆಪರೇಷನ್ ಊರ್ಜಾ ಸುರಕ್ಷಾ; ಏನಿದು ವಿಶೇಷ ಕಾರ್ಯಾಚರಣೆ?

ನವದೆಹಲಿ, ಮಾರ್ಚ್ 27: ಭಾರತ ಈ ತಿಂಗಳು (ಮಾರ್ಚ್) ಆಪರೇಷನ್ ಊರ್ಜಾ ಸುರಕ್ಷಾ (Operation Oorja Suraksha) ಆರಂಭಿಸಿದೆ. ಭಾರತೀಯ ನೌಕಾಪಡೆಯ ವಿಶೇಷ ಕಾರ್ಯಾಚರಣೆಯಾದ ಇದರಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ಭಾರತೀಯ ತೈಲ ನೌಕೆಗಳ ಸಾಗಣೆಗೆ ರಕ್ಷಣೆ ಒದಗಿಸುವುದು ಮುಖ್ಯ ಉದ್ದೇಶವಾಗಿದೆ. ಯುದ್ಧದ ಬಳಿಕ ಹಾರ್ಮುಜ್ ಜಲಸಂಧಿಯು ಅಕ್ಷರಶಃ ಇರಾನ್ ಹತೋಟಿಯಲ್ಲಿದೆ. ಭಾರತ ಸೇರಿದಂತೆ ಕೆಲವೇ ಆಯ್ದ ದೇಶಗಳ ತೈಲ ಹಡಗುಗಳಿಗೆ ಸಾಗಲು ಇರಾನ್ ಅನುಮತಿ ಕೊಟ್ಟಿದೆ. ಆದರೂ ತ್ರಿವರ್ಣ ಧ್ವಜ ಲಾಂಛನದ ತೈಲ ಹಡಗುಗಳಿಗೆ…

Read More

IPL 2026: ಆರ್​ಸಿಬಿಗೆ ಆರಂಭಿಕ ಆಘಾತ; ಮೊದಲ ಪಂದ್ಯದಲ್ಲಿ ಅಡಲ್ಲ ಸ್ಟಾರ್ ಪ್ಲೇಯರ್

2026 ರ ಐಪಿಎಲ್ ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ. ಆದಾಗ್ಯೂ ಆರ್​ಸಿಬಿಗೆ ಆರಂಭಿಕ ಆಘಾತ ಎದುರಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಜೋಶ್ ಹೇಜಲ್‌ವುಡ್ ಆರಂಭಿಕ ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ತಂಡದ ಕೋಚ್ ಆಂಡಿ ಫ್ಲವರ್ ಖಚಿತ ಮಾಹಿತಿ ನೀಡಿದ್ದಾರೆ….

Read More

ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳೆಂದರೆ ನಾನು ಮತ್ತು ಮೋದಿ; ಟ್ರಂಪ್ ಅಚ್ಚರಿಯ ಮೆಚ್ಚುಗೆ

ನವದೆಹಲಿ, ಮಾರ್ಚ್ 27: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕ ಹಾಗೂ ಇಸ್ರೇಲ್​ಗೆ ಭಾರತ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ. ಇಸ್ರೇಲ್ ಸರ್ಕಾರದ ಜೊತೆ ಮಾತನಾಡಿ ಶಾಂತಿ ಮಾತುಕತೆಗೆ ಕರೆ ನೀಡಿದ್ದ ಪ್ರಧಾನಿ ಮೋದಿ ಅತ್ತ ಇರಾನ್​ಗೂ ವೈದ್ಯಕೀಯ ನೆರವು ಕಳುಹಿಸಿಕೊಟ್ಟಿತ್ತು. ಮೊನ್ನೆಯಷ್ಟೇ ಫೋನ್ ಮಾಡಿದ್ದ ಅಮೆರಿಕದ ಅಧ್ಯಕ್ಷ ಟ್ರಂಪ್​ಗೂ ಈ ಬಿಕ್ಕಟ್ಟನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳುವುದು ಉತ್ತಮ ಎಂಬ ಸಂದೇಶ ನೀಡಿದ್ದರು. ಇರಾನ್ ಮೇಲೆ ಇನ್ನೂ ಕತ್ತಿ ಮಸೆಯುತ್ತಲೇ ಇರುವ ಟ್ರಂಪ್ (Donald Trump) ಇದೀಗ ಇದ್ದಕ್ಕಿದ್ದಂತೆ…

Read More

ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರು ಕಂಡೊಡನೆ ಖರೀದಿಸುವ ಮುನ್ನ ಹುಷಾರ್​!

ಮೈಸೂರು, ಮಾರ್ಚ್​ 27: ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರುಗಳ ಫೋಟೋ ನೋಡಿ ಮರುಳಾಗಬೇಡಿ. ಏಕೆಂದರೆ ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುತ್ತೇವೆ ಅಂತ ನಂಬಿಸಿ ಕೋಟ್ಯಂತರ ರೂ ವಂಚಿಸುತ್ತಿದ್ದ (Luxury Car Scam) ದೊಡ್ಡ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಅಸಲಿ ಮಾಲೀಕರಿಗೂ ಇಲ್ಲ, ಇತ್ತ ಖರೀದಿ ಮಾಡುವವರಿಗೂ ಇಲ್ಲ ಎನ್ನುವ ರೀತಿ ವಂಚಿಸುತ್ತಿದ್ದರು. ಈ ಖದೀಮರ ಮೋಸದ ಆಟ ಹೇಗಿತ್ತು ಅಂತಾ ಕೇಳಿದರೆ ಶಾಕ್​ ಆಗುವುದು ಗ್ಯಾರಂಟಿ. ಅಂತಾರಾಜ್ಯ ವಂಚಕರ ಜಾಲ ಪತ್ತೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ…

Read More

‘ದಿ ರಾಜಾ ಸಾಬ್’ ಸೋಲಿನ ಬಳಿಕ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಮಾರುತಿ

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ಚಿತ್ರಕ್ಕೆ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಪ್ರಭಾಸ್ ಅವರ ಮೊದಲ ಹಾರರ್ ಸಿನಿಮಾ ಎಂಬ ಕಾರಣಕ್ಕೆ ಹೈಪ್ ಹೆಚ್ಚಿತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಆ ಸಿನಿಮಾ ಮಕಾಡೆ ಮಲಗಿತು. ‘ದಿ ರಾಜಾ ಸಾಬ್’ ಸಿನಿಮಾದ ಸೋಲನ್ನು ಒಪ್ಪಿಕೊಂಡಿರುವ ನಿರ್ದೇಶಕ ಮಾರುತಿ (Director Maruthi) ಈಗ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾಹಿತಿ…

Read More

‘ಧುರಂಧರ್’ ಸಿನಿಮಾದಲ್ಲಿನ ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು

ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಗ್ಗೆ ಎಲ್ಲ ಕಡೆಗಳಲ್ಲಿ ಚರ್ಚೆ ಆಗುತ್ತಿದೆ. ಪಾಕಿಸ್ತಾನದಲ್ಲಿ ಈ ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಪಾಕ್ ಜನರು ಬೇರೆ ದೇಶಗಳಲ್ಲಿ ಹಾಗೂ ಪೈರಸಿ ಮೂಲಕ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ‘ಧುರಂಧರ್’ (Dhurandhar) ಹೇಗಿದೆ ಎಂದು ಪಾಕ್ ಪ್ರೇಕ್ಷಕರು ವಿಮರ್ಶೆ ನೀಡುತ್ತಿದ್ದಾರೆ. ಅಂಥ ವಿಡಿಯೋಗಳು ಸಖತ್ ಸದ್ದು ಮಾಡುತ್ತಿವೆ. ಈ ಸಿನಿಮಾದಲ್ಲಿ ಯಾವೆಲ್ಲ ತಪ್ಪುಗಳು ಇವೆ ಎಂಬುದರ ಬಗ್ಗೆ ಪಾಕ್ (Pakistan) ಪ್ರಜೆಗಳಿಬ್ಬರು ಮಾತನಾಡಿದ ವಿಡಿಯೋ…

Read More

ತನ್ನ ಗೆಳೆಯನ ಜೊತೆ ಸಂಬಂಧದ ಅನುಮಾನ; ಮುಂಬೈ ವಿದ್ಯಾರ್ಥಿನಿಯನ್ನು ಎಳೆದು, ಕೂದಲು ಕತ್ತರಿಸಿದ ಯುವತಿ

ಮುಂಬೈ, ಮಾರ್ಚ್ 27: ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಮತ್ತೊಬ್ಬಳು ಯುವತಿ ಆಕೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು, ಆಕೆಯ ಕೂದಲು ಕತ್ತರಿಸಿದ್ದಾಳೆ. ಮುಂಬೈನ (Mumbai News) ಉಪನಗರ ಅಪಾರ್ಟ್‌ಮೆಂಟ್‌ನಲ್ಲಿ ನಿನ್ನೆ ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಬಳಿಕ ಹಿಂಸಾಚಾರಕ್ಕೆ ಕಾರಣವಾಯಿತು. ಇದು ಕಾಲೇಜು ವಿದ್ಯಾರ್ಥಿನಿಯನ್ನು ಆಘಾತಕ್ಕೀಡು ಮಾಡಿದೆ. ನಿನ್ನೆ 20 ವರ್ಷದ ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಿಂದ ಹೊರಗೆಳೆದು ಆಕೆಯ ಕೂದಲು ಕತ್ತರಿಸಲಾಗಿದೆ ಎಂದು…

Read More