ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು – Kannada News | Tragedy in Doddaballapur: Two Children Drown to Death After Falling into Farm Pond
ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವುImage Credit source: Tv9 Kannada ದೊಡ್ಡಬಳ್ಳಾಪುರ, ಜೂನ್ 14: ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವವರ ಸರಣಿ ರಾಜ್ಯದಲ್ಲಿ ಮುಂದುರಿದಿದೆ. ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ಆಟ ಆಡಲು ಹೋಗಿದ್ದ ದಕ್ಷಾ(11), ಧನುಷ್(4) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ….