ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ನಾಳೆ ಪ್ರಧಾನಿ ಮೋದಿ ಸಂವಾದ
ನವದೆಹಲಿ, ಮಾರ್ಚ್ 26: ಅಮೆರಿಕ, ಇಸ್ರೇಲ್, ಇರಾನ್ ನಡುವಿನ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ದೇಶದ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಶುಕ್ರವಾರ(ಮಾರ್ಚ್ 27) ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಂವಾದ ನಡೆಸಲಿದ್ದಾರೆ. ಮಾದರಿ ನೀತಿ ಸಂಹಿತೆ (MCC) ಯಿಂದಾಗಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ಶೀಘ್ರದಲ್ಲೇ ನಡೆಯಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು…