RCB vs SRH: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್! ಅಭಿಮಾನಿಗಳೇ ಈ ವಿಚಾರ ತಿಳಿದಿರಿ
ಬೆಂಗಳೂರು, ಮಾರ್ಚ್ 26: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮುಂಬರುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ಮತ್ತು ಪ್ರವೇಶ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳು, ಪಿಡಬ್ಲ್ಯುಡಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈ ಹೊಸ ವ್ಯವಸ್ಥೆಗಳ ಕುರಿತು ಪೂರ್ವಭಾವಿ ತರಬೇತಿ ನೀಡಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ, ಹಿಂದಿನಂತೆ ಕ್ವೀನ್ಸ್ ರೋಡ್ ಬದಲು ಕಬ್ಬನ್ ರೋಡ್ ಮತ್ತು ಲಿಂಕ್ ರೋಡ್ ಮೂಲಕ ಗರಿಷ್ಠ ಸಂಖ್ಯೆಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಗೇಟ್‌ಗಳನ್ನು ವಿಸ್ತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ…