ಢಾಕಾ, ಮಾರ್ಚ್ 26: ನಿನ್ನೆ ಸಂಜೆ ಬಾಂಗ್ಲಾದೇಶದಲ್ಲಿ (Bangladesh Bus Accident) ಅತಿ ಭೀಕರ ಅಪಘಾತ ಸಂಭವಿಸಿದೆ. ಬಾಂಗ್ಲಾದೇಶದ ರಾಜ್ಪರಿಯಲ್ಲಿ ಒಂದು ದಡದಿಂದ ಮತ್ತೊಂದು ದಡಕ್ಕೆ ಸಾರಿಗೆ ದೋಣಿಯ ಮೂಲಕ ಬಸ್‌ನಲ್ಲಿ ಜನರು ಸಂಚರಿಸುತ್ತಾರೆ. ಇದೇ ರೀತಿ ದೋಣಿಯಲ್ಲಿದ್ದ ಖಾಸಗಿ ಬಸ್ ಇದ್ದಕ್ಕಿದ್ದಂತೆ ಪದ್ಮಾ ನದಿಗೆ ಉರುಳಿದೆ. ಬಸ್ನಿಂದ ಹೊರಗಿದ್ದ ಕೆಲವು ಕುಟುಂಬಸ್ಥರು ನೋಡುತ್ತಿದ್ದಂತೆ ಬಸ್ನೊಳಗಿದ್ದ ಅವರ ಫ್ಯಾಮಿಲಿಯವರು ನೀರಿನಲ್ಲಿ ಮುಳುಗಿದ್ದಾರೆ. ದೋಣಿಯ ಮೇಲೆ ನಿಂತು ಮಕ್ಕಳು, ಕುಟುಂಬಸ್ಥರು ಜೋರಾಗಿ ಕಿರುಚಾಡುತ್ತಾ, ತಮ್ಮ ಮನೆಯವರನ್ನು ಕಾಪಾಡಿ ಎಂದು ಗೋಗರೆಯುತ್ತಿರುವ ವಿಡಿಯೋ ಇಲ್ಲಿದೆ. ಈ ಅಪಘಾತದಲ್ಲಿ 23 ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಹಲವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 26: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನೇನು ಎರಡು ದಿನವಷ್ಟೇ ಬಾಕಿ ಇರುವ ಕಾರಣ ಭರದ ಸಿದ್ಧತೆ ನಡೆದಿದೆ. ಕಳೆದ ಆವೃತ್ತಿಯ ವಿಜಯೋತ್ಸವದ ವೇಳೆ ಅವಘಡ ನಡೆದಿದ್ದ ಕಾರಣ ಈ ಬಾರಿ ಬೆಂಗಳೂರಲ್ಲಿ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನಾಹುತಗಳು ನಡೆಯದಂತೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದ್ದು, ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಸಜ್ಜಾಗಿದೆ.
ಇಂದು ಮಾಕ್ ಡ್ರಿಲ್
ಐಪಿಎಲ್ ಭದ್ರತೆಗೆ ಸಂಬಂಧಿಸಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಮಾಕ್ ಡ್ರಿಲ್ ನಡೆಯಲಿದೆ. ಬೆಂಗಳೂರು ಪೊಲೀಸರಿಂದ ಭದ್ರತೆ ಬಗ್ಗೆ ನಡೆಯಲಿರುವ ಅಣಕು ಪ್ರದರ್ಶನದಲ್ಲಿ NSG ಪಡೆ ಕೂಡ ಭಾಗಿಯಾಗಲಿದೆ. ಬೆಳಗ್ಗೆ 10 ಗಂಟೆಗೆ ಆರಂಭ ಆಗಲಿರುವ ಮಾಕ್ ಡ್ರಿಲ್ನಲ್ಲಿ, ಸ್ಟೇಡಿಯಂ ಗೇಟ್ಗಳಲ್ಲಿನ ಎಂಟ್ರಿ ಹಾಗೂ ಎಕ್ಸಿಟ್ ಬಳಿ ಭದ್ರತೆ ಹೇಗಿರಬೇಕು? ಸ್ಟೇಡಿಯಂ ಸುತ್ತಮುತ್ತ ಅಭಿಮಾನಿಗಳನ್ನು ಹೇಗೆ ನಿರ್ವಹಣೆ ಮಾಡಬೇಕು? ತಪಾಸಣೆ, ಪರಿಶೀಲನೆ ಹೇಗಿರಬೇಕು ಎಂಬ ಬಗ್ಗೆ ತಾಲೀಮು ನಡೆಯಲಿದೆ. ಸುಮಾರು ಒಂದು ಸಾವಿರ ಪೊಲೀಸರು ಇದರಲ್ಲಿ ಭಾಗಿಯಾಗಲಿದ್ದು, ಸ್ಟೇಡಿಯಂ ಒಳಗಡೆ, ಹೊರಗಡೆ ಸಿಬ್ಬಂದಿ ನಿಯೋಜನೆ ಮಾಡಿ ಅಣುಕು ಪ್ರದರ್ಶನ ನಡೆಯಲಿದೆ. ಇದರ ಜೊತೆಗೆ ಸಂಚಾರ ಪೊಲೀಸರಿಂದಲೂ ಸ್ಟೇಡಿಯಂ ಸುತ್ತಲೂ ಟ್ರಾಫಿಕ್ ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಯಲಿದೆ.
IPL ಪಂದ್ಯ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಾಲ್ತುಳಿತ ದುರಂತ ನಂತರ ಫುಲ್ ಅಲರ್ಟ್ ಆಗಿರುವ ಕೆಎಸ್ಸಿಎ, ಮ್ಯಾಚ್ ನೋಡಲು ಬರುವ ಕ್ರಿಕೆಟ್ ಅಭಿಮಾನಿಗಳಿಗೆ ಸಂದೇಶವೊಂದನ್ನು ನೀಡಿದೆ. ಸ್ಟೇಡಿಯಂ ಪ್ರವೇಶ ಮಾಡುವವರಿಗೆ ಕೆಲವು ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧ ಮಾಡಲಾಗಿದ್ದು, ಯಾವ ವಸ್ತು ತರಬಾರದೆಂದು ಬೋರ್ಡ್ KSCA ಹಾಕಿದೆ. ಪಿಸ್ತೂಲ್, ಚಾಕು, ಕತ್ತರಿ, ಆಲ್ಕೋಹಾಲ್, ಬಾಟಲ್, ಪಟಾಕಿ, ಪೆಟ್ರೋಲ್, ಡೀಸೆಲ್, ಲೈಟರ್, ಫುಡ್ ಐಟಮ್ಸ್, ಸಿಗರೇಟ್, ಬ್ಯಾಗ್, ಹೆಲ್ಮೆಟ್, ಎಲೆಕ್ಟ್ರಾನಿಕ್ ವಸ್ತುಗಳು, ಕ್ಯಾಮರಾ ಸೇರಿದಂತೆ ಅಪಾಯಕಾರಿ ವಸ್ತುಗಳು ಸೇರಿ ಹಲವು ಸಾಮಗ್ರಿಗಳಿಗೆ ನಿರ್ಬಂಧ ವಿಧಿಸಲಾಗಿದೆ.
ದಾವಣಗೆರೆ, ಮಾರ್ಚ್ 26: ದಾವಣಗೆರೆ ದಕ್ಷಿಣ ಉಪಚುನಾವಣೆ (Davangere South By-Poll) ಕಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಅಲ್ಪಸಂಖ್ಯಾತ ಮತಬ್ಯಾಂಕ್ ಈ ಬಾರಿ ರಾಜಕೀಯ ಲೆಕ್ಕಾಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆ ಎದುರಾಗಿದೆ. ಕಾಂಗ್ರೆಸ್ (Congress)ಟಿಕೆಟ್ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆ, ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸಾದಿಕ್ ಕಣದಿಂದ ಹಿಂದೆ ಸರಿಯಲ್ಲ ಎಂದು ಖಡಕ್ ಆಗಿ ಹೇಳಿರುವುದರಿಂದ 1983ರ ಫಲಿತಾಂಶ ಮರುಕಳಿಸಲಿದೆಯೇ ಎಂಬ ಕುತೂಹಲ ಮೂಡಿದೆ.
1983 ರಲ್ಲಿಯೂ ಇಂಥದ್ದೇ ಪರಿಸ್ಥಿತಿ!
1983ರ ವಿಧಾನಸಭಾ ಚುನಾವಣೆಯ ಇತಿಹಾಸ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಅಸಮಾಧಾನ ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದಿತ್ತು. ಆಗಿನ ಗುಂಡೂರಾವ್ ಸರ್ಕಾರದಲ್ಲಿ ಶಿಕ್ಷಣ ಸಚಿವೆ ಆಗಿದ್ದ ನಾಗಮ್ಮ ಕೇಶಮೂರ್ತಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರೆ, ಪಕ್ಷೇತರ ಅಭ್ಯರ್ಥಿ ಮಹಮ್ಮದ್ ಇಕ್ಬಾಲ್ ಸಾಬ್ ಗಮನಾರ್ಹ ಮತಗಳನ್ನು ಪಡೆದು ಎರಡನೇ ಸ್ಥಾನ ಗಳಿಸಿದ್ದರು. ಆ ಚುನಾವಣೆಯಲ್ಲಿ ಸಿಪಿಐ ಅಭ್ಯರ್ಥಿ ಪಂಪಾಪತಿ ಗೆಲುವು ಸಾಧಿಸಿದ್ದರು.
ಆ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನ ನೀಡದ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಮತ ಹಾಕಿದರೆಂದು ವಿಶ್ಲೇಷಣೆ ನಡೆಯಿತ್ತು. ಇದೀಗ ಮತ್ತೆ ಟಿಕೆಟ್ ನೀಡದ ವಿಚಾರದಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ವ್ಯಕ್ತವಾಗುತ್ತಿರುವುದರಿಂದ, ಅದೇ ಇತಿಹಾಸ ಮರುಕಳಿಸಬಹುದೇ ಎಂಬ ಪ್ರಶ್ನೆ ಎದ್ದಿದೆ.
ಮುಸ್ಲಿಂ ಅಭ್ಯರ್ಥಿಗಳು ಯಾರೂ ಈವರೆಗೆ ಗೆದ್ದಿಲ್ಲ
ದಾವಣಗೆರೆ ಕ್ಷೇತ್ರದ ಚುನಾವಣಾ ಇತಿಹಾಸ ಗಮನಿಸಿದರೆ, 15 ಚುನಾವಣೆಯಲ್ಲಿ ಒಟ್ಟು 45ಕ್ಕೂ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸಿದ್ದರೂ, ಯಾರೂ ಗೆಲುವು ಸಾಧಿಸಿಲ್ಲ. ಆದರೂ ಮತಪ್ರಮಾಣ ದೃಷ್ಟಿಯಿಂದ ಮುಸ್ಲಿಮರು ಗಮನಾರ್ಹರಾಗಿದ್ದಾರೆ. 1983ರಲ್ಲಿ ಮಹಮ್ಮದ್ ಇಕ್ಬಾಲ್ ಸಾಬ್ ಸುಮಾರು ಶೇ 23.67 ಮತಗಳನ್ನು ಪಡೆದಿದ್ದರು. 2013ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೈಯದ್ ಸೈಪುಲ್ಲಾ ಸುಮಾರು ಶೇ 21 ಮತ ಗಳಿಸಿದ್ದರು.
ಇನ್ನಷ್ಟು ಗಮನಿಸಿದರೆ, 2013ರಲ್ಲಿ 15 ಅಭ್ಯರ್ಥಿಗಳಲ್ಲಿ 9 ಮಂದಿ ಮುಸ್ಲಿಂ ಅಭ್ಯರ್ಥಿಗಳಾಗಿದ್ದರೆ, 2018ರಲ್ಲಿ 11ರಲ್ಲಿ 7 ಮಂದಿ, 2023ರಲ್ಲಿ 16ರಲ್ಲಿ 8 ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಆದಾಗ್ಯೂ, ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲುವು ಸಾಧಿಸಿದ್ದರು.
ಈ ಬಾರಿ ಸಹ ಅಲ್ಪಸಂಖ್ಯಾತ ಅಭ್ಯರ್ಥಿಗಳ ಸಂಖ್ಯೆಯೇ ಕಾಂಗ್ರೆಸ್‌ಗೆ ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ಸಾಧಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು, ಮತ ವಿಭಜನೆಗೆ ಕಾರಣವಾಗಬಹುದು ಎಂಬ ಆತಂಕ ಕಾಂಗ್ರೆಸ್ ವಲಯದಲ್ಲಿ ಇದೆ.
ಮಾರ್ಕಪುರಂ, ಮಾರ್ಚ್ 26: ಇತ್ತೀಚೆಗೆ ಖಾಸಗಿ ಬಸ್ಗಳಿಗೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಆಂಧ್ರಪ್ರದೇಶದಲ್ಲಿ (Andhra Pradesh Bus Accident) ಅದೇ ರೀತಿಯ ಮತ್ತೊಂದು ಪ್ರಕರಣ ನಡೆದಿದೆ. ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಟಿಪ್ಪರ್ ಟ್ರಕ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟುಹೋಗಿದೆ. ಈ ಘಟನೆಯಲ್ಲಿ ಬಸ್ನೊಳಗಿದ್ದ 10 ಜನರು ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ. ಇನ್ನುಳಿದವರನ್ನು ರಕ್ಷಿಸಲಾಗಿದ್ದು, ತೀವ್ರವಾಗಿ ಗಾಯಗಳಾಗಿರುವ 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಮಾರ್ಕಪುರಂ ಜಿಲ್ಲೆಯ ರಾಯವರಂ ಬಳಿಯ ಹಲಗೆ ಕ್ವಾರಿಗಳ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. 18 ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್‌ನಿಂದ ಪಾಮೂರ್‌ಗೆ ಹೋಗುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ಮತ್ತು ಚಿಮಕುರ್ತಿಯಿಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡು ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಹರಿಕೃಷ್ಣ ಖಾಸಗಿ ಟ್ರಾವೆಲ್ ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಅವರಲ್ಲಿ 10 ಮಂದಿ ಸುಟ್ಟು ಕರಕಲಾಗಿದ್ದಾರೆ. 18 ಜನರನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಆದರೆ ವಾಹನಗಳು ನಿಯಂತ್ರಣಕ್ಕೆ ಬರುವ ಮೊದಲೇ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕಣಿಗಿರಿ ಮತ್ತು ಪಾಮೂರ್ ಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಯಾವುದೇ ಸಿನಿಮಾ ರಿಲೀಸ್ ಆದರೂ ಪರ ವಿರೋಧ ಚರ್ಚೆ ಇದ್ದೇ ಇರುತ್ತದೆ. ಅದೇ ರೀತಿ ‘ಅನಿಮಲ್’, ‘ಕೆಜಿಎಫ್’ ಹಾಗೂ ‘ಧುರಂಧರ್ 2’ (Dhurandhar 2) ರೀತಿಯ ಚಿತ್ರಗಳನ್ನು ಟೀಕೆ ಮಾಡಿದವರು ಅನೇಕರಿದ್ದಾರೆ. ಈಗ ಬಾಲಿವುಡ್ ನಟ ಇಮ್ರಾನ್ ಖಾನ್ ಕೂಡ ಈ ಸಾಲಿಗೆ ಸೇರಿದ್ದಾರೆ. ‘ಉದ್ದ ಕೂದಲು ಬಿಟ್ಟುಕೊಂಡು, ಕೋಪ ಮಾಡಿಕೊಂಡು, ಮುಖವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರ ನನಗೆ ಇಷ್ಟ ಇಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಅಲ್ಲದೆ, ಅವರು ಈ ರೀತಿಯ ಪಾತ್ರಗಳನ್ನು ವೈಭವೀಕರಿಸುತ್ತಿರುವ ವಿಷಯದ ಬಗ್ಗೆ ಆತಂಕ ಹೊರಹಾಕಿದ್ದಾರೆ.
ಇಮ್ರಾನ್ ಖಾನ್ ಅವರು ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸಿದ್ದಾರೆ. ಈ ವೇಳೆ ಅವರಿಗೆ ‘ಮ್ಯಾಚೋ ಪಾತ್ರಗಳನ್ನು ಮಾಡಬೇಡಿ’ ಎಂದು ಕೋರಿದರು. ಇದಕ್ಕೆ ಉತ್ತರಿಸಿದ ಇಮ್ರಾನ್ ಖಾನ್, ‘ಉದ್ದ ಕೂದಲು ಬಿಟ್ಟುಕೊಂಡು, ಸಿಟ್ಟಾಗಿ ಕಾಣಿಸಿಕೊಳ್ಳುವುದು, ದೇಹವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರದ ಬಗ್ಗೆ ಆಸಕ್ತಿ ಇಲ್ಲ’ ಎಂದು ಅವರು ಹೇಳಿದ್ದಾರೆ.
ಆಲ್ಫಾ ಮೇಲ್ ಅಂದರೆ ಪುರುಷರೇ ಗ್ರೇಟ್ ಎಂಬ ರೀತಿಯ ಸಿನಿಮಾಗಳು ಕೆಲವು ಬರುತ್ತಿವೆ. ಈ ಸಂದರ್ಭದಲ್ಲಿ ಪುರುಷತ್ವವನ್ನು ಹೇಗೆ ವ್ಯಾಖ್ಯಾನಿಸುತ್ತೀರಿ ಎಂದು ಅವರಿಗೆ ಕೇಳಲಾಯಿತು. ‘ನಮ್ಮ ಚಲನಚಿತ್ರಗಳಲ್ಲಿ ಮತ್ತು ಒಟ್ಟಾರೆಯಾಗಿ ಪ್ರಪಂಚದಲ್ಲಿ ಸ್ತ್ರೀದ್ವೇಷ ಮತ್ತು ವಿಷಕಾರಿ ಪುರುಷತ್ವವನ್ನು ಹೇಗೆ ಪ್ರಚಾರ ಮಾಡಲಾಗುತ್ತದೆ ಎಂಬುದನ್ನು ನೋಡಿ ನಾನು ವಿಚಲಿತನಾಗಿದ್ದೇನೆ’ ಎಂದು ಅವರು ಹೇಳಿದರು.
ಅನೇಕರು ಇಮ್ರಾನ್ ಹೇಳಿಕೆಯನ್ನು ನಾನಾ ಸಿನಿಮಾಗಳಿಗೆ ಕನೆಕ್ಟ್ ಮಾಡುತ್ತಿದ್ದಾರೆ. ಕೆಲವರು ‘ಕೆಜಿಎಫ್ 2’ ಎಂದು ಹೇಳಿದ್ದಾರೆ. ಇದರಲ್ಲಿ ಯಶ್ ಉದ್ದ ಕೂದಲು ಬಿಟ್ಟಿದ್ದಾರೆ. ಅವರ ಮುಖ ರಕ್ತಸಿಕ್ತವಾಗಿದೆ. ‘ಅನಿಮಲ್’, ‘ಧುರಂಧರ್, ‘ಧುರಂಧರ್ 2’ ಸಿನಿಮಾಗಳು ಕೂಡ ಇದೇ ರೀತಿಯಲ್ಲಿ ಇವೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಷಯ.
ನವದೆಹಲಿ, ಮಾರ್ಚ್ 26: ಇರಾನ್ ಅಮೆರಿಕದ (Iran-US War) ಎಫ್-35 ಲೈಟ್ನಿಂಗ್ II ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿರುವುದಾಗಿ ಹೇಳಿತ್ತು. ಅದಾದ ಕೆಲವು ದಿನಗಳ ನಂತರ ಇರಾನ್ ಈಗ ಚಾಬಹಾರ್ ಬಳಿ ಎಫ್-18 ಯುದ್ಧವಿಮಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ತಮ್ಮ ಕಾರ್ಯಾಚರಣೆಯ ವಿಡಿಯೋವನ್ನು ಕೂಡ ಇರಾನ್ ಹಂಚಿಕೊಂಡಿದೆ. ರಕ್ಷಣಾ ಖರೀದಿ ಮಾತುಕತೆಯ ಭಾಗವಾಗಿ ಭಾರತಕ್ಕೆ ಈ ಹಿಂದೆ ನೀಡಲಾಗಿದ್ದ ಜೆಟ್‌ಗಳಲ್ಲಿ ಎಫ್ಎ-18 ಕೂಡ ಒಂದು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 26: ಬೆಲೆ ಏರಿಕೆ ಎಂಬ ಪದ ಕೇಳಿದರೆ ಸಾಕು ಜನ ಸಾಮಾನ್ಯರು ಹೆದರಬೇಕಾದ ಸ್ಥಿತಿ ಸದ್ಯ ಕರ್ನಾಟಕದಲ್ಲಿದೆ. ನಾನಾ ಕಾರಣಗಳಿಂದಾಗಿ ಪ್ರತಿ ವಸ್ತುವಿನ ದರವೂ ಗಗನಕ್ಕೇರಿದೆ. ಈ ನಡುವೆ ಜನರಿಗೆ ಸೌಕರ್ಯಗಳನ್ನು ನೀಡಬೇಕಿದ್ದ ಇಲಾಖೆಗಳೇ ಜನರಿಂದ ಸುಲಿಗೆ ಮಾಡುತ್ತಿರುವ ಆತಂಕಕಾರಿ ವಿಷಯವೊಂದು ಬಹಿರಂಗಗೊಂಡಿದ್ದು, ನಾಗರಿಕರ ಗಮನಕ್ಕೇ ಬಾರದಂತೆ ಜೇಬಿಗೆ ಕತ್ತರಿ ಹಾಕುತ್ತಿರುವ ವಿಚಾರ ಶಾಕ್ ನೀಡಿದೆ. ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಜಲ ಮಂಡಳಿ ಸತತವಾಗಿ ನೀರಿನ ದರ ಏರಿಕೆ ಮಾಡುತ್ತಾ ಬಂದಿದ್ದರೂ, ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯೇ ಇಲ್ಲ ಎಂಬುದು ವಿಪರ್ಯಾಸ.
BWSSB ಕಳೆದ ಎರಡು ವರ್ಷಗಳಿಂದ ಪ್ರತಿ ಮೂರು ತಿಂಗಳಿಗೊಮ್ಮೆ ನೀರಿನ ದರ ಏರಿಕೆ ಮಾಡುತ್ತಿದ್ದು, ವರ್ಷದಲ್ಲಿ ನಾಲ್ಕು ಬಾರಿ ದರ ಏರಿಕೆ ಬರೆ ಹಾಕಿ ಜನರಿಂದ ವಸೂಲಿ ಮಾಡುತ್ತಿದೆ. ಪ್ರತಿ ಮೂರು ತಿಂಗಳಿಗೆ ಶೇಕಡಾ 3ರಷ್ಟು ಬೆಲೆ ಹೆಚ್ಚಳದಂತೆ ವರ್ಷಕ್ಕೆ ಶೇಕಡಾ 12ರಷ್ಟು ಹೆಚ್ಚುವರಿ ಹೊರೆ ಜನರ ಮೇಲೆ ಹಾಕಲಾಗ್ತಿದೆ. ಹೀಗಿದ್ದರೂ ಈ ಬಗ್ಗೆ ಯಾವುದೇ ಪ್ರಕಟಣೆ ನೀಡದೆ, ಸಾರ್ವಜನಿಕರ ಗಮನಕ್ಕೂ ತರದೆ ನಾಗರಿಕೆ ಸುಲಿಗೆ ಮಾಡುವ ಕೆಲಸ BWSSB ಕಡೆಯಿಂದ ಆಗ್ತಿದೆ ಎಂದು ಬಿಜೆಪಿ ಮುಖಂಡ ಎನ್. ಆರ್. ರಮೇಶ್ ಆರೋಪಿಸಿದ್ದಾರೆ.
ಇನ್ನು ಒಳಚರಂಡಿ ಉಪಕರವನ್ನು ಆಯಾ ತಿಂಗಳ ಕುಡಿಯುವ ನೀರಿನ ಶುಲ್ಕದಲ್ಲಿ ಶೇ. 31.25ರಷ್ಟು ಏರಿಕೆ ಮಾಡಲಾಗಿದೆ. ಜಲಮಂಡಳಿ ಸಂಸ್ಥೆಯ ಆರ್ಥಿಕ ಸ್ಥಿತಿ ಸುಧಾರಿಸಲು ಕುಡಿಯುವ ನೀರಿನ ಶುಲ್ಕದ ಏರಿಕೆ ಮತ್ತು ಒಳಚರಂಡಿ ಉಪಕರದ ಹೆಚ್ಚಳ ಅನಿವಾರ್ಯ ಎಂಬ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಂದಿಡಲಾಗಿತ್ತು. ಈಗ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸಿನಂತೆ BWSSB ಆಡಳಿತ ಮಂಡಳಿಯು ಪ್ರತಿ ಮೂರು ತಿಂಗಳಿಗೊಮ್ಮೆ ಒಳಚರಂಡಿ ಉಪಕರದ ಪ್ರಮಾಣವನ್ನು ಏರಿಕೆ ಮಾಡುತ್ತಿದೆ ಎನ್ನಲಾಗಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಜನ ತತ್ತರಿಸಿರುವ ನಡುವೆ ಅವರ ಜೊತೆ ನಿಲ್ಲಬೇಕಿದ್ದ ಸರ್ಕಾರ ಎಲ್ಲವನ್ನೂ ನೋಡಿ ಕಣ್ಮುಚ್ಚಿ ಕುಳಿತಿದೆ. ಜನರಿಗೆ ಮೂಲಸೌಕರ್ಯಗಳನ್ನು ನೀಡಬೇಕಿದ್ದ ಇಲಾಖೆಗಳು, ಅರಿವಿಲ್ಲದಂತೆ ಅವರ ಜೇಬಿಗೇ ಕತ್ತರಿ ಹಾಕುವ ಕೆಲಸಕ್ಕೆ ಮುಂದಾಗಿವೆ. ತಮ್ಮ ಗಮನಕ್ಕೆ ಬಾರದೇ ಜನರು ಅದಾಗಲೇ ಬೆಲೆ ಏರಿಕೆ ಹೊರೆ ಭರಿಸುತ್ತಿದ್ದು, ಇದಕ್ಕೆ ಹೊಣೆ ಯಾರು ಎಂಬ ಪ್ರಶ್ನೆಗಳೀಗ ಕೇಳಿಬಂದಿವೆ.
‘ಲವ್ ಮಾಕ್ಟೇಲ್ 3’ ಚಿತ್ರದ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಡಾರ್ಲಿಂಗ್ ಕೃಷ್ಣ ಕಥೆ ಕದ್ದಿದ್ದಾರೆ ಎಂದು ನಿರ್ದೇಶಕ ರಾಘವೇಂದ್ರ ನಾಯ್ಕ್ ಹಾಗೂ ನಿರ್ಮಾಪಕ, ನಿರ್ದೇಶಕ ಗುರು ದೇಶಪಾಂಡೆ ಆರೋಪಿಸಿದ್ದಾರೆ. ಆದರೆ, ಈ ಆರೋಪ ಸುಳ್ಳು ಎಂದು ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ ನೀಡಿದ್ದರು. ರಾಘವೇಂದ್ರ ಹಾಗೂ ಗುರು ಅವರನ್ನು ಟೀಕಿಸಿದ್ದರು. ಇದು ಗುರು ದೇಶಪಾಂಡೆಗೆ ನೋವು ತಂದಿದೆ. ‘ಕೃಷ್ಣ ಮೊದಲು ಹೀಗಿರಲಿಲ್ಲ. ದಿನಕ್ಕೆ ಅವರು ಒಂದು ಗಂಟೆ ಕರೆಮಾಡಿ ಮಾತನಾಡುತ್ತಿದ್ದರು. ಲವ್ ಮಾಕ್ಟೇಲ್ ಸಕ್ಸಸ್ ಸಿಕ್ಕಮೇಲೆ ಅವರು ಬದಲಾದರು’ ಎಂದು ಹೇಳಿದ್ದಾರೆ.
ಬೆಂಗಳೂರು, ಮಾರ್ಚ್ 26: ಚಿನ್ನದ ದರದಲ್ಲಿ (Gold Price) ಏರಿಳಿತ ಮುಂದುವರಿದಿರುವ ನಡುವೆಯೇ ಬೆಂಗಳೂರು (Bangalore) ನಗರದಲ್ಲಿ ಬಂಗಾರ ಖರೀದಿ ಮತ್ತು ಬುಕ್ಕಿಂಗ್ ಜೋರಾಗಿದೆ. ಕೆಲ ತಿಂಗಳುಗಳ ಹಿಂದೆ ಗಗನಕ್ಕೇರಿದ್ದ ಚಿನ್ನದ ಬೆಲೆ ಜನಸಾಮಾನ್ಯರ ಕೈಗೆಟುಕದಂತೆ ಮಾಡಿತ್ತು. ನಂತರ ಏಕಾಏಕಿ ದರ ಕುಸಿತವಾಗಿತ್ತು. ಇದೀಗ ಮತ್ತೆ ತುಸು ಏರಿಕೆಯಾಗಿದ್ದರೂ, ಇತ್ತೀಚಿನ ದರ ಇಳಿಕೆ ಆಭರಣ ಪ್ರಿಯರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಅಲ್ಲದೆ, ಮತ್ತೆ ಚಿನ್ನದ ದರ ಅಕ್ಷಯ ತೃತೀಯದ ವೇಳೆಗೆ ಅತಿಯಾದ ಏರಿಕೆ ಕಂಡರೆ ಸಮಸ್ಯೆ ಆಗದಿರಲಿ ಎಂದು ಈಗಿನ ದರಕ್ಕೆ ಚಿನ್ನ ಬುಕ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈಗಿನ ದರಕ್ಕೆ ಕಾಯ್ದಿರಿಸಿ ಅಕ್ಷಯ ತೃತೀಯದಂದು (Akshaya Tritiya 2026) ಖರೀದಿ ಮಾಡುವುದು ಗ್ರಾಹಕರ ಪ್ಲಾನ್.
ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಹಾವು-ಏಣಿ ಆಟ ನಡೆಯುತ್ತಿದ್ದು, ಗ್ರಾಹಕರಲ್ಲಿ ಗೊಂದಲವೂ ಮೂಡಿಸಿದೆ. ದರ ಇಳಿದಿದೆ ಎನ್ನುವ ನಿರೀಕ್ಷೆಯ ನಡುವೆ ಮತ್ತೆ ಏರಿಕೆಯಾಗುತ್ತಿರುವುದು ಖರೀದಿದಾರರಿಗೆ ತಲೆನೋವಾಗಿದ್ದರೂ, ‘ಇದೀಗ ಕಡಿಮೆ ಇದೆ, ಮುಂದೆ ಮತ್ತಷ್ಟು ಏರಬಹುದು’ ಎಂಬ ಭಾವನೆಯಿಂದ ಅನೇಕರು ಅಂಗಡಿಗಳತ್ತ ಮುಖ ಮಾಡುತ್ತಿದ್ದಾರೆ.
ಮಾರ್ಚ್ 25ರಂದು ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. 22 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂಗೆ ಸುಮಾರು 345 ರೂ. ಏರಿಕೆಯಾಗಿದ್ದು, ಬೆಳ್ಳಿಯ ದರದಲ್ಲೂ ಪ್ರತಿ ಗ್ರಾಂಗೆ 20 ರೂ.ನಷ್ಟು ಹೆಚ್ಚಳವಾಗಿದೆ. ಕಳೆದ ಮೂರು ದಿನಗಳ ದರಗಳನ್ನು ಗಮನಿಸಿದರೆ, ಚಿನ್ನ ಮತ್ತು ಬೆಳ್ಳಿಯಲ್ಲಿ ನಿರಂತರ ಏರಿಳಿತ ಕಂಡುಬಂದಿದೆ.
ಕಳೆದ ಮೂರು ದಿನಗಳಲ್ಲಿ ಚಿನ್ನ ದರ ಏರಿಳಿಕೆ ವಿವರ
ಮಾರ್ಚ್ 23: ಚಿನ್ನ 12,635 ರೂ. (ಗ್ರಾಂಗೆ), ಸಂಜೆ 13,135 ರೂ., ಬೆಳ್ಳಿ 223 ರೂ.ನಿಂದ 231 ರೂ.
ಮಾರ್ಚ್ 24: ಚಿನ್ನ 12,865 ರೂ., ಸಂಜೆ 13,100 ರೂ., ಬೆಳ್ಳಿ 226 ರೂ.
ಮಾರ್ಚ್ 25: ಚಿನ್ನ 13,445 ರೂ., ಬೆಳ್ಳಿ 246 ರೂ.
ದರಗಳಲ್ಲಿ ಈ ರೀತಿಯ ಅಸ್ಥಿರತೆ ಇದ್ದರೂ, ಅಕ್ಷಯ ತೃತೀಯ ಹಬ್ಬದ ಹಿನ್ನೆಲೆಯಲ್ಲಿ ಈಗಲೇ ಚಿನ್ನ ಬುಕ್ಕಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇಂದಿನ ದರಕ್ಕೆ ಬಂಗಾರವನ್ನು ಬುಕ್ ಮಾಡಿಕೊಂಡು, ಹಬ್ಬದ ದಿನ ಖರೀದಿಸಲು ಗ್ರಾಹಕರು ಮುಂದಾಗುತ್ತಿದ್ದಾರೆ.
ಜ್ಯುವೆಲ್ಲರಿಗಳಲ್ಲಿ ಗ್ರಾಹಕರ ಸಂಖ್ಯೆ ಶೇ 50 ರಷ್ಟು ಹೆಚ್ಚಳ
ಜ್ಯುವೆಲ್ಲರಿ ಅಂಗಡಿಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಗ್ರಾಹಕರ ಸಂಖ್ಯೆ ಶೇ 50ರಷ್ಟು ಹೆಚ್ಚಳವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಹಲವರು ಪೂರ್ಣ ಹಣ ಪಾವತಿಸಿ ಈಗಲೇ ಚಿನ್ನ ಕಾಯ್ದಿರಿಸುತ್ತಿದ್ದು, ಆರ್ಡರ್‌ಗಳೂ ಹೆಚ್ಚುತ್ತಿರುವುದಾಗಿ ಹೇಳಲಾಗುತ್ತಿದೆ.
ಒಟ್ಟಾರೆ, ಚಿನ್ನದ ದರದ ಏರಿಳಿತ ನಡುವೆಯೇ ‘ಇದೀಗ ಇರುವ ದರವೇ ಸೂಕ್ತ’ ಎಂದು ಭಾವಿಸಿರುವ ಗ್ರಾಹಕರು ಖರೀದಿಗೆ ಮುಗಿಬಿದ್ದಿದ್ದಾರೆ. ಮುಂದಿನ ದಿನಗಳಲ್ಲಿ ದರ ಇಳಿಕೆಯಾಗುತ್ತದೆಯೋ ಅಥವಾ ಮತ್ತೆ ಏರಿಕೆಯಾಗುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಢಾಕಾ, ಮಾರ್ಚ್ 26: ಬಾಂಗ್ಲಾದೇಶದಲ್ಲಿ ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ (ಬುಧವಾರ) ಬಾಂಗ್ಲಾದೇಶದ (Bangladesh) ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಈ ಅಪಘಾತ (Bus Accident) ಸಂಭವಿಸಿದೆ. ಬಸ್ ಆಯತಪ್ಪಿ ಪದ್ಮಾ ನದಿಗೆ ಉರುಳಿದೆ.
ಬುಧವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು. ಬಸ್ ಸಾರಿಗೆ ದೋಣಿಯ ಮೇಲೆ ಹತ್ತುವಾಗ ಈ ಅಪಘಾತ ಸಂಭವಿಸಿದೆ. ಇದರಿಂದ ಬಸ್ನಲ್ಲಿದ್ದ ಪ್ರಯಾಣಿಕರು ನೀರಿಗೆ ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ಸೇವೆ ಮತ್ತು ಡೈವರ್‌ಗಳ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿವೆ.
ಬಸ್ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ 50 ಜನರನ್ನು ತುಂಬಿಸಿಕೊಂಡಿತ್ತು. ವಿಪರೀತ ಭಾರವಾಗಿ ಬಸ್ ಆಯತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ರಕ್ಷಣಾ ಹಡಗು ಹಮ್ಜಾ ಈ ಘಟನೆ ನಡೆದ 6 ಗಂಟೆಗಳ ನಂತರ ನದಿಯಿಂದ ಬಸ್ ಅನ್ನು ಹೊರತೆಗೆದಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಹಡಗಿನ ಕ್ರೇನ್ ಬಳಸಿ ಇಡೀ ಬಸ್ ಅನ್ನು ಮೇಲಕ್ಕೆತ್ತಲಾಯಿತು.
Dhaka, Bangladesh: Police Inspector, Russel Mollah, says, “We have recovered 23 dead bodies so far. There may be some still missing, and a few people survived. Since it is night, the rescue operation is somewhat paused, but a combined rescue operation is ongoing, with various… https://t.co/dRHXTZuZr4pic.twitter.com/vd4PB4yoLq
ಈ ಘಟನೆಯ ಬಗ್ಗೆ ಬಾಂಗ್ಲಾದೇಶದ ಪ್ರಧಾನಿ ತಾರಿಕ್ ರೆಹಮಾನ್ ತನಿಖೆಗೆ ಆದೇಶಿಸಿದ್ದಾರೆ. ನದಿಗೆ ಬಿದ್ದ ಸುಮಾರು 11 ಪ್ರಯಾಣಿಕರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಹೆಚ್ಚಿನವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳು ಮತ್ತು ಅಧಿಕಾರಿಗಳ ಪ್ರಕಾರ, ಆ ಬಸ್ನಲ್ಲಿದ್ದ ಅನೇಕ ಪ್ರಯಾಣಿಕರು ಒಂದೇ ಕುಟುಂಬದ ಸದಸ್ಯರಾಗಿದ್ದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ