ಭಾರತದ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾದ ಪಾಕ್ ಕ್ರಿಕೆಟ್ ಮಂಡಳಿ – Kannada News | U19 Asia Cup: PCB Files ICC Complaint Against India Over Player Conduct
ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ 2025 ರ ಫೈನಲ್ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ್ದ ಪಾಕಿಸ್ತಾನ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಟ್ರೋಫಿ ಗೆದ್ದ ಖುಷಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಬಿಸಿಸಿಐ ಹಾಗೂ ಟೀಂ ಇಂಡಿಯಾ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾಗಿದೆ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಪಂದ್ಯದ ಸಮಯದಲ್ಲಿ ಮತ್ತು ನಂತರ ಉಭಯ ತಂಡಗಳ ಆಟಗಾರರ ವರ್ತನೆ ಸಾಕಷ್ಟು ಸುದ್ದಿ ಮಾಡಿತ್ತು. ಎರಡೂ ತಂಡಗಳ ಆಟಗಾರರು ಮೈದಾನದಲ್ಲಿಯೇ ವಾಗ್ವಾದ ನಡೆಸಿದ್ದರು. ಇದೀಗ ಪಾಕಿಸ್ತಾನ ಕ್ರಿಕೆಟ್…