ಬಿಡುಗಡೆ ಸಿದ್ಧವಾಗಿದೆ ಹೊಸಬರ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾ ‘ವಿಕಲ್ಪ’ – Kannada News | Psychological thriller Kannada movie Vikalpa getting ready for release
ಹೊಸಬರ ತಂಡದ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಈ ಸಿನಿಮಾದಲ್ಲಿ ಇದೆ. ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು, ತುಮುಲ ತಲ್ಲಣಗಳನ್ನು ಈ ಸಿನಿಮಾದ ಮೂಲಕ ತೆರೆಮೇಲೆ ತರುತ್ತಿದ್ದಾರೆ ಯುವ ನಟ, ನಿರ್ದೇಶಕ ಪೃಥ್ವಿರಾಜ್ ಪಾಟೀಲ್. ಕನ್ನಡ ಚಿತ್ರರಂಗದಲ್ಲಿ ಸೈಕಲಾಜಿಕಲ್ ಥ್ರಿಲ್ಲರ್ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಅಂಥ ವಿರಳ ಸಿನಿಮಾಗಳ ಸಾಲಿಗೆ ‘ವಿಕಲ್ಪ’ ಸಿನಿಮಾ ಕೂಡ ಸೇರುತ್ತಿದೆ. ‘ವಿಕಲ್ಪ’ ಎಂದರೆ ವಾಸ್ತವ ಹಾಗೂ ಕಲ್ಪನೆಗಳ ನಡುವಿನ ಒಂದು ಸ್ಥಿತಿ…